ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಹೊಸ ಹಣಕಾಸಿನ ವರ್ಷದಲ್ಲಿ ಹಲವು ಜನಪ್ರಿಯ ವಾಹನ ಉತ್ಪಾದಕರು ಬೆಲೆ ಹೆಚ್ಚಳವನ್ನು ಘೋಷಿಸಿದೆ. ಅದರಂತೆ ಜಪಾನ್ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿಯಾ ಟೊಯೊಟಾ ಕೂಡ ತನ್ನ ಇನೋವಾ ಕ್ರಿಸ್ಟಾ, ಫಾರ್ಚೂನರ್, ಲೆಜೆಂಡರ್ ಮತ್ತು ಕ್ಯಾಮ್ರಿ ಮಾದರಿಗಳ ಬೆಲೆಯನ್ನು ಹೆಚ್ಚಿಸಿದೆ.

ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಉಳಿದಂತೆ ಗ್ಲಾಂಝಾ, ಅರ್ಬನ್ ಕ್ರೂಸರ್ ಮತ್ತು ಯಾರಿಸ್ ಸೆಡಾನ್ ಸೇರಿದಂತೆ ಇತರ ಕಾರುಗಳ ಬೆಲೆಗಳು ಒಂದೇ ಆಗಿರುತ್ತವೆ. ಟೊಯೊಟಾ ಈ ವರ್ಷದ ಆರಂಭದಲ್ಲಿ ಫಾರ್ಚೂನರ್ ಫೇಸ್‌ಲಿಫ್ಟ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಈ ಸಾಮಾನ್ಯ ಫಾರ್ಚೂನರ್ ಬೆಲೆಯನ್ನು ರೂ.36,000 ಗಳಿಂದ ಹೆಚ್ಚಿಸಲಾಗಿದೆ. ಇದರ ಟಾಪ್-ಆಫ್-ಲೈನ್ ಫಾರ್ಚೂನರ್ ಲೆಜೆಂಡರ್ ಬೆಲೆಯನ್ನು ರೂ.72,000 ವರೆಗೆ ಹೆಚ್ಚಿಸಿದೆ.

ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಟೊಯೊಟಾದ ಅತ್ಯಂತ ಜನಪ್ರಿಯ ಇನೋವಾ ಕ್ರಿಸ್ಟಾ ಮಾದರಿಯು ಕೂಡ ಬೆಲೆ ಏರಿಕೆಯನ್ನು ಪಡೆದುಕೊಂಡಿತು. ಈ ಎಂಪಿವಿಯ ಬೆಲೆಯನ್ನು ರೂ.26,000 ಗಳರೆಗೆ ಹೆಚ್ಚಿಸಲಾಗಿದೆ. ಇದು ಫ್ಯಾಮಿಲಿ ಕಾರು ಎಂದೇ ಹೆಚ್ಚು ಜನಪ್ರಿಯವಾಗಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಇನ್ನು ಟೊಯೊಟಾದ ಪ್ತಮುಖ ಮಾದರಿಯಾದ ಕ್ಯಾಮ್ರಿ ಹೈಬ್ರಿಡ್ ಬೆಲೆಯನ್ನು ರೂ.1.18 ಲಕ್ಷಗಳವರೆಗೆ ಹೆಚ್ಚಿಸಲಾಗುತ್ತದೆ. ಇದೀಗ ಈ ಕ್ಯಾಮ್ರಿ ಹೈಬ್ರಿಡ್ ಸೆಡಾನ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.40.59 ಲಕ್ಷಗಳಾಗಿದೆ.

ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ತನ್ನ 2021ರ ಮಾರ್ಚ್ ತಿಂಗಳ ಮಾರಾಟ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿತು. ಈ ಮಾರಾಟ ವರದಿಯ ಪ್ರಕಾರ, ಟೊಯೊಟಾ ಕಳೆದ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಟೊಯೊಟಾ ಕಂಪನಿಯು 2021ರ ಮಾರ್ಚ್ ತಿಂಗಳಿನಲ್ಲಿ 15,001 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ 7,023 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಟೊಯೊಟಾ ಶೇ.114 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಗಳಿಸಿದೆ

ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಟೊಯೊಟಾ ಕಾರುಗಳು ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿವೆ. 2021ರ ಫೆಬ್ರವರಿ ತಿಂಗಳಿನಲ್ಲಿ ಟೊಯೊಟಾದ 14,075 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಮಾರ್ಚ್ ತಿಂಗಳಿಗೆ ಹೋಲಿಸಿದರೆ 926 ಹೆಚ್ಚಿನ ವಾಹನಗಳನ್ನು ಮಾರಾಟ ಮಾಡಿದ್ದರಿಂದ ತಿಂಗಳಿಗೊಮ್ಮೆ ಮಾರಾಟದಲ್ಲಿ ಶೇ.6.58 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿವೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದಾಗ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡ ಜನಪ್ರಿಯ ಟೊಯೊಟಾ ಕಾರುಗಳು

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ 2021ರ ಮಾರ್ಚ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ ಇತ್ತೀಚೆಗೆ ಬಿಡುಗಡೆಗೊಂಡ ಫಾರ್ಚೂನರ್ ಎಸ್‍ಯುವಿಯು ಮಾರಾಟದಲ್ಲಿ ಉತ್ತಮ ಕೊಡುಗೆಯನ್ನು ನೀಡಿದೆ. ಆದರೆ ಬೆಲೆ ಏರಿಕೆಯು ಮಾರಾಟದ ಮೇಲೆ ದೊಡ್ಡ ಪರಿಣಾಮವನ್ನು ಬೀರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

Most Read Articles

Kannada
Read more on ಟೊಯೊಟಾ toyota
English summary
Toyota Fortuner, Innova And Camry Prices Increased. Read In Kananda.
Story first published: Wednesday, April 7, 2021, 21:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X