ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಪ್ರತಿ ವರ್ಷದಂತೆ ಈ ವರ್ಷವೂ ಸಹ ವಾಹನ ತಯಾರಕ ಕಂಪನಿಗಳು ಹಬ್ಬದ ಸಂದರ್ಭದಲ್ಲಿ ತಮ್ಮ ಹೊಸ ವಾಹನಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಿದ್ದತೆ ನಡೆಸುತ್ತಿವೆ. ಸೆಪ್ಟೆಂಬರ್ ತಿಂಗಳಿನಲ್ಲಿ ಕೆಲವು ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಈ ಬಾರಿ ಎಸ್‌ಯು‌ವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

1. Hyundai i20 N - Line

ದಕ್ಷಿಣ ಕೊರಿಯಾ ಮೂಲದ ಕಾರು ತಯಾರಕ ಕಂಪನಿಯಾದ Hyundai ತನ್ನ N - Line ಸರಣಿಯ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಸರಣಿಯ ಅಡಿಯಲ್ಲಿ Hyundai ಕಂಪನಿಯು ಮೊದಲಿಗೆ ಐ 20 ಎನ್ - ಲೈನ್ ಕಾರ್ ಅನ್ನು ಬಿಡುಗಡೆಗೊಳಿಸಲಿದೆ. ಈ ಕಾರ್ ಅನ್ನು 2021 ರ ಸೆಪ್ಟೆಂಬರ್ 2 ರಂದು ಭಾರತದಲ್ಲಿ ಬಿಡುಗಡೆಗೊಳಿಸಲಾಗುವುದು.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಕಂಪನಿಯು ಹೊಸ ಹುಂಡೈ ಐ 20 ಎನ್ ಲೈನ್ ಸರಣಿಯಲ್ಲಿ N6 ಹಾಗೂ N8 ಎಂಬ ಎರಡು ಮಾದರಿಗಳನ್ನು ಬಿಡುಗಡೆಗೊಳಿಸಲಿದೆ. ಈ ಕಾರಿನಲ್ಲಿ ಹಲವು ಕಾಸ್ಮೆಟಿಕ್ ಅಪ್‌ಡೇಟ್‌ಗಳನ್ನು ಮಾಡಲಾಗಿದೆ. ಈ ಕಾರಿನಲ್ಲಿ Hyundai i 20 ಕಾರಿನಲ್ಲಿರುವಂತಹ 1.0 ಲೀಟರ್, 3-ಸಿಲಿಂಡರ್ ಜಿಡಿಐ, ಟರ್ಬೊ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 120 ಬಿಹೆಚ್‌ಪಿ ಪವರ್ ಹಾಗೂ 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

2. Mahindra XUV 700

ಭಾರತೀಯ ಮೂಲದ ಕಾರು ತಯಾರಕ ಕಂಪನಿಯಾದ Mahindra & Mahindra ತನ್ನ ಹೊಸ XUV 700 ಎಸ್‌ಯು‌ವಿಯನ್ನು ಆಗಸ್ಟ್ 15 ರಂದು ಅನಾವರಣಗೊಳಿಸಿತು. ಈ ಎಸ್‌ಯು‌ವಿಯನ್ನು ಸೆಪ್ಟೆಂಬರ್ 2 ರಂದು ಬಿಡುಗಡೆಗೊಳಿಸಲಾಗುವುದು. Mahindra ಕಂಪನಿಯು ಈ ಎಸ್‌ಯು‌ವಿಯನ್ನು ಈ ಸೆಗ್ ಮೆಂಟಿನಲ್ಲಿಯೇ ಮೊದಲ ಬಾರಿಗೆ ಹಲವು ಹೊಸ ಫೀಚರ್ ಗಳೊಂದಿಗೆ ಬಿಡುಗಡೆಗೊಳಿಸುತ್ತಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಈ ಫೀಚರ್ ಗಳಲ್ಲಿ ಸ್ಮಾರ್ಟ್ ಡೋ ಹ್ಯಾಂಡಲ್‌ಗಳು, ಎಡಿ‌ಎಎಸ್ ಹಾಗೂ ಇನ್ನಿತರ ಸುರಕ್ಷತಾ ಫೀಚರ್ ಗಳು ಸೇರಿವೆ. Mahindra XUV 700 ಎಸ್‌ಯು‌ವಿಯನ್ನು ಎರಡು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುವುದು. ಇವುಗಳಲ್ಲಿ 2.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹಾಗೂ 2.2 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳು ಸೇರಿವೆ. 2.0 ಲೀಟರ್ ಪೆಟ್ರೋಲ್ ಎಂಜಿನ್ 200 ಬಿ‌ಹೆಚ್‌ಪಿ ಪವರ್ ಹಾಗೂ 300 ಎನ್ಎಂ ಟಾರ್ಕ್ ಉತ್ಪಾದಿಸಿದರೆ, 2.2 ಲೀಟರ್ ಡೀಸೆಲ್ ಎಂಜಿನ್ 185 ಬಿ‌ಹೆಚ್‌ಪಿ ಪವರ್ ಹಾಗೂ 420 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

3. Volkswagen Taigun

Volkswagen ಕಂಪನಿಯು ತನ್ನ Taigun ಎಸ್‌ಯು‌ವಿಯನ್ನು ಸೆಪ್ಟೆಂಬರ್ 23 ರಂದು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. Taigun ಎಸ್‌ಯು‌ವಿ Volkswagenಕಂಪನಿಯು ಎಂಕ್ಯೂಬಿ ಎಒ ಇನ್ ಪ್ಲಾಟ್‌ಫಾರಂನಲ್ಲಿ ನಿರ್ಮಿಸಿದ ಮೊದಲ ಕಾರ್ ಆಗಿದೆ. Taigun ಎಸ್‌ಯು‌ವಿಯನ್ನು ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುವುದು. ಇವುಗಳಲ್ಲಿ 1.0 ಲೀಟರ್, 3 ಸಿಲಿಂಡರ್ ಟಿಎಸ್‌ಐ ಎಂಜಿನ್ ಹಾಗೂ 1.5 ಲೀಟರ್ 4 ಸಿಲಿಂಡರ್ ಟಿಎಸ್‌ಐ ಎಂಜಿನ್ ಗಳು ಸೇರಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

4. MG Aster ಎಸ್‌ಯುವಿ

Aster ಎಸ್‌ಯುವಿಯು MG Motor ಕಂಪನಿಯ ಎಲೆಕ್ಟ್ರಿಕ್ ಎಸ್‌ಯುವಿಯಾದ MG ZS ಎಲೆಕ್ಟ್ರಿಕ್ ಕಾರಿನ ಪೆಟ್ರೋಲ್ ಆವೃತ್ತಿಯಾಗಿದೆ. MG Motor ಕಂಪನಿಯುಈ ಕಾರಿನಲ್ಲಿ ಈ ಸೆಗ್ ಮೆಂಟಿನಲ್ಲಿಯೇ ಮೊದಲ ಬಾರಿಗೆ ಎಐ ಅಸಿಸ್ಟೆನ್ಸ್ ಹಾಗೂ ಅಟಾನಾಮಸ್ ಲೆವೆಲ್ 2 ಗಳನ್ನು ಅಳವಡಿಸಿದೆ. ಈ ಎಸ್‌ಯುವಿ 2 ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುವುದು. ಈ ಎಂಜಿನ್ ಆಯ್ಕೆಗಳಲ್ಲಿ 1.5 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹಾಗೂ 1.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಗಳು ಸೇರಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

5. Ford Ecosport ಫೇಸ್ ಲಿಫ್ಟ್

Ford Ecosport ಫೇಸ್ ಲಿಫ್ಟ್ ಎಸ್‌ಯು‌ವಿಯು ಪರೀಕ್ಷೆ ಸಂದರ್ಭಗಳಲ್ಲಿ ಹಲವು ಬಾರಿ ಕಾಣಿಸಿಕೊಂಡಿದೆ. Ford ಕಂಪನಿಯು ಈ ಎಸ್‌ಯು‌ವಿಯನ್ನು ಹೊಸ ಅವತಾರದಲ್ಲಿ ಬಿಡುಗಡೆಗೊಳಿಸಲಿದೆ. ಈ ಎಸ್‌ಯು‌ವಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಹೇಳಲಾಗಿದೆ. ಈ ಎಸ್‌ಯುವಿಯನ್ನು 1.5 ಲೀಟರ್, 3 ಸಿಲಿಂಡರ್ ಟಿವಿಸಿಟಿ ಪೆಟ್ರೋಲ್ ಎಂಜಿನ್ ಹಾಗೂ 1.5 ಲೀಟರ್ ಟಿಡಿಸಿಐ ​​ಡೀಸೆಲ್ ಎಂಜಿನ್ ಎರಡು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಕರೋನಾ ವೈರಸ್ ಕಾಣಿಸಿಕೊಂಡ ಬಳಿಕ ಜನರು ಸಾರ್ವಜನಿಕ ವಾಹನಗಳಲ್ಲಿ ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ. ಜನರು ಈಗ ತಮ್ಮದೇ ಆದ ವಾಹನಗಳನ್ನುಖರೀದಿಸಲು ಮುಂದಾಗುತ್ತಿದ್ದಾರೆ. ಇದರಿಂದ ಭಾರತದಲ್ಲಿ ವಾಹನಗಳ ಮಾರಾಟ ಪ್ರಮಾಣವು ಕರೋನಾ ಸಾಂಕ್ರಾಮಿಕದ ನಡುವೆಯೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಖ್ಯಾತ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಕೆಲವು ಕಂಪನಿಗಳು ಹೊಸ ಹೊಸ ವಾಹನಗಳನ್ನು ಬಿಡುಗಡೆಗೊಳಿಸುತ್ತಿದ್ದರೆ, ಇನ್ನೂ ಕೆಲವು ಕಂಪನಿಗಳು ಈಗಿರುವ ವಾಹನಗಳನ್ನು ಅಪ್ ಡೇಟ್ ಮಾಡಿ ಅವುಗಳ ಫೇಸ್ ಲಿಫ್ಟ್ ಆವೃತ್ತಿಗಳನ್ನು ಬಿಡುಗಡೆಗೊಳಿಸುತ್ತಿವೆ. ಈಗ ಬಿಡುಗಡೆಯಾಗುತ್ತಿರುವ ಬಹುತೇಕ ವಾಹನಗಳು ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಮಾನದಂಡಗಳ ಅನುಸಾರವಾಗಿಯೇ ತಯಾರಾಗುತ್ತಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಈ ಮಾನದಂಡಗಳಲ್ಲಿ ಸುರಕ್ಶತಾ ಫೀಚರ್ ಗಳ ಕಡ್ಡಾಯ ಅಳವಡಿಕೆಯು ಸಹ ಸೇರಿದೆ. ಕೇಂದ್ರ ಸರ್ಕಾರವು ಇನ್ನು ಮುಂದೆ ಬಿಡುಗಡೆಯಾಗುವ ಎಲ್ಲಾ ಕಾರುಗಳು ಕಡ್ಡಾಯವಾಗಿ ಫ್ರಂಟ್ ಏರ್ ಬ್ಯಾಗ್ ಗಳನ್ನು ಹೊಂದಿರ ಬೇಕೆಂದು ತಿಳಿಸಿದೆ.

Most Read Articles

Kannada
English summary
Top cars launching in domestic market during september 2021 details
Story first published: Friday, August 27, 2021, 15:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X