ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

2021ರ ನವೆಂಬರ್ ತಿಂಗಳ ಮಾರಾಟದ ಅಂಕಿ ಅಂಶಗಳನ್ನು ಕಾರು ತಯಾರಕ ಕಂಪನಿಗಳು ಬಿಡುಗಡೆಗೊಳಿಸಿವೆ. ಕೆಲವು ಕಾರು ತಯಾರಕ ಕಂಪನಿಗಳು ಕಳೆದ ತಿಂಗಳ ಮಾರಾಟದಲ್ಲಿ ಕುಸಿತ ಕಂಡಿದ್ದರೆ, ಕೆಲವು ಕಂಪನಿಗಳು ಲಾಭ ಗಳಿಸಿವೆ. ಜನರು ಒಂದೆಡೆ ಎಸ್‌ಯುವಿ ವಿಭಾಗದತ್ತ ಮುಖ ಮಾಡುತ್ತಿದ್ದರೆ, ಹ್ಯಾಚ್‌ಬ್ಯಾಕ್ ಕಾರುಗಳನ್ನು ಇಷ್ಟಪಡುವ ಜನರು ಇನ್ನೂ ಇದ್ದಾರೆ. ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

1. ಮಾರುತಿ ಸುಜುಕಿ ವ್ಯಾಗನ್ ಆರ್ (Maruti Suzuki WagonR)

ಈ ಪಟ್ಟಿಯಲ್ಲಿ ಮಾರುತಿ ಸುಜುಕಿ ವ್ಯಾಗನ್ ಆರ್ ಕಾರು ಮೊದಲ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಕಂಪನಿಯು ಕಳೆದ ತಿಂಗಳು ಈ ಹ್ಯಾಚ್‌ಬ್ಯಾಕ್‌ ಕಾರಿನ 16,853 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, 2020ರ ನವೆಂಬರ್ ತಿಂಗಳಿನಲ್ಲಿ ಕಂಪನಿಯು ಈ ಕಾರಿನ 16,256 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಈ ವರ್ಷ ಈ ಕಾರಿನ ಮಾರಾಟವು 4% ನಷ್ಟು ಹೆಚ್ಚಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

2. ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift)

ಈ ಪಟ್ಟಿಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಎರಡನೇ ಸ್ಥಾನದಲ್ಲಿದೆ. ಕಳೆದ ತಿಂಗಳು ಕಂಪನಿಯು ಈ ಕಾರಿನ 15,568 ಯುನಿಟ್‌ಗಳನ್ನು ಮಾರಾಟ ಮಾಡಿದೆ. 2020ರ ನವೆಂಬರ್ ತಿಂಗಳಿನಲ್ಲಿ ಈ ಹ್ಯಾಚ್‌ಬ್ಯಾಕ್‌ ಕಾರಿನ ಒಟ್ಟು 18,498 ಯುನಿಟ್‌ಗಳು ಮಾರಾಟವಾಗಿದ್ದವು. ಈ ವರ್ಷ ಸ್ವಿಫ್ಟ್ ಕಾರಿನ ಮಾರಾಟವು 21% ನಷ್ಟು ಕುಸಿತ ಕಂಡಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

3. ಮಾರುತಿ ಸುಜುಕಿ ಆಲ್ಟೊ (Maruti Suzuki Alto)

ಈ ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಕಾರ್ ಆದ ಆಲ್ಟೊ ಮೂರನೇ ಸ್ಥಾನದಲ್ಲಿದೆ. ಕಳೆದ ತಿಂಗಳು ಕಂಪನಿಯು ಈ ಕಾರಿನ ಒಟ್ಟು 13,812 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, ಕಳೆದ ವರ್ಷ ಕಂಪನಿಯು ಈ ಕಾರಿನ 15,321 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಈ ವರ್ಷ ಮಾರುತಿ ಸುಜುಕಿ ಆಲ್ಟೊ ಕಾರಿನ ಮಾರಾಟವು 10% ನಷ್ಟು ಕುಸಿತ ದಾಖಲಿಸಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

4. ಮಾರುತಿ ಸುಜುಕಿ ಬಲೆನೊ (Maruti Suzuki Baleno)

ಈ ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯ ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ನಾಲ್ಕನೇ ಸ್ಥಾನದಲ್ಲಿದೆ. ಕಳೆದ ತಿಂಗಳು ಕಂಪನಿಯು ಈ ಕಾರಿನ ಒಟ್ಟು 9,931 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ಕಂಪನಿಯು ಈ ಕಾರಿನ 17,872 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಈ ವರ್ಷ ಈ ಕಾರಿನ ಮಾರಾಟವು 44% ನಷ್ಟು ಕುಸಿದಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

5. ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio)

ಮಾರುತಿ ಸುಜುಕಿ ಕಂಪನಿಯ ಸೆಲೆರಿಯೊ ಹ್ಯಾಚ್‌ಬ್ಯಾಕ್ ಕಾರು ಈ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದೆ. ಕಳೆದ ತಿಂಗಳು ಕಂಪನಿಯು ಈ ಕಾರಿನ ಒಟ್ಟು 5,968 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, 2020ರ ನವೆಂಬರ್ ತಿಂಗಳಿನಲ್ಲಿ ಈ ಕಾರಿನ ಒಟ್ಟು 6,533 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ವರ್ಷದ ನವೆಂಬರ್‌ನಲ್ಲಿ ಈ ಕಾರಿನ ಮಾರಾಟವು 9% ನಷ್ಟು ಕುಸಿದಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

6. ಹುಂಡೈ ಗ್ರಾಂಡ್ ಐ10 ನಿಯೋಸ್ (Hyundai Grand i10 Nios)

ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಈ ಮಾರಾಟ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಕಳೆದ ತಿಂಗಳು ಕಂಪನಿಯು ಈ ಕಾರಿನ ಒಟ್ಟು 5,466 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, ಕಳೆದ ವರ್ಷ ಇದೇ ತಿಂಗಳಿನಲ್ಲಿ ಈ ಕಾರಿನ 10,936 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಈ ವರ್ಷ ಈ ಕಾರಿನ ಮಾರಾಟ ಪ್ರಮಾಣವು 50% ನಷ್ಟು ಕುಸಿದಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

7. ಟಾಟಾ ಟಿಯಾಗೊ (Tata Tiago)

ಈ ಪಟ್ಟಿಯಲ್ಲಿ ಟಾಟಾ ಮೋಟಾರ್ಸ್‌ ಕಂಪನಿಯ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಕಾರ್ ಆದ ಟಿಯಾಗೊ ಏಳನೇ ಸ್ಥಾನದಲ್ಲಿದೆ. ಕಳೆದ ತಿಂಗಳು ಟಾಟಾ ಮೋಟಾರ್ಸ್‌ ಕಂಪನಿಯು ಈ ಕಾರಿನ ಒಟ್ಟು 4,998 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, ಕಳೆದ ವರ್ಷ ಈ ಕಾರಿನ 5,890 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಈ ಕಾರಿನ ಮಾರಾಟ ಪ್ರಮಾಣವು ಈ ವರ್ಷ 15% ನಷ್ಟು ಕುಸಿತವನ್ನು ದಾಖಲಿಸಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಕಳೆದ ಕೆಲವು ತಿಂಗಳುಗಳಿಂದ ವಿಶ್ವದಾದ್ಯಂತ ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಕುಸಿತ ಕಂಡುಬರುತ್ತಿದೆ. ಪ್ರಯಾಣಿಕ ವಾಹನಗಳ ಮಾರಾಟ ಕುಸಿತಕ್ಕೆ ಸೆಮಿಕಂಡಕ್ಟರ್ ಚಿಪ್ ಕೊರತೆ ಪ್ರಮುಖ ಕಾರಣವಾಗಿದೆ. ಬಹುತೇಕ ವಾಹನ ತಯಾರಕ ಕಂಪನಿಗಳು ಸೆಮಿ ಕಂಡಕ್ಟರ್ ಚಿಪ್ ಕೊರತೆಯನ್ನು ಆಟೋ ಮೊಬೈಲ್ ಉದ್ಯಮಕ್ಕೆ ಪ್ರಮುಖ ಸವಾಲೆಂದು ಪರಿಗಣಿಸಿವೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಉತ್ಪಾದನೆ ಕುಸಿದಿರುವುದರಿಂದ ಪ್ರಯಾಣಿಕ ವಾಹನಗಳ ಪೂರೈಕೆ ಕಡಿಮೆಯಾಗಿದೆ. ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿಲ್ಲವೆಂದು ಆಟೋ ಮೊಬೈಲ್ ಕಂಪನಿಗಳು ಹೇಳುತ್ತಿದ್ದರೂ ವಾಹನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಮಾರಾಟದ ಮೇಲೆ ಪರಿಣಾಮ ಬೀರುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಅಮೆರಿಕಾ, ಪ್ರಯಾಣಿಕ ವಾಹನಗಳ ಬಹು ದೊಡ್ಡ ಮಾರುಕಟ್ಟೆಯಾಗಿದೆ. ಆದರೆ ಕರೋನಾ ಸಾಂಕ್ರಾಮಿಕ ಹಾಗೂ ಸೆಮಿಕಂಡಕ್ಟರ್ ಕೊರತೆಯು ಅಮೆರಿಕಾದ ಆಟೋ ಕಂಪನಿಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಳೆದ ವರ್ಷದ ಅಕ್ಟೋಬರ್‌ಗೆ ಹೋಲಿಸಿದರೆ ಈ ವರ್ಷದ ಅಕ್ಟೋಬರ್‌ನಲ್ಲಿ ಅಮೆರಿಕಾದಲ್ಲಿ ಪ್ರಯಾಣಿಕ ವಾಹನಗಳ ಮಾರಾಟವು 20% ನಷ್ಟು ಕಡಿಮೆಯಾಗಿದೆ. ಪ್ರಮುಖ ಪ್ರಯಾಣಿಕ ವಾಹನ ತಯಾರಕ ಕಂಪನಿಯಾದ ಫೋರ್ಡ್‌ನ ಮಾರಾಟವು ಚಿಪ್ ಕೊರತೆಯಿಂದ 4% ನಷ್ಟು ಕುಸಿದಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಹೋಂಡಾ ಹಾಗೂ ಹ್ಯುಂಡೈ ಕಂಪನಿಗಳ ಮಾರಾಟವು ಸತತ ಮೂರನೇ ತಿಂಗಳೂ ಕಡಿಮೆಯಾಗಿದೆ. ಕರೋನಾ ಸಾಂಕ್ರಾಮಿಕದ ಜೊತೆಗೆ ದೇಶದ ಪ್ರತಿ ವಾಹನ ತಯಾರಕ ಕಂಪನಿಗಳು ಚಿಪ್ ಕೊರತೆಯಿಂದಲೂ ಕಡಿಮೆ ಮಾರಾಟವನ್ನು ಎದುರಿಸುವಂತಾಗಿದೆ ಎಂದು ಅಮೆರಿಕಾದ ಪ್ರಮುಖ ಹೂಡಿಕೆ ಸಂಶೋಧನಾ ಸಂಸ್ಥೆಯಾದ ಸಿ‌ಎಫ್‌ಆರ್‌ಎ ಹೇಳಿದೆ. ಇದೇ ಪರಿಸ್ಥಿತಿ ದೀರ್ಘಕಾಲ ಮುಂದುವರಿದರೆ ವಾಹನ ತಯಾರಕ ಕಂಪನಿಗಳಿಗೆ ತೊಂದರೆಯಾಗಬಹುದು.

ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಪ್ರಯಾಣಿಕ ವಾಹನಗಳಿಗೆ ಚೀನಾ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಚೀನಾ ಸೆಮಿಕಂಡಕ್ಟರ್ ಚಿಪ್‌ಗಳನ್ನು ಸ್ವತಃ ಉತ್ಪಾದಿಸುತ್ತದೆ. ಆದರೂ ಚೀನಾದಲ್ಲಿ ಈ ವರ್ಷ ವಾಹನಗಳ ಮಾರಾಟ ಕಡಿಮೆಯಾಗಿದೆ. ಚೀನಾ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ​​(CADA) ಪ್ರಕಾರ, ಅಕ್ಟೋಬರ್ ತಿಂಗಳಿನಲ್ಲಿ ಚೀನಾದಲ್ಲಿ ವಾಹನ ಮಾರಾಟವು 12% ನಷ್ಟು ಕಡಿಮೆಯಾಗಿದೆ.

Most Read Articles

Kannada
English summary
Top hatchback cars sold in domestic market during november 2021 details
Story first published: Saturday, December 4, 2021, 12:28 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X