ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆ ಮಟ್ಟದ ಏರಿಕೆ ಕಂಡ ಟೊಯೊಟಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ತನ್ನ 2021ರ ಫೆಬ್ರವರಿ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ಮಾರಟ ವರದಿಯ ಪ್ರಕಾರ, ಟೊಯೊಟಾ ಕಳೆದ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಕಳೆದ ತಿಂಗಳು ಟೊಯೊಟಾ ಕಂಪನಿಯು 14,075 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಟೊಯೊಟಾ ಕಂಪನಿಯ ಎಂಟ್ರಿ ಲೆವೆಲ್ ಮಾದರಿಗಳು ಮತ್ತು ಮಾರುತಿ ಸುಜುಕಿ ಸಹಭಾಗಿತ್ವದಲಿ ತಯಾರಿಸಲಾದ ಟೊಯೊಟಾ ಗ್ಲಾಂಝಾ ಮತು ಅರ್ಬನ್ ಕ್ರೂಸರ್ ಮಾದರಿಗಳು ಹೆಚ್ಚಿನ ಕೊಡುಗೆಯನ್ನು ನೀಡಿದೆ. ಕಂಪನಿಯು ಕಳೆದ ವರ್ಷದ ಫೆಬ್ರವರಿಯಲ್ಲಿ ಒಟ್ಟು 10,352 ಯುನಿಟ್ ಗಳನ್ನು ಮಾರಾಟಗೊಳಿಸಿತ್ತು.

ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ವರ್ಷದಿಂದ ವರ್ಷಕ್ಕೆ ಮಾರಾಟದಲ್ಲಿ ಶೇ.36 ಕ್ಕಿಂತ ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ. ರಿಬ್ಯಾಡ್ ಮಾದರಿಗಳ ಹೊರತಾಗಿ ಇನೋವಾ ಮತ್ತು ಫಾರ್ಚೂನರ್ ಬ್ರ್ಯಾಂಡ್‌ಗೆ ಮಾರಾಟದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡುವಲ್ಲಿ ಯಶ್ವಸಿಯಾಗಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಹಿರಿಯ ಉಪಾಧ್ಯಕ್ಷರಾದ ನವೀನ್ ಸೋನಿ ಅವರು ಮಾತನಾಡಿ, ವರ್ಷದಿಂದ ವರ್ಷಕ್ಕೆ ಮಾರಾಟದಲ್ಲಿ ಶೇ.36 ರಷ್ಟು ಬೆಳವಣಿಗೆಯನ್ನು ಸಾಧಿಸಿದ್ದೇವೆ. ಫೆಬ್ರವರಿಯಲ್ಲಿ ಮಾರಾಟವು ಜನವರಿಯಲ್ಲಿನ ಮಾರಾಟಕ್ಕಿಂತ ಉತ್ತಮವಾಗಿದೆ ಎಂದು ಹೇಳಿದರು.

ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಟೊಯೊಟಾ ತನ್ನ ಬಹುನಿರೀಕ್ಷಿತ 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಜನವರಿಯಲ್ಲಿ ಬಿಡುಗಡೆಗೊಳಿಸಿತ್ತು. ಹೊಸ ಫಾರ್ಚೂನರ್ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದನ್ನು ಐದು-ಸ್ಪೀಡ್ ಮ್ಯಾನುವಲ್ ಅಥವಾ ಆರು-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದಾಗ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಕೆಲವು ದಿನಗಳ ಹಿಂದೆ ಮಾರುತಿ ಬಲೆನೊ ಹೈಬ್ರಿಡ್ ಸ್ಪಾಟ್ ಟೆಸ್ಟ್ ಅನ್ನು ನಡೆಸಿತ್ತು. 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ ಸುಜುಕಿ ಸ್ವಿಫ್ಟ್ ಹೈಬ್ರಿಡ್‌ನಂತೆಯೇ ಇದು ಕೂಡ ಇದೆ ಎಂದು ತೋರುತ್ತದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ 2021ರ ಫೆಬ್ರವರಿ ತಿಂಗಳ ಮಾರಾಟದಲ್ಲಿ ಭರ್ಜರಿ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ ಇತ್ತೀಚೆಗೆ ಬಿಡುಗಡೆಗೊಂಡ ಫಾರ್ಚೂನರ್ ಎಸ್‍ಯುವಿಯು ಮಾರಾಟದಲ್ಲಿ ಉತ್ತಮ ಕೊಡುಗೆಯನ್ನು ನೀಡಿದೆ.

More from DriveSpark

Article Published On: Monday, March 1, 2021, 20:30 [IST]
English summary
Toyota Registers 27 Percent Monthly Growth In Domestic Sales. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+