Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 7 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾರದ ಪ್ರಮುಖ ಸುದ್ದಿ: ಕಿಗರ್ ಅನಾವರಣ, ಮತ್ತೆ ರಸ್ತೆಗಿಳಿದ ಟಾಟಾ ಸಫಾರಿ, ಹೊಸ ಕಂಪಾಸ್ ಎಸ್‌ಯುವಿ ಬಿಡುಗಡೆ..
ಆಟೋ ಮಾರುಕಟ್ಟೆಯಲ್ಲಿ ಹೊಸ ವಾಹನಗಳ ಮಾರಾಟವು ಸುಧಾರಣೆಗೊಂಡಿರುವ ಹಿನ್ನಲೆಯಲ್ಲಿ ವಾಹನಗಳ ಬಿಡುಗಡೆ ಪ್ರಕ್ರಿಯೆ ಜೋರಾಗುತ್ತಿದ್ದು, ಈ ವಾರದ ಪ್ರಮುಖ ಆಟೋ ಉತ್ಪಾದನಾ ಸುದ್ದಿಗಳಲ್ಲಿ ವಿವಿಧ ಹೊಸ ವಾಹನಗಳ ಬಿಡುಗಡೆಯ ಜೊತೆಗೆ ಅನಾವರಣಗೊಂಡಿರುವ ಕೆಲವು ಪ್ರಮುಖ ಕಾರು ಮಾದರಿಗಳು ಹೊಸ ಸಂಚಲನಕ್ಕೆ ಕಾರಣವಾಗಲಿವೆ. ಹಾಗಾದ್ರೆ ಈ ವಾರದ ಪ್ರಮುಖ ಸುದ್ದಿಗಳಲ್ಲಿ ಯಾವೆಲ್ಲಾ ಹೊಸ ವಾಹನ ಬಿಡುಗಡೆಯಾಗಿವೆ ಮತ್ತು ಅನಾವರಣಗೊಂಡಿರುವ ಹೊಸ ವಾಹನಗಳ ಮಾಹಿತಿಯನ್ನು ತಿಳಿಯೋಣ.

ನ್ಯೂ ಜನರೇಷನ್ ಟಾಟಾ ಸಫಾರಿ ಅನಾವರಣ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಸಫಾರಿ ಎಸ್‌ಯುವಿ ಕಾರಿನ ಹೊಸ ಆವೃತ್ತಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದ್ದು, ಹೊಸ ಸಫಾರಿ ಎಸ್‌ಯುವಿ ಕಾರು ಮಾದರಿಯು ವಿನೂತನ ಫೀಚರ್ಸ್‌ಗಳೊಂದಿಗೆ ಫೆಬ್ರುವರಿ ಮಧ್ಯಂತರದಲ್ಲಿ ಬಿಡುಗಡೆಯಾಗಲು ಸಿದ್ದವಾಗಿದೆ. OMEGA ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿರುವ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಆಯ್ಕೆಯೊಂದಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 19 ಲಕ್ಷದಿಂದ ರೂ.23 ಲಕ್ಷ ಬೆಲೆ ಅಂತರದಲ್ಲಿ ಎಂಜಿ ಹೆಕ್ಟರ್ ಪ್ಲಸ್, ಬಿಡುಗಡೆಗಾಗಿ ಸಿದ್ದವಾಗಿರುವ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ರೆನಾಲ್ಟ್ ಕಿಗರ್ ಅನಾವರಣ
ರೆನಾಲ್ಟ್ ಇಂಡಿಯಾ ಕಂಪನಿಯು ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗಾಗಿ ಅಂತಿಮ ಸಿದ್ದತೆ ನಡೆಸುತ್ತಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್‌ಗಳನ್ನು ಅಳವಡಿಸಲಾಗಿದೆ.

ಹೊಸ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್ ಕಾರಿನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಫೆಬ್ರುವರಿ ಮಧ್ಯಂತರದಲ್ಲಿ ಖರೀದಿ ಲಭ್ಯವಾಗಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.20 ಲಕ್ಷದಿಂದ ರೂ. 9.30 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದೆ.

ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಬಿಡುಗಡೆ
ಜೀಪ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಎಸ್‌ಯುವಿ ಕಾರು ಮಾದರಿಯಾದ ಕಂಪಾಸ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆಗೊಳಿಸಿದ್ದು, ಹೊಸ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಉನ್ನತೀಕರಣಗೊಂಡಿದೆ.

ಕಂಪಾಸ್ ಫೇಸ್‌ಲಿಫ್ಟ್ ಮಾದರಿಯಲ್ಲಿನ ತಾಂತ್ರಿಕ ಅಂಶಗಳಲ್ಲಿ ಹೊರಭಾಗದ ಫೀಚರ್ಸ್‌ಗಳಿಂತಲೂ ಒಳಭಾಗದ ಫೀಚರ್ಸ್‌ಗಳು ಹೆಚ್ಚಿನ ಬದಲಾವಣೆ ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 24.49 ಲಕ್ಷ ಬೆಲೆ ಪಡೆದುಕೊಂಡಿದೆ. ಕಂಪಾಸ್ ಫೇಸ್‌ಲಿಫ್ಟ್ ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿ 80ನೇ ವರ್ಷದ ವಿಶೇಷತೆಗಾಗಿ ಆ್ಯನಿವರ್ಸರಿ ಎಡಿಷನ್ ಅನ್ನು ಸಹ ಸೀಮಿತ ಅವಧಿಗೆ ಬಿಡುಗಡೆ ಮಾಡಿದೆ.

ಟಾಟಾ ಟಿಯಾಗೋ ಲಿಮಿಟೆಡ್ ಎಡಿಷನ್ ಬಿಡುಗಡೆ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯಾದ ಟಿಯಾಗೋ ಕಾರಿನಲ್ಲಿ ಸೀಮಿತ ಅವಧಿಗಾಗಿ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಎಕ್ಸ್‌ಟಿ ಆವೃತ್ತಿಯನ್ನು ಆಧರಿಸಿ ಬಿಡುಗಡೆ ಮಾಡಲಾಗಿದೆ.

ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಖರೀದಿದಾರರನ್ನು ಸೆಳೆಯಲು ಲಿಮಿಟೆಡ್ ಎಡಿಷನ್ ಮೂಲಕ ಎಕ್ಸ್‌ಟಿ ಮಾದರಿಯಲ್ಲಿ ಕೆಲವು ಹೆಚ್ಚುವರಿ ಫೀಚರ್ಸ್ ಸೇರಿಸಲಾಗಿದ್ದು, ಹೊಸ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.79 ಲಕ್ಷ ಬೆಲೆ ಹೊಂದಿದೆ. ಲಿಮಿಟೆಡ್ ಎಡಿಷನ್ ಮಾದರಿಯು ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಮಾದರಿಗಳ ನಡುವಿನ ಸ್ಥಾನ ಹೊಂದಿದ್ದು, ಎಕ್ಸ್‌ಟಿ ಮಾದರಿಗಿಂತಲೂ ಕೆಲವು ಪ್ರಮುಖ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ.

ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡಿದ ಸಿಟ್ರನ್
ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾದ ಸಿಟ್ರನ್ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಫೆಬ್ರುವರಿ 1ರಂದು ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರಿನ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಲಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯ ಉತ್ಪಾದನಾ ಮಾದರಿಯ ಅನಾವರಣಕ್ಕೂ ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ತಮಿಳುನಾಡಿನ ತಿರುವಲ್ಲೂರ್‌ನಲ್ಲಿರುವ ಹೊಸ ಕಾರು ಉತ್ಪಾದನಾ ಘಟಕದಲ್ಲಿ ಸಿಟ್ರನ್ ಕಾರುಗಳು ನಿರ್ಮಾಣಗೊಳ್ಳುತ್ತಿವೆ. ಫೆಬ್ರುವರಿ 1ರಂದು ಸಿ5 ಏರ್‌ಕ್ರಾಸ್ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ಹೊಸ ಕಾರಿನ ತಾಂತ್ರಿಕ ಮಾಹಿತಿ ಹಂಚಿಕೊಳ್ಳುವುದರ ಜೊತೆಗೆ ಭಾರತದಲ್ಲಿ ತನ್ನ ಭವಿಷ್ಯದ ಯೋಜನೆಗಳ ಕುರಿತಾಗಿ ಸಿಟ್ರನ್ ಕಂಪನಿಯು ಮಾಹಿತಿ ಹಂಚಿಕೊಳ್ಳಲಿದೆ.

2021ರ ಟ್ರಯಂಫ್ ಸ್ಪೀಡ್ ಟ್ರಿಪಲ್ 1200 ಆರ್‌ಎಸ್ ಬಿಡುಗಡೆ
ಟ್ರಯಂಫ್ ಮೋಟಾರ್‌ಸೈಕಲ್ ಕಂಪನಿಯು ತನ್ನ ಜನಪ್ರಿಯ ಬೈಕ್ ಸರಣಿಯ ಸ್ಪೀಡ್ ಟ್ರಿಪಲ್ 1200 ಆರ್‌ಎಸ್ ಮಾದರಿಯ 2021ರ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.95 ಲಕ್ಷ ಬೆಲೆ ಹೊಂದಿದೆ.

ಲಗ್ಷುರಿ ಫೀಚರ್ಸ್‌ಗಳೊಂದಿಗೆ ಪರ್ಫಾಮೆನ್ಸ್‌ಗೂ ಹೆಚ್ಚಿನ ಒತ್ತು ನೀಡಿರುವ ಟ್ರಯಂಫ್ ಕಂಪನಿಯು 2021ರ ಸ್ಪೀಡ್ ಟ್ರಿಪಲ್ 1200 ಆರ್‌ಎಸ್ ಬೈಕ್ ಮಾದರಿಯನ್ನು ಹೊಸದಾಗಿ ಅಲ್ಯುಮಿನಿಯಂ ಚಾರ್ಸಿಸ್ ಮೇಲೆ ಅಭಿವೃದ್ದಿಗೊಳಿಸಿದೆ. ಸ್ಪೀಡ್ ಟ್ರಿಪಲ್ 1200 ಆರ್‌ಎಸ್ ಬೈಕ್‌ನಲ್ಲಿ ಟ್ರಯಂಫ್ ಕಂಪನಿಯು 1160 ಸಿಸಿ ತ್ರಿ ಸಿಲಿಂಡರ್ ಎಂಜಿನ್ ಹೊಂದಿದ್ದು, ಆರು ಸ್ಪೀಡಿನ ಕ್ವಿಕ್ ಶಿಫ್ಟರ್ ಗೇರ್‌ಬಾಕ್ಸ್‌ನೊಂದಿಗೆ 178-ಬಿಎಚ್‌ಪಿ, 125-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಬೆನೆಲ್ಲಿ ಟಿಆರ್‌ಕೆ 502 ಬೈಕ್ ಬಿಡುಗಡೆ
ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬೆನೆಲ್ಲಿ ತನ್ನ ಬಹುನಿರೀಕ್ಷಿತ ಟಿಆರ್‌ಕೆ 502 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬೆನೆಲ್ಲಿ ಟಿಆರ್‌ಕೆ 502 ಬೈಕಿನ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.4.79 ಲಕ್ಷಗಳಾಗಿದೆ.

ಹೊಸ ಬೆನೆಲ್ಲಿ ಟಿಆರ್‌ಕೆ 502 ಬೈಕ್ ಮೆಟಾಲಿಕ್ ಡಾರ್ಕ್ ಗ್ರೇ ಮತ್ತು ರೆಡ್ ಮತ್ತು ಪ್ಯೂರ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದ್ದು, 500ಸಿಸಿ ಲಿಕ್ವಿಡ್-ಕೂಲ್ಡ್ ಪ್ಯಾರೆಲಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 47 ಬಿಎಚ್‌ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 46 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.