2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು 2020ರ ಡಿಸೆಂಬರ್‌ ತಿಂಗಳಿನ ಕಾರು ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಟೊಯೊಟಾ ಕಂಪನಿಯು 2020ರ ಡಿಸೆಂಬರ್‌ ತಿಂಗಳಿನ ಕಾರು ಮಾರಾಟದಲ್ಲಿ ಶೇ,14 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

2020ರ ಡಿಸೆಂಬರ್‌ ತಿಂಗಳಿನಲ್ಲಿ ಟೊಯೊಟಾ ಕಂಪನಿಯು ಒಟ್ಟು 7,487 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು 2019ರ ಡಿಸೆಂಬರ್ ತಿಂಗಳಲ್ಲಿ ಟೊಯೊಟಾ ಕಂಪನಿಯು 6,544 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇನ್ನು 2019ರ ಡಿಸೆಂಬರ್ ತಿಂಗಳ ಮಾರಾಟವನ್ನು 2020ರ ಡಿಸೆಂಬರ್‌ ತಿಂಗಳಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ವರ್ಷಾಂತ್ಯದಲ್ಲಿ ಜಪಾನ್ ಮೂಲದ ಟೊಯೊಟಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟದಲ್ಲಿ ಉತ್ತಮ ಬೆಳವೆಣೆಗೆಯನ್ನು ಸಾಧಿಸಿದೆ.

2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಹಿರಿಯ ಉಪಾಧ್ಯಕ್ಷರಾದ ನವೀನ್ ಸೋನಿ ಅವರು ಮಾತನಾಡಿ, 2020ರ ಡಿಸೆಂಬರ್‌ ತಿಂಗಳಿನ ಕಾರು ಮಾರಾಟದಲ್ಲಿ ಶೇ,14 ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದಕ್ಕೆ ನಮಗೆ ಸಂತಸವಾಗಿದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಕಾರು ಮಾರಾಟವನ್ನು ಗಮನಸಿದರೆ ಬಹಳ ಉತ್ತೇಜನಕಾರಿಯಾಗಿದ್ದು, ಇದು ಹೊಸ ವರ್ಷ 2021 ಅನ್ನು ಸ್ವಾಗತಿಸುತ್ತಿರುವುದರಿಂದ ಹೊಸ ಗುರಿಯನ್ನು ಕೈಗೊಳ್ಳಲು ಕಂಪನಿಗೆ ವಿಶ್ವಾಸವನ್ನು ನೀಡುತ್ತದೆ.

2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಇನ್ನು ಪ್ರಸ್ತುತ ತಲೆಮಾರಿನ ಫಾರ್ಚೂನರ್ ಎಸ್‍ಯುವಿಯ ಸ್ಟಾಕ್ ಅನ್ನು ಖಾಲಿ ಮಾಡುವ ಪ್ರಯತ್ನದಲ್ಲಿದ್ದೇವೆ. ಇದರಿಂದ ನಾವು ಬಿಡದಿಯಲ್ಲಿರುವ ಉತ್ಪಾದನಾ ಸ್ಥಾವರದಲ್ಲಿ ಮುಂದಿನ ವಾರದಿಂದ ಫಾರ್ಚೂನರ್ ಉತ್ಪಾದನೆಯನ್ನು ಆರಂಭಿಸಬಹುದು ಎಂದು ಹೇಳಿದ್ದಾರೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

2020ರ ವರ್ಷವು ಹಲವಾರು ಸವಾಲುಗಳು ಮತ್ತು ಹಲವು ಪಾಠಗಳನ್ನು ಕಲಿಸಿದೆ. ಇನ್ನು ಟೊಯೊಟಾ ಕಂಪನಿಯು ಹೆಚ್ಚು ಸ್ಥಳೀಕರಣ ಮತ್ತು ಡಿಜಿಟಲೀಕರಣದ ಬಗ್ಗೆ ಹೆಚ್ಚಿನ ಗಮನವನ್ನು ಇಟ್ಟುಕೊಂಡು ಇಡೀ ವಲಯವು ಪ್ರಬಲವಾಗಿದೆ ಎಂದು ನವೀನ್ ಸೋನಿ ಅವರು ಹೇಳಿದರು.

2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಮಾದರಿಗಳಲ್ಲಿ ಒಂದಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು 2021ರ ಜನವರಿ 6 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಕಳೆದ ಕೆಲವು ತಿಂಗಳುಗಳಿಂದ ಆಟೋಮೊಬೈಲ್ ಕ್ಷೇತ್ರದಲ್ಲಿ ಚೇತರಿಕೆಯನ್ನು ಕಾಣುತ್ತಿದೆ. ಇನ್ನು ಟೊಯೊಟಾ ಕಂಪನಿಯ ಸರಣಿಯಲ್ಲಿರುವ ಕಾರುಗಳ ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಬೆಳವಣಿಗೆಯನ್ನು ಕಾಣುತ್ತಿದೆ. ಇನ್ನು ಟೊಯೊಟಾ ತನ್ನ ಸರಣಿಯಲ್ಲಿರುವ ಕೆಲವು ಜನಪ್ರಿಯ ಕಾರುಗಳ ನವೀಕರಿಸಿದ ಮಾದರಿಗಳನ್ನು ಬಿಡುಗಡೆಗೊಳಿಸಲಿದ್ದು, ಇದು ಮಾರಾಟವನ್ನು ಹೆಚ್ಚಿಸಲು ಸಹಾಯವಾಗುತ್ತದೆ.

Most Read Articles

Kannada
Read more on ಟೊಯೊಟಾ toyota
English summary
Toyota Dec 2020 Sales Grow. Read In Kannada.
Story first published: Friday, January 1, 2021, 17:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X