ವಾರದ ಸುದ್ದಿ: ಸಿದ್ದಗೊಂಡ ಗುಜುರಿ ನೀತಿ, ಸಂಕಷ್ಟದಲ್ಲಿ ಆಟೋ ಕಂಪನಿಗಳು, ಅನಾವರಣಗೊಂಡ ಬಹುನೀರಿಕ್ಷಿತ ಕಾರು

ದೇಶಿಯ ಆಟೋ ಉದ್ಯಮವು ಇದೀಗ ದಾಖಲೆ ಪ್ರಮಾಣದ ಹೊಸ ವಾಹನಗಳ ಮಾರಾಟಕ್ಕೆ ಸಾಕ್ಷಿಯಾಗಿದ್ದು, ಹಲವಾರು ಹೊಸ ವಾಹನಗಳು ಮಾರುಕಟ್ಟೆ ಪ್ರವೇಶಿಸಿವೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ವಾಹನಗಳ ಬಿಡುಗಡೆಯ ಸಿದ್ದತೆಯಲ್ಲಿದ್ದು, ಈ ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್‌ ಇಲ್ಲಿ ತಿಳಿಯೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ಕಾರು ಮಾಲೀಕರಿಗೆ ಸಿಹಿಸುದ್ದಿ

ಹೊಸ ಸ್ಕ್ರ್ಯಾಪೇಜ್ ನೀತಿಯಿಂದಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಸಾಕಷ್ಟು ಸಹಕಾರಿಯಾಗಲಿದ್ದು, ಹೊಸ ನಿಯಮದಲ್ಲಿ ಹಳೆಯ ವಾಹನಗಳಿಗೆ ಮತ್ತು ಅನರ್ಹ ವಾಹನಗಳಿಗೆ ಪ್ರತ್ಯೇಕವಾಗಿ ಸ್ಕ್ರ್ಯಾಪೇಜ್ ನಿಯಮಗಳು ಅನ್ವಯವಾಗಲಿವೆ. ಸ್ಕ್ರ್ಯಾಪಿಂಗ್ ನೀತಿ ಅಳವಡಿಸಿಕೊಳ್ಳುವ ಮಾಲೀಕರಿಗೆ ಪರಿಹಾರವೇನು? ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಅವಧಿ ಮೀರಿದ ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜುರಿಗೆ ಹಾಕುವ ಮಾಲೀಕರಿಗೆ ಹಲವಾರು ಲಾಭಗಳಿವೆ ಎನ್ನುವ ಭರವಸೆ ನೀಡಿದ್ದಾರೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹಳೆಯ ವಾಹನವನ್ನು ಸ್ವಯಂ ಪ್ರೇರಿತವಾಗಿ ಗುಜುರಿಗೆ ಹಾಕಿದ್ದಲ್ಲಿ ಹೊಸ ವಾಹನ ಖರೀದಿಗೆ ಶೇ.5 ರಷ್ಟು ವಿನಾಯ್ತಿಯ ಜೊತೆಗೆ ಹೊಸ ವಾಹನದ ರಸ್ತೆ ತೆರಿಗೆಯಲ್ಲಿ ಶೇ. 25 ರಷ್ಟು ವಿನಾಯ್ತಿ ನೀಡಲು ನಿರ್ಧರಿಸಿದ್ದು, ಹೊಸ ಯೋಜನೆಯ ಬಗೆಗೆ ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಮಧ್ಯಮ ಸಂಸ್ಥೆಯೊಂದರ ಸಂವಾದದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಆಟೋ ಕಂಪನಿಗಳಿಗೆ ಮೈಕ್ರೋಚಿಪ್‌ಗಳ ಕೊರತೆ

ಮೈಕ್ರೋಚಿಪ್‌ಗಳ ಕೊರತೆಯಿಂದಾಗಿ ವಿಶ್ವದ ಹಲವು ಪ್ರಮುಖ ವಾಹನ ತಯಾರಕ ಕಂಪನಿಗಳು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಅಥವಾ ತಮ್ಮ ಘಟಕಗಳನ್ನುತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿವೆ. ಆಟೋಮೊಬೈಲ್ ಉದ್ಯಮಕ್ಕೆ ಅಗತ್ಯವಿರುವಷ್ಟು ಮೈಕ್ರೋಚಿಪ್‌ಗಳನ್ನು ಉತ್ಪಾದಿಸಲು ಮೈಕ್ರೋಚಿಪ್ ತಯಾರಕ ಕಂಪನಿಗಳಿಗೆ ಸಾಧ್ಯವಾಗದ ಪರಿಣಾಮವಾಗಿ ವಿಶ್ವದಾದ್ಯಂತ ಮೈಕ್ರೋಚಿಪ್‌ಗಳಿಗೆ ಕೊರತೆ ಎದುರಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಎಲ್ಲಾ ಹೊಸ ವಾಹನಗಳು ಚಿಪ್‌ಗಳ ಮೇಲೆ ಹೆಚ್ಚು ಅವಲಂಬಿತವಾಗಿವೆ. ಎಂಜಿನ್‌ಗಳ ಕಂಪ್ಯೂಟರ್ ನಿರ್ವಹಣೆಯಿಂದ ಹಿಡಿದು ಡ್ರೈವರ್‌ಗಳಿಗೆ ಅಗತ್ಯವಿರುವ ತುರ್ತು ಬ್ರೇಕಿಂಗ್'ವರೆಗೆ ಎಲ್ಲವನ್ನೂ ಚಿಪ್'ಗಳು ನಿಯಂತ್ರಿಸುತ್ತದೆ. ಅವುಗಳನ್ನು ಆಧುನಿಕ ಕಾರುಗಳ ಮಿದುಳುಗಳೆಂದು ಹೇಳಲಾಗುತ್ತದೆ. ಹೀಗಾಗಿ ಮೈಕ್ರೊಚೀಪ್ ಕೊರತೆಯು ಗಂಭೀರ ಪರಿಣಾಮ ಉಂಟುಮಾಡುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2021ರ ಫೋಕ್ಸ್‌ವ್ಯಾಗನ್ ಟಿ-ರಾಕ್ ಬಿಡುಗಡೆ

ಜರ್ಮನಿ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ 2021ರ ಟಿ-ರಾಕ್ ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.21.35 ಲಕ್ಷಗಳಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಪ್ರೀಮಿಯಂ ಮಿಡ್ ಸೈಜ್ ಎಸ್‍ಯುವಿಯಾದ ಟಿ-ರಾಕ್ ಅನ್ನು ಸಿಬಿಯು ಮೂಲಕ ಭಾರತಕ್ಕೆ ತರಲಾಗುತ್ತದೆ. ಇದರ ಪರಿಣಾಮವಾಗಿ 2021ರ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ಬೆಲೆಯು ಹಿಂದಿನ ಮಾದರಿಗಿಂತಲೂ ರೂ.1.36 ಲಕ್ಷ ಹೆಚ್ಚಾಗಿದೆ. ಹೊಸ ಕಾರಿನಲ್ಲಿ 148 ಬಿ‍ಹೆಚ್‍ಪಿ ಪ್ರೇರಿತ 1.5-ಲೀಟರ್ 4 ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ರೇಂಜ್ ರೋವರ್ ಎಸ್‌ವಿಆಟೋಬಯಾಗ್ರಫಿ ಅಲ್ಟಿಮೇಟ್ ಬಿಡುಗಡೆ

ಲ್ಯಾಂಡ್ ರೋವರ್ ಕಂಪನಿಯು ತನ್ನ ಹೊಸ ರೇಂಜ್ ರೋವರ್ ಎಸ್‌ವಿಆಟೋಬಯಾಗ್ರಫಿ ಅಲ್ಟಿಮೇಟ್ ಮಾದರಿಗಳನ್ನು ಬ್ರಿಟನ್ ನಲ್ಲಿ ಅನಾವರಣಗೊಳಿಸಿದೆ. ಈ ಹೊಸ ರೇಂಜ್ ರೋವರ್ ಎಸ್‌ವಿಆಟೋಬಯಾಗ್ರಫಿ ಅಲ್ಟಿಮೇಟ್ ಮಾದರಿಗಳು ಆಕರ್ಷಕ ಲುಕ್ ಅನ್ನು ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ವಿ8 ಎಸ್‍ಯುವಿ 90 ಎಂಬ ಮೂರೂ ಡೋರಿನ ಮತ್ತು 110 ಎಂಬ ಐದು ಡೋರಿನ ಎರಡೂ ಆವೃತ್ತಿಗಳನ್ನು ಒಳಗೊಂಡಿದೆ. ಇನ್ನು ಈ ಹೊಸ ಲ್ಯಾಂಡ್ ರೋವರ್ ಎಸ್‍ಯುವಿಯಲ್ಲಿ ಸೂಪರ್ಚಾರ್ಜ್ಡ್ 5.0-ಲೀಟರ್ ವಿ8 ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಫೋಕ್ಸ್‌ವ್ಯಾಗನ್ ಟೈಗನ್ ಅನಾವರಣ

ಫೋಕ್ಸ್‌ವ್ಯಾಗನ್ ತನ್ನ ಬಹುನೀರಿಕ್ಷಿತ ಟೈಗನ್ ಕಾರಿನ ಉತ್ಪಾದನಾ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಕಾರು ಮಾದರಿಯ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ. ಟೈಗನ್ ಕಂಪ್ಯಾಕ್ಟ್ ಎಸ್‍‍ಯುವಿ ಮಾದರಿಯು ಅಂತರ್‍‍ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಸ್‍‍ಯುವಿಗಳಿಗಿಂತಲೂ ದೇಶಿಯ ಮಾರುಕಟ್ಟೆಗಾಗಿ ಹೆಚ್ಚಿನ ಮಟ್ಟದ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ಹೆಚ್ಚುವರಿ ವ್ಹೀಲ್‍‍ಬೇಸ್ ಅನ್ನು ಹೊಂದಿರಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

1.0-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಟೈಗನ್ ಕಂಪ್ಯಾಕ್ಟ್ ಎಸ್‍‍ಯುವಿ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಜನಪಪ್ರಿಯವಾಗಿರುವ ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಬೆಲೆಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.50 ಲಕ್ಷದಿಂದ ರೂ .14 ಲಕ್ಷ ಬೆಲೆ ಅಂತರದಲ್ಲಿ ಮಾರಾಟಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Top Auto News Of The Week. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X