ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?

ಇಂಧನಗಳ ಬೆಲೆ ಏರಿಕೆ ಮತ್ತು ಎಲೆಕ್ಟ್ರಾನಿಕ್ ಚೀಪ್ ಕೊರತೆಯಿಂದ ಹೊಸ ವಾಹನ ಉತ್ಪಾದನೆಯಲ್ಲಿ ಕುಂಠಿತವಾಗಿರುವುದರ ಜೊತೆಗೆ ಹೊಸ ವಾಹನಗಳ ಬೇಡಿಕೆ ಕೂಡಾ ಕುಸಿತ ಕಂಡಿದ್ದು, ಎಲೆಕ್ಟ್ರಾನಿಕ್ ವಾಹನದಲ್ಲಿ ಮೊದಲ ಬಾರಿಗೆ ಹೆಚ್ಚಳ ಕಂಡುಬಂದಿದೆ. ಇದರ ನಡುವೆ ಈ ವಾರ ಟಾಟಾ ಹೊಸ ಸಫಾರಿ, 2021ರ ಸ್ವಿಫ್ಟ್ ಸೇರಿದಂತೆ ಪ್ರಮುಖ ವಾಹನಗಳು ಉನ್ನತೀಕರಣದೊಂದಿಗೆ ಬಿಡುಗಡೆಯಾಗಿದ್ದು, ಈ ವಾರದ ಸುದ್ದಿಗಳ ಹೈಲೆಟ್ಸ್ ಇಲ್ಲಿ ತಿಳಿಯೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ನ್ಯೂ ಜನರೇಷನ್ ಸಫಾರಿ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಸಫಾರಿ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದ್ದು, ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿರಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಸ್ಟ್ಯಾಂಡರ್ಡ್ ಸಫಾರಿ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷದಿಂದ ರೂ. 21.25 ಲಕ್ಷ ಬೆಲೆ ಹೊಂದಿದ್ದಲ್ಲಿ ಅಡ್ವೆಂಚರ್ ಪೆರಸೊನಾ ಸಫಾರಿ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 20.20 ಲಕ್ಷದಿಂದ ರೂ. 21.45 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2021ರ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆ

ಮಾರುತಿ ಸುಜುಕಿ ಕಂಪನಿಯು ತನ್ನ ಜನಪ್ರಿಯ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಸ್ವಿಫ್ಟ್ 2021ರ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಉನ್ನತೀಕರಿಸಿದ 1.2-ಲೀಟರ್ ಡ್ಯುಯಲ್‌ಜೆಟ್ ಎಂಜಿನ್ ಸೇರಿದಂತೆ ಪ್ರಮುಖ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2021ರ ಸ್ಪಿಫ್ಟ್ ಕಾರು ಮಾದರಿಯು ಎಲ್ಎಕ್ಸ್ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ಎನ್ನುವ ಪ್ರಮುಖ ನಾಲ್ಕು ವೆರಿಯೆಂಟ್ ಪಡೆದುಕೊಂಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.73 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.41 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹ್ಯುಂಡೈ ಐಯಾನಿಕ್ 5 ಇವಿ ಕಾರು ಅನಾವರಣ

ಜಾಗತಿಕ ಮಟ್ಟದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ದಕ್ಷಿಣ ಕೊರಿಯಾದ ಹ್ಯುಂಡೈ ಮೋಟಾರ್ಸ್ ಕಂಪನಿಯು ತನ್ನ ಹೊಚ್ಚ ಹೊಸ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಐಯಾನಿಕ್ 5 ಕ್ರಾಸ್ಓವರ್ ಎಸ್‌ಯುವಿ ಮಾದರಿಯ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕೊನಾ ಇವಿ ಮೂಲಕ ಈಗಾಗಲೇ ಜಾಗತಿಕ ಮಾರುಕಟ್ಟೆಗಳಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಇವಿ ಕಾರು ಉತ್ಪನ್ನಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿದೆ. 2025ರ ವರೆಗೆ 23 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಿರುವ ಹ್ಯುಂಡೈ ಕಂಪನಿಯು ಹೊಸ ಐಯಾನಿಕ್ 5 ಕಾರನ್ನು ಫ್ಯೂಚರಿಸ್ಟಿಕ್ ವಿನ್ಯಾಸಗಳೊಂದಿಗೆ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಆಧುನಿಕ ತಂತ್ರಜ್ಞಾನ ಪ್ರೇರಿತ ಚಾರ್ಜಿಂಗ್ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಇಳಿಕೆಯಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ?

ಇಂಧನಗಳ ದರದಿಂದಾಗಿ ತತ್ತರಿಸಿ ಹೋಗಿರುವ ವಾಹನ ಮಾಲೀಕರಿಗೆ ಕೇಂದ್ರ ಪೆಟ್ರೋಲಿಯಂ ಸಚಿವರಾದ ಧರ್ಮೇಂದ್ರ ಪ್ರಧಾನ್ ಶುಭ ಸುದ್ದಿಯೊಂದನ್ನು ನೀಡಿದ್ದು, ಚಳಿಗಾಲದ ಅಂತ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ ಎಂದಿದ್ದಾರೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಆದರೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಎಷ್ಟು ಕಡಿಮೆಯಾಗಲಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿಲ್ಲ. ಆದರೆ ಅವರ ಈ ಹೇಳಿಕೆ ವಾಹನ ಮಾಲೀಕರಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಫಾಸ್ಟ್‌ಟ್ಯಾಗ್ ಮೂಲಕ ಭಾರೀ ಟೋಲ್ ಸಂಗ್ರಹ

ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಲು ಹಲವಾರು ಬಾರಿ ಗಡುವು ನೀಡಿ ಮುಂದೂಡಿಕೆ ಮಾಡುತ್ತಾ ಬಂದಿದ್ದ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಅಂತಿಮವಾಗಿ ಫೆ.15 ರಿಂದ ಕಡ್ಡಾಯವಾಗಿ ಜಾರಿಗೆ ತಂದಿದ್ದು, ಫಾಸ್ಟ್‌ಟ್ಯಾಗ್ ಕಡ್ಡಾಯಕ್ಕೂ ಮುನ್ನ ಶೇ. 70ರಷ್ಟು ಬಳಕೆಯಲ್ಲಿದ್ದ ಫಾಸ್ಟ್‌ಟ್ಯಾಗ್ ಬಳಕೆದಾರರ ಸಂಖ್ಯೆ ಇದೀಗ ಶೇ. 90ಕ್ಕಿಂತಲೂ ಹೆಚ್ಚು ಬಳಕೆಯಾಗುತ್ತಿರುವುದು ಟೋಲ್ ಸಂಗ್ರಹದಲ್ಲಿ ಗಣನೀಯವಾಗಿ ಏರಿಕೆಯಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಈ ಹಿಂದೆ ಒಂದೇ ದಿನದಲ್ಲಿ ಗರಿಷ್ಠ ರೂ. 95 ಕೋಟಿ ಟೋಲ್ ಸಂಗ್ರಹಿಸಿದ್ದ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಫಾಸ್ಟ್‌ಟ್ಯಾಗ್ ಕಡ್ಡಾಯ ನಂತರ ದಿನವೊಂದಲ್ಲಿ ಅತ್ಯಧಿಕ ರೂ. 104 ಕೋಟಿ ಟೋಲ್ ಸಂಗ್ರಹಿಸಿದ್ದು, ಕಳೆದ ಎರಡು ದಿನಗಳಲ್ಲಿ ಹೊಸದಾಗಿ 2.50 ಲಕ್ಷ ವಾಹನ ಮಾಲೀಕರು ಹೊಸ ಟೋಲ್ ಪಾವತಿ ಸೌಲಭ್ಯವನ್ನು ಅಳವಡಿಸಿಕೊಂಡಿದ್ದಾರೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಬಿಡುಗಡೆಯಾಗಲಿದೆ ಹ್ಯುಂಡೈ ಹೊಸ 7 ಸೀಟರ್ ಎಸ್‌ಯುವಿ

ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಮಧ್ಯಮ ಕ್ರಮಾಂಕದ ಎಸ್‌ಯುವಿ ಸರಣಿ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಕ್ರೆಟಾ ಮಾದರಿಯನ್ನು ಆಧರಿಸಿ ಹೊಸ 7 ಸೀಟರ್ ಎಸ್‌ಯುವಿ ಮಾದರಿಯನ್ನು ಅಲ್ಕಾಜರ್ ಹೆಸರಿನೊಂದಿಗೆ ಬಿಡುಗಡೆ ಮಾಡಲು ಮುಂದಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಎಸ್‌ಯುವಿ ಕಾರು ಮಾದರಿಯು ವಿನೂತನ ವೈಶಿಷ್ಟ್ಯತೆಗಳೊಂದಿಗೆ ಮೂರನೇ ಸಾಲಿನ ಆಸನಗಳೊಂದಿಗೆ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯಲಿದ್ದು, ಕ್ರೆಟಾ ಕಾರು ಮಾದರಿಯಲ್ಲೇ ಎಂಜಿನ್ ಆಯ್ಕೆ ಹೊಂದಿರುವಹೊಸ ಕಾರಿನ ಕಾರ್ಯಕ್ಷಮತೆ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಇಂಡಿಯನ್ ಕಾರ್ ಆಫ್ ಇಯರ್ ಪ್ರತಿಷ್ಠಿತ ಪ್ರಶಸ್ತಿ ಪ್ರಕಟ

ಭಾರತೀಯ ಆಟೋ ಉದ್ಯಮದ ಆಸ್ಕರ್ ಪ್ರಶಸ್ತಿ ಎಂದೇ ಜನಪ್ರಿಯವಾಗಿರುವ ಇಂಡಿಯನ್ ಕಾರ್ ಆಫ್ ಇಯರ್ ಪ್ರತಿಷ್ಠಿತ ಪ್ರಶಸ್ತಿ ಪ್ರಕಟಗೊಂಡಿದ್ದು, ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಹ್ಯುಂಡೈ ಐ20 ಮೊದಲ ಸ್ಥಾನ ಪಡೆದರೆ ಐಷಾರಾಮಿ ಕಾರುಗಳ ವಿಭಾಗದಲ್ಲಿ ಲ್ಯಾಂಡ್ ರೋವರ್ ಡಿಫೆಂಡರ್ ಹಾಗೂ ಗ್ರಿನ್ ಕಾರ್ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರು ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ವಾಹನಗಳ ತಾಂತ್ರಿಕ ಅಂಶಗಳು, ಕಾರ್ಯಕ್ಷಮತೆ ಮತ್ತು ಗ್ರಾಹಕರ ವಿಶ್ವಾಸ ಸೇರಿದಂತೆ ಹಲವಾರು ಅಂಶಗಳನ್ನು ಪರಿಗಣಿಸಿ ಇಂಡಿಯನ್ ಕಾರ್ ಆಫ್ ಇಯರ್ (IMOTY) ಪ್ರಶಸ್ತಿ ಪ್ರಕಟಿಸಲಾಗುತ್ತಿದ್ದು, ಇಂಡಿಯನ್ ಕಾರ್ ಆಫ್ ಇಯರ್ ಪ್ರಶಸ್ತಿ ಹಂಚಿಕೆ ಸಂದರ್ಭದಲ್ಲೇ ಇಂಡಿಯನ್ ಬೈಕ್ ಆಫ್ ಇಯರ್ ಪ್ರಶಸ್ತಿಗೆ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕ್ ಮಾದರಿಯನ್ನು ಆಯ್ಕೆ ಮಾಡಲಾಗಿದೆ.

Most Read Articles

Kannada
English summary
Top Auto News Of The Week. Read in Kannada.
Story first published: Sunday, February 28, 2021, 1:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X