ಬೆಲೆ ಹೆಚ್ಚಳ: ಶೀಘ್ರದಲ್ಲೇ ಹೊಸ ದರ ಪಟ್ಟಿ ಪ್ರಕಟಿಸಲಿದೆ ಟೊಯೊಟಾ
ಆಟೋ ಉತ್ಪಾದನಾ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಟೊಯೊಟಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದೆ.

2021ರ ಅವಧಿಯಲ್ಲೇ ಈಗಾಗಲೇ ಒಂದು ಬಾರಿ ಬಹುತೇಕ ಹೊಸ ವಾಹನಗಳ ಬೆಲೆ ಹೆಚ್ಚಳವಾಗಿದ್ದು, ಇದೀಗ ಎರಡನೇ ಬಾರಿಗೆ ಏಪ್ರಿಲ್ 1ರಿಂದ ಮತ್ತೆ ಹೊಸ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿದೆ. ಟೊಯೊಟಾ ಕೂಡಾ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡುವ ಸುಳಿವು ನೀಡಿದ್ದು, ಹೊಸ ದರಪಟ್ಟಿಯನ್ನು ಏಪ್ರಿಲ್ 1ರಂದೇ ಬಿಡುಗೆಡೆ ಮಾಡಲಿದೆ.

ಈ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಕಂಪನಿಗಳು ಬಿಡಿಭಾಗಗಳ ವೆಚ್ಚವು ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ.

ಆಟೋ ಕಂಪನಿಗಳು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಶೇ. 1.50ರಿಂದ ಶೇ.3 ರಷ್ಟು ಬೆಲೆ ಹೆಚ್ಚಳವಾಗುತ್ತಿದ್ದು, ಕಳೆದ ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ. 50 ಸಾವಿರದಿಂದ ರೂ.1 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಐಷಾರಾಮಿ ಕಾರುಗಳ ಬೆಲೆಯಲ್ಲೂ ಕೂಡಾ ಸಾಕಷ್ಟು ಹೆಚ್ಚಳವಾಗಿದ್ದು, ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಂದ ಆಮದು ಮಾಡಿಕೊಳ್ಳುವ ಆಟೋ ಬಿಡಿಭಾಗಗಳ ಮೇಲಿನ ತೆರಿಗೆಯಲ್ಲಿನ ಹೆಚ್ಚಳವೇ ಹೊಸ ವಾಹನಗಳ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಅದರಲ್ಲೂ ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದ ಆಮದುಗೊಳ್ಳುತ್ತಿರುವ ವಾಹನಗಳ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಏಪ್ರಿಲ್ 1ರಿಂದ ಹೊಸ ದರಪಟ್ಟಿ ಪ್ರಕಟಿಸಲು ಬಹುತೇಕ ವಾಹನ ಕಂಪನಿಗಳು ಸಿದ್ದಗೊಂಡಿವೆ.

ಟೊಯೊಟಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳಾದ ಗ್ಲಾಂಝಾ, ಅರ್ಬನ್ ಕ್ರೂಸರ್, ಯಾರಿಸ್, ಇನೋವಾ ಕ್ರಿಸ್ಟಾ, ಫಾರ್ಚೂನರ್, ಕ್ಯಾಮ್ರಿ ಹೈಬ್ರಿಡ್ ಮತ್ತು ವೆಲ್‌ಫೈರ್ ಕಾರುಗಳ ಬೆಲೆ ಹೆಚ್ಚಿಸಲಿದ್ದು, ಬೆಲೆ ಹೆಚ್ಚಳಕ್ಕೂ ಮುನ್ನ ಈ ತಿಂಗಳು ಕೊನೆಯಾಂತ್ಯದಲ್ಲಿ ಕಾರು ಖರೀದಿಸುವ ಗ್ರಾಹಕರಿಗೆ ಕೆಲವು ಆಫರ್‌ಗಳನ್ನು ಸಹ ಘೋಷಣೆ ಮಾಡಿದೆ.

ಮಾರ್ಚ್ 31ರ ಒಳಗಾಗಿ ಕಾರು ಖರೀದಿಸುವ ಗ್ರಾಹಕರಿಗೆ ಟೊಯೊಟಾ ಕಂಪನಿಯು ಹಲವಾರು ಆಫರ್‌ಗಳನ್ನು ಘೋಷಿಸಿದ್ದು, ಹೊಸ ಆಫರ್‌ಗಳಲ್ಲಿ ಪ್ರಮುಖ ಕಾರುಗಳ ಖರೀದಿ ಮೇಲೆ ಗರಿಷ್ಠ ಉಳಿತಾಯ ಮಾಡಬಹುದಾಗಿದೆ.

ಹೊಸ ಕಾರು ಮಾರಾಟದಲ್ಲಿ ಟೊಯೊಟಾ ಕಂಪನಿಯು ಕೂಡಾ ಕಳೆದ ಕೆಲ ತಿಂಗಳಿನಿಂದ ಕಾರು ಮಾರಾಟದಲ್ಲಿ ಭಾರೀ ಪ್ರಮಾಣದ ಬೆಳವಣಿಗೆ ಸಾಧಿಸುತ್ತಿದ್ದು, ಮುಂಬರುವ ಹಬ್ಬದ ಋತುಗಳಲ್ಲಿ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ವಿವಿಧ ಆಫರ್‌ಗಳ ಮೂಲಕ ಗರಿಷ್ಠ ರೂ.65 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಅರ್ಬನ್ ಕ್ರೂಸರ್, ಯಾರಿಸ್ ಮತ್ತು ಗ್ಲಾಂಝಾ ಕಾರುಗಳ ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ. ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿದ್ದು, ಅರ್ಬನ್ ಕ್ರೂಸರ್, ಯಾರಿಸ್ ಮತ್ತು ಗ್ಲಾಂಝಾ ಹೊರತುಪಡಿಸಿ ಕಂಪನಿಯ ಇತರೆ ಯಾವುದೇ ಕಾರುಗಳ ಮೇಲೆ ಆಫರ್‌ಗಳು ಲಭ್ಯವಿರುವುದಿಲ್ಲ.

ಟೊಯೊಟಾ ಕಂಪನಿಯು ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಖರೀದಿದಾರರಿಗೆ ರೂ.20 ಸಾವಿರ ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದ್ದು, ಆಯ್ದ ಕಾರು ಮಾರಾಟಗಾರರಿಂದ ಹೆಚ್ಚುವರಿ ಆಕ್ಸೆಸರಿಸ್ ಪ್ಯಾಕೇಜ್ ಪಡೆದುಕೊಳ್ಳಬಹುದಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಗ್ಲಾಂಝಾ ಹ್ಯಾಚ್‌ಬ್ಯಾಕ್ ಕಾರು ಆವೃತ್ತಿಯನ್ನು ಖರೀದಿಸುವ ಗ್ರಾಹಕರಿಗೆ ರೂ. 10 ಸಾವಿರ ಕ್ಯಾಶ್‌ಬ್ಯಾಕ್, ರೂ.10 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ರೂ. 4 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.


Click it and Unblock the Notifications