ವಾರದ ಸುದ್ದಿ: ಸ್ತಬ್ಧವಾದ ಆಟೋ ಉದ್ಯಮ, ವರ್ಚುವಲ್ ಶೋರೂಂಗೆ ಬೇಡಿಕೆ, ಗ್ರಾಹಕರಿಗೆ ವಾಹನ ಬೆಲೆ ಹೆಚ್ಚಳ ಬಿಸಿ..

ದೇಶಿಯ ಆಟೋ ಉದ್ಯಮವು ಹಲವಾರು ಹೊಸ ಬದಲಾವಣೆಗಳೊಂದಿಗೆ ಕಳೆದ ಕೆಲ ತಿಂಗಳು ದಾಖಲೆ ಪ್ರಮಾಣದ ವಾಹನಗಳ ಮಾರಾಟಕ್ಕೆ ಸಾಕ್ಷಿಯಾಗುತ್ತಿತ್ತು. ಆದರೆ ಇದೀಗ ಕೋವಿಡ್ 2ನೇ ಅಲೆಯ ಹೊಡೆತಕ್ಕೆ ತತ್ತರಿಸಿರುವ ಆಟೋ ಉದ್ಯಮವು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ನಷ್ಟ ಭೀತಿಯಲ್ಲಿದ್ದು, ಉತ್ಪಾದನೆ ಸ್ಥಗಿತ ಸೇರಿದಂತೆ ಈ ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್‌ ಇಲ್ಲಿ ತಿಳಿಯೋಣ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ವಾಹನಗಳ ಉತ್ಪಾದನೆ ಸ್ಥಗಿತ, ಮಾರಾಟದಲ್ಲೂ ಕುಸಿತ

2020 ಮಾರ್ಚ್ ಮತ್ತು ಏಪ್ರಿಲ್ ಅವಧಿಯಲ್ಲಿನ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಣೆಯ ಹಾದಿಯಲ್ಲಿದ್ದ ಆಟೋ ಉದ್ಯಮವು ಇದೀಗ ಮತ್ತೊಮ್ಮೆ ಸಂಕಷ್ಟ ಪರಿಸ್ಥಿತಿಯಲ್ಲಿ ಸಿಲುಕಿದೆ. ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಉದ್ಯೋಗಿಗಳ ಆರೋಗ್ಯದ ದೃಷ್ಠಿಯಿಂದ ಹೊಸ ವಾಹನಗಳ ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಬಂದ್ ಮಾಡಿವೆ. ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದ ಸಂದರ್ಭದಲ್ಲೇ ಲಾಕ್‌ಡೌನ್‌ನಿಂದಾಗಿ ಭಾರೀ ಪ್ರಮಾಣದ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮಗಳ ನಡುವೆಯೂ ಗ್ರಾಹಕರು ಹೊಸ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕಳೆದ ಕೆಲ ತಿಂಗಳಿನಿಂದ ಹೊಸ ವಾಹನಗಳಿಗೆ ದಾಖಲಾಗಿರುವ ಬುಕ್ಕಿಂಗ್ ಪ್ರಮಾಣವು ಸಹ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಉತ್ಪಾದನೆ ಕುಸಿತ ಕಂಡರೂ ಹಲವು ವಾಹನ ಉತ್ಪಾದನಾ ಕಂಪನಿಗಳು ವರ್ಚುವಲ್ ಶೋರೂಂ ಮೂಲಕ ಗ್ರಾಹಕರನ್ನು ಸೆಳೆದು ಮನೆ ಬಾಗಿಲಿಗೆ ಹೊಸ ವಾಹನಗಳನ್ನು ವಿತರಣೆ ಮಾಡುತ್ತಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ವೈದ್ಯಕೀಯ ಸೇವೆಗಳಿಗೆ ಕೈಜೋಡಿಸಿದ ಆಟೋ ಉತ್ಪಾದನಾ ಕಂಪನಿಗಳು

ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಅದರಲ್ಲೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಅಗತ್ಯವಾಗಿರುವ ಆಕ್ಸಿಜನ್ ಕೊರತೆಯು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಆಕ್ಸಿಜನ್ ಉತ್ಪಾದನಾ ಕಂಪನಿಗಳಿಗೆ ಬೇಡಿಕೆ ಪೂರೈಸಲು ಸಾಧ್ಯವಾಗದ ಪರಿಣಾಮ ವಾಹನ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಪ್ರಮುಖ ಕಾರು ಕಂಪನಿಗಳು ಮೆಡಿಕಲ್ ಆಕ್ಸಿಜನ್ ಉತ್ಪಾದಿಸುತ್ತಿದ್ದು, ಇನ್ನು ಕೆಲವು ಆಟೋ ಕಂಪನಿಗಳು ಭಾರೀ ಪ್ರಮಾಣದ ದೇಣಿಗೆ ನೀಡಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕೋವಿಡ್ 19 ಸೋಂಕಿತರಿಗೆ ನೆರವಾಗಲು ಕಾರ್ ಆ್ಯಂಬುಲೆನ್ಸ್

ಆಂಬ್ಯುಲೆನ್ಸ್‌ಗಳ ಕೊರತೆ ಹಾಗೂ ಆಂಬ್ಯುಲೆನ್ಸ್ ಚಾಲಕರು ಅಧಿಕ ಶುಲ್ಕ ವಿಧಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕೋವಿಡ್ 19 ಸೋಂಕಿತರಿಗೆ ನೆರವಾಗಲು ಹರಿಯಾಣ ಪೊಲೀಸರು ಹೊಸ ಹೆಜ್ಜೆ ಇಟ್ಟಿದ್ದಾರೆ. ಹರಿಯಾಣ ಪೊಲೀಸರು 440 ಎಸ್‌ಯುವಿಗಳನ್ನು ಆಂಬ್ಯುಲೆನ್ಸ್‌ನಂತೆ ಬಳಸುತ್ತಿದ್ದು, ಕೋವಿಡ್ 19 ಸೋಂಕಿತರನ್ನು ಉಚಿತವಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ. ಕೋವಿಡ್ -19 ಸಾರಿಗೆ ಸೇವೆಗಳನ್ನು ನೀಡುತ್ತಿರುವ ಈ ವಾಹನಗಳಿಗೆ ಕೋವ್ ಹಾಟ್ಸ್ ಎಂದು ಹೆಸರಿಡಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಈ ಸೇವೆ ನೀಡಲು ಪ್ರತಿ ಜಿಲ್ಲೆಯ ಪೊಲೀಸರಿಗೆ 20 ಟೊಯೊಟಾ ಇನೋವಾ ಎಸ್‌ಯುವಿಗಳನ್ನು ನೀಡಲಾಗುವುದು ಎಂದು ಹರಿಯಾಣ ಪೊಲೀಸ್ ಮಹಾ ನಿರ್ದೇಶಕರಾದ ಮನೋಜ್ ಯಾದವ್ ತಿಳಿಸಿದ್ದಾರೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಟಾಟಾ ಹೊಸ ಕಾರುಗಳ ಬೆಲೆ ಹೆಚ್ಚಳ

ಟಾಟಾ ಮೋಟಾರ್ಸ್ ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರವನ್ನು ಇಂದಿನಿಂದಯೇ ಅನ್ವಯವಾಗುವಂತೆ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.1.80 ರಷ್ಟು ದರ ಏರಿಕೆ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ವಿವಿಧ ಕಾರುಗಳ ಬೆಲೆಯನ್ನು ಕನಿಷ್ಠ ರೂ. 10 ಸಾವಿರದಿಂದ ಗರಿಷ್ಠ ರೂ. 36 ಸಾವಿರ ತನಕ ಹೆಚ್ಚಳ ಮಾಡಲಾಗಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಮಹೀಂದ್ರಾ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಮಹೀಂದ್ರಾ ಕಂಪನಿಯು ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಕಾರುಗಳ ಹೊಸ ದರವು ಇಂದಿನಿಂದಲೇ ಅನ್ವಯವಾಗುವಂತೆ ಪರಿಸ್ಕೃತ ದರಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಮಹೀಂದ್ರಾ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.1.50 ರಷ್ಟು ದರ ಹೆಚ್ಚಳ ಮಾಡಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಗ್ಲೊಸ್ಟರ್ ಎಸ್‌ಯುವಿ ಬೆಲೆ ಹೆಚ್ಚಳ

ಭಾರತದಲ್ಲಿ ಎಂಜಿ ಮೋಟಾರ್ ನಿರ್ಮಾಣದ ನಾಲ್ಕನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಗ್ಲೊಸ್ಟರ್ ಎಸ್‌ಯುವಿ ಕಾರು ಬಿಡುಗಡೆಯಾದ ಆರಂಭದಲ್ಲೇ ಭರ್ಜರಿ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಇದೀಗ ಹೊಸ ಕಾರು ಖರೀದಿಗಾಗಿ 3ನೇ ಸುತ್ತಿನ ಬುಕ್ಕಿಂಗ್ ಪ್ರಕ್ರಿಯೆಯೊಂದಿಗೆ ಬೆಲೆ ಹೆಚ್ಚಳ ಮಾಡಲಾಗಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಬೆಲೆ ಹೆಚ್ಚಳದ ನಂತರ ಗ್ಲೊಸ್ಟರ್ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.98 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ.36.38 ಲಕ್ಷಕ್ಕೆ ನಿಗದಿಮಾಡಿದ್ದು, ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಎಸ್‌ಯುವಿ ಕಾರು ಮಾದರಿಗಳಲ್ಲೇ ಅತಿ ಹೆಚ್ಚು ವೀಲ್ಹ್ ಬೆಸ್ ಹೊಂದಿದೆ.

Most Read Articles

Kannada
English summary
Top Auto News Of The Week. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X