ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಕೋವಿಡ್ ಆತಂಕದಿಂದ ಆಟೋ ಉದ್ಯಮವು ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹೊಸ ವಾಹನ ಮಾರಾಟದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದೆ. ಕೋವಿಡ್ ಸಂಕಷ್ಟದಿಂದಾಗಿ ವಾಹನ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿರುವ ಗ್ರಾಹಕರು ಸೆಳೆಯಲು ಪ್ರಮುಖ ಕಾರು ಕಂಪನಿಗಳು ಹರಸಾಹಸಪಡುತ್ತಿವೆ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿದ್ದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್ಡೌನ್ ಘೋಷಣೆ ಮಾಡಿದ್ದವು. ಹೊಸ ಸುರಕ್ಷಾ ಕ್ರಮಗಳ ಪರಿಣಾಮ ತೀವ್ರ ನಷ್ಟ ಅನುಭವಿಸಿರುವ ಆಟೋ ಉದ್ಯಮವು ಇದೀಗ ಲಾಕ್‌ಡೌನ್ ಸಡಿಲಿಕೆಯಿಂದ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಹೊಸ ಕಾರು ಖರೀದಿ ಉತ್ತೇಜಿಸಲು ವಿವಿಧ ಕಾರು ಉತ್ಪಾದನಾ ಕಂಪನಿಗಳು ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿವೆ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಆಕರ್ಷಕ ಆಫರ್‌ಗಳನ್ನು ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಟೊಯೊಟಾ ಇಂಡಿಯಾ ಕೂಡಾ ವಿವಿಧ ಆಫರ್‌ಗಳನ್ನು ಆಯ್ದ ಕಾರು ಮಾದರಿಗಳಿಗಾಗಿ ನೀಡುತ್ತಿದೆ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟೊಯೊಟಾ ಕಂಪನಿಯು ಗ್ಲಾಂಝಾ ಮತ್ತು ಯಾರಿಸ್ ಕಾರುಗಳ ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿದ್ದು, ಅರ್ಬನ್ ಕ್ರೂಸರ್ ಕಾರು ಖರೀದಿಯ ಮೇಲೆ ಹೊಸ ಹಣಕಾಸು ಆಫರ್ ನೀಡಲಾಗುತ್ತಿದೆ. ಹೊಸ ಆಫರ್‌ಗಳಲ್ಲಿ ಗ್ಲಾಂಝಾ ಕಾರು ಮಾದರಿಯ ಮೇಲೆ ಗರಿಷ್ಠ ರೂ. 18 ಸಾವಿರ ಮತ್ತು ಯಾರಿಸ್ ಮಾದರಿಯ ಮೇಲೆ ರೂ.45 ಸಾವಿರ ಆಫರ್ ಹೊರತುಪಡಿಸಿ ಕಂಪನಿಯ ಇತರೆ ಯಾವುದೇ ಕಾರುಗಳ ಮೇಲೆ ಆಫರ್‌ಗಳು ಲಭ್ಯವಿರುವುದಿಲ್ಲ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟೊಯೊಟಾ ಕಂಪನಿಯು ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಖರೀದಿದಾರರಿಗೆ ಪ್ರತ್ಯೇಕವಾಗಿ ಹೊಸ ಹಣಕಾಸು ಸೌಲಭ್ಯವನ್ನು ನೀಡುತ್ತಿದ್ದು, ಹೊಸ ಕಾರು ಖರೀದಿಸಿ ಮೂರು ತಿಂಗಳ ನಂತರ ಇಎಂಐ ಮರುಪಾವತಿಗೆ ಅವಕಾಶ ನೀಡಲಾಗುತ್ತಿದೆ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಈ ಮೇಲಿನ ಆಫರ್‌ಗಳನ್ನು ಹೊರತುಪಡಿಸಿ ಟೊಯೊಟಾ ಇತರೆ ಕಾರು ಮಾದರಿಗಳಿಗೆ ಯಾವುದೇ ಆಫರ್ ಲಭ್ಯವಿಲ್ಲವಾದರೂ ಡೀಲರ್ಸ್ ಮಟ್ಟದಲ್ಲಿ ವಿವಿಧ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳು ಟೊಯೊಟಾ ಕಾರು ಮಾರಾಟ ಸುಧಾರಿಸಲು ನೆರವಾಗಲಿವೆ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಇನ್ನು ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲಿ ತನ್ನದೆ ಜನಪ್ರಿಯತೆ ಹೊಂದಿರುವ ಟೊಯೊಟಾ ಕಂಪನಿಯು ಭಾರತದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಈ ವರ್ಷಾಂತ್ಯಕ್ಕೆ ಒಟ್ಟು ನಾಲ್ಕು ಹೊಸ ಕಾರುಗಳು ರಸ್ತೆಗಿಳಿಯಲಿವೆ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

2019ರಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಆಮದು ನೀತಿಯು ವಿದೇಶಿ ಕಾರು ಉತ್ಪಾದನಾ ಕಂಪನಿಗಳಿಗೆ ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಕಾರು ಕಂಪನಿಗಳು ವಾರ್ಷಿಕವಾಗಿ 2,500 ಯುನಿಟ್ ಕಾರುಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ದೇಶಿಯ ಮಾರುಕಟ್ಟೆಗೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿರುವುದು ಟೊಯೊಟಾ ಕಂಪನಿಗೂ ವರವಾಗಿದೆ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟೊಯೊಟಾ ಕಂಪನಿಯು ಹೊಸ ಆಮದು ನೀತಿ ಅಡಿ ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಪ್ರಮುಖ ಎರಡು ಕಾರುಗಳನ್ನು ಹೊಸ ಆಮದು ನೀತಿ ಅಡಿಯಲ್ಲಿ ಮಾರಾಟ ಮಾಡುವ ಯೋಜನೆಯಲ್ಲಿದ್ದು, ಈಗಾಗಲೇ ಹೊಸ ಆಮದು ನೀತಿ ಅಡಿಯಲ್ಲಿ ವೆಲ್‌ಫೈರ್ ಐಷಾರಾಮಿ ಎಂಪಿವಿ ಮಾದರಿಯನ್ನು ಮಾರಾಟ ಮಾಡುತ್ತಿದೆ.

ಟೊಯೊಟಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಪ್ರಸಕ್ತ ವರ್ಷದ ಆಮದು ನೀತಿ ಅಡಿಯಲ್ಲಿ ಮತ್ತೆರಡು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿರುವ ಟೊಯೊಟಾ ಕಂಪನಿಯು ಮಾರುತಿ ಸುಜುಕಿ ಜೊತೆಗಿನ ಸಹಭಾಗಿತ್ವ ಯೋಜನೆ ಅಡಿ ಎರಡು ರೀಬ್ಯಾಡ್ಜ್ ಮಾದರಿಗಳನ್ನು ಬಿಡುಗಡೆ ಮಾಡಲಿದೆ.

Most Read Articles

Kannada
English summary
Toyota Announce Discounts And Offers For Selected Models.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X