ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹಲವು ಕಾರುಗಳಿವೆ. ಗ್ರಾಹಕರು ಮ್ಯಾನುಯಲ್ ಗೇರ್‌ಬಾಕ್ಸ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಕಾರುಗಳನ್ನು ಆಯ್ಕೆಮಾಡಿಕೊಳ್ಳಬಹುದು, ಇತ್ತೀಚೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

ಈ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಗೇರ್‌ಬಾಕ್ಸ್‌ಗಳಲ್ಲಿ ಒಂದು ಸಿವಿಟಿ ಅಂದರೆ ನಿರಂತರವಾಗಿ ವೇರಿಯಬಲ್ ಟ್ರಾನ್ಸ್‌ಮಿಷನ್ ಆಗಿದೆ. ಈ ಗೇರ್ ಬಾಕ್ಸ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಅನೇಕ ಕಾರುಗಳಲ್ಲಿ ಬಳಸಲಾಗುತ್ತದೆ. ಈ ಕಾರುಗಳಲ್ಲಿ ಎಸ್‌ಯುವಿಗಳು, ಹ್ಯಾಚ್‌ಬ್ಯಾಕ್‌ಗಳು ಮತ್ತು ಸೆಡಾನ್‌ಗಳು ಕೂಡ ಸೇರಿವೆ. ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನ ಅತ್ಯಂತ ಪರಿಣಾಮಕಾರಿ ರೂಪಗಳಲ್ಲಿ ಒಂದಾಗಿದೆ ಮತ್ತು ಈ ಸಿಸ್ಟಮ್‌ನಲ್ಲಿ ಬೆಲ್ಟ್ ಅನ್ನು ಅಳವಡಿಸಲಾಗಿದೆ. ಸಿವಿಟಿಯುಯು ಗರಿಷ್ಠ ದಕ್ಷತೆಯನ್ನು ಸಾಧಿಸಲು ಸಮರ್ಥವಾಗಿದೆ. ಇಲ್ಲಿ ನಾವು ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಅತ್ಯುತ್ತಮ ಕಾರುಗಳಿವು.

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

Nissan Magnite XL Turbo CVT

ಈ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೊರೂಂ ಪ್ರಕಾರ ರೂ, 5.71 ಲಕ್ಷಗಳಾಗಿದೆ. ಇದರ ಸಿವಿಟಿ ರೂಪಾಂತರವಾದ ಟರ್ಬೋ ಎಕ್ಸ್ಎಲ್ ಸಿವಿಟಿಯ ಆರಂಬಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.8.51 ಲಕ್ಷವಾಗಿದೆ. ಇದರಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ನೊಂದಿಗೆ 5-ಸ್ಪೀಡ್ ಸಿವಿಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ,

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

ಇದರಲ್ಲಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ 100-ಬಿಎಚ್‌ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಇದರೊಂದಿಗೆ 1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 70 ಬಿಎಚ್‌ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾಸುವ ಸಾಮರ್ಥ್ಯವನ್ನು ಹೊಂದಿದೆ, ಈ ಕಾರಿನಲ್ಲಿ ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

Renault Kiger RXT Turbo CVT

ರೆನಾಲ್ಟ್ ಕಿಗರ್ ಕಾರಿನಲ್ಲಿ RXT Turbo ರೂಪಾಂತರದಲ್ಲಿ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ನೀಡುತ್ತದೆ. ಈ ಕಾರಿನಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ನೊಂದಿಗೆ ಸಿವಿಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ, ಈ ರೆನಾಲ್ಟ್ ಕಿಗರ್ ಕಾರಿನ ಆರಂಬಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,5.64 ಲಕ್ಷವಾಗಿದೆ.

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

ಈ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಬಿಜೆಚ್‍ಪಿ ಪವರ್ ಅನ್ನು ಉತ್ಪಾಸುತ್ತದೆ. ಇದರೊಂದಿಗೆ 1.0-ಲೀಟರ್ ನ್ಯಾಚುರಲ್ ಆಸ್ಪರೆಟೆಡ್ ಎಂಜಿನ್ ಅನ್ನು ಹೊಂದಿದೆ, ಈ ಎಂಜಿನ್ ಅನ್ನು 72 ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ, ರೆನಾಲ್ಟ್ ಕಿಗರ್ ಕಾರು ಪ್ರತಿಸ್ಪರ್ಧಿಮಾದರಿಗಳಂತೆ ಹಲವಾರು ಆಕರ್ಷಕ ಫೀಚರ್ಸ್ ಗಳನ್ನು ಒಳಗೊಂಡಿದೆ. ಈ ಕಿಗರ್ ಕಾರಿನಲ್ಲಿ ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್ ಮತ್ತು ರೂಫ್‌ರೈಲ್ಸ್ ಅನ್ನು ಹೊಂದಿದೆ.

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

Honda Amaze 1.2S CVT

ಜಪಾನಿನ ಕಾರು ತಯಾರಕ ಹೋಂಡಾ ಕಾರ್ಸ್ ತನ್ನ ಕಾಂಪ್ಯಾಕ್ಟ್ ಸೆಡಾನ್ ಹೋಂಡಾ ಅಮೇಜ್ ಅನ್ನು CVT ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಮಾರಾಟ ಮಾಡುತ್ತದೆ. ಈ ಗೇರ್ ಬಾಕ್ಸ್ 1.2 ಲೀಟರ್ ನ್ಯಾಚುರಲ್ ಪೆಟ್ರೋಲ್ ಇಂಜಿನ್ ನೊಂದಿಗೆ ತನ್ನ 'ಎಸ್' ವೆರಿಯಂಟ್ ನಲ್ಲಿ ಲಭ್ಯವಿದೆ, ಇದರ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,8.06 ಲಕ್ಷಗಳಾಗಿದೆ.

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

ಇದರೊಂದಿಗೆ 1.5ಎಲ್ ಡೀಸೆಲ್ ಎಂಬ ಎಂಜಿನ್ ಅನ್ನು ಹೊಂದಿದೆ, ಇನ್ನು ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 110 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.5ಎಲ್ ಡೀಸೆಲ್ ಎಂಜಿನ್ 99 ಬಿಹೆಚ್‍ಪಿ ಪವರ್ ಮತ್ತು 200 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಅಧಿಕೃತ ಹೋಂಡಾ ಡೀಲರ್‌ಶಿಪ್‌ಗಳಲ್ಲಿ ಅಮೇಜ್ ಕಾರಿಗಾಗಿ ಅಕ್ಸೆಸರೀಸ್ ಗಳನು ಖರೀದಿಸಬಹುದು ಮತ್ತು ಫಿಟ್‌ಮೆಂಟ್‌ಗಳನ್ನು ಮಾಡಬಹುದು ಎಂಬುದನ್ನು ಗಮನಿಸಬೇಕು.

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

Maruti Suzuki Baleno Delta CVT

ಮಾರುತಿ ಸುಜುಕಿ ಬಲೆನೊ ಕಾರು ಈ ವಿಭಾಗದಲ್ಲಿ ಸಿವಿಟಿ ಗೇರ್ ಬಾಕ್ಸ್ ನೊಂದಿಗೆ ಬರುವ ಅತ್ಯಂತ ಜನಪ್ರಿಯ ಹ್ಯಾಚ್ ಬ್ಯಾಕ್ ಕಾರು ಆಗಿದೆ. ಬಲೆನೊ ಕಾರಿನ ಡೆಲ್ಟಾ ರೂಪಾಂತರದಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗುತ್ತಿದೆ. ಇದರ ಆರಂಬಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,8.06 ಲಕ್ಷಗಳಾಗಿದೆ,

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

ಈ ಎಂಜಿನ್ 82 ಬಿಎಚ್‌ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ. ಮಾರುತಿ ಬಲೆನೊ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿತ್ತು. ಆದರೆ ಬಿಎಸ್ 6 ಮಾಲಿನ್ಯ ನಿಯಮ ಜಾರಿಯಾಗುವ ವೇಳೆ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿತ್ತು. ಮಾರುತಿ ಸುಜುಕಿ ಕಂಪನಿಯು ಎಲ್ಲಾ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಮಾರುತಿ ಸುಜುಕಿ 2015 ರಲ್ಲಿ ಬಿಡುಗಡೆಯಾದಗಿನಿಂದ ತಯಾರಕರು ಹ್ಯಾಚ್‌ಬ್ಯಾಕ್‌ನಲ್ಲಿ ಸಣ್ಣ ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಬಿಎಸ್ 6 ಮಾಲಿನ್ಯ ನಿಮಕ್ಕೆ ಅನುಗುಣವಾಗಿ ನವೀಕರಣಗೊಂಡ ಮೊದಲ ಹ್ಯಾಚ್‌ಬ್ಯಾಕ್ ಬಲೆನೊ ಆಗಿದೆ.

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

Toyota Glanza G CVT

ಪಟ್ಟಿಯಲ್ಲಿ ಐದನೇ ಕಾರು ಟೊಯೊಟಾ ಗ್ಲಾಂಝಾ ಕಾರಿನ 'ಜಿ' ರೂಪಾಂತರದೊಂದಿಗೆ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡುತ್ತದೆ, ಈ ರೂಪಾಂತರದಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಬಳಸಲಾಗುತ್ತದೆ. ಇದರ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.8.69 ಲಕ್ಷಗಳಾಗಿದೆ.

ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಸಿವಿಟಿ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿವು

Honda Jazz V CVT

ಪಟ್ಟಿಯ ಕೊನೆಯ ಹೆಸರು ಜಪಾನಿನ ಕಾರು ತಯಾರಕರ ಹ್ಯಾಚ್‌ಬ್ಯಾಕ್ ಹೋಂಡಾ ಜಾಝ್ ಆಗಿದೆ, ಇದರಲ್ಲಿ ಕಂಪನಿಯು ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡುತ್ತದೆ. ಕಂಪನಿಯು ಜಾಝ್ ಕಾರಿನ ವಿ ರೂಪಾಂತರದಲ್ಲಿ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡುತ್ತದೆ, ಈ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಸಿವಿಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರ ಆರಂಭಿಕ ಬೆಲೆಯು ರೂ,8.75 ಲಕ್ಷಗಳಾಗಿದೆ.

Most Read Articles

Kannada
English summary
Top cars with cvt gearbox under rs 10 lakhs find here details
Story first published: Saturday, October 9, 2021, 20:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X