ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಆಫ್ ರೋಡ್ ಕೌಶಲ್ಯತೆ ಹೊಂದಿರುವ ಗ್ರಾಹಕರ ಅಭಿರುಚಿಗೆ ತಕ್ಕಂತೆ ಭಾರತದಲ್ಲಿ ಈಗಾಗಲೇ ಹಲವಾರು 4X4 ಡ್ರೈವ್ ಸಿಸ್ಟಂ ಹೊಂದಿರುವ ಕಾರುಗಳು ಖರೀದಿಗೆ ಲಭ್ಯವಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ.

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಕೋವಿಡ್ ಪರಿಣಾಮ ಹೊಸ ವಾಹನ ಮಾರಾಟವು ಮಂದಗತಿಯಲ್ಲಿ ಸಾಗಿದ್ದರೂ ಮುಂಬರುವ ದಿನಗಳಲ್ಲಿ ಸ್ವಂತ ವಾಹನಗಳ ಬಳಕೆಯು ಹೆಚ್ಚಳವಾಗಲಿದೆ ಎನ್ನುವ ಮಾರುಕಟ್ಟೆ ಸಮೀಕ್ಷೆಗಳಿಂದ ಪ್ರೇರಣೆಗೊಂಡಿರುವ ಕಾರು ಉತ್ಪಾದನಾ ಕಂಪನಿಯ ಹಲವಾರು ಹೊಸ ಮಾದರಿಗಳನ್ನು ಬಿಡುಗಡೆ ಮಾಡುತ್ತಿವೆ. ಅದರಲ್ಲೂ ಹೊಸ ಕಾರು ಮಾದರಿಗಳಲ್ಲಿ ಆಫ್ ರೋಡ್ ಇಷ್ಟಪಡುವ ಗ್ರಾಹಕರಿಗಾಗಿ 4x4 ಡ್ರೈವ್ ಸಿಸ್ಟಂ ಹೊಂದಿರುವ ಕಾರುಗಳು ಭಾರೀ ಬೇಡಿಕೆಯ ನೀರಿಕ್ಷೆಯಲ್ಲಿದ್ದು, ಹಲವಾರು ಹೊಸ ವಿನ್ಯಾಸದ ಕಾರುಗಳು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿವೆ.

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಮಾರುತಿ ಸುಜುಕಿ ಜಿಮ್ನಿ

ತ್ರಿ ಡೋರ್ ಮಾದರಿಯೊಂದಿಗೆ ಈಗಾಗಲೇ ವಿದೇಶಿ ಮಾರುಕಟ್ಟೆಗಳಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಮಾರುತಿ ಜಿಮ್ನಿ ಆಫ್ ರೋಡ್ ಕಾರು ಮಾದರಿಯು ಶೀಘ್ರದಲ್ಲೇ ಭಾರತದಲ್ಲೂ ಬಿಡುಗಡೆಯ ಸಿದ್ದತೆಯಲ್ಲಿದ್ದು, ದೇಶಿಯ ಮಾರುಕಟ್ಟೆಗಾಗಿ ಕಂಪನಿಯು ಫೈವ್ ಡೋರ್ ವರ್ಷನ್ ಬಿಡುಗಡೆ ಮಾಡುತ್ತಿದೆ.

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಭಾರತದಲ್ಲಿ ಜಿಪ್ಸಿ ಕಾರು ಮಾರಾಟವನ್ನು ಸ್ಥಗಿತಗೊಳಿಸಿರುವ ಮಾರುತಿ ಸುಜುಕಿ ಕಂಪನಿಯು ಇದೀಗ ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಜಿಮ್ನಿ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಜಿಮ್ಮಿ ಕಾರು ಮಾದರಿಯನ್ನು ಮಾರುತಿ ಸುಜುಕಿ ಭಾರತದಲ್ಲಿ ಉತ್ಪಾದನೆ ಮಾಡಿ ವಿದೇಶಿ ಮಾರುಕಟ್ಟೆಗಳಿಗೆ ರಫ್ತು ಮಾಡುತ್ತಿದೆ. ಶೀಘ್ರದಲ್ಲೇ ಹೊಸ ಕಾರು ಭಾರತದಲ್ಲೂ ಬಿಡುಗಡೆಯಾಗಲಿದ್ದು, 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 4x4 ಡ್ರೈವ್ ಸಿಸ್ಟಂ ಹೊಂದಿರುವ ಜಿಮ್ನಿ ಕಾರು ಮಹೀಂದ್ರಾ ಥಾರ್ ಕಾರಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ನ್ಯೂ ಜನರೇಷನ್ ಸ್ಕಾರ್ಪಿಯೋ

ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಸ್ಕಾರ್ಪಿಯೋ ಕಾರಿನಲ್ಲಿ ಈ ಬಾರಿ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್‌ಗೆ ಪೂರಕವಾದ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಜೊತೆಗೆ ಹೊಸ ಆಟೋಮ್ಯಾಟಿಕ್ ಪೆಟ್ರೋಲ್ ಮಾದರಿಯನ್ನು ಸಹ ಬಿಡುಗಡೆ ಮಾಡುತ್ತಿದೆ. ಹೊಸ ಸ್ಕಾರ್ಪಿಯೋ ಕಾರು ಮಾದರಿಯಲ್ಲಿ ಥಾರ್ ಎಸ್‌ಯುವಿಯಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಿದ್ದು, ಹೊಸ ಕಾರು ಮುಂಬರುವ ಅಗಸ್ಟ್ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ.

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಈಗಾಗಲೇ 4x4 ಡ್ರೈವ್ ಸಿಸ್ಟಂ ಹೊಂದಿರುವ ಸ್ಕಾಪಿಯೋ ಕಾರು ಮಾದರಿಯು ನ್ಯೂ ಜನರೇಷನ್ ಮಾದರಿಯೊಂದಿಗೆ ಮತ್ತಷ್ಟು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾದರಿಗಿಂತಲೂ ರೂ.1 ಲಕ್ಷದಿಂದ 1.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಬಿಎಸ್-6 ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್

ಇಸುಝು ಕಂಪನಿಯು ತನ್ನ ಜನಪ್ರಿಯ ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್ ಹೊಸ ಆವೃತ್ತಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಆವೃತ್ತಿಗಿಂತಲೂ ಹಲವಾರು ಹೊಸ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಂಡಿದೆ.

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಹಲವಾರು ಹೊಸ ಮಾದರಿಯ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್ ಕಾರು ಗ್ರಾಹಕರ ತಮ್ಮ ಬೇಡಿಕೆಗೆ ಅನುಗುಣವಾಗಿ 1.9-ಲೀಟರ್ ಡೀಸೆಲ್ ಮತ್ತು 2.5-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಆಯ್ಕೆಯೊಂದಿಗೆ 4x4 ಡ್ರೈವ್ ಸಿಸ್ಟಂ ಹೊಂದಿರಲಿದ್ದು, ಪಿಕ್ಅಪ್ ಮಾದರಿಗಳ ಮಾರಾಟದಲ್ಲಿ ಡಿ-ಮ್ಯಾಕ್ಸ್ ವಿ-ಕ್ರಾಸ್ ತನ್ನದೇ ಆದ ಜನಪ್ರಿಯತೆ ಹೊಂದಿದೆ.

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಮಹೀಂದ್ರಾ ಎಕ್ಸ್‌ಯುವಿ700

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಹಲವು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ500 ಮಾದರಿಯನ್ನೇ ನ್ಯೂ ಜನರೇಷನ್ ಮಾದರಿಯೊಂದಿಗೆ ಎಕ್ಸ್‌ಯುವಿ700 ಹೆಸರಿನಲ್ಲಿ ಬಿಡುಗಡೆ ಮಾಡುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿಯು ಆಟೊನಮಸ್ ಲೆವಲ್ 1 ಟೆಕ್ನಾಲಜಿ ಸೌಲಭ್ಯಗಳನ್ನು ನೀಡುತ್ತಿದ್ದು, ಆಟೊನಮಸ್ ಲೆವಲ್ 1ರಲ್ಲಿ ಆಟೋಮ್ಯಾಟಿಕ್ ಪಾರ್ಕಿಂಗ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್ ಮತ್ತು ಅಂತರಾಷ್ಟ್ರೀಯ ಗುಣಮಟ್ಟದ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ. ಹಾಗೆಯೇ ಹೊಸ ಕಾರಿನಲ್ಲಿ ಕಂಪನಿಯು 4x2 ಮತ್ತು 4x4 ಡ್ರೈವ್ ಸಿಸ್ಟಂ ಜೋಡಣೆ ಮಾಡಲಿದ್ದು, ವಿವಿಧ ಎಂಜಿನ್ ಆಯ್ಕೆ ಹೊಂದಿರಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಜೀಪ್ ಕಂಪಾಸ್ 7 ಸೀಟರ್

ಜೀಪ್ ಇಂಡಿಯಾ ಕಂಪನಿಯು ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಂಪಾಸ್ ಮತ್ತು ರ‍್ಯಾಂಗ್ಲರ್ ಆಫ್ ರೋಡ್ ಎಸ್‌ಯುವಿ ಆವೃತ್ತಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳ ಮಾರಾಟ ಆರಂಭಿಸುವ ಸಿದ್ದತೆಯಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 7 ಸೀಟರ್ ಸೌಲಭ್ಯದ ಫುಲ್ ಸೈಜ್ ಎಸ್‌ಯುವಿ ಮತ್ತು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಸಹ ಬಿಡುಗಡೆ ಮಾಡುತ್ತಿದೆ.

ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಜೀಪ್ ಕಂಪನಿಯು ಹೆಚ್6 ಎನ್ನುವ ಕೋಡ್ ನೆಮ್ ಆಧಾರದ ಮೇಲೆ 7 ಸೀಟರ್ ಎಸ್‌ಯುವಿ ಮಾದರಿಯನ್ನು ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, 2.0-ಲೀಟರ್ ಸಾಮರ್ಥ್ಯದ ನಾಲ್ಕು ಸಿಲಿಂಡರ್ ಪ್ರೇರಣೆಯ ಮಲ್ಟಿಜೆಟ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಹೊಂದಿರಲಿರುವ ಹೊಸ ಕಾರು 4x4 ಡ್ರೈವ್ ಸಿಸ್ಟಂನೊಂದಿಗೆ ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

Most Read Articles

Kannada
English summary
Top-Five Upcoming 4WD SUVs In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X