Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು 2020ರ ಡಿಸೆಂಬರ್ ತಿಂಗಳಿನ ಕಾರು ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಟೊಯೊಟಾ ಕಂಪನಿಯು 2020ರ ಡಿಸೆಂಬರ್ ತಿಂಗಳಿನ ಕಾರು ಮಾರಾಟದಲ್ಲಿ ಶೇ,14 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

2020ರ ಡಿಸೆಂಬರ್ ತಿಂಗಳಿನಲ್ಲಿ ಟೊಯೊಟಾ ಕಂಪನಿಯು ಒಟ್ಟು 7,487 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು 2019ರ ಡಿಸೆಂಬರ್ ತಿಂಗಳಲ್ಲಿ ಟೊಯೊಟಾ ಕಂಪನಿಯು 6,544 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇನ್ನು 2019ರ ಡಿಸೆಂಬರ್ ತಿಂಗಳ ಮಾರಾಟವನ್ನು 2020ರ ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ವರ್ಷಾಂತ್ಯದಲ್ಲಿ ಜಪಾನ್ ಮೂಲದ ಟೊಯೊಟಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟದಲ್ಲಿ ಉತ್ತಮ ಬೆಳವೆಣೆಗೆಯನ್ನು ಸಾಧಿಸಿದೆ.

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಹಿರಿಯ ಉಪಾಧ್ಯಕ್ಷರಾದ ನವೀನ್ ಸೋನಿ ಅವರು ಮಾತನಾಡಿ, 2020ರ ಡಿಸೆಂಬರ್ ತಿಂಗಳಿನ ಕಾರು ಮಾರಾಟದಲ್ಲಿ ಶೇ,14 ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದಕ್ಕೆ ನಮಗೆ ಸಂತಸವಾಗಿದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಕಾರು ಮಾರಾಟವನ್ನು ಗಮನಸಿದರೆ ಬಹಳ ಉತ್ತೇಜನಕಾರಿಯಾಗಿದ್ದು, ಇದು ಹೊಸ ವರ್ಷ 2021 ಅನ್ನು ಸ್ವಾಗತಿಸುತ್ತಿರುವುದರಿಂದ ಹೊಸ ಗುರಿಯನ್ನು ಕೈಗೊಳ್ಳಲು ಕಂಪನಿಗೆ ವಿಶ್ವಾಸವನ್ನು ನೀಡುತ್ತದೆ.

ಇನ್ನು ಪ್ರಸ್ತುತ ತಲೆಮಾರಿನ ಫಾರ್ಚೂನರ್ ಎಸ್‍ಯುವಿಯ ಸ್ಟಾಕ್ ಅನ್ನು ಖಾಲಿ ಮಾಡುವ ಪ್ರಯತ್ನದಲ್ಲಿದ್ದೇವೆ. ಇದರಿಂದ ನಾವು ಬಿಡದಿಯಲ್ಲಿರುವ ಉತ್ಪಾದನಾ ಸ್ಥಾವರದಲ್ಲಿ ಮುಂದಿನ ವಾರದಿಂದ ಫಾರ್ಚೂನರ್ ಉತ್ಪಾದನೆಯನ್ನು ಆರಂಭಿಸಬಹುದು ಎಂದು ಹೇಳಿದ್ದಾರೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2020ರ ವರ್ಷವು ಹಲವಾರು ಸವಾಲುಗಳು ಮತ್ತು ಹಲವು ಪಾಠಗಳನ್ನು ಕಲಿಸಿದೆ. ಇನ್ನು ಟೊಯೊಟಾ ಕಂಪನಿಯು ಹೆಚ್ಚು ಸ್ಥಳೀಕರಣ ಮತ್ತು ಡಿಜಿಟಲೀಕರಣದ ಬಗ್ಗೆ ಹೆಚ್ಚಿನ ಗಮನವನ್ನು ಇಟ್ಟುಕೊಂಡು ಇಡೀ ವಲಯವು ಪ್ರಬಲವಾಗಿದೆ ಎಂದು ನವೀನ್ ಸೋನಿ ಅವರು ಹೇಳಿದರು.

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಾದರಿಗಳಲ್ಲಿ ಒಂದಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು 2021ರ ಜನವರಿ 6 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

ಕಳೆದ ಕೆಲವು ತಿಂಗಳುಗಳಿಂದ ಆಟೋಮೊಬೈಲ್ ಕ್ಷೇತ್ರದಲ್ಲಿ ಚೇತರಿಕೆಯನ್ನು ಕಾಣುತ್ತಿದೆ. ಇನ್ನು ಟೊಯೊಟಾ ಕಂಪನಿಯ ಸರಣಿಯಲ್ಲಿರುವ ಕಾರುಗಳ ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಬೆಳವಣಿಗೆಯನ್ನು ಕಾಣುತ್ತಿದೆ. ಇನ್ನು ಟೊಯೊಟಾ ತನ್ನ ಸರಣಿಯಲ್ಲಿರುವ ಕೆಲವು ಜನಪ್ರಿಯ ಕಾರುಗಳ ನವೀಕರಿಸಿದ ಮಾದರಿಗಳನ್ನು ಬಿಡುಗಡೆಗೊಳಿಸಲಿದ್ದು, ಇದು ಮಾರಾಟವನ್ನು ಹೆಚ್ಚಿಸಲು ಸಹಾಯವಾಗುತ್ತದೆ.