ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ಭಾರತೀಯ ಮಾರುಕಟ್ಟೆಯಲ್ಲಿ ದಿನ ಕಳೆದಂತೆ ಎಸ್‍ಯುವಿ ಮಾದರಿಗಳ ಬೇಡಿಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಎಸ್‍ಯುವಿ ಮಾದರಿಗಳನ್ನು ಆಯ್ಕೆ ಮಾಡಿಕೊಳ್ಳುವವರ ಸಂಖ್ಯೆ ಅಧಿಕವಾಗುತ್ತಿದೆ. ಈ ಎಸ್‍ಯುವಿ ವಿಭಾಗದಲ್ಲಿಯೇ ಹಲವು ವಿಧದ ಮಾದರಿಗಳಿವೆ.

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ಎಸ್‍ಯುವಿ ವಿಭಾಗದಲ್ಲಿ ಮೈಕ್ರೊ ಎಸ್‍ಯುವಿ, ಕಾಂಪ್ಯಾಕ್ಟ್ ಎಸ್‍ಯುವಿ, ಮಿಡ್ ಎಸ್‍ಯುವಿ ಮತ್ತು ಫುಲ್ ಸೈಜ್ ಎಸ್‍ಯುವಿ ಎಂಬ ವಿವಿಧ ಬಾಡಿ ಶೈಲಿಯನ್ನು ಹೊಂದಿರುವ ಮಾದರಿಗಳಿವೆ. ಭಾರತದಲ್ಲಿ ಸದ್ಯ ಇಂಧನ ಬೆಲೆಯು ಪ್ರತಿದಿನ ಹೆಚ್ಚಾಗುತ್ತಿದೆ. ಇನ್ನು ಮಾಲಿನ್ಯ ನಿಯಮಗಳಿಂದಾಗಿ ಕಾರು ತಯಾರಕರು ಸಣ್ಣ-ಸಾಮರ್ಥ್ಯದ ಟರ್ಬೋಚಾರ್ಜ್ಡ್ ಎಂಜಿನ್‌ಗಳಿಗೆ ಬದಲಾಗುತ್ತಿದ್ದಾರೆ, ಹೆಚ್ಚಿನ ಗ್ರಾಹಕರು ಟರ್ಬೋಚಾರ್ಜ್ಡ್ ಎಂಜಿನ್‌ಗಳ ವಾಹನಗಳನ್ನು ಇಷ್ಟಪಡುತ್ತಾರೆ. ಇಂತಹವರಿಗೆ ಸಣ್ಣ-ಸಾಮರ್ಥ್ಯದ 1.0-ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಟಾಪ್ ಎಸ್‍ಯುವಿಗಳ ಮಾಹಿತಿ ಇಲ್ಲಿವೆ.

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ಕಿಯಾ ಸೊನೆಟ್

ಕಿಯಾ ಇಂಡಿಯಾ ಕಂಪನಿಯು ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಸೆಲ್ಟೋಸ್ ಬಳಿಕ ಕಿಯಾ ಮೂರನೇ ಮಾದರಿಯಾಗಿ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತ್ತು.

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ಈ ಕಿಯಾ ಸೊನೆಟ್ ಎಸ್‍ಯುವಿಯಲ್ಲಿ 1.0-ಲೀಟರ್ ಟರ್ಬೋಚಾರ್ಜ್ಡ್ ಜಿಡಿಐ (ಗ್ಯಾಸೋಲಿನ್ ಡೈರೆಕ್ಟ್ ಇಂಜೆಕ್ಷನ್) ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 119 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 7-ಸ್ಪೀಡ್ ಡಿಸಿಟಿ ಮತ್ತು 6-ಸ್ಪೀಡ್ ಐಎಂಟಿ ಆಯ್ಕೆಯನ್ನು ನೀಡಲಾಗಿದೆ,

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ರೆನಾಲ್ಟ್ ಕಿಗರ್

ರೆನಾಲ್ಟ್ ಕಂಪನಿಯು ಈ ಕಿಗರ್ ಸಬ್-4 ಮೀಟರ್ ಎಸ್‌ಯುಯನ್ನು ಈ ವರ್ಷದ ಫೆಬ್ರವರಿಯಲ್ಲಿ ಬಿಡುಗಡೆಗೊಳಿಸಿತು. ಈ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳನ್ನು ಪಡೆಯುತ್ತದೆ, ಎರಡು ಕೂಡ 1.0-ಲೀಟರ್ ಆಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ಒಂದು ಸ್ವಾಭಾವಿಕವಾಗಿ ಎಂಜಿನ್ ಆದರೆ ಇನ್ನೊಂದು 1.0ಎಲ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದೆ, ಈ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಎಂಜಿನ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ಹ್ಯುಂಡೈ ವೆನ್ಯೂ

ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ವೆನ್ಯೂ ಎಸ್‍ಯುವಿಯಲ್ಲಿ 1.0-ಲೀಟರ್ ಟರ್ಬೊ ಜಿಡಿಐ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 172 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗ್ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಐಎಂಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ನಿಸ್ಸಾನ್ ಮ್ಯಾಗ್ನೈಟ್

ಈ ನಿಸ್ಸಾನ್ ಮ್ಯಾಗ್ನೈಟ್ ಎಸ್‍ಯುವಿ ಮಾದರಿಯು ಭಾರತದ ಅತ್ಯಂತ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಈ ಮ್ಯಾಗ್ನೈಟ್ ಎಸ್‍ಯುವಿಯು ಬಿಡುಗಡೆಯ ಮುನ್ನ ಭಾರೀ ಸಂಚಲವನ್ನು ಸೃಷ್ಟಿಸಿದ ಮಾದರಿಯಾಗಿದೆ. ಇದು ತನ್ನ ಪ್ಲಾಟ್‌ಫಾರ್ಮ್ ಮತ್ತು ಪವರ್‌ಟ್ರೇನ್‌ಗಳನ್ನು ರೆನಾಲ್ಟ್ ಕಿಗರ್‌ನೊಂದಿಗೆ ಹಂಚಿಕೊಳ್ಳುತ್ತದೆ.

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ಈ ನಿಸ್ಸಾನ್ ಮ್ಯಾಗ್ನೈಟ್ ಮಾದರಿಯ ಬೇಸ್ ರೂಪಾಂತರವನ್ನು ಹೊರತುಪಡಿಸಿ ಉಳಿದ ಎಲ್ಲಾ ರೂಪಾಂತರಗಳು 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ, ಈ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಎಂಟಿ ಮತ್ತು ಸಿವಿಟಿ ಗೇರ್ ಬಾಕ್ಸ್ ಅನ್ನು ನೀಡಲಾಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ಸ್ಖೋಡಾ ಕುಶಾಕ್

ಸ್ಕೋಡಾ ಕಂಪನಿಯು ತನ್ನ ಬಹುನೀರಿಕ್ಷಿತ ಕುಶಾಕ್ ಎಸ್‍ಯುವಿಯನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ಸ್ಕೋಡಾ ಕುಶಾಕ್ ಎಸ್‌ಯುವಿ ಭಾರತದಲ್ಲಿ ಹೆಚ್ಚು ಸ್ಪರ್ಧಾತ್ಮಕ ಮಿಡ್ ಸೈಜ್ ಎಸ್‍ಯುವಿ ವಿಭಾಗವನ್ನು ಪ್ರವೇಶಿಸಿದೆ. ಹೊಸ ಸ್ಕೋಡಾ ಕುಶಾಕ್ ಎಸ್‌ಯುವಿಯ ಆರಂಭಿಕ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10.50 ಲಕ್ಷಗಳಾಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ 1.0 ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್‌ ಹೊಂದಿರುವ ಎಸ್‍ಯುವಿಗಳಿವು

ಈ ಕುಶಾಕ್ ಎಸ್‍ಯುವಿಯಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 108 ಬಿಎಚ್‌ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

Most Read Articles

Kannada
English summary
Top SUVs With 1.0L Turbo-Petrol Engine. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X