Just In
Don't Miss!
- News
ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: ಹೊಸ ದಾಖಲೆ ಸೃಷ್ಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪವರ್‌ಫುಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹೊಸ ಟೊಯೊಟಾ ಫಾರ್ಚೂನರ್
ಟೊಯೊಟಾ ತನ್ನ ಜನಪ್ರಿಯ ಫಾರ್ಚೂನರ್ ಎಸ್‌ಯುವಿಯ ಎರಡು ಹೊಸ ಆವೃತ್ತಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಮೊದಲನೆಯ ಎಸ್‍ಯುವಿಯು ಫೇಸ್‌ಲಿಫ್ಟ್ ಆವೃತ್ತಿಯಾಗಿದ್ದು, ಇದು ಸಣ್ಣ ಕಾಸ್ಮೆಟಿಕ್ ಮತ್ತು ಕೆಲವು ಫೀಚರ್ ಗಳ ವೀಕರಣಗಳನ್ನು ಪಡೆಯುತ್ತದೆ. ಎರಡನೆಯದು ಸ್ಪೋರ್ಟಿಯರ್ 'ಲೆಜೆಂಡರ್' ಮಾದರಿಯಾಗಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಎರಡನ್ನೂ ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟಿಗೆ ಬಿಡುಗಡೆ ಮಾಡಗುಲಾತ್ತದೆ. ಈ ಎರಡು ಬಹುನಿರೀಕ್ಷಿತ ಮಾದರಿಗಳು ನಾಳೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಟೊಯೊಟಾ ಕಂಪನಿಯು ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಎಸ್‍ಯುವಿಗಳ ಟೀಸರ್ ಚಿತ್ರಗಳನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.

ಪ್ರಸ್ತುತ ಮಾದರಿಯಲ್ಲಿರುವ ಅದೇ 2.7-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ನಲ್ಲಿಯು ಮುಂದುವರಿಸುತ್ತದೆ. ಈ ಎಂಜಿನ್ 166 ಬಿಹೆಚ್ಪಿ ಪವರ್ ಮತ್ತು 245 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಎರಡು ಎಸ್‍ಯುವಿಗಳಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 204 ಬಿಹೆಚ್ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ. ಇದು ಪವರ್ ಫುಲ್ ಎಂಜಿನ್ ಆಗಿದೆ.

ಇದರಲ್ಲಿ ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸ್ಟ್ಯಾಂಡರ್ಡ್ ಮಾದರಿಗಿಂತ ಹೆಚ್ಚು ಪವರ್ ಫುಲ್ ಮತ್ತು ಪ್ರೀಮಿಯಂ ಆವೃತ್ತಿಯಾಗಿದೆ. ಹೊಸ ವರ್ಷದಲ್ಲಿ ಟೊಯೊಟಾ ತನ್ನ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳನ್ನು ಬಿಡುಗಡೆಗೊಳಿಸುವ ಮೂಲಕ ಗ್ರಾಹಕರಿಗೆ ಡಬಲ್ ಧಮಾಕ ನೀಡಲಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಲೆಜೆಂಡರ್ ತನ್ನ ಉತ್ತಮ ಆಫ್-ರೋಡ್ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ. ಇನ್ನು ಫಾರ್ಚೂನರ್ ಫೇಸ್‌ಲಿಫ್ಟ್ ಭಾರತದಲ್ಲಿರುವ ಹಿಂದಿನ ಮಾದರಿಯನ್ನು ನವೀಕರಿಸಲಾದ ಆವೃತ್ತಿಯಾಗಿದೆ.

ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ನಲ್ಲಿಯು ಸಾಕಷ್ಟು ನವೀಕರಣಗಳನ್ನು ಮಾಡಲಾಗಿದೆ. ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿ ಹೆಚ್ಚಿನ ಸ್ಪೋರ್ಟಿ ಲುಕ್ ಅನ್ನು ಪಡೆದುಕೊಂಡಿದೆ. ಇನ್ನು ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯು ಅಗ್ರೇಸಿವ್ ಲುಕ್ ನೊಂದಿಗೆ ಆಕರ್ಷಕವಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಫಾರ್ಚೂನರ್ ಲೆಜೆಂಡರ್ ಎಸ್‌ಯುವಿ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗ ಹೊಸ ವಿನ್ಯಾಸವನ್ನು ಹೊಂದಿದೆ. ಡೇ ಟೈಮ್ ರನ್ನಿಂಗ್ ಲೈಟ್ ಹೊಂದಿರುವ ಮರುವಿನ್ಯಾಸಗೊಳಿಸಲಾದ ಎಲ್‌ಇಡಿ ಹೆಡ್‌ಲೈಟ್ ಮತ್ತು ಮೆಶ್ ಮಾದರಿಯ ದೊಡ್ಡದಾದ ಗ್ರಿಲ್ ಅನ್ನು ಹೊಂದಿದೆ.

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯ ಇಂಟಿರಿಯರ್ ಬಗ್ಗೆ ಹೇಳುದಾದರೆ, ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ, ಒಂದು ಪ್ರಮುಖ ವ್ಯತ್ಯಾಸವೆಂದರೆ ಆಪಲ್ ಕಾರ್ ಪ್ಲೇ ಹೊಂದಾಣಿಕೆಯೊಂದಿಗೆ ಬರುವ ದೊಡ್ಡದಾದ, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಸದಾಗಿ ಅಳವಡಿಸಲಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಪ್ರೀಮಿಯಂ ಆವೃತ್ತಿಯಾಗಿದೆ. ಅಲ್ಲದೇ ಫಾರ್ಚೂನರ್ ಲೆಜೆಂಡರ್ ವಿದೇಶಗಳಲ್ಲಿ ತನ್ನ ಆಫ್-ರೋಡ್ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಲೆಜೆಂಡರ್ ಸ್ಟ್ಯಾಂಡರ್ಡ್ ಎಸ್‌ಯುವಿಗಿಂತ ತುಸು ದುಬಾರಿಯಾಗಿರಲಿದೆ.