ಭಾರತದಲ್ಲಿ ಹೊಸ ಹಿಲಕ್ಸ್ ಪಿಕ್ಅಪ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲಿ ತನ್ನದೆ ಜನಪ್ರಿಯತೆ ಹೊಂದಿರುವ ಟೊಯೊಟಾ ಕಂಪನಿಯು ಭಾರತದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಈ ವರ್ಷಾಂತ್ಯಕ್ಕೆ ಒಟ್ಟು ನಾಲ್ಕು ಹೊಸ ಕಾರುಗಳು ರಸ್ತೆಗಿಳಿಸುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಹೊಸ ಹಿಲಕ್ಸ್ ಪಿಕ್ಅಪ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

2019ರಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಆಮದು ನೀತಿಯು ವಿದೇಶಿ ಕಾರು ಉತ್ಪಾದನಾ ಕಂಪನಿಗಳಿಗೆ ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಕಾರು ಕಂಪನಿಗಳು ವಾರ್ಷಿಕವಾಗಿ 2,500 ಯುನಿಟ್ ಕಾರುಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ದೇಶಿಯ ಮಾರುಕಟ್ಟೆಗೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿರುವುದು ಟೊಯೊಟಾ ಕಂಪನಿಗೂ ವರದಾನವಾಗಿದೆ.

ಭಾರತದಲ್ಲಿ ಹೊಸ ಹಿಲಕ್ಸ್ ಪಿಕ್ಅಪ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಟೊಯೊಟಾ ಕಂಪನಿಯು ಹೊಸ ಆಮದು ನೀತಿ ಅಡಿ ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಪ್ರಮುಖ ಎರಡು ಕಾರುಗಳನ್ನು ಹೊಸ ಆಮದು ನೀತಿ ಅಡಿಯಲ್ಲಿ ಮಾರಾಟ ಮಾಡುವ ಯೋಜನೆಯಲ್ಲಿದ್ದು, ಈಗಾಗಲೇ ಹೊಸ ಆಮದು ನೀತಿ ಅಡಿಯಲ್ಲಿ ವೆಲ್‌ಫೈರ್ ಐಷಾರಾಮಿ ಎಂಪಿವಿ ಮಾದರಿಯನ್ನು ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಹೊಸ ಹಿಲಕ್ಸ್ ಪಿಕ್ಅಪ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಪ್ರಸಕ್ತ ವರ್ಷದ ಆಮದು ನೀತಿ ಅಡಿಯಲ್ಲಿ ಮತ್ತೆರಡು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿರುವ ಟೊಯೊಟಾ ಕಂಪನಿಯು ಮಾರುತಿ ಸುಜುಕಿ ಜೊತೆಗಿನ ಸಹಭಾಗಿತ್ವ ಯೋಜನೆ ಅಡಿ ಎರಡು ರೀಬ್ಯಾಡ್ಜ್ ಮಾದರಿಗಳನ್ನು ಬಿಡುಗಡೆ ಮಾಡಲಿದೆ.

ಭಾರತದಲ್ಲಿ ಹೊಸ ಹಿಲಕ್ಸ್ ಪಿಕ್ಅಪ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಟೊಯೊಟಾ ಬಿಡುಗಡೆ ಮಾಡಲಿರುವ ನಾಲ್ಕು ಕಾರುಗಳಲ್ಲಿ ಎರಡು ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳಲಾದ ಮಾದರಿಗಳಾದರೆ ಮಾರುತಿ ಸುಜುಕಿ ಜೊತೆಗಿನ ಸಹಭಾಗಿತ್ವದಲ್ಲಿ ಎರಡು ರೀಬ್ಯಾಡ್ಜ್ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ. ಬಿಡುಗಡೆಯಾಗಲಿರುವ ಆಮದು ಮಾದರಿಗಳಲ್ಲಿ ರಾವ್4 ಎಸ್‌ಯುವಿ ಮತ್ತು ಹಿಲುಕ್ಸ್ ಪಿಕ್ಅಪ್ ಆವೃತ್ತಿ ಬಿಡುಗಡೆಯಾಗಲಿದ್ದು, ರೀಬ್ಯಾಡ್ಜ್ ಮಾದರಿಗಳಲ್ಲಿ ಮಾರುತಿ ಸುಜುಕಿಯ ಎರ್ಟಿಗಾ ಮತ್ತು ಸಿಯಾಜ್ ಕಾರುಗಳನ್ನೇ ಹೊಸ ಹೆಸರಿನೊಂದಿಗೆ ಬಿಡುಗಡೆ ಮಾಡುವ ಯೋಜನೆಯಿದೆ.

ಭಾರತದಲ್ಲಿ ಹೊಸ ಹಿಲಕ್ಸ್ ಪಿಕ್ಅಪ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹಿಲಕ್ಸ್ ವಾಹನ ಮಾದರಿಯು ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಪ್ರಮುಖ ಎರಡು ಡೀಸೆಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿವೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಭಾರತದಲ್ಲಿ ಹೊಸ ಹಿಲಕ್ಸ್ ಪಿಕ್ಅಪ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಹೊಸ ಪಿಕ್ಅಪ್ ವಾಹನದಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 2.4-ಲೀಟರ್ ಡೀಸೆಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದ್ದು, ಕಡಿಮೆ ಎಂಜಿನ್ ವೇಗದಲ್ಲೂ ಅತಿಹೆಚ್ಚು ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಭಾರತದಲ್ಲಿ ಹೊಸ ಹಿಲಕ್ಸ್ ಪಿಕ್ಅಪ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ವೆರಿಯೆಂಟ್‌ಗಳೊಂದಿಗೆ ಮಾರಾಟವಾಗುತ್ತಿರುವ ಹಿಲುಕ್ಸ್ ಮಾದರಿಯು ಭಾರತದಲ್ಲಿ ವಿವಿಧ ಎಂಜಿನ್ ಆಯ್ಕೆಯೊಂದಿಗೆ ರೂ.20 ಲಕ್ಷದಿಂದ ರೂ. 25 ಲಕ್ಷ ಬೆಲೆ ಅಂತರದಲ್ಲಿನ ಕೆಲವೇ ವೆರಿಯೆಂಟ್‌ಗಳೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಭಾರತದಲ್ಲಿ ಹೊಸ ಹಿಲಕ್ಸ್ ಪಿಕ್ಅಪ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಹಿಲಕ್ಸ್ ಪಿಕ್‌ಅಪ್ ವಾಹನವು ಉತ್ತಮವಾದ ಒಳಾಂಗಣದೊಂದಿಗೆ ಒಟ್ಟು 5,285-ಎಂಎಂ ಉದ್ದ ಹೊಂದಿದ್ದು, 3,085-ಎಂಎಂ ವೀಲ್ಹ್ ಬೆಸ್‌ನೊಂದಿಗೆ 4x4 ಆಲ್‌ವೀಲ್ಹ್ ಡ್ರೈವ್ ಟೆಕ್ನಾಲಜಿಯೊಂದಿಗೆ ಬಿಡುಗಡೆಯಾಗಲಿದ್ದು, ಇಸುಝ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ.

Article Published On: Wednesday, June 2, 2021, 8:45 [IST]
English summary
Toyota Hilux is all set to debut in the Indian market. Read in Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+