ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟೊಯೊಟಾ(Toyota) ಕಂಪನಿಯು ಭಾರತದಲ್ಲಿ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗಿದ್ದು, ಬಹುನೀರಿಕ್ಷಿತ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಟೊಯೊಟಾ ಹೊಸ ಕಾರುಗಳ ಪೈಕಿ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಕೂಡಾ ಒಂದಾಗಿದ್ದು, ಹೊಸ ಕಾರು ಬಿಡುಗಡೆಯಾಗಿ ಕಂಪನಿಯು ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ. ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯ ಬಿಡುಗಡೆಗೂ ಮುನ್ನ ಟೊಯೊಟಾ ಕಂಪನಿಯು ಹೊಸ ಕಾರನ್ನು ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡುತ್ತಿದ್ದು, ಹೊಸ ಕಾರು ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ದೇಶಿಯ ಮಾರುಕಟ್ಟೆಗಳಲ್ಲಿ ತನ್ನ ಸರಣಿ ಕಾರುಗಳ ಮಾರಾಟವನ್ನು ಹೆಚ್ಚಿಸುವ ಬೃಹತ್ ಯೋಜನೆಗೆ ಚಾಲನೆ ನೀಡಿರುವ ಟೊಯೊಟಾ ಕಂಪನಿಯು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿರುವ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಹಂತ-ಹಂತವಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಯೋಜನೆಯ ಭಾಗವಾಗಿ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯು ಬಿಡುಗಡೆಯಾಗಲಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಪ್ರಸ್ತುತ ಕಾರು ಮಾರುಕಟ್ಟೆಯಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳ ಕಾರುಗಳ ಮಾರಾಟವು ಹೆಚ್ಚುತ್ತಿದ್ದು, ಟೊಯೊಟಾ ಕಂಪನಿಯು ಸಹ ಮಾರುಕಟ್ಟೆಯಲ್ಲಿನ ಬೇಡಿಕೆಯನ್ನು ಆಧರಿಸಿ ಜಾಗತಿಕ ಮಾರುಕಟ್ಟೆಗಳಲ್ಲಿನ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಬಿಡುಗಡೆ ಮಾಡುತ್ತಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

2022ರ ಅಂತ್ಯಕ್ಕೆ ಒಟ್ಟು ನಾಲ್ಕು ಹೊಸ ಕಾರುಗಳನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿರುವ ಟೊಯೊಟಾ ಕಂಪನಿಯು ಮೊದಲ ಮಾದರಿಯಾಗಿ ಹಿಲಕ್ಸ್ ನಂತರ ರಾವ್ 4 ಮತ್ತು ಮತ್ತೆರಡು ರೀಬ್ಯಾಡ್ಜ್ ಮಾದರಿಗಳನ್ನು ಬಿಡುಗಡೆ ಮಾಡಲಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಜೊತೆಗೆ ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ಹೊಸ ಆಮದು ನೀತಿಯು ವಿದೇಶಿ ಕಾರು ಉತ್ಪಾದನಾ ಕಂಪನಿಗಳಿಗೆ ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಕಾರು ಕಂಪನಿಗಳು ವಾರ್ಷಿಕವಾಗಿ 2,500 ಯುನಿಟ್ ಕಾರುಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ದೇಶಿಯ ಮಾರುಕಟ್ಟೆಗೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿರುವುದು ಟೊಯೊಟಾ ಕಂಪನಿಗೂ ವರದಾನವಾಗಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಟೊಯೊಟಾ ಕಂಪನಿಯು ಹೊಸ ಆಮದು ನೀತಿ ಅಡಿ ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಪ್ರಮುಖ ಕಾರುಗಳನ್ನು ಹೊಸ ಆಮದು ನೀತಿ ಅಡಿಯಲ್ಲಿ ಮಾರಾಟ ಮಾಡುವ ಯೋಜನೆಯಲ್ಲಿದ್ದು, ಈಗಾಗಲೇ ಹೊಸ ಆಮದು ನೀತಿ ಅಡಿಯಲ್ಲಿ ವೆಲ್‌ಫೈರ್ ಐಷಾರಾಮಿ ಎಂಪಿವಿ ಮಾದರಿಯನ್ನು ಮಾರಾಟ ಮಾಡುತ್ತಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹಿಲಕ್ಸ್ ಮಾದರಿಯು ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಹಿಲಕ್ಸ್ ಕಾರು ಭಾರತೀಯ ಮಾರುಕಟ್ಟೆಗಳಲ್ಲಿನ ಪಿಕ್ಅಪ್ ಮಾದರಿಗಳಿಗೆ ಹೋಲಿಕೆ ಮಾಡಿದರೆ ತುಸು ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಮಾದರಿಯು ಬೆಲೆ ಕಡಿತಕ್ಕಾಗಿ ಕೆಲವು ಬದಲಾವಣೆಗಳೊಂದಿಗೆ ಪ್ರಮುಖ ಎರಡು ಡೀಸೆಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಹಿಲಕ್ಸ್ ಪಿಕ್ಅಪ್ ಬಿಡುಗಡೆಗಾಗಿ ಟೊಯೊಟಾ ಕಂಪನಿಯು ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ಟ್ರೇಡ್‌ಮಾರ್ಕ್ ಕೂಡಾ ದಾಖಲಿಸಲಾಗಿದ್ದು, ಇಸುಝ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗೆ ಪೈಪೋಟಿಯಾಗಿ ಪ್ರಮುಖ ಎರಡು ಮಾದರಿಗಳಲ್ಲಿ ಬಿಡುಗಡೆಗೆ ಸಿದ್ದವಾಗಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಹೊಸ ಪಿಕ್ಅಪ್ ಮಾದರಿಯಲ್ಲಿ ಟೊಯೊಟಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 2.4-ಲೀಟರ್ ಡೀಸೆಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್‌ ಬಿಡುಗಡೆ ಮಾಡಬಹುದಾಗಿದ್ದು, ಕಡಿಮೆ ಎಂಜಿನ್ ವೇಗದಲ್ಲೂ ಅತಿಹೆಚ್ಚು ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ವೆರಿಯೆಂಟ್‌ಗಳೊಂದಿಗೆ ಮಾರಾಟವಾಗುತ್ತಿರುವ ಹಿಲಕ್ಸ್ ಮಾದರಿಯು ಭಾರತದಲ್ಲಿ ಪ್ರಮುಖ ಎಂಜಿನ್ ಆಯ್ಕೆಯೊಂದಿಗೆ ರೂ. 25 ಲಕ್ಷದಿಂದ ರೂ. 30 ಲಕ್ಷ ಬೆಲೆ ಅಂತರದಲ್ಲಿ ಕೆಲವೇ ವೆರಿಯೆಂಟ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಹಿಲಕ್ಸ್ ಪಿಕ್‌ಅಪ್ ವಾಹನವು ಉತ್ತಮವಾದ ಒಳಾಂಗಣದೊಂದಿಗೆ ಒಟ್ಟು 5,285-ಎಂಎಂ ಉದ್ದ ಹೊಂದಿದ್ದು, 3,085-ಎಂಎಂ ವೀಲ್ಹ್ ಬೆಸ್‌ನೊಂದಿಗೆ 4x4 ಆಲ್‌ವೀಲ್ಹ್ ಡ್ರೈವ್ ಟೆಕ್ನಾಲಜಿಯೊಂದಿಗೆ ಬಿಡುಗಡೆಯಾಗಲಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಬಹುನೀರಿಕ್ಷಿತ ಟೊಯೊಟಾ ಹಿಲಕ್ಸ್

ಜೊತೆಗೆ ಹೊಸ ವಾಹನದಲ್ಲಿ ಹಲವಾರು ಸೇಫ್ಟಿ ಫೀಚರ್ಸ್‌ಗಳನ್ನು ಸಹ ನೀಡಲಾಗಿದ್ದು, ಆಫ್ ರೋಡ್ ಪ್ರಿಯರು ಹೊಸ ಕಾರು ಮಾದರಿಯನ್ನು ವಿವಿಧ ಬಗೆಯಲ್ಲಿ ಮಾಡಿಫೈ ಸೌಲಭ್ಯಗಳನ್ನು ಮಾರ್ಪಾಡುಗೊಳಿಸಲು ಸೂಕ್ತ ಕಾರು ಮಾದರಿಯಾಗಿದೆ.

Article Published On: Friday, December 31, 2021, 8:50 [IST]
English summary
Toyota hilux pickup starts reaching dealership ahead of official launch
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+