ವಾರದ ಸುದ್ದಿ: ಇವಿ ವಾಹನಗಳಿಗೆ ಉತ್ತೇಜನ, ಆಟೋ ಎಕ್ಸ್‌ಪೋ ಮುಂದೂಡಿಕೆ, ಕಾರು ಖರೀದಿ ಮತ್ತಷ್ಟು ದುಬಾರಿ!

ಹೊಸ ವಾಹನ ಮಾರಾಟವು ಕೋವಿಡ್ ಅಬ್ಬರದ ನಡುವೆಯೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕೇಂದ್ರ ಸರ್ಕಾರವು ಸ್ಕ್ರ್ಯಾಪೇಜ್ ನೀತಿ ಜಾರಿಗೆ ಸಿದ್ದವಾಗುತ್ತಿದೆ. ಹಾಗೆಯೇ ಈ ವಾರದ ಪ್ರಮುಖ ಸುದ್ದಿಯಲ್ಲಿ ವಾಹನಗಳ ಬೆಲೆ ಹೆಚ್ಚಳ ಕೂಡಾ ಪ್ರಮುಖ ಸುದ್ದಿಯಾಗಿದ್ದು, ಈ ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್ ಅನ್ನು ಇಲ್ಲಿ ತಿಳಿಯೋಣ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಸ್ಕ್ರ್ಯಾಪೇಜ್ ನೀತಿಯನ್ನು ಪ್ರಕಟಗೊಳಿಸಲು ಅಂತಿಮ ಹಂತದ ಸಿದ್ದತೆ

ಕೇಂದ್ರ ಸರ್ಕಾರವು ತನ್ನ ಮಹತ್ವಾಕಾಂಕ್ಷಿ ಸ್ಕ್ರ್ಯಾಪೇಜ್ ನೀತಿಯನ್ನು ಪ್ರಕಟಗೊಳಿಸಲು ಅಂತಿಮ ಹಂತದ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಹೊಸ ನೀತಿ ಅಡಿ ದೇಶಾದ್ಯಂತ ಎರಡು ಕೋಟಿಗೂ ಅಧಿಕ ವಾಹನಗಳು ಗುಜುರಿ ಸೇರಲಿವೆ. ಹಳೆಯ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲು ಸ್ವಯಂ ಪ್ರೇರಿತ ಸ್ಕ್ರ್ಯಾಪೇಜ್ ನೀತಿಯನ್ನು ಕಡ್ಡಾಯ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರವು ಮಹತ್ವದ ನಿರ್ಣಯ ಪ್ರಕಟಿಸಿದ್ದು, ಹಸಿರು ತೆರಿಗೆ ಸೇರಿದಂತೆ ಸ್ವಯಂಪ್ರೇರಿತ ವಾಹನ ಸ್ಕ್ರ್ಯಾಪಿಂಗ್ ನೀತಿಯನ್ನು ಪ್ರತ್ಯೇಕವಾಗಿ ಜಾರಿಗೆ ತರುತ್ತಿರುವುದು ಮಾಲಿನ್ಯ ನಿಯಂತ್ರಣ ಪರಿಣಾಮಕಾರಿಯಾದ ಅಸ್ತ್ರವಾಗಲಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಮಾಹಿತಿಯ ಪ್ರಕಾರ ದೇಶಾದ್ಯಂತ 2.15 ಕೋಟಿ ಹಳೆಯ ವಾಹನಗಳಿದ್ದು, ಇದರಲ್ಲಿ ಅರ್ಧದಷ್ಟು ವಾಹನಗಳು ಕರ್ನಾಟಕ ಮತ್ತು ದೆಹಲಿಯಲ್ಲಿ ಓಡಾಡುತ್ತಿವೆ. ಹಳೆಯ ವಾಹನಗಳ ಸಂಗ್ರಹ ಪಟ್ಟಿಯಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದರೆ ದೆಹಲಿ ಎರಡನೇ ಸ್ಥಾನ ಮತ್ತು ಉತ್ತರ ಪ್ರದೇಶ ಮೂರನೇ ಸ್ಥಾನದಲ್ಲಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಲೆಕ್ಟ್ರಾನಿಕ್ ಚಿಪ್ ಕೊರತೆ

ಕೋವಿಡ್ ಪರಿಣಾಮ ಹೊಸ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ನಿರಂತರವಾಗಿ ಏರಿಳಿತ ಉಂಟಾಗುತ್ತಿದ್ದು, ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಹೊಡೆತ ನೀಡುತ್ತಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೌದು, ಹೊಸ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ಪರಿಣಾಮ ಬೀರಿದೆ. ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತ ಮಾತ್ರವಲ್ಲ ಯುರೋಪ್, ಅಮೆರಿಕಾ ಹಾಗೂ ಏಷ್ಯಾದ ದೇಶಗಳಲ್ಲಿನ ವಾಹನ ಉತ್ಪಾದನೆಯು ನಿಧಾನವಾಗುತ್ತಿದ್ದು, ಭಾರತದಲ್ಲೂ ಮಾರುತಿ ಸುಜುಕಿ ಸೇರಿದಂತೆ ವಿವಿಧ ವಾಹನ ಕಂಪನಿಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗುತ್ತಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ದೆಹಲಿ ಆಟೋ ಎಕ್ಸ್‌ಪೋ ಮುಂದೂಡಿಕೆ

2022ರ ಫೆಬ್ರವರಿಯಲ್ಲಿ ನಡೆಯಬೇಕಿದ್ದ ದೆಹಲಿ ಆಟೋ ಎಕ್ಸ್‌ಪೋ ಕೋವಿಡ್ ಪರಿಣಾಮ ಮುಂದೂಡಿಕೆ ಮಾಡಲಾಗಿದ್ದು, ಜಗತ್ತಿನ ಪ್ರಮುಖ ಆಟೋ ಶೋಗಳಲ್ಲಿ ಒಂದಾಗಿರುವ ದೆಹಲಿ ಆಟೋ ಪ್ರದರ್ಶನವು ಕೋವಿಡ್ ಭೀತಿಯಿಂದಾಗಿ ಮುಂದೂಡಿಕೆಯಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕೋವಿಡ್ ಪರಿಣಾಮ ಆರ್ಥಿಕ ಸಂಕಷ್ಟ ತತ್ತರಿಸಿರುವ ಜಗತ್ತಿನ ಪ್ರಮುಖ ರಾಷ್ಟ್ರಗಳು ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಹರಸಾಹಸಪಡುತ್ತಿದ್ದು, ಭಾರತೀಯ ಆಟೋ ಉದ್ಯಮ ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸಿದೆ. ಒಂದನೇ ಅಲೆಯ ನಂತರ ಎರಡನೇ ಅಲೆ ಇದೀಗ ಮೂರನೇ ಕೋವಿಡ್ ಭೀತಿಯೂ ಆರ್ಥಿಕ ಬೆಳವಣಿಗೆಯ ಮೇಲೆ ನಿರಂತವಾಗಿ ಹೊಡೆತ ನೀಡುತ್ತಿದ್ದು, ಸಂಕಷ್ಟದಲ್ಲಿರುವ ಆಟೋ ಉದ್ಯಮದಲ್ಲಿ ಈ ಬಾರಿ ಯಾವುದೇ ಗಮನಸೆಳೆಯಬಹುದಾದ ವಿದ್ಯಮಾನಗಳು ನಡೆಯಲು ಸಾಧ್ಯವಾಗುತ್ತಿಲ್ಲ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಇವಿ ವಾಹನ ಖರೀದಿಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯು ಪ್ರಮುಖ ಪ್ರಕಟಣೆಯನ್ನು ಹೊರಡಿಸಿದೆ. ಇದರನ್ವಯ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಲೆಕ್ಟ್ರಿಕ್ ವಾಹನಗಳ ದಾಖಲೆಯನ್ನು ನವೀಕರಿಸಲು ಸಹ ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಇದಕ್ಕೂ ವಿನಾಯಿತಿ ನೀಡಲಾಗಿದೆ. ಆಗಸ್ಟ್ 2 ರಂದು ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕ ಹಾಗೂ ನೋಂದಣಿ ನವೀಕರಣ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಟಾಟಾ ಟಿಯಾಗೋ ಎನ್‌ಆರ್‌ಜಿ ವರ್ಷನ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಟಿಯಾಗೋ ಕಾರಿನ ಎನ್‌ಆರ್‌ಜಿ ಆವೃತ್ತಿಯನ್ನು ಹೊಸ ವಿನ್ಯಾಸದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.57 ಲಕ್ಷ ಬೆಲೆ ಹೊಂದಿದೆ. 2021 ಟಿಯಾಗೋ ಎನ್ಆರ್‌ಜಿ ಮಾದರಿಯು ಹೊಸ ವಿನ್ಯಾಸ ಮತ್ತು ಉನ್ನತೀಕರಿಸಿದ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಿದ್ದು, ಹೊಸ ಕಾರು ಪೆಟ್ರೋಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಕಾರಿನಲ್ಲಿ ಪೆಟ್ರೋಲ್ ಮ್ಯಾನುವಲ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.57 ಲಕ್ಷ ಬೆಲೆ ಹೊಂದಿದ್ದರೆ ಪೆಟ್ರೋಲ್ ಆಟೋಮ್ಯಾಟಿಕ್ ಮಾದರಿಯು ರೂ. 7.09 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೋಂಡಾ ಕಾರುಗಳ ಬೆಲೆ ಹೆಚ್ಚಳ

ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಬಹುತೇಕ ಕಾರು ಕಂಪನಿಗಳು ತಮ್ಮ ವಾಹನಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಳ ಮಾಡುತ್ತಿದ್ದು, ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ದರ ಏರಿಕೆ ಪ್ರಕಟಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ಕಂಪನಿಗಳು ತಮ್ಮ ವಾಹನಗಳ ಮೂಲ ದರದಲ್ಲಿ ಶೇ. 1.50ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ.50 ಸಾವಿರದಿಂದ ರೂ.1.20 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ. 2021ರಲ್ಲೇ ಜನವರಿ ಮತ್ತು ಏಪ್ರಿಲ್‌ನಲ್ಲಿ ದರ ಹೆಚ್ಚಳ ಮಾಡಿದ್ದ ಹೋಂಡಾ ಕಂಪನಿಯು ಇದೀಗ ಮೂರನೇ ಬಾರಿಗೆ ಬೆಲೆ ಹೆಚ್ಚಳ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ದರಪಟ್ಟಿಯ ಪ್ರಮುಖ ಕಾರು ಮಾದರಿಗಳು ರೂ.10 ಸಾವಿರದಿಂದ ರೂ. 1.12 ಲಕ್ಷದಷ್ಟು ದುಬಾರಿಯಾಗಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಟೆಸ್ಲಾ ಮನವಿ ತಿರಸ್ಕರಿಸಿದ ಕೇಂದ್ರ ಸರ್ಕಾರ

ಟೆಸ್ಲಾ ಕಂಪನಿಯು ಭಾರತದಲ್ಲಿ ಮೊದಲ ಕಾರು ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಮಾಡೆಲ್ 3 ಆವೃತ್ತಿಯು ಬಿಡುಗಡೆಯಾಗಲಿದ್ದು, ಹೊಸ ಕಾರು ಮಾದರಿಯ ಮೂಲಕ ಟೆಸ್ಲಾ ಕಂಪನಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಆದರೆ ಹೊಸ ಕಾರನ್ನು ಸದ್ಯಕ್ಕೆ ವಿದೇಶಿ ಮಾರುಕಟ್ಟೆಯಿಂದ ಭಾರತಕ್ಕೆ ಆಮದು ಮಾಡಿಕೊಳ್ಳಲಿರುವ ಟೆಸ್ಲಾ ಕಂಪನಿಯು ಕೇಂದ್ರ ಸರ್ಕಾರಕ್ಕೆ ಮನವಿಯೊಂದನ್ನು ಮಾಡಿತ್ತು.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಭಾರತದಲ್ಲಿ ವಿದೇಶ ವಸ್ತುಗಳಿಗೆ ವಿಧಿಸುವ ಆಮದು ಸುಂಕ ಕುರಿತು ಟ್ವಿಟ್ ಮಾಡಿದ್ದ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಭಾರತ ಸರ್ಕಾರದಿಂದ ಉತ್ತಮ ಪ್ರಕ್ರಿಯೆ ನೀರಿಕ್ಷೆಯಲ್ಲಿದ್ದೇವೆ ಎಂದಿದ್ದರು. ಆದರೆ ವಿದೇಶಿಯ ಮಾರುಕಟ್ಟೆಗಳಿಂದ ಭಾರತಕ್ಕೆ ಆಮದುಗೊಳ್ಳುವ ಎಲೆಕ್ಟ್ರಿಕ್ ವಾಹನಗಳಿಗೆ ವಿನಾಯ್ತಿ ನೀಡುವ ಯಾವುದೇ ಪ್ರಸ್ತಾವನೆ ನಮ್ಮಲ್ಲಿ ಇಲ್ಲವೆಂದು ಕೇಂದ್ರದ ವಿದ್ಯುತ್ ಮತ್ತು ಭಾರೀ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜಾರ್ ಸ್ಪಷ್ಟಪಡಿಸಿದ್ದಾರೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ರೆನಾಲ್ಟ್ ಕಿಗರ್ ಆರ್‌ಎಕ್ಸ್‌ಟಿ ಆಪ್ಷನ್ ಬಿಡುಗಡೆ

ಭಾರತದಲ್ಲಿ ಕಾರು ಮಾರಾಟ ಆರಂಭಿಸಿ ಹತ್ತನೇ ವರ್ಷದ ಸಂಭ್ರಮಕ್ಕಾಗಿ ರೆನಾಲ್ಟ್ ಕಂಪನಿಯು ಕಿಗರ್ ಕಾರಿನಲ್ಲಿ ಆರ್‌ಎಕ್ಸ್‌ಟಿ ಆಪ್ಷನ್ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಮಧ್ಯಮ ಕ್ರಮಾಂಕದಲ್ಲಿ ಬಿಡುಗಡೆಯಾಗಿರುವ ಹೊಸ ವೆರಿಯೆಂಟ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7.37 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕಿಗರ್ ಆ್ಯನಿವರ್ಸರಿ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಕೆಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ರೂ. 15 ಸಾವಿರದಷ್ಟು ದುಬಾರಿಯಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕಿಯಾ ಕಾರ್ನಿವಾಲ್ ಖರೀದಿ ಮೇಲೆ ಭರ್ಜರಿ ಆಫರ್

ಕಿಯಾ ಇಂಡಿಯಾ ಕಂಪನಿಯು ತನ್ನ ಐಷಾರಾಮಿ ಎಂಪಿವಿ ಕಾರು ಖರೀದಿಯ ಮೇಲೆ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದ್ದು, ಹೊಸ ಕಾರು ಖರೀದಿ ಮೇಲೆ ಗ್ರಾಹಕರು ಗರಿಷ್ಠ ಪ್ರಮಾಣದ ಉಳಿತಾಯಕ್ಕೆ ಅವಕಾಶ ನೀಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕಾರ್ನಿವಾಲ್ ಎಂಪಿವಿ ಕಾರು ಖರೀದಿ ಮೇಲೆ ಕಂಪನಿಯು ಕನಿಷ್ಠ ರೂ.2.50 ಲಕ್ಷದಿಂದ ಗರಿಷ್ಠ ರೂ. 3.75 ಲಕ್ಷದ ತನಕ ಕ್ಯಾಶ್ ಆಫರ್ ನೀಡುತ್ತಿದ್ದು, ಹೊಸ ಆಫರ್‌ಗಳಲ್ಲಿ ಕಾರ್ನಿವಾಲ್ ಆರಂಭಿಕ ಮಾದರಿಯು ರೂ.25.11 ಲಕ್ಷದಿಂದ ರೂ.21.20 ಲಕ್ಷಕ್ಕೆ ದರ ಇಳಿಕೆಯಾಗಿದೆ.

Most Read Articles

Kannada
English summary
Top Auto News Of This Week. Read in Kannada.
Story first published: Sunday, August 8, 2021, 8:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X