ಕೋವಿಡ್ ವಿರುದ್ದದ ಹೋರಾಟಕ್ಕಾಗಿ ಆಕ್ಸಿಜನ್ ನಿರ್ಮಾಣ ಘಟಕ ಆರಂಭಿಸಿದ ಟೊಯೊಟಾ
ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಆಟೋ ಕಂಪನಿಗಳ ಹೊಸ ಯೋಜನೆಗಳ ಪರಿಣಾಮ ಸೋಂಕು ನಿಯಂತ್ರಿಸಲು ಸಾಕಷ್ಟು ಸಹಕಾರಿಯಾಗಿದೆ.

ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್‌ನೊಂದಿಗೆ ಇನ್ನು ಕೂಡಾ ಲೌಕ್‌ಡೌನ್ ಮುಂದುವರಿಸಲಾಗುತ್ತಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಆಟೋ ಕಂಪನಿಗಳು ಆರ್ಥಿಕ ಸಂಕಷ್ಟದ ನಡುವೆಯೂ ಸರ್ಕಾರದ ಪ್ರಯತ್ನಗಳಿಗೆ ಕೈಜೋಡಿಸಿವೆ.

ವೈರಸ್ ಹರಡುವಿಕೆ ತೀವ್ರವಾಗಿರುವುದರಿಂದ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಟೊಯೊಟಾ ಸೇರಿದಂತೆ ಹಲವು ವಾಹನ ತಯಾರಿಕಾ ಕಂಪನಿಗಳು ವೈದ್ಯಕೀಯ ಸೇವೆಗಳಿಗೆ ಅಗತ್ಯವಾಗಿರುವ ಆಕ್ಸಿಜನ್ ಉತ್ಪಾದನೆ, ಆಕ್ಸಿಜನ್ ಕಾನ್ಸನ್ಟ್ರೇಟರ್ ಮತ್ತು ಅಗತ್ಯವಿರುವ ಕಡೆಗಳಲ್ಲಿ ಕೋವಿಡ್ ಕೇರ್ ನಿರ್ಮಾಣ ಮಾಡಿವೆ.

ಟೊಯೊಟಾ ಕಂಪನಿಯು ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಣಾಕಾಸು ನೆರವು ನೀಡಿದ್ದು, ಸುಮಾರು ರೂ. 2 ಕೋಟಿ ದೇಣೆಗೆ ಜೊತೆಗೆ ಇದೀಗ ಬಿಡದಿಯಲ್ಲಿರುವ ತನ್ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡುತ್ತಿದೆ.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪನೆಯ ಜೊತೆಗೆ ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ವಿವಿಧ ರೀತಿಯಲ್ಲಿ ನೆರವು ನೀಡಿದ್ದು, ಸಮುದಾಯ ಆರೋಗ್ಯ ಕೇಂದ್ರದ ಜೊತೆಗೆ ಕಾರ್ಮಿಕರಿಗೂ ಹಲವಾರು ಪರಿಹಾರ ಕ್ರಮಗಳನ್ನು ಪ್ರಕಟಿಸಿದೆ.

ಕೋವಿಡ್‌ನಿಂದ ಪ್ರಾಣಕಳೆದುಕೊಂಡಿರುವ ಉದ್ಯೋಗಿಗಳ ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿರುವ ಟೊಯೊಟಾ ಕಂಪನಿಯು ಆರ್ಥಿಕ ಸಂಕಷ್ಟದ ನಡುವೆಯೂ ಮೃತ ಉದ್ಯೋಗಿಗಳ ಸಂಬಳವನ್ನು ನಿಲ್ಲಿಸದೆ ಮುಂದಿನ ಮೂರುವರೆ ವರ್ಷಗಳ ಕಾಲ ಅವರ ಕುಟುಂಬಗಳಿಗೆ ನೆರವು ನೀಡಲು ನಿರ್ಧರಿಸಿದೆ.

ಜೊತೆಗೆ ಸೋಂಕು ತಗುಲಿದ ಉದ್ಯೋಗಿಗಳಿಗೆ 24x7 ವೈದ್ಯಕೀಯ ಸೇವೆಗಳನ್ನು ಘೋಷಣೆ ಮಾಡಿರುವ ಟೊಯೊಟಾ ಕಂಪನಿಯು ಹಾಟ್‌ಲೈನ್ ತೆರೆದಿದ್ದು, ಆಂಬ್ಯುಲೆನ್ಸ್ ಸೇವೆಗಳಿಗಾಗಿ ಮತ್ತು ಟರ್ಮ್ ಇನ್ಶುರೆನ್ಸ್ ಸೇವೆಗಳಿಗೆ ನೆರವಾಗುತ್ತಿದೆ.

ಕೋವಿಡ್ -19 ಸೋಂಕು ತಗುಲಿರುವ ನೌಕರರಿಗೆ ಹೋಂ ಕೇರ್ ಕಿಟ್ ಒದಗಿಸಲಾಗಿದ್ದು, ಇದರಲ್ಲಿ ಅಗತ್ಯ ಔಷಧಿಗಳು, ಆಕ್ಸಿಮೀಟರ್, ಥರ್ಮಾಮೀಟರ್, ಮಾಸ್ಕ್ ಮತ್ತು ಸ್ಯಾನಿಟೈಜರ್ ಇರಲಿದ್ದು, ಟೊಯೋಟಾ ಕಿರ್ಲೋಸ್ಕರ್ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆಗಾಗಿ ಲಭ್ಯವಿರುವ ಹಾಸಿಗೆಗಳನ್ನು ಗುರುತಿಸಲು ಮತ್ತು ಅಗತ್ಯವಿರುವ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ಒದಗಿಸಲು ಶ್ರಮಿಸುತ್ತಿದೆ.

ಇನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿಯಲ್ಲಿ ಟೊಯೊಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಮಟ್ಟದ ಹಣಕಾಸಿನ ನೆರವು ನೀಡಿವೆ.

ಕೋವಿಡ್ ನಿಯಂತ್ರಣಕ್ಕಾಗಿ ಪ್ರಮುಖ ವಾಹನ ಕಂಪನಿಗಳು ಹಣಕಾಸು ನೆರವು ನೀಡಿದ್ದಲ್ಲಿ ಇನ್ನು ಕೆಲವು ವಾಹನ ಕಂಪನಿಗಳು ವೈದ್ಯಕೀಯ ಸೇವೆಗಳನ್ನು ಉನ್ನತೀಕರಿಸಲು ವೆಂಟಿಲೇಟರ್ ಉತ್ಪಾದನೆ ಮತ್ತು ಆಕ್ಸಿಜನ್ ಉತ್ಪಾದನೆಗೆ ಸಹಕಾರಿಯಾಗುತ್ತಿರುವುದಲ್ಲದೆ ಕೋವಿಡ್ ಕೇರ್‌ಗಳಿಗೆ ಚಾಲನೆ ನೀಡಿದೆ.


Click it and Unblock the Notifications