ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ನ್ಯೂ ಜನರೇಷನ್ ಪೊಲೊ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ಹೇಳಲಾಗುತ್ತಿದೆ. ಆದರೆ ಇತ್ತೀಚೆಗೆ ಫೋಕ್ಸ್‌ವ್ಯಾಗನ್ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿರುವ ಆರನೇ ತಲೆಮಾರಿನ ಪೊಲೊ ಕಾರಿನ ಫೇಸ್‌ಲಿಫ್ಟೆಡ್ ಮಾದರಿಯನ್ನು ಅನಾವರಣಗೊಳಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಆದ್ದರಿಂದ ಇದು ಅಂತಿಮವಾಗಿ ಭಾರತಕ್ಕೆ ಬರುವ ಆವೃತ್ತಿಯಾಗಬಹುದು. ಈ 2021ರ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರಿನ ಹೊರ ಭಾಗದಲ್ಲಿ ಮತ್ತು ಒಳಭಾಗದಲ್ಲಿ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ. ಈ ಹೊಸ ಪೊಲೊ ಎಂಕ್ಯೂಬಿ ಎಒ ಪ್ಲಾಟ್ ಫಾರ್ಮ್ ಅನ್ನು ಆಧರಿಸಿದೆ. ಇದೇ ಪ್ಲಾಟ್ ಫಾರ್ಮ್ ಅಡಿಯಲ್ಲಿ ನ್ಯೂ ಜನರೇಷನ್ ಸ್ಕೋಡಾ ಫ್ಯಾಬಿಯಾ ಕಾರನ್ನು ಉತ್ಪಾದಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ವಿನ್ಯಾಸ

2021ರ ಫೋಕ್ಸ್‌ವ್ಯಾಗನ್ ಪೊಲೊ ದೊಡ್ಡ ಗಾಲ್ಫ್ ಮಾದರಿಯ ವಿನ್ಯಾಸದೊಂದಿಗೆ ಹೋಲುವಂತಿದೆ.ಫೇಸ್‌ಲಿಫ್ಟೆಡ್ ಟಿಗ್ವಾನ್ ಮತ್ತು ಗಾಲ್ಫ್‌ನಂತೆ ಇದು ಹೊಸ ಎಲ್‌ಇಡಿ ಲೈಟಿಂಗ್ ಬಾರ್ ಅನ್ನು ಪಡೆಯುತ್ತದೆ ಮತ್ತು ಸ್ಟ್ಯಾಂಡರ್ಡ್ ಎಲ್ಇಡಿ ಕಿರಣಗಳೊಂದಿಗೆ ಹೆಡ್‌ಲ್ಯಾಂಪ್‌ಗಳು ಮೊದಲಿಗಿಂತ ತೀಕ್ಷ್ಣವಾಗಿವೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಹೈ-ಎಂಡ್ ರೂಪಾಂತರಗಳು ಮೊದಲ ಬಾರಿಗೆ ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್‌ಗಳು ಪ್ಯಾಕೇಜಿನ ಭಾಗವಾಗಿದೆ. ಹಿಂಭಾಗದಲ್ಲಿ, ನವೀಕರಿಸಿದ ವಿಡಬ್ಲ್ಯೂ ಗಾಲ್ಫ್‌ ಮಾದರಿಯಲ್ಲಿರುವಂತೆ ಸಿ-ಆಕಾರದ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಕ್ಡೂಡ ಮರುವಿನ್ಯಾಸಗೊಳಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನಲ್ಲಿ ಪೋಲೊ ಬ್ಯಾಡ್ಜ್ ಅನ್ನು ಟೈಲ್‌ಗೇಟ್‌ನ ಮಧ್ಯದಲ್ಲಿ ಇರಿಸಲಾಗಿದೆ. ಆರ್-ಲೈನ್ ಟ್ರಿಮ್ 16 ಇಂಚಿನ ವ್ಹೀಲ್ ಮತ್ತು ಎಕ್ಸಾಸ್ಟ್ ಪೈಪ್ ಗಳನ್ನು ಒಳಗೊಂಡಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಫೀಚರ್ಸ್‌ಗಳು

ಇನ್ನು ಹೊಸ ಪೊಲೊ ಕಾರಿನ ಕ್ಯಾಬಿನ್‌ನಲ್ಲಿ 9.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಆಲ್-ಡಿಜಿಟಲ್ 10.25-ಇಂಚಿನ ಡ್ರೈವರ್ ಡಿಸ್ ಪ್ಲೇ ಮತ್ತು ಆರ್ಟಿಯಾನ್‌ನಲ್ಲಿರುವಂತೆ ಟಚ್ ಕ್ಲೈಮೇಂಟ್ ಕಂಟ್ರೋಲ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಎಂಜಿನ್

ಈ ಹೊಸ ಪೊಲೊ ಕಾರಿನಲ್ಲಿ 1.0-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 80 ಬಿಹೆಚ್‍ಪಿ ಪವರ್ ಮತ್ತು 93 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ 5-ಸ್ಪೀಡ್ ಎಂಟಿ ಜೊತೆ ಜೋಡಿಸಲ್ಪಟ್ಟಿದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಇನ್ನು 1.0-ಲೀಟರ್ ಟಿಎಸ್ಐ ಎಂಜಿನ್ ಅನ್ನು ನೀಡಲಾಗಿದೆ. ಈ ಎಂಜಿನ್ 95 ಅಥವಾ 110 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಪೊಲೊ ಕಾರಿನಲ್ಲಿ ಡೀಸೆಲ್ ಎಂಜಿನ್ ಅನ್ನು ನೀಡಲಾಗಿಲ್ಲ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಇನ್ನು ಸಿಎನ್‌ಜಿ ಚಾಲಿತ 1.0 ಟಿಜಿಐ 90 ಬಿಹೆಚ್‍ಪಿ ಮತ್ತು 160 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಕಾರ್ಯಕ್ಷಮತೆ-ಸ್ಪೆಕ್ ಜಿಟಿಐ ಮಾಹಿತಿಗಳನ್ನು ನಂತರ ಘೋಷಿಸಬಹುದು. ಆದರೆ ಜಿಟಿಐ ಮಾದರಿಯಲ್ಲಿ 2.0 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಈ ಎಂಜಿನ್ 200 ಬಿಹೆಚ್‍ಪಿ ಪವರ್ ಉತ್ಪಾದಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಸ್ಟ್ಯಾಂಡರ್ಡ್ ಅಥವಾ ಏಳು-ಸ್ಪೀಡ್ ಡಿಎಸ್‌ಜಿಯನ್ನು ಜೋಡಿಸಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ಭಾರತದಲ್ಲಿ ಬಿಡುಗಡೆ ಸಾಧ್ಯತೆ

ಮೊದಲೇ ಹೇಳಿದಂತೆ, ವಿಡಬ್ಲ್ಯೂ ಇಂಡಿಯಾ ದೇಶಿಯ ಮಾರುಕಟ್ಟೆಯಲ್ಲಿ ಪೊಲೊವನ್ನು ಈ ಹೊಸ ಮಾದರಿಯೊಂದಿಗೆ ಬದಲಾಯಿಸಲು ಯೋಜಿಸುತ್ತಿದೆ. ಇದು ಎಮ್ಡಬ್ಲ್ಯೂಬಿ-ಎ0-ಇನ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಎಂದು ನಿರೀಕ್ಷಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ವಿಶೇಷತೆಗಳು

ನಿರೀಕ್ಷಿತ ಬೆಲೆ

ದಶಕಗಳಷ್ಟು ಹಳೆಯದಾದ ಪೋಲೊ ಗಮನಾರ್ಹವಾದ ನವೀಕರಣವನ್ನು ಪಡೆಯುವುದನ್ನು ನೋಡಲು ರೋಮಾಂಚನಕಾರಿಯಾಗಿದೆ. ಭಾರತದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರನ್ನು ಎಕ್ಸ್ ಶೋರೂಂ ಪ್ರಕಾರ ರೂ.7 ಲಕ್ಷದಿಂದ 12 ಲಕ್ಷ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು.

Most Read Articles

Kannada
English summary
2021 Volkswagen Polo is India-Bound - Top Things You Must Know. Read In Kanada.
Story first published: Saturday, April 24, 2021, 9:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X