Just In
- 9 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 17 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 26 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 1 hr ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Movies ತಾರಕ್ ಪೊನ್ನಪ್ಪ 'ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ' ಧಾರಾವಾಹಿಯಿಂದ ಹೊರಬಂದಿದ್ದೇಕೆ?
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಕ್ಟೋಬರ್ 1ರಿಂದ ಮತ್ತಷ್ಟು ದುಬಾರಿಯಾಗಲಿವೆ Toyota ಕಾರುಗಳ ಬೆಲೆ
ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟೊಯೊಟಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಲು ನಿರ್ಧರಿಸಿದೆ.
ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.
ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಇದೀಗ ಟೊಯೊಟಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಯ ಬೆಲೆಯಲ್ಲಿ ಹೆಚ್ಚಳ ಮಾಡುತ್ತಿದೆ.
ಟೊಯೊಟಾ ಕಂಪನಿಯು ಕಳೆದ ಅಗಸ್ಟ್ನಲ್ಲಿಇನೋವಾ ಕ್ರಿಸ್ಟಾ ಬೆಲೆ ಹೆಚ್ಚಳ ಮಾಡಿತ್ತು. ಇದೀಗ ಇನೋವಾ ಕ್ರಿಸ್ಟಾ ಸೇರಿ ಎಲ್ಲಾ ಕಾರುಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಮಾಹಿತಿಗಳ ಪ್ರಕಾರ ಟೊಯೊಟಾ ಕಂಪನಿಯು ಕಾರುಗಳ ಬೆಲೆಯನ್ನು ಶೇ.2 ರಷ್ಟು ಹೆಚ್ಚಳ ಮಾಡಬಹುದು ಎನ್ನಲಾಗಿದೆ.
ಹೊಸ ದರವು ಅಕ್ಟೋಬರ್ 1ರಿಂದಲೇ ಅನ್ವಯವಾಗಲಿದ್ದು, ಹೆಚ್ಚಳವಾದ ಹೊಸ ದರ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಿದೆ. ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ಶೇ.2 ರಷ್ಟು ಬೆಲೆ ಹೆಚ್ಚಳವಾದಲ್ಲಿ ಇನೋವಾ ಕ್ರಿಸ್ಟಾ ಬೆಲೆಯಲ್ಲಿ ರೂ. 35 ಸಾವಿರದಿಂದ ರೂ. 50 ಸಾವಿರದಷ್ಟು ದುಬಾರಿಯಾಗಲಿದ್ದರೆ ಹೈ ಎಂಡ್ ಮಾದರಿಯಾದ ವೆಲ್ಫೈರ್ ಮಾದರಿಯ ಬೆಲೆಯಲ್ಲಿ ರೂ.50 ಸಾವಿರ ರೂ. 1.50 ಲಕ್ಷದಷ್ಟು ಬೆಲೆ ಹೆಚ್ಚಳವಾಗುವ ನೀರಿಕ್ಷೆಯಿದೆ.
ಕೋವಿಡ್ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ.
ಕೋವಿಡ್ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿದ್ದು, 2021ರಲ್ಲೇ ಟೊಯೊಟಾ ಕಂಪನಿಯು ಸೇರಿದಂತೆ ಪ್ರಮುಖ ಕಾರು ಕಂಪನಿಗಳು ಮೂರರಿಂದ ನಾಲ್ಕು ಬಾರಿ ದರ ಹೆಚ್ಚಿಸುತ್ತಿದೆ.
ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಮೂಲ ಬೆಲೆಯಲ್ಲಿ ಶೇ.1 ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿದ್ದು, ಕಳೆದ ಕೆಲ ತಿಂಗಳಿನಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿ ರೂ. 60 ಸಾವಿರದಿಂದ ರೂ.1.20 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.
ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 80 ಸಾವಿರದಿಂದ ರೂ. 1.50 ಲಕ್ಷದವರೆಗೆ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್ಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮವೇ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.
ಇನ್ನು ಕೋವಿಡ್ ಪರಿಣಾಮ ಸುರಕ್ಷಿತ ವಾಣಿಜ್ಯ ವ್ಯವಹಾರಗಳು ಹೊಸ ಸವಾಲಾಗಿ ಪರಿಣಮಿಸಿದ್ದು, ಕೋವಿಡ್ 2ನೇ ಅಲೆಯ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ವಾಣಿಜ್ಯ ವ್ಯವಹಾರಗಳು ಇದೀಗ ಮತ್ತೆ ವೈರಸ್ ಭೀತಿ ಎದುರಿಸುತ್ತಿರುವುದು ಆಟೋ ಉತ್ಪಾದನಾ ಕಂಪನಿಗಳಿಗೂ ತೀವ್ರ ಆರ್ಥಿಕ ಹಿನ್ನಡೆ ಉಂಟು ಮಾಡುವ ಸಾಧ್ಯತೆಗಳಿವೆ.
ದೇಶಾದ್ಯಂತ ಕೋವಿಡ್ ಸೋಂಕಿತರ ಪ್ರಮಾಣದಲ್ಲಿ ಏರಿಳಿತ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ವೈರಸ್ ಪರಿಣಾಮ ನಿರಂತರವಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವಾಹನ ಉತ್ಪಾದನಾ ಕಂಪನಿಗಳು ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ವಾಹನಗಳ ಮಾರಾಟವನ್ನು ಸುಧಾರಿಸುವತ್ತ ಹೊಸ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರುತ್ತಿವೆ.
ಕೋವಿಡ್ ಪರಿಣಾಮ ಗ್ರಾಹಕರನ್ನು ನೇರವಾಗಿ ಶೋರೂಂ ಭೇಟಿಯನ್ನು ತಪ್ಪಿಸಲು ಬಹುತೇಕ ವಾಹನ ಕಂಪನಿಗಳು ಆನ್ಲೈನ್ ಪ್ಲ್ಯಾಟ್ಫಾರ್ಮ್ ತೆರೆದಿದ್ದು, ವಾಹನ ಕಂಪನಿಗಳ ಹೊಸ ಉಪಕ್ರಮಕ್ಕೆ ಗ್ರಾಹಕರಿಂದಲೂ ಉತ್ತಮ ಸ್ಪಂದನೆ ದೊರೆತ್ತಿದೆ.
ಇದರ ಜೊತೆಗೆ ಹೊಸ ವಾಹನಗಳ ವೀಕ್ಷಣೆಗಾಗಿ ಮತ್ತೊಂದು ಪ್ರಮುಖ ಹೆಜ್ಜೆಯಿರಿಸಿರುವ ಆಟೋ ಉತ್ಪದನಾ ಕಂಪನಿಗಳು ವರ್ಚುವಲ್ ಶೋರೂಂಗಳನ್ನು ಸಹ ತೆರೆಯುತ್ತಿದ್ದು, ಇದು ಸಾಮಾನ್ಯ ವೆಬ್ತಾಣಗಳಲ್ಲಿ ಸಿಗುವ ವಾಹನಗಳ ಮಾಹಿತಿಗಿಂತಲೂ ಪ್ರಸ್ತುತಪಡಿಸುವ ಶೈಲಿ ವಿಭಿನ್ನವಾಗಿರುತ್ತದೆ.
ವರ್ಚುವಲ್ ಶೋರೂಂಗಳು ಗ್ರಾಹಕರಿಗೆ ನೇರವಾಗಿ ಶೋರೂಂ ಭೇಟಿಯಾದ ಅನುಭವವನ್ನೇ ನೀಡಲಿದ್ದು, ಹೊಸ ಮಾರಾಟ ಸೌಲಭ್ಯಕ್ಕೆ ಟೊಯೊಟಾ ಇಂಡಿಯಾ ಕಂಪನಿಯು ಕೂಡಾ ಇದೀಗ ಚಾಲನೆ ನೀಡಿದೆ.
ಹೊಸ ವಾಹನಗಳಿಗಾಗಿ ಟೊಯೊಟಾ ಕಂಪನಿಯು ಪ್ರತ್ಯೇಕ ವೆಬ್ತಾಣವನ್ನು ತೆರೆದಿದ್ದು, ಕಾರು ಖರೀದಿದಾರರು ತಮ್ಮ ಇಷ್ಟದ ವಾಹನಗಳ ಬಗೆಗೆ ತಿಳಿದುಕೊಳ್ಳಲು ಶೋರೂಂಗೆ ನೇರ ಭೇಟಿ ನೀಡದೆ ಮನೆಯಲ್ಲೇ ಕುಳಿತು ಶೋರೂಂ ಮಾದರಿಯಲ್ಲೇ ವರ್ಚುವಲ್ ಶೋರೂಂ ಅನ್ನು ವೀಕ್ಷಿಸಿಬಹುದಾಗಿದೆ.