ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಭಾರತದಲ್ಲಿ ಟೊಯೊಟಾ(Toyota) ಕಂಪನಿಯು ತನ್ನ ಸರಣಿ ಕಾರುಗಳ ಮಾರಾಟವನ್ನು ಹೆಚ್ಚಿಸುವ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಕಂಪನಿಯು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜನಪ್ರಿಯವಾಗಿರುವ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಹಂತ-ಹಂತವಾಗಿ ಬಿಡುಗಡೆ ಮಾಡುತ್ತಿದೆ.

ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಹಿಲಕ್ಸ್

ಪ್ರಸ್ತುತ ಕಾರು ಮಾರುಕಟ್ಟೆಯಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳ ಕಾರುಗಳ ಮಾರಾಟವು ಹೆಚ್ಚುತ್ತಿದ್ದು, ಟೊಯೊಟಾ ಕಂಪನಿಯು ಸಹ ಮಾರುಕಟ್ಟೆಯಲ್ಲಿನ ಬೇಡಿಕೆ ಆಧರಿಸಿ ಜಾಗತಿಕ ಮಾರುಕಟ್ಟೆಗಳಲ್ಲಿನ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಬಿಡುಗಡೆಗಾಗಿ ಸಿದ್ದತೆ ನಡೆಸಿದೆ. ಟೊಯೊಟಾ ಹೊಸ ಕಾರುಗಳ ಪೈಕಿ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಕೂಡಾ ಒಂದಾಗಿದ್ದು, ಹೊಸ ಕಾರು ಬಿಡುಗಡೆಯಾಗಿ ಕಂಪನಿಯು ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯ ಬಿಡುಗಡೆಗೂ ಮುನ್ನ ಟೊಯೊಟಾ ಕಂಪನಿಯು ಉತ್ಪಾದನಾ ಮಾದರಿಯ ಟಿವಿ ಜಾಹೀರಾತು ಚಿತ್ರೀಕರಣ ಆರಂಭಿಸಿದ್ದು, ಹೊಸ ಕಾರು ಭಾರತದಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಂಡುಬಂದಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಟೊಯೊಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹೊಸ ಕಾರುಗಳನ್ನು ಬಿಡುಗಡೆ ಯೋಜನೆ ರೂಪಿಸಿದ್ದು, 2022ರ ಅಂತ್ಯಕ್ಕೆ ಒಟ್ಟು ನಾಲ್ಕು ಹೊಸ ಕಾರುಗಳನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ಹೊಸ ಆಮದು ನೀತಿಯು ವಿದೇಶಿ ಕಾರು ಉತ್ಪಾದನಾ ಕಂಪನಿಗಳಿಗೆ ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಕಾರು ಕಂಪನಿಗಳು ವಾರ್ಷಿಕವಾಗಿ 2,500 ಯುನಿಟ್ ಕಾರುಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ದೇಶಿಯ ಮಾರುಕಟ್ಟೆಗೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿರುವುದು ಟೊಯೊಟಾ ಕಂಪನಿಗೂ ವರದಾನವಾಗಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಟೊಯೊಟಾ ಕಂಪನಿಯು ಹೊಸ ಆಮದು ನೀತಿ ಅಡಿ ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಪ್ರಮುಖ ಕಾರುಗಳನ್ನು ಹೊಸ ಆಮದು ನೀತಿ ಅಡಿಯಲ್ಲಿ ಮಾರಾಟ ಮಾಡುವ ಯೋಜನೆಯಲ್ಲಿದ್ದು, ಈಗಾಗಲೇ ಹೊಸ ಆಮದು ನೀತಿ ಅಡಿಯಲ್ಲಿ ವೆಲ್‌ಫೈರ್ ಐಷಾರಾಮಿ ಎಂಪಿವಿ ಮಾದರಿಯನ್ನು ಮಾರಾಟ ಮಾಡುತ್ತಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಪ್ರಸಕ್ತ ವರ್ಷದ ಆಮದು ನೀತಿ ಅಡಿಯಲ್ಲಿ ವಿವಿಧ ಸೆಗ್ಮೆಂಟ್‌ನಲ್ಲಿ ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿರುವ ಟೊಯೊಟಾ ಕಂಪನಿಯು ಮಾರುತಿ ಸುಜುಕಿ ಜೊತೆಗಿನ ಸಹಭಾಗಿತ್ವ ಯೋಜನೆ ಅಡಿಯಲ್ಲೂ ಎರಡು ರೀಬ್ಯಾಡ್ಜ್ ಮಾದರಿಗಳನ್ನು ಬಿಡುಗಡೆ ಮಾಡಲಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಬಿಡುಗಡೆಯಾಗಲಿರುವ ಆಮದು ಕಾರು ಮಾದರಿಗಳಲ್ಲಿ ರಾವ್4 ಎಸ್‌ಯುವಿ ಮತ್ತು ಹಿಲಕ್ಸ್ ಪಿಕ್ಅಪ್ ಆವೃತ್ತಿ ಬಿಡುಗಡೆಯಾಗಲಿದ್ದು, ರೀಬ್ಯಾಡ್ಜ್ ಮಾದರಿಗಳಲ್ಲಿ ಮಾರುತಿ ಸುಜುಕಿಯ ಎರ್ಟಿಗಾ ಮತ್ತು ಸಿಯಾಜ್ ಕಾರುಗಳನ್ನೇ ಬದಲಿ ಹೆಸರಿನೊಂದಿಗೆ ಬಿಡುಗಡೆ ಮಾಡುವ ಯೋಜನೆಯಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹಿಲಕ್ಸ್ ಮಾದರಿಯು ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಹಿಲಕ್ಸ್ ಕಾರು ಭಾರತೀಯ ಮಾರುಕಟ್ಟೆಗಳಲ್ಲಿ ಪಿಕ್ಅಪ್ ಮಾದರಿಗಳಿಗೆ ಹೋಲಿಕೆ ಮಾಡಿದರೆ ತುಸು ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಮಾದರಿಯು ಬೆಲೆ ಕಡಿತಕ್ಕಾಗಿ ಕೆಲವು ಬದಲಾವಣೆಗಳೊಂದಿಗೆ ಪ್ರಮುಖ ಎರಡು ಡೀಸೆಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಹಿಲಕ್ಸ್ ಪಿಕ್ಅಪ್ ಬಿಡುಗಡೆಗಾಗಿ ಟೊಯೊಟಾ ಕಂಪನಿಯು ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ಟ್ರೇಡ್‌ಮಾರ್ಕ್ ಕೂಡಾ ದಾಖಲಿಸಲಾಗಿದ್ದು, ಇಸುಝ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗೆ ಪೈಪೋಟಿಯಾಗಿ ಪ್ರಮುಖ ಎರಡು ಮಾದರಿಗಳಲ್ಲಿ ಬಿಡುಗಡೆ ಮಾಡುತ್ತಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಹೊಸ ಪಿಕ್ಅಪ್ ವಾಹನದಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 2.4-ಲೀಟರ್ ಡೀಸೆಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಬಹುದಾಗಿದ್ದು, ಕಡಿಮೆ ಎಂಜಿನ್ ವೇಗದಲ್ಲೂ ಅತಿಹೆಚ್ಚು ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ವೆರಿಯೆಂಟ್‌ಗಳೊಂದಿಗೆ ಮಾರಾಟವಾಗುತ್ತಿರುವ ಹಿಲಕ್ಸ್ ಮಾದರಿಯು ಭಾರತದಲ್ಲಿ ವಿವಿಧ ಎಂಜಿನ್ ಆಯ್ಕೆಯೊಂದಿಗೆ ರೂ. 25 ಲಕ್ಷದಿಂದ ರೂ. 30 ಲಕ್ಷ ಬೆಲೆ ಅಂತರದಲ್ಲಿನ ಕೆಲವೇ ವೆರಿಯೆಂಟ್‌ಗಳೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಹಿಲಕ್ಸ್ ಪಿಕ್‌ಅಪ್ ವಾಹನವು ಉತ್ತಮವಾದ ಒಳಾಂಗಣದೊಂದಿಗೆ ಒಟ್ಟು 5,285-ಎಂಎಂ ಉದ್ದ ಹೊಂದಿದ್ದು, 3,085-ಎಂಎಂ ವೀಲ್ಹ್ ಬೆಸ್‌ನೊಂದಿಗೆ 4x4 ಆಲ್‌ವೀಲ್ಹ್ ಡ್ರೈವ್ ಟೆಕ್ನಾಲಜಿಯೊಂದಿಗೆ ಬಿಡುಗಡೆಯಾಗಲಿದೆ.

ಬಿಡುಗಡೆಗೂ ಮುನ್ನ ಟಿವಿ ಜಾಹೀರಾತು ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಟೊಯೊಟಾ ಹಿಲಕ್ಸ್

ಜೊತೆಗೆ ಹೊಸ ವಾಹನದಲ್ಲಿ ಹಲವಾರು ಸೇಫ್ಟಿ ಫೀಚರ್ಸ್‌ಗಳನ್ನು ಸಹ ನೀಡಲಾಗಿದ್ದು, ಆಫ್ ರೋಡ್ ಪ್ರಿಯರು ಹೊಸ ಕಾರು ಮಾದರಿಯನ್ನು ವಿವಿಧ ಬಗೆಯಲ್ಲಿ ಮಾಡಿಫೈ ಸೌಲಭ್ಯಗಳನ್ನು ಮಾರ್ಪಾಡುಗೊಳಿಸಲು ಸೂಕ್ತ ಕಾರು ಮಾದರಿಯಾಗಿದೆ.

Most Read Articles

Kannada
Read more on ಟೊಯೊಟಾ toyota
English summary
Toyota hilux will be launched before the end of january 2022
Story first published: Monday, December 20, 2021, 13:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X