ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ವಿಶ್ವಾದ್ಯಂತ ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲಾಗುತ್ತಿದ್ದು, ಬಹುತೇಕ ವಾಹನ ಮಾರಾಟ ಕಂಪನಿಗಳು ಕೂಡಾ ಭವಿಷ್ಯದ ವಾಹನ ಮಾದರಿಗಳ ಬಗೆಗೆ ಹೆಚ್ಚಿನ ಒತ್ತು ನೀಡುತ್ತಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಹೊಸ ಕಾರುಗಳ ಮಾರಾಟದಲ್ಲಿ ಈಗಾಗಲೇ ಹಲವಾರು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಪ್ರಮುಖ ಕಾರು ಕಂಪನಿಗಳು ಇಂಧನ ಆಧಾರಿತ ಕಾರುಗಳ ಜೊತೆಗೆ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಗಮನಸೆಳೆಯುತ್ತಿವೆ. ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‍ಜಿ) ತಂತ್ರಜ್ಞಾನವು ವಾಹನ ಮೈಲೇಜ್ ವಿಚಾರದಲ್ಲಿ ಪ್ರಮುಖ ಪಾತ್ರವಹಿಸುವುದರ ಜೊತೆಗೆ ಮಾಲಿನ್ಯ ತಗ್ಗಿಸುವಲ್ಲಿ ಸಾಕಷ್ಟು ಸಹಕಾರಿಯಾಗಿದ್ದು, ಬಿಡುಗಡೆಯಾಗಲು ಸಜ್ಜಾಗಿರುವ ಪ್ರಮುಖ ಸಿಎನ್‌ಜಿ ಕಾರುಗಳ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಮಾರುತಿ ಸುಜಕಿ ಸ್ವಿಫ್ಟ್ ಮತ್ತು ಡಿಜೈರ್

ಸಿಎನ್‍ಜಿ ತಂತ್ರಜ್ಞಾನ ಪ್ರೇರಿತ ವಾಹನ ಮಾರಾಟದಲ್ಲಿ ಈಗಾಗಲೇ ಮಾರುತಿ ಸುಜುಕಿ ಕಂಪನಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ ಸ್ವಿಫ್ಟ್ ಮತ್ತು ಡಿಜೈರ್ ಕಾರು ಮಾದರಿಗಳಲ್ಲೂ ಸಿಎನ್‌ಜಿ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಮಾರುತಿ ಸುಜುಕಿ ಕಂಪನಿಯು ಈಗಾಗಲೇ ವ್ಯಾಗನ್ಆರ್ ಸೆಲೆರಿಯೊ, ಆಲ್ಟೊ, ಎಸ್‌ಪ್ರೆಸ್ಸೊ, ಇಕೋ, ಎರ್ಟಿಗಾ ಕಾರುಗಳ ಸಿಎನ್‌ಜಿ ಮಾದರಿೊ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಶೀಘ್ರದಲ್ಲೇ ಮತ್ತಷ್ಟು ಕಾರು ಮಾದರಿಗಳಲ್ಲಿ ಸಿಎನ್‌ಜಿ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಟೊಯೊಟಾ ಇನೋವಾ ಕ್ರಿಸ್ಟಾ

ಬಿಎಸ್-6 ಎಮಿಷನ್ ಜಾರಿ ನಂತರ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಈ ಹಿಂದಿನ 2.8-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊಸ ಎಮಿಷನ್ ಪ್ರಕಾರ ಸ್ಥಗಿತಗೊಳಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಇದರ ಬೆನ್ನಲ್ಲೇ ಹೊಸ ಕಾರಿನಲ್ಲಿ ಇದೇ ಮೊದಲ ಬಾರಿಗೆ ಸಿಎನ್‌ಜಿ ಆಯ್ಕೆಯನ್ನು ನೀಡಲು ಸಿದ್ದತೆ ನಡೆಸಲಾಗುತ್ತಿದ್ದು, ಸಿಎನ್‌ಜಿ ಆವೃತ್ತಿಯು ಡೀಸೆಲ್ ಕಾರಿಗಿಂತಲೂ ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಟಾಟಾ ಟಿಯಾಗೋ, ಟಿಗೋರ್ ಮತ್ತು ನೆಕ್ಸಾನ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯಾದ ಟಿಯಾಗೋ, ಕಂಪ್ಯಾಕ್ಟ್ ಸೆಡಾನ್ ಮಾದರಿಯಾದ ಟಿಗೋರ್ ಮತ್ತು ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಗಳಲ್ಲಿ ಸಿಎನ್‌ಜಿ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಿದ್ದು, ಶೀಘ್ರದಲ್ಲೇ ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಟಿಗೋರ್ ಮತ್ತು ಟಿಯಾಗೋ ಕಾರುಗಳಲ್ಲಿ ಸದ್ಯಕ್ಕೆ ಪೆಟ್ರೋಲ್ ಮಾದರಿಗಳನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಬಿಎಸ್ 6 ಜಾರಿ ನಂತರ ಡೀಸೆಲ್ ಎಂಜಿನ್ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ನೈಸರ್ಗಿಕ ಅನಿಲಗಳಿಂದ ಚಾಲನೆ ಮಾಡಬಹುದಾದ ವಿವಿಧ ತಂತ್ರಜ್ಞಾನ ಪ್ರೇರಣೆಯ ವಾಹನಗಳನ್ನು ಬಿಡುಗಡೆ ಮಾಡುವ ಇರಾದೆಯಲ್ಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಹೋಂಡಾ ಅಮೇಜ್

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ತನ್ನ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ 1.2-ಲೀಟರ್ ಮಾದರಿಯ ಮಧ್ಯಮ ಕ್ರಮಾಂಕದಲ್ಲಿ ಸಿಎನ್‌ಜಿ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಸಿಎನ್‌ಜಿ ಮಾದರಿಗಳು ವಿವಿಧ ಮಾದರಿಗಳಿಗೆ ಅನುಗುಣವಾಗಿ ಸ್ಟ್ಯಾಂಡರ್ಡ್ ಪೆಟ್ರೋಲ್ ಮಾದರಿಗಿಂತ ರೂ. 70 ಸಾವಿರದಿಂದ ರೂ. 1.20 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆಯಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಮತ್ತೊಂದು ಪ್ರಮುಖ ವಿಚಾರವೆಂದರೆ ಗ್ರಾಹಕರು ಈಗಾಗಲೇ ಖರೀದಿ ಮಾಡಲಾಗಿರುವ ಪೆಟ್ರೋಲ್ ಕಾರು ಮಾದರಿಗಳಿಗೂ ಸಿಎನ್‌ಜಿ ಕಿಟ್ ಜೋಡಣೆ ಮಾಡಿಕೊಳ್ಳಬಹುದಾಗಿದ್ದು, ಕೆ.ಜಿ ಲೆಕ್ಕದಲ್ಲಿ ಮಾರಾಟಗೊಳ್ಳುವ ಸಿಎನ್‌ಜಿಯಿಂದ ಪ್ರತಿ ಕೆ.ಜಿ ಗೆ 20 ಕಿ.ಮೀ ನಿಂದ 32 ಕಿ.ಮೀ ತನಕ ಮೈಲೇಜ್ ಹಿಂಪಡೆಯಬಹುದಾಗಿದೆ.

Most Read Articles

Kannada
English summary
Upcoming CNG Cars In India 2021. Read in Kannada.
Story first published: Wednesday, July 28, 2021, 0:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X