ವಾರದ ಪ್ರಮುಖ ಸುದ್ದಿ: ಹಳೆಯ ವಾಹನ ಮರುನೋಂದಣಿ ದುಬಾರಿ, ಇವಿ ವಾಹನಗಳಿಗೆ ಉತ್ತೇಜನ, ಬಿಡುಗಡೆಯಾಗಲಿದೆ ಸಿಟ್ರನ್

ಆರ್ಥಿಕ ಸಂಕಷ್ಟದ ನಡುವೆಯೂ ದೇಶಿಯ ಆಟೋ ಉದ್ಯಮವು ಇದೀಗ ದಾಖಲೆ ಪ್ರಮಾಣದ ಹೊಸ ವಾಹನಗಳ ಮಾರಾಟಕ್ಕೆ ಸಾಕ್ಷಿಯಾಗಿದ್ದು, ಕೇಂದ್ರ ಸರ್ಕಾರವು ವಾಹನಗಳಲ್ಲಿ ಪ್ರಮಾಣಿಕರಿಗೆ ಗರಿಷ್ಠ ಸುರಕ್ಷತೆ ಮತ್ತು ಮಾಲಿನ್ಯ ತಡೆ ಉದ್ದೇಶದಿಂದ ಹಲವು ಕಠಿಣ ಕ್ರಮಗಳೊಂದಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಾಗಾದ್ರೆ ಈ ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್‌ ಇಲ್ಲಿ ತಿಳಿಯೋಣ.

ವಾರದ ಪ್ರಮುಖ ಆಟೋ ಸುದ್ದಿಗಳು

ಸಿಟ್ರನ್ ಸಿ5 ಏರ್‌ಕ್ರಾಸ್ ಬಿಡುಗಡೆ ಮಾಹಿತಿ ಬಹರಂಗ

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯೊಂದಿಗೆ ಭಾರತದಲ್ಲಿ ಕಾರು ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡುತ್ತಿದ್ದು, ಹೊಸ ಕಾರು ಮಾದರಿಯು ಮುಂದಿನ ತಿಂಗಳು 7ರಂದು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ. ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಟಾಂಗಾ ಸವಾರಿ'ಗೆ ಹೊಸ ರೂಪದಲ್ಲಿ ಚಾಲನೆ

2015ರಲ್ಲಿ ನಿಷೇಧ ಹೇರಿದ್ದ ಮುಂಬೈ ಹೈಕೋರ್ಟ್ ಇದೀಗ ಟಾಂಗಾ ಸೇವೆಯನ್ನು ಪುನಾರಂಭಿಸಲು ಹೊಸ ಷರತ್ತುಗಳೊಂದಿಗೆ ಅವಕಾಶ ನೀಡಿದ್ದು, ಈ ಬಾರಿ ಟಾಂಗಾಗಳು ಕುದರೆಯ ಬದಲಾಗಿ ಎಲೆಕ್ಟ್ರಿಕ್ ರೂಪದಲ್ಲಿ ರಸ್ತೆಗಿಳಿದಿವೆ. ಮುಂಬೈ ನಗರದಲ್ಲಿ ವಿಕ್ಟೋರಿಯಾ ಟಾಂಗಾ ಎಂದೇ ಜನಪ್ರಿಯವಾಗಿದ್ದ ಟಾಂಗಾ ಸೇವೆಗಳನ್ನು ಎಲೆಕ್ಟ್ರಿಕ್ ರೂಪರೊಂದಿಗೆ ಮರುಚಾಲನೆ ನೀಡುತ್ತಿರುವ ಯುಬಿಒ ರೈಡ್ಜ್ ಕಂಪನಿಯು ಮೊದಲ ಹಂತದಲ್ಲಿ ಹತ್ತು ಇ-ಟಾಂಗಾಗಳನ್ನು ಪರೀಕ್ಷೆ ನಡೆಸಿ ಯಶಸ್ವಿಯಾಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಪ್ರಾಯೋಗಿಕ ಚಾಲನೆಯಲ್ಲಿ ನಗರದ ಪ್ರಮುಖ ಪ್ರವಾಸಿ ತಾಣಗಳಿಗೆ ಸೇವೆ ನೀಡಲು ಸಿದ್ದತೆ ನಡೆಸಲಾಗುತ್ತಿದ್ದು, ಮಾಹಿತಿಗಳ ಪ್ರಕಾರ ಹೊಸ ಇ-ಟಾಂಗಾಗಳು ಚಾಲಕ ಸೇರಿ 7 ಆಸನಗಳ ಜೊತೆಗೆ ಅತ್ಯುತ್ತಮ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 70 ಕಿ.ಮೀ ಸಂಚರಿಸಲಿವೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಪಿಂಕ್ ಸಿಟಿ ಬಸ್‌ಗೆ ಹಸಿರುನಿಶಾನೆ

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಮಹಿಳೆಯರಿಗೆ ಸುರಕ್ಷಿತ ಸಂಚಾರ ನೀಡಲು ರಾಂಚಿ ಮಹಾನಗರ ಪಾಲಿಕೆಯು ಪಿಂಕ್ ಸಿಟಿ ಬಸ್ ಸೇವೆಯನ್ನು ಆರಂಭಿಸಿದೆ. ರಾಂಚಿ ನಗರದ ಮೇಯರ್ ಹಾಗೂ ಪಾಲಿಕೆ ಆಯುಕ್ತರು ಈ ವಿಶೇಷ ಬಸ್ ಸೇವೆಗೆ ಚಾಲನೆ ನೀಡಿದ್ದಾರೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಈ ಸೇವೆಯಡಿಯಲ್ಲಿ ಸದ್ಯಕ್ಕೆ ಎರಡು ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಈ ಬಸ್ ಸೇವೆಯನ್ನು ಮಹಿಳೆಯರಿಗಾಗಿ ಮಾತ್ರ ಕಾಯ್ದಿರಿಸಲಾಗಿದೆ. ಈ ಪಿಂಕ್ ಸಿಟಿ ಬಸ್‌ನಲ್ಲಿ ಕಂಡಕ್ಟರ್‌ನಿಂದ ಕ್ಲೀನರ್'ವರೆಗೆ ಕೇವಲ ಮಹಿಳೆಯರು ಮಾತ್ರ ಇರಲಿದ್ದಾರೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಟೋಲ್ ಪ್ಲಾಜಾಗಳಿಂದ ಮುಕ್ತಗೊಳಿಸಲು ಬೃಹತ್ ಪ್ಲ್ಯಾನ್

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಪಾವತಿಸಲು ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಅಳವಡಿಸಿಕೊಂಡಿರುವ ಕೇಂದ್ರ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಮುಂಬರುವ ದಿನಗಳಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಿರಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿಗಳನ್ನು ಹೊಸ ಶುಲ್ಕು ಪಾವತಿ ಸೌಲಭ್ಯದೊಂದಿಗೆ ಟೋಲ್ ಪ್ಲಾಜಾ ಮುಕ್ತಗೊಳಿಸುವ ಯೋಜನೆಯಲ್ಲಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹೌದು, ಫಾಸ್ಟ್‌ಟ್ಯಾಗ್‌ಗಿಂತಲೂ ವೇಗವಾಗಿ ಶುಲ್ಕ ಸಂಗ್ರಹಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ನಿರ್ಧರಿಸಿರುವ ಕೇಂದ್ರ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಟೋಲ್ ಪ್ಲಾಜಾಗಳನ್ನು ತೆಗೆದುಹಾಕಿ ಜಿಪಿಎಸ್ ಆಧರಿತ ಟೋಲ್ ಸಂಗ್ರಹ ಸೌಲಭ್ಯವನ್ನು ಜಾರಿಗೊಳಿಸುತ್ತಿದ್ದು, ಹೊಸ ಟೋಲ್ ಸಂಗ್ರಹ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜಾರಿಗೆ ತರಲು ರಷ್ಯಾ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹಳೆ ವಾಹನ ಮಾಲೀಕರಿಗೆ ತೆರಿಗೆ ಹೊರೆ

ಹಳೆಯ ವಾಹನಗಳಿಂದ ಹೆಚ್ಚು ವಾಯುಮಾಲಿನ್ಯ ಉಂಟಾಗುತ್ತದೆ. ಈ ಕಾರಣಕ್ಕೆ ಹಳೆಯ ವಾಹನಗಳು ರಸ್ತೆಗಿಳಿಯುವುದನ್ನು ತಡೆಯಲು ಕೇಂದ್ರ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಹಳೆಯ ವಾಹನಗಳ ಬಳಕೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರವು ಮರು-ನೋಂದಣಿ ಶುಲ್ಕವನ್ನು ದುಪ್ಪಟ್ಟು ಏರಿಕೆ ಮಾಡಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಮರು ನೋಂದಣಿ ಶುಲ್ಕ ಹೆಚ್ಚಳದ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆ ಮಾಹಿತಿ ನೀಡಿದೆ. ಮಾಹಿತಿಗಳ ಪ್ರಕಾರ 20 ವರ್ಷ ಹಳೆಯ ದ್ವಿಚಕ್ರ ವಾಹನಗಳಿಗೆ ರೂ.1000 ಹಾಗೂ 15 ವರ್ಷ ಹಳೆಯ ಬಸ್, ಟ್ರಕ್‌ಗಳಿಗೆ ರೂ.12,500 ಮರು ನೋಂದಣಿ ಶುಲ್ಕ ನಿಗದಿ ಪಡಿಸಲಾಗಿದೆ. ಈ ಹಿಂದೆ ಹಳೆ ದ್ವಿಚಕ್ರ ವಾಹನಗಳ ಮರು ನೋಂದಣಿಗೆ ರೂ.300 ಶುಲ್ಕ ವಿಧಿಸಲಾಗುತ್ತಿತ್ತು ಎಂಬುದು ಗಮನಾರ್ಹ. ಇದರ ಜೊತೆಗೆ ಭಾರೀ ವಾಹನಗಳ ಶುಲ್ಕವನ್ನು 21%ನಷ್ಟು ಹೆಚ್ಚಿಸಲಾಗಿದೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಇವಿ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಭಾರೀ ಏರಿಕೆ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಇವಿ ನೀತಿ ಜಾರಿಗೆ ಬಂದ ಆರು ತಿಂಗಳ ಅವಧಿಯಲ್ಲಿ ದೆಹಲಿಯಲ್ಲಿ ಸುಮಾರು 7 ಸಾವಿರ ಎಲೆಕ್ಟ್ರಿಕ್ ವಾಹನಗಳು ಮಾರಾಟಗೊಂಡಿದ್ದು, ಹೊಸ ನೀತಿಯ ನಂತರ ಕಳೆದ ಮೂರು ತಿಂಗಳ ಅವಧಿಯಲ್ಲಿ ತಿಂಗಳಿನಿಂದ ತಿಂಗಳ ವಾಹನ ಮಾರಾಟದಲ್ಲಿ ಶೇ. 2.20ರಷ್ಟು ಏರಿಕೆಯಾಗಿದೆ.

Most Read Articles

Kannada
English summary
Top Auto News Of The Week. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X