ಡೀಲರ್ ಬಳಿ ತಲುಪಿದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಟೊಯೊಟಾ ತನ್ನ ಬಹುನಿರೀಕ್ಷಿತ 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಆರಂಭಿಕ ಬೆಲೆಯು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.29.98 ಲಕ್ಷಗಳಾಗಿದೆ.

ಡೀಲರ್ ಬಳಿ ತಲುಪಿದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ. ಇನ್ನು ಈಗಾಗಲೇ ಡೀಲರ್ ಬಳಿ ತಲುಪಿರುವ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳನ್ನು ಟೀಂ ಬಿಹೆಚ್‍ಪಿ ಬಹಿರಂಗಪಡಿಸಿದೆ. ಈಹೊಸ ಟೊಯೋಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ.

ಡೀಲರ್ ಬಳಿ ತಲುಪಿದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಇದರೊಂದಿಗೆ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಹೊಂದಿದೆ. ಇನ್ನು ಹೊಸ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಡೀಲರ್ ಬಳಿ ತಲುಪಿದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಇನ್ನು ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರೆ ಅನ್ನು ಅಳವಡಿಸಿದೆ. ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಹೊಂದಿದೆ.

ಡೀಲರ್ ಬಳಿ ತಲುಪಿದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಇದರೊಂದಿಗೆ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ. ಟೊಯೊಟಾ ಫಾರ್ಚೂನರ್ ಪ್ರತಿಸ್ಪರ್ಧಿಗಳಿಗೆ ಹೋಲಿಸಿದರೆ ಫೀಚರ್ ಗಳಲ್ಲಿ ಹಿಂದೆ ಇತ್ತು, ಆದರೆ ಹೊಸ ಅಪ್ದೇಟ್ ಗಳನ್ನು ಪಡೆದು ಈ ಅಪವಾದಗಳಿಗೆ ಉತ್ತರ ನೀಡಿದೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಡೀಲರ್ ಬಳಿ ತಲುಪಿದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದನ್ನು ಐದು-ಸ್ಪೀಡ್ ಮ್ಯಾನುವಲ್ ಅಥವಾ ಆರು-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಡೀಲರ್ ಬಳಿ ತಲುಪಿದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದಾಗ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಡೀಲರ್ ಬಳಿ ತಲುಪಿದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಡೀಸೆಲ್ ಎಂಜಿನ್‌ನಿಂದ ಚಾಲಿತವಾಗಿದ್ದು ಟೂ ವ್ಹೀಲ್ ಮತ್ತು ಫ್ಹೋರ್ ವ್ಹೀಲ್ ಡ್ರೈವ್ ಕಾನ್ಫಿಗರೇಶನ್‌ಗಳಲ್ಲಿ ನೀಡಲಾಗುವುದು. ಹಿಂದಿನ ಫಾರ್ಚೂನರ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಫೇಸ್‌ಲಿಫ್ಟ್ ಹಲವಾರು ಅಪ್ಡೇಟ್ ಗಳನ್ನು ಪಡೆದುಕೊಂಡಿದೆ.

ಡೀಲರ್ ಬಳಿ ತಲುಪಿದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ಭಾರತದ ಎಸ್‍ಯುವಿ ವಿಭಾಗದಲ್ಲಿ ಈ ಹೊಸ ಮಾದರಿಯು ಸಂಚಲವನ್ನು ಮೂಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿದೆ. ಶೀಘ್ರದಲ್ಲೇ ಈ ಹೊಸ ಎಸ್‍ಯುವಿಯ ವಿತರಣೆಯನ್ನು ಪ್ರಾರಂಭಿಸಬಹುದು.

Article Published On: Tuesday, January 19, 2021, 12:18 [IST]
English summary
New Toyota Fortuner Facelift Begins Arriving At Dealerships Read In Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+