ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಥಾರ್ ಯಶಸ್ಸಿನ ಬಳಿಕ ಮಹೀಂದ್ರಾ ಕಂಪನಿಯು ಹೊಸ ಎಸ್‍ಯುವಿಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರಲ್ಲಿ ಜನಪ್ರಿಯ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಎಸ್‍ಯುವಿಗಳ ಜೊತೆ ಹೊಸ ಮಹೀಂದ್ರಾ ಬೊಲೆರೊ ನಿಯೋ ಮಾದರಿಯು ಕೂಡ ಒಳಗೊಂಡಿದೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಇದರ ಭಾಗವಾಗಿ ಮಹೀಂದ್ರಾ ತನ್ನ ಟಿಯುವಿ300 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಕೂಡ ಬಿಡುಗಡೆಗೊಳಿಸಿದೆ. ಆದರೆ ಇದಲ್ಲಿ ‘ಬೊಲೆರೊ ನಿಯೋ' ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಎನ್ನಲಾಗುತ್ತಿದೆ. ಮಹೀಂದ್ರಾ ಕಂಪನಿಯು ಸರಣಿಯಲ್ಲಿ ಬೊಲೆರೊ ಜನಪ್ರಿಯ ಮಾದರಿಯಾಗಿದೆ. ಅತಿ ಹೆಚ್ಚು ಮಾರಾಟವಾಗುವ ಯುಟಿಲಿಟಿ ವಾಹನಗಳ ಪಟ್ಟಿಯಲ್ಲಿ ಬೊಲೆರೊ ಅಗ್ರಸ್ಥಾನದಲ್ಲಿದೆ. ಇದೇ ಕಾರಣಕ್ಕೆ ತನ್ನ ಟಿಯುವಿ300 ಫೇಸ್‌ಲಿಫ್ಟ್ ಎಸ್‍ಯುವಿಗೆ ಬೊಲೆರೊ ನಿಯೋ ಎಂಬ ಹೆಸರನ್ನು ನೀಡರಬಹುದು.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ವಿನ್ಯಾಸ

ವಿನ್ಯಾಸದ ವಿಷಯದಲ್ಲಿ, ಹೊಸ ಬೊಲೆರೊ ನಿಯೋ ಹಿಂದಿನ ಟಿಯುವಿ300 ಮಾದರಿಗಿಂತ ಕೆಲವು ಬದಲಾವಣೆಗಳನ್ನು ಪಡೆಯುತ್ತದೆ, ಇದರ ಮುಂಭಾಗದ ಗ್ರಿಲ್, ಹೊಸ ಮುಂಭಾಗದ ಬಂಪರ್ ಮತ್ತು ನಯವಾದ ಹೆಡ್‌ಲ್ಯಾಂಪ್. ಬಾಕ್ಸಿ ಸಿಲೂಯೆಟ್, ಸ್ಕ್ವೇರ್-ಇಶ್ ವ್ಹೀಲ್ ಆರ್ಚರ್ ಮತ್ತು ಸೈಡ್-ಹಿಂಗ್ಡ್ ಟೈಲ್‌ಗೇಟ್ ಅನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಲ್ಯಾಡರ್-ಫ್ರೇಮ್ ಚಾಸಿಸ್ ಬದಲಾಗದೆ ಉಳಿಯುತ್ತದೆ. ಇನ್ನು ಎಸ್‌ಯುವಿಯ ಸೈಡ್ ಸ್ಟೆಪ್ಸ್, ರಿಯರ್ ಸ್ಟೆಪ್, ರೂಫ್ ರೈಲ್ಸ್, ರೂಫ್-ಮೌಂಟೆಡ್ ರಿಯರ್ ಸ್ಪಾಯ್ಲರ್ ಮತ್ತು ಟೈಲ್‌ಗೇಟ್ ಅಳವಡಿಸಿದ ಸ್ಪೇರ್ ವ್ಹೀಲ್ ಅನ್ನು ಸಹ ಒಳಗೊಂಡಿರುತ್ತದೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಈ ನಿರ್ದಿಷ್ಟ ಮಾದರಿಯು ಸ್ಟೀಲ್ ವ್ಹೀಲ್ ಗಳನ್ನು ಹೊಂದಿತ್ತು, ಇನ್ನು ಈ ಎಸ್‍ಯುವಿಯಲ್ಲಿ ಎಲ್ಇಡಿ ಹೆಡ್‌ಲೈಟ್‌ಗಳು ಅಥವಾ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿಲ್ಲ. ಅಲ್ಲದೇ ಈ ಬೊಲೆರೊ ನಿಯೋ 7 ಸೀಟುಗಳ ಸಂರಚನೆಯಲ್ಲಿ ಲಭ್ಯವಿರುತ್ತದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಇನ್ನು ಇತ್ತೀಚೆಗೆ ಸ್ಫಾಟ್ ಟೆಸ್ಟ್ ನಲ್ಲಿ ಹಳೆಯ ಟಿಯುವಿ300 ಬ್ಯಾಡ್ಜ್ ಅನ್ನು ಟೈಲ್‌ಗೇಟ್‌ನಲ್ಲಿ ಕಾಣಸಿಗುತ್ತದೆ. ಇನ್ನು ಬಾನೆಟ್ ವಿನ್ಯಾಸವು ಒಂದೇ ಆಗಿರುತ್ತದೆ. ಡಿ-ಪಿಲ್ಲರ್ ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆಯನ್ನು ಪಡೆಯುವುದರೊಂದಿಗೆ ಬೊಲೆರೊ ನಿಯೋದ ಸೈಡ್ ಪ್ರೊಫೈಲ್ ಬದಲಾಗಿದೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಈ ಎಸ್‍ಯುವಿಯು ಒಟ್ಟಾರೆ ಬಾಕ್ಸಿ ವಿನ್ಯಾಸವು ಹೊಸ ಮಾದರಿಯಲ್ಲಿ ಬದಲಾಗದೆ ಉಳಿದಿದೆ. ಹೊಸ ಬೊಲೆರೊ ನಿಯೋ ಇಂಟಿರಿಯರ್ ನಲ್ಲಿ ಹಿಂದಿನ ಮಾದರಿಗಿಂತ ಕೆಲವು ನವೀಕರಣಗಳನ್ನು ಹೊಂದಿರುತ್ತದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಇಂಟಿರಿಯರ್

ಬೊಲೆರೊ ನಿಯೋ ಕಾಂಪ್ಯಾಕ್ಟ್-ಎಸ್‌ಯುವಿ ಕ್ಯಾಬಿನ್‌ಗೆ ಹೊಸ ಲುಕ್ ಮತ್ತು ಪ್ರೀಮಿಯಂ ಅನುಭವವನ್ನು ನೀಡಲು ಸಾಕಷ್ಟು ಬದಲಾವಣೆಗಳನ್ನು ಮಾಡಲಿದೆ ಎಂದು ನಿರೀಕ್ಷಿಸುತ್ತೇವೆ. ಇದು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ನೊಂದಿಗೆ ನವೀಕರಿಸಿದ ಇನ್ಫೋಟೈನ್ಮೆಂಟ್ ಟಚ್-ಸ್ಕ್ರೀನ್ ಸಿಸ್ಟಂ ಅನ್ನು ಒಳಗೊಂಡಿರಲಿದೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಹಿಂದಿನ ಮಾದರಿಯಲ್ಲಿದ್ದ ಕೀ ಲೆಸ್ ಎಂಟ್ರಿ, ಎತ್ತರ-ಹೊಂದಾಣಿಕೆ ಮಾಡಬಹುದಾದ ಚಾಲಕರ ಸೀಟ್, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಮತ್ತು ಹಿಂಭಾಗದ ಪಾರ್ಕಿಂಗ್ ಸೆನ್ಸಾರ್ ಫೀಚರ್ ಗಳು ಇದರಲ್ಲಿಯು ಮುಂದುವರೆಸಬಹುದು.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಎಂಜಿನ್

ಈ ಹೊಸ ಕಾಂಪ್ಯಾಕ್ಟ್-ಎಸ್‌ಯುವಿಯಲ್ಲಿ ಹಿಂದಿನ ಮಾದರಿಯಲ್ಲಿದ್ದ ಅದೇ 1.5-ಲೀಟರ್ ಮೂರು ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿತ್ತದೆ. ಈ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 240 ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರಲ್ಲಿ ಪವರ್ ಮತ್ತು ಟಾರ್ಕ್ ಸಂಖ್ಯೆಗಳಲ್ಲಿ ಬದಲಾಗುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಹೆಸರು

ಜನಪ್ರಿಯ ಬ್ರ್ಯಾಂಡ್ ಹೆಸರನ್ನು ಬಳಸಿಕೊಂಡು ಮಾರಾಟವನ್ನು ಹೆಚ್ಚಿಸಲು ಮಹೀಂದ್ರಾ ಟಿವಿಯು300 ಅನ್ನು ಬೊಲೆರೊ ನಿಯೋ ಎಂಬ ಹೆಸರಿನಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ ಎಂದು ಹೇಳಾಗುತ್ತಿದೆ. ಶೀಘ್ರದಲ್ಲೇ ಈ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿಯ ವಿಶೇಷತೆಗಳು

ಪ್ರತಿಸ್ಪರ್ಧಿಗಳು

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್-ಎಸ್‌ಯುವಿಯು ಭಾರತದಲ್ಲಿ ಬಿಡುಗಡೆಯಾಗ ಬಳಿಕ ಫೋರ್ಡ್ ಇಕೋಸ್ಪೋರ್ಟ್, ಹ್ಯುಂಡೈ ವೆನ್ಯೂ, ಹೋಂಡಾ ಡಬ್ಲ್ಯುಆರ್-ವಿ ಮತ್ತು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2021 Mahindra Bolero Neo 7 Things To Know. Read In Kannada.
Story first published: Monday, March 29, 2021, 12:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X