ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಭಾರತೀಯ ಆಟೋಮೊಬೈಲ್ ಉದ್ಯಮವು ಇದೀಗ ದೊಡ್ಡ ಕುಸಿತವನ್ನು ಎದುರಿಸುತ್ತಿದೆ. ಕೆಲವು ಕಾರು ತಯಾರಕರು ಮಾತ್ರ ಕಳೆದ ತಿಂಗಳು ಮಾರಾಟದಲ್ಲಿ ಬೆಳವಣಿಗೆಯನ್ನು ದಾಖಲಿಸುವಲ್ಲಿ ಯಶಸ್ವಿಯಾದರು, ಅವುಗಳಲ್ಲಿ ಟೊಯೊಟಾ ಕಂಪನಿಯು ಒಂದಾಗಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಟೊಯೊಟಾ ಕಂಪನಿಯ ಸರಣಿಯಲ್ಲಿರುವ ಮಾದರಿಗಳು ಉತ್ತಮವಾಗಿ ಮಾರಾಟವಾಗುತ್ತಿದೆ. ಇದರಲ್ಲಿ ಟೊಯೊಟಾ ಫಾರ್ಚೂನರ್ ಫುಲ್ ಸೈಜ್ ಎಸ್‍ಯುವಿಯು ಮಾರಾಟದಲ್ಲಿ ಭಾರೀ ಬೆಳವಣಿಗೆಯನ್ನು ಕಂಡಿದೆ. ಟೊಯೊಟಾ ಕಳೆದ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟು 1,844 ಫಾರ್ಚುನರ್ ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2020ರ ನವೆಂಬರ್ ತಿಂಗಳ ಮಾರಾಟವಾದ 656 ಯುನಿಟ್‌ಗಳಿಗೆ ಹೋಲಿಸಿದರೆ ಇದು ವರ್ಷದಿಂದ ವರ್ಷಕ್ಕೆ (YoY) ಶೇಕಡಾ 181.1 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಈ ವರ್ಷದ ಅಕ್ಟೋಬರ್‌ ತಿಂಗಳಿನಲ್ಲಿ ಫಾರ್ಚುನರ್ ಮಾದರಿಯ 1,893 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.2.59 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಟೊಯೊಟಾ ಫಾರ್ಚುನರ್ ಭಾರತೀಯ ಮಾರುಕಟ್ಟೆಯಲ್ಲಿ ಬಹುದೀರ್ಘ ಕಾಲದಿಂದ ಜನಪ್ರಿಯ ಎಸ್‍ಯುವಿಯಾಗಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಹೊಸ ಟೊಯೋಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ. ಇದರೊಂದಿಗೆ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಹೊಂದಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಹೊಸ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಇನ್ನು ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರ್ಸ್ ಅನ್ನು ಅಳವಡಿಸಿದೆ. ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಹೊಂದಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಇದರೊಂದಿಗೆ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ. ಇನ್ನು ಟೊಯೊಟಾ ತನ್ನ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಜನಪ್ರಿಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಟಾಪ್ ವೆರಿಯೆಂಟ್ ಲೆಜೆಂಡರ್ ಆಗಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಇನ್ನು ಇತ್ತೀಚೆಗೆ ಬಿಡುಗಡೆಗೊಂಡ ಟೊಯೊಟಾ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.42.33 ಲಕ್ಷಗಳಾಗಿದೆ. ಟೊಯೊಟಾ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಡ್ಯುಯಲ್ ಟೋನ್ ಪರ್ಲ್ ವೈಟ್ ಜೊತೆಗೆ ಬ್ಲಾಕ್ ರೂಫ್ ಕಲರ್ ಸ್ಕೀಮ್ ನಲ್ಲಿ ನೀಡಲಾಗುತ್ತಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಹೊಸ ಟೊಯೊಟಾ ಫಾರ್ಚುನರ್ ಲೆಜೆಂಡರ್ 4X2 ಮಾದರಿಗೆ ಹೋಲಿಸಿದರೆ 4X4 ವೆರಿಯೆಂಟ್ ಯಾವುದೇ ವಿಶೇಷ ಬಾಹ್ಯ ಬಿಟ್‌ಗಳನ್ನು ಪಡೆಯುವುದಿಲ್ಲ. ಈ ಹೊಸ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿಯರ್ ವಿನ್ಯಾಸವನ್ನು ಹೊಂದಿದೆ. ಲೆಜೆಂಡರ್ ಮರುವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿದೆ. ಡಿಆರ್‌ಎಲ್‌ಗಳು ಹೊಂದಿದೆ. ಇದನ್ನು ಟೊಯೊಟಾ ವಾಟರ್ ಫಾಲ್ ಡಿಆರ್‌ಎಲ್‌ಗಳು' ಎಂದು ಕರೆಯಲಾಗಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಇದರ ಹೆಡ್‌ಲ್ಯಾಂಪ್‌ಗಳ ಕೆಳಗೆ ಫಾಗ್ ಲ್ಯಾಂಪ್ ಗಳಿವೆ. ಇನ್ನು ಡೈನಾಮಿಕ್ ಟರ್ನ್ ಸಿಗ್ನಲ್ ಇಂಡೀಕೆಟರ್ ಗಳಿವೆ. ಫಾರ್ಚೂನರ್ ಲೆಜೆಂಡರ್ ಸುತ್ತಲೂ ಎಲ್ಇಡಿ ಲೈಟಿಂಗ್ ಹೊಂದಿದೆ. ಇನ್ನು ಇದರ ಸೈಡ್ ಪ್ರೊಫೈಲ್‌ ಬಗ್ಗೆ ಹೇಳುವುದಾದರೆ, ಇದರಲ್ಲಿ 18 ಇಂಚಿನ ಮೆಷಿನ್-ಕಟ್ ಅಲಾಯ್ ವ್ಹೀಲ್‌ಗಳನ್ನು ಅಳವಡಿಸಲಾಗಿದೆ. ಇನ್ನು ಡೋರಿನ ಹ್ಯಾಂಡಲ್‌ಗಳಲ್ಲಿ ಕೆಲವು ಕ್ರೋಮ್ ಇದೆ ಮತ್ತು ಉದ್ದಕ್ಕೂ ಸ್ಟ್ರಿಪ್ ಅನ್ನು ಸಹ ಕ್ರೋಮ್‌ನಿಂದಮಾಡಲಾಗಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಇನ್ನು ಈ ಲೆಜೆಂಡರ್ ವೆರಿಯೆಂಟ್ ಮಾದರಿಯ ಹಿಂಭಾಗದಲ್ಲಿ ನಯವಾದ-ಕಾಣುವ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಅದನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದು ಬ್ಲ್ಯಾಕ್ ಸ್ಟ್ರಿಪ್ ಸಹ ಪಡೆಯುತ್ತದೆ, ಅದು ಎರಡೂ ಟೈಲ್ ಲೈಟ್‌ಗಳನ್ನು ಅದರ ಉದ್ದಕ್ಕೂ 'ಫೋರ್ಟೂನರ್' ಬ್ರ್ಯಾಂಡಿಂಗ್‌ನೊಂದಿಗೆ ಸಂಪರ್ಕಿಸುತ್ತದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ವೆರಿಯೆಂಟ್ ಒಳಭಾಗದಲ್ಲಿಯು ಕೆಲವು ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ. ಫಾರ್ಚೂನರ್ ಲೆಜೆಂಡರ್ ಇಂಟಿರಿಯರ್ ಅಥವಾ ಒಳಭಾಗದಲ್ಲಿ ಡ್ಯುಯಲ್-ಟೋನ್ (ಬ್ಲ್ಯಾಕ್ ಮತ್ತು ಮರೂನ್) ಅಂಶಗಳನ್ನು ಹೊಂದಿದೆ, ಇದರಲ್ಲಿ ಸುತ್ತಲೂ ವೈಟ್ ಅಬೈಂಡ್ ಲೈಟ್ ಅನ್ನು ಹೊಂದಿದೆ. ಇದರೊಂದಿಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇಯನ್ನು ಒಳಗೊಂಡಿರುವ ದೊಡ್ಡ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಈ ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ವೆರಿಯೆಂಟ್ ನಲ್ಲಿ ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಬ್ರೇಕ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ, ಸ್ಟೆಬಿಲಿಟಿ ಕಂಟ್ರೋಲ್, ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಮೌಂಟಡ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್ (ಆಟೋ ಎಮರ್ಜೆನ್ಸಿ ಅನ್‌ಲಾಕ್‌) ಮತ್ತು ಎಮರ್ಜನ್ಸಿ ಬ್ರೇಕ್ ಸಿಗ್ನಲ್‌ನಂತಹ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದನ್ನು ಐದು-ಸ್ಪೀಡ್ ಮ್ಯಾನುವಲ್ ಅಥವಾ ಆರು-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ನವೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Toyota Fortuner

ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದಾಗ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಸ್‍ಯುವಿಯು ದ್ದು ಟೂ ವ್ಹೀಲ್ ಮತ್ತು ಫ್ಹೋರ್ ವ್ಹೀಲ್ ಡ್ರೈವ್ ಕಾನ್ಫಿಗರೇಶನ್‌ಗಳ ಆಯ್ಕೆಯನ್ನು ಹೊಂದಿದೆ. ಹಿಂದಿನ ಫಾರ್ಚೂನರ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಫೇಸ್‌ಲಿಫ್ಟ್ ಹಲವಾರು ಅಪ್ಡೇಟ್ ಗಳನ್ನು ಪಡೆದುಕೊಂಡಿದೆ.

Most Read Articles

Kannada
Read more on ಟೊಯೊಟಾ toyota
English summary
Toyota fortuner registers over 181 percent sales growth in november 2021 details
Story first published: Monday, December 13, 2021, 10:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X