ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟೊಯೊಟಾ

ಟೊಯೊಟಾ ತನ್ನ ಬಹುನಿರೀಕ್ಷಿತ 2021ರ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯನ್ನು ಈ ವರ್ಷದ ಜನವರಿಯಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಾಯಿತು. ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ತನ್ನ ವಾಹನಗಳ ಬೆಲೆಯನ್ನು ಹೆಚ್ಚಿಸಿದೆ.

ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟೊಯೊಟಾ

ಹೀಗಾಗಿ ಫಾರ್ಚೂನರ್ ಲೆಜೆಂಡರ್ ಬಿಡುಗಡೆಯಾದ ಮೂರು ತಿಂಗಳ ನಂತರ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ಈ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆಯನ್ನು ರೂ.72,000 ಗಳವರೆಗೆ ಹೆಚ್ಚಿಸಲಾಗಿದೆ. ಇದೀಗ ಈ ಎಸ್‍ಯುವಿಯ ಬೆಲೆಯು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.38.30 ಲಕ್ಷಗಳಾಗಿದೆ. ಬೆಲೆ ಏರಿಕೆಯನ್ನು ಹೊರತುಪಡಿಸಿ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟೊಯೊಟಾ

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿಯರ್ ವಿನ್ಯಾಸವನ್ನು ಹೊಂದಿದೆ. ಲೆಜೆಂಡರ್ ಎಸ್‍ಯುವಿಯ ಮುಂಭಾಗ ಆಕರ್ಷಕವಾಗಿ ಗ್ರಿಲ್ ಅನ್ನು ಅಳವಡಿಸಲಾಗಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟೊಯೊಟಾ

ಲೆಜೆಂಡರ್ ಎಸ್‍ಯುವಿಯಲ್ಲಿ ಸಂಪೂರ್ಣವಾಗಿ ಹೊಸ ನಯವಾದ ಎಲ್ಇಡಿ ಹೆಡ್ ಲ್ಯಾಂಪ್ ಗಳು, ಹೊಸ ಅಲಾಯ್ ವ್ಹೀಲ್ ಗಳು ಮತ್ತು ವಿಶೇಷ ಡ್ಯುಯಲ್-ಟೋನ್ ಬಣ್ನಗಳನ್ನು ಹೊಂದಿವೆ. ಟೊಯೋಟಾ ಫಾರ್ಚೂನರ್ ಲೆಜೆಂಡರ್ ವೆರಿಯೆಂಟ್ ಒಳಭಾಗದಲ್ಲಿಯು ಕೆಲವು ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ.

ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟೊಯೊಟಾ

ಎಸ್‍ಯುವಿಯ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರೆ ಅನ್ನು ಅಳವಡಿಸಿದೆ. ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಹೊಂದಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟೊಯೊಟಾ

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಮಾದರಿಯಲ್ಲಿ ಕೆಲವು ಹೆಚ್ಚುವರಿ ವೈಶಿಷ್ಟ್ಯಗಳನ್ನು ಪಡೆಯುತ್ತದೆ, ಇದರಲ್ಲಿ ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್, ಆಂಬಿಯೆಂಟ್ ಕ್ಯಾಬಿನ್ ಲೈಟಿಂಗ್, ಹಿಂಭಾಗದ ಯುಎಸ್‌ಬಿ ಪೋರ್ಟ್ ಮತ್ತು ಗೆಸ್ಚರ್-ಚಾಲಿತ ಟೈಲ್‌ಗೇಟ್ ಸೇರಿವೆ.

ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟೊಯೊಟಾ

ಇದರೊಂದಿಗೆ ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್, ಆಟೋ-ಡಿಮ್ಮಿಂಗ್ ಐಆರ್ವಿಎಂ, ವೆಂಟಿಲೇಟಡ್ ಮುಂಭಾಗದ ಸೀಟುಗಳು, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಕೂಲ್ಡ್ ಗ್ಲೋವ್‌ಬಾಕ್ಸ್, ಮಲ್ಟಿಫಂಕ್ಷನ್ ಸ್ಟೀರಿಂಗ್ ವ್ಹೀಲ್ ಮತ್ತು ಸ್ಮಾರ್ಟ್ ಕೀ ಲ್ಕೆಸ್ ಎಂಟ್ರಿ ಫೀಚರ್ ಗಳನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟೊಯೊಟಾ

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟೊಯೊಟಾ

ಇನ್ನು ಲೆಜೆಂಡರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಬ್ರೇಕ್ ಅಸಿಸ್ಟ್, ಸ್ಟೆಬಿಲಿಟಿ ಕಂಟ್ರೋಲ್, ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆರೋಹಣಗಳು, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್ (ಆಟೋ ಎಮರ್ಜೆನ್ಸಿ ಅನ್‌ಲಾಕ್‌ನೊಂದಿಗೆ), ಮತ್ತು ತುರ್ತು ಬ್ರೇಕ್ ಸಿಗ್ನಲ್‌ನಂತಹ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

More from DriveSpark

Article Published On: Tuesday, April 6, 2021, 20:39 [IST]
English summary
Toyota Fortuner Legender Price Increased. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+