ವಾರದ ಪ್ರಮುಖ ಸುದ್ದಿ: ಫಾಸ್ಟ್‌ಟ್ಯಾಗ್ ಕಡ್ಡಾಯ, ಶತಕದತ್ತ ಪೆಟ್ರೋಲ್ ಬೆಲೆ, ಮತ್ತೆ ವಾಹನ ಬೆಲೆ ಹೆಚ್ಚಳ..

ಆಟೋ ಮಾರುಕಟ್ಟೆಯಲ್ಲಿ ಹೊಸ ವಾಹನಗಳ ಮಾರಾಟವು ಸುಧಾರಣೆಗೊಳ್ಳುತ್ತಿರುವ ಸಂದರ್ಭದಲ್ಲೇ ಇಂಧನಗಳ ಬೆಲೆ ಏರಿಕೆಯು ವಾಹನ ಮಾಲೀಕರಿಗೆ ತಲೆ ನೋವಾಗಿ ಪರಿಣಮಿಸಿದರೆ ಎಲೆಕ್ಟ್ರಾನಿಕ್ ಚೀಪ್ ಕೊರತೆಯು ಹೊಸ ವಾಹನಗಳ ಮಾರಾಟದ ಮೇಲೆ ಪರಿಣಾಮ ಬೀರಿದೆ. ಇದರ ನಡುವೆ ವಾಹನಗಳ ನಿರ್ವಹಣೆ ತಗ್ಗಿಸಲು ಎಲೆಕ್ಟ್ರಿಕ್ ವಾಹನ ಬಳಕೆಯತ್ತ ಗಮನಹರಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ವಾರದ ಸುದ್ದಿಗಳ ಹೈಲೆಟ್ಸ್ ಇಲ್ಲಿ ತಿಳಿಯೋಣ.

ವಾರದ ಪ್ರಮುಖ ಸುದ್ದಿ

ಹೊಸ ವಾಹನಗಳ ಖರೀದಿ ಮತ್ತಷ್ಟು ದುಬಾರಿ..!

ದಿನಂಪ್ರತಿ ಹೆಚ್ಚುತ್ತಿರುವ ಇಂಧಗಳ ಬೆಲೆಯಿಂದಾಗಿ ಹೊಸ ವಾಹನಗಳ ಮಾರಾಟದಲ್ಲಿ ಕುಸಿತ ಭೀತಿ ಎದುರಾಗಿರುವ ಬೆನ್ನಲ್ಲೇ ವಾಹನ ಉತ್ಪಾದನೆಯ ವೆಚ್ಚ ನಿರ್ವಹಣೆಗಾಗಿ ವಾಹನ ತಯಾರಕ ಕಂಪನಿಗಳು ಬೆಲೆ ಹೆಚ್ಚಳಕ್ಕೆ ಮುಂದಾಗಿರುವುದು ಹೊಸ ವಾಹನಗಳ ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಈ ವರ್ಷದ ಆರಂಭದಲ್ಲೇ ವಿವಿಧ ವಾಹನ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಮತ್ತೆ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿವೆ.

ವಾರದ ಪ್ರಮುಖ ಸುದ್ದಿ

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ. 3 ರಷ್ಟು ಹೆಚ್ಚಳ ಮಾಡಲಾಗುತ್ತಿದೆ. ಹೆಚ್ಚಳವಾಗಲಿರುವ ದರ ಪಟ್ಟಿಯಲ್ಲಿ ಪ್ರಯಾಣಿಕ ಬಳಕೆಯ ಕಾರುಗಳಷ್ಟೇ ಅಲ್ಲದೆ ದ್ವಿಚಕ್ರ ವಾಹನ ಮತ್ತು ವಾಣಿಜ್ಯ ವಾಹನಗಳ ದುಬಾರಿಯಾಗಲಿದ್ದು, ಹೊಸ ದರ ಮಾರ್ಚ್ ಆರಂಭದಲ್ಲೇ ಪ್ರಕಟವಾಗುವ ಸಾಧ್ಯತೆಗಳಿವೆ.

ವಾರದ ಪ್ರಮುಖ ಸುದ್ದಿ

ಫಾಸ್ಟ್‌ಟ್ಯಾಗ್ ಕಡ್ಡಾಯದ ನಂತರ ಶುಲ್ಕ ಸಂಗ್ರಹದಲ್ಲಿ ಏರಿಕೆ

ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಫೆಬ್ರವರಿ 15ರ ಮಧ್ಯ ರಾತ್ರಿಯಿಂದಲೇ ಹೆದ್ದಾರಿಯಲ್ಲಿ ಸಂಚರಿಸುವ ಪ್ರತಿಯೊಂದು ವಾಹನಗಳಿಗೂ ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಿದ್ದು, ಫಾಸ್ಟ್‌ಟ್ಯಾಗ್ ಹೊಂದಿರದ ವಾಹನಗಳಿಗೆ ದುಪ್ಪಟ್ಟು ಟೋಲ್ ಸಂಗ್ರಹಿಸಲಾಗುತ್ತಿದೆ.

ವಾರದ ಪ್ರಮುಖ ಸುದ್ದಿ

ಫಾಸ್ಟ್‌ಟ್ಯಾಗ್ ಕಡ್ಡಾಯಕ್ಕೂ ಮುನ್ನ ಶೇ. 70ರಷ್ಟು ಬಳಕೆಯಲ್ಲಿದ್ದ ಫಾಸ್ಟ್‌ಟ್ಯಾಗ್ ಬಳಕೆದಾರರ ಸಂಖ್ಯೆ ಇದೀಗ ಶೇ. 90ಕ್ಕಿಂತಲೂ ಹೆಚ್ಚು ಬಳಕೆಯಾಗುತ್ತಿರುವುದು ಟೋಲ್ ಸಂಗ್ರಹದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಈ ಹಿಂದೆ ಒಂದೇ ದಿನದಲ್ಲಿ ಗರಿಷ್ಠ ರೂ. 80 ಕೋಟಿ ಟೋಲ್ ಸಂಗ್ರಹಿಸಿದ್ದ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಫಾಸ್ಟ್‌ಟ್ಯಾಗ್ ಕಡ್ಡಾಯ ನಂತರ ದಿನವೊಂದಲ್ಲಿ ಅತ್ಯಧಿಕ ರೂ. 95 ಕೋಟಿ ಟೋಲ್ ಸಂಗ್ರಹಿಸಿದ್ದು, ಕಳೆದ ಎರಡು ದಿನಗಳಲ್ಲಿ ಹೊಸದಾಗಿ 2.50 ಲಕ್ಷ ವಾಹನ ಮಾಲೀಕರು ಹೊಸ ಟೋಲ್ ಪಾವತಿ ಸೌಲಭ್ಯವನ್ನು ಅಳವಡಿಸಿಕೊಂಡಿದ್ದಾರೆ.

ವಾರದ ಪ್ರಮುಖ ಸುದ್ದಿ

ಸತತ ಹತ್ತನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ದೇಶದಲ್ಲಿ ಸತತ ಹತ್ತನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿದ್ದು, ಫೆಬ್ರುವರಿ 20 ರಂದು ದೇಶದ ಪ್ರಮುಖ ನಗರಗಳಲ್ಲಿ 40 ಪೈಸೆಗಳಷ್ಟು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾಗಿದೆ. ಬೆಲೆ ಹೆಚ್ಚಳ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 93.61 ಪೈಸೆ ಮತ್ತು ಡೀಸೆಲ್ ಬೆಲೆಯು ಪ್ರತಿ ಲೀಟರ್‌ಗೆ ರೂ. 85.84 ಪೈಸೆ ಬೆಲೆ ಹೊಂದಿದೆ.

ವಾರದ ಪ್ರಮುಖ ಸುದ್ದಿ

ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದ ವಾಹನ ಉತ್ಪಾದನೆಯಲ್ಲಿ ಇಳಿಕೆ

ಕೋವಿಡ್ ಅವಧಿಯಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ವಾಹನ ಬಿಡಿಭಾಗಗಳ ಪೂರೈಕೆ ಸರಪಳಿಯಲ್ಲಿ ಆದ ಅಸ್ತವ್ಯಸ್ತವು ಇದೀಗ ಹೊಸ ವಾಹಗಳ ಉತ್ಪಾದನೆ ಕುಂಠಿತಗೊಳ್ಳಲು ಪ್ರಮುಖ ಕಾರಣವಾಗಿದ್ದು. ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಆಟೋ ಉತ್ಪಾದನಾ ಕಂಪನಿಗಳನ್ನು ಸಂಕಷ್ಟಕ್ಕಿಡು ಮಾಡಿದೆ.

ವಾರದ ಪ್ರಮುಖ ಸುದ್ದಿ

ಕಾರಿನ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳ ಸಂಪರ್ಕದಲ್ಲಿ ಪ್ರಮುಖ ಪಾತ್ರವಹಿಸುವ ಸೆಮಿ ಕಂಡಕ್ಟರ್ ಚಿಪ್‌ಗಳನ್ನು ಕಾರಿನ ಡಿಸ್ ಪ್ಲೇ, ಸ್ಪೀಕರ್, ಸ್ಟೆಬಿಲಿಟಿ ಕಂಟ್ರೋಲ್, ಲೈಟಿಂಗ್ ಮುಂತಾದ ಫೀಚರ್ಸ್‌ ಜೋಡಣೆಗೆ ಪ್ರಮುಖ ಸಾಧನವಾಗಿದ್ದು, ಆಟೋ ಕಂಪನಿಗಳ ಪ್ರಮುಖ ಚಿಪ್ ಪೂರೈಕೆದಾರ ಕಂಪನಿಗಳು ಎಲೆಕ್ಟ್ರಾನಿಕ್ ಸಾಧನೆಗಳಿಗೆ ಹೆಚ್ಚಿನ ಮಟ್ಟದ ಸೆಮಿ ಕಂಡಕ್ಟರ್‌ಗಳನ್ನು ಪೂರೈಕೆ ಮಾಡುತ್ತಿರುವುದು ಆಟೋ ಮೊಬೈಲ್ ಕ್ಷೇತ್ರದ ಮೇಲೆ ಪರಿಣಾಮ ಉಂಟು ಮಾಡುತ್ತಿದೆ.

ವಾರದ ಪ್ರಮುಖ ಸುದ್ದಿ

ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ.

ವಾರದ ಪ್ರಮುಖ ಸುದ್ದಿ

ರೆನಾಲ್ಟ್ ಕಂಪನಿಯು ಹೊಸ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದೆ.

ವಾರದ ಪ್ರಮುಖ ಸುದ್ದಿ

ಬಿಎಂಡಬ್ಲ್ಯು ಎಕ್ಸ್3 ಎಕ್ಸ್‌ಡ್ರೈವ್ 30ಐ ಸ್ಪೋರ್ಟ್‌ಎಕ್ಸ್ ಬಿಡುಗಡೆ

ಬಿಎಂಡಬ್ಲ್ಯು ತನ್ನ ಹೊಸ ಎಕ್ಸ್3 ಎಕ್ಸ್‌ಡ್ರೈವ್ 30ಐ ಸ್ಪೋರ್ಟ್‌ಎಕ್ಸ್ ಪೆಟ್ರೋಲ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, 2021ರ ಬಿಎಂಡಬ್ಲ್ಯು ಎಕ್ಸ್3 ಎಕ್ಸ್‌ಡ್ರೈವ್ 30ಐ ಸ್ಪೋರ್ಟ್‌ಎಕ್ಸ್ ಪೆಟ್ರೋಲ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.56.50 ಲಕ್ಷಗಳಾಗಿದೆ.

ವಾರದ ಪ್ರಮುಖ ಸುದ್ದಿ

2021 ಬಿಎಂಡಬ್ಲ್ಯು ಎಕ್ಸ್3 ಎಕ್ಸ್‌ಡ್ರೈವ್ 30ಐ ಸ್ಪೋರ್ಟ್‌ಎಕ್ಸ್ ಪೆಟ್ರೋಲ್ ಮಾದರಿಯನ್ನು ಸ್ಥಳೀಯವಾಗಿ ಜೋಡಿಸಲಾಗುತ್ತಿದ್ದು, ಹೊಸ ಕಾರು ಹಳೆಯ ಮಾದರಿಗಿಂತ ರೂ. 1.5 ಲಕ್ಷ ಮೌಲ್ಯದ ಪ್ರಯೋಜನಗಳನ್ನು ಸಹ ನೀಡುತ್ತಿದೆ.

Most Read Articles

Kannada
English summary
Top Auto News Of The Week. Read in Kannada.
Story first published: Sunday, February 21, 2021, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X