ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಟೊಯೊಟಾ ಕಿರ್ಲೊಸ್ಕರ್ ಮೋಟಾರ್(Toyota Kirloskar Motor) ಕಂಪನಿಯು ತನ್ನ ಜನಪ್ರಿಯ ಎಂಪಿವಿ ಮಾದರಿಯಾದ ಇನೋವಾ ಕ್ರಿಸ್ಟಾ(Innova Crysta) ಮಾದರಿಯಲ್ಲಿ ಸೀಮಿತ ಅವಧಿಗಾಗಿ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಇನೋವಾ ಕ್ರಿಸ್ಟಾ ಕಾರು ಮಾದರಿಯ ಮೂಲಕ ಹಲವಾರು ಹೊಸ ದಾಖಲೆಗಳನ್ನು ತನ್ನದಾಗಿಸಿಕೊಂಡಿರುವ ಟೊಯೊಟಾ ಕಂಪನಿಯು ಮುಂಬರುವ ದೀಪಾವಳಿ ವಿಶೇಷವಾಗಿ ಸೀಮಿತ ಅವಧಿಗಾಗಿ ಲಿಮಿಟೆಡ್ ಎಡಿಷನ್ ಪರಿಚಯಿಸಿದ್ದು, ಹೊಸ ಕಾರು ಸ್ಟ್ಯಾಂಡರ್ಡ್ ಮಾದರಿಯಲ್ಲೇ ಎಂಜಿನ್ ಆಯ್ಕೆ ಹೊಂದಿದ್ದರೂ ಕೆಲವು ಹೆಚ್ಚುವರಿ ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಹೊಸ ಕಾರಿನಲ್ಲಿ ಕಂಪನಿಯು ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಹೊಸ ಮಾದರಿಯ ಡಿಸ್‌ಪ್ಲೇ ಮತ್ತು ಅಡ್ವಾನ್ಸ್ ಕನೆಕ್ಟಿವಿಟಿ ಸೌಲಭ್ಯದ ಜೊತೆಗೆ ಮಲ್ಟಿ ಟೆರೇನ್ ಮಾನಿಟರ್ ಸಿಸ್ಟಂ(360 ಡಿಗ್ರಿ ಕ್ಯಾಮೆರಾ), ವರ್ಚುವಲ್ ಬರ್ಡ್ ಐ ವ್ಯೂ, ಹೆಡ್ಸ್ ಅಪ್ ಡಿಸ್‌ಪ್ಲೇ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ವೈರ್‌ಲೆಸ್ ಚಾರ್ಜರ್, ಡೋರ್ ಎಡ್ಜ್ ಲೈಟಿಂಗ್ ನೀಡಲಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಲಿಮಿಟೆಡ್ ಎಡಿಷನ್ ಇನೋವಾ ಕ್ರಿಸ್ಟಾ ಕಾರು ಮುಂದಿನ ಕೆಲ ದಿನಗಳ ತನಕ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಹೊಸ ಆವೃತ್ತಿಯು ಬೆಲೆಯು ಸಾಮಾನ್ಯ ಮಾದರಿಗಿಂತ ವಿವಿಧ ವೆರಿಯೆಂಟ್‌ಗಳಿಂತ ರೂ.5 ಸಾವಿರದಿಂದ ರೂ.20 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

2005ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಇನೋವಾ ಕಾರು ಮಾದರಿಯು ಈ ತನಕವು ಎಂಪಿವಿ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ಹೊಸ ಕಾರಿನಲ್ಲಿ ಟೊಯೊಟಾ ಕಂಪನಿಯು ಕಾಲ ಕಾಲಕ್ಕೆ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಸದ್ಯ ಹೊಸ ತಲೆಮಾರಿನೊಂದಿಗೆ ಮಾರಾಟವಾಗುತ್ತಿರುವ ಇನೋವಾ ಕ್ರಿಸ್ಟಾ ಕಾರು 2016ರಲ್ಲಿ ನ್ಯೂ ಜನರೇಷನ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡಿತ್ತು. ಇದೀಗ 2021ರ ಮಾದರಿಯಾಗಿ ಫೇಸ್‌ಲಿಫ್ಟ್ ಮಾದರಿಯನ್ನು ಬಿಡಗಡೆ ಮಾಡಲಾಗಿದ್ದು, ಹಳೆಯ ಆವೃತ್ತಿಗಿಂತಲೂ ಫೇಸ್‌ಲಿಫ್ಟ್ ಮಾದರಿಯು ಸಾಕಷ್ಟು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಹೊಸ ಇನೋವಾ ಕ್ರಿಸ್ಟಾ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 17.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮಾದರಿಯು ಜಿ, ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಹೊಸ ಫೀಚರ್ಸ್ ಅಳವಡಿಕೆ ನಂತರ ಫೇಸ್‌ಲಿಫ್ಟ್ ಕಾರಿನ ಬೆಲೆಯು ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 80 ಸಾವಿರದಿಂದ ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದು, ಟೊಯೊಟಾ ಕಂಪನಿಯು ಫೇಸ್‌ಲಿಫ್ಟ್ ಮಾದರಿಯಲ್ಲಿ ಹಲವು ಹೊಸ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಾಗಿ ಕ್ರೊಮ್ ಸೌಲಭ್ಯ ಹೊಂದಿರುವ ಪಿಯಾನೊ ಬ್ಲ್ಯಾಕ್ ಬಣ್ಣದ ಟ್ರಾಪೆಜೊಡಿಯಲ್ ಫ್ರಂಟ್ ಗ್ರಿಲ್ ಮತ್ತು ಹೊಸ ವಿನ್ಯಾಸ ಫ್ರಂಟ್ ಬಂಪರ್ ಪ್ರಮುಖ ಆಕರ್ಷಣೆಯಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಹಾಗೆಯೇ ಹೊಸ ಕಾರಿನಲ್ಲಿ ಬ್ಯಾನೆಟ್ ಹೊಂದಿಕೊಂಡಂತೆ ಫ್ರಂಟ್ ಗ್ರಿಲ್‌ನೊಳಗೆ ಸೇರ್ಪಡೆಯಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್ ಸೆಟಪ್, ಡೈಮಂಡ್ ಕಟ್ ಅಲಾಯ್ ವೀಲ್ಹ್ ಮತ್ತು ಹೊಸದಾದ ಬಣ್ಣದ ಆಯ್ಕೆ ಪಡೆದುಕೊಂಡಿದ್ದು, ಹೊಸ ಬಣ್ಣದ ಆಯ್ಕೆಯನ್ನು ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್ ಎಂದು ಹೆಸರಿಸಿದೆ. ಇದು ಕಾರಿನ ಪ್ರೀಮಿಯಂ ಸೌಲಭ್ಯಗಳಿಗೆ ಪೂರಕವಾದ ಹೊಸ ಬಣ್ಣ ಆಯ್ಕೆಯಾಗಿದ್ದು, ಹೊರಭಾಗದಂತೆ ಒಳಭಾಗದಲ್ಲೂ ಪ್ರಮುಖ ಬದಲಾವಣೆಗಳಾಗಿವೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಹೊಸ ಫೇಸ್‌ಲಿಫ್ಟ್ ಕಾರಿನಲ್ಲಿ ಈ ಬಾರಿ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಸರ್ಪೋಟ್ ಮಾಡುವ ಸ್ಮಾರ್ಟ್ ಪ್ಲೇಕಾಸ್ಟ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿದ್ದು, ಟಾಪ್ ಎಂಡ್ ಮಾದರಿಯಾದ ಜೆಡ್ಎಕ್ಸ್ ಆವೃತ್ತಿಯಲ್ಲಿ ಹೆಚ್ಚುವರಿಯಾಗಿ ಕ್ಯಾಮೆಲ್ ಟಾನ್ ಕಲರ್ ಲೆದರ್ ಸೀಟುಗಳನ್ನು ನೀಡಿರುವುದು ಪ್ರೀಮಿಯಂ ಲುಕ್ ಹೆಚ್ಚಿಸಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಫೇಸ್‌ಲಿಫ್ಟ್ ಕಾರಿನ ಮುಂಭಾಗದ ವಿನ್ಯಾಸ ಮತ್ತು ಒಳಭಾಗದಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ಹೊರತುಪಡಿಸಿ ಕಾರಿನ ಹಿಂಭಾಗದ ವಿನ್ಯಾಸವನ್ನು ಈ ಹಿಂದಿನಂತೆಯೇ ಮುಂದುವರಿಸಲಾಗಿದ್ದು, ಎಂಜಿನ್ ಆಯ್ಕೆಯು ಕೂಡಾ ಯಾವುದೇ ಬದಲಾವಣೆ ಪಡೆದುಕೊಂಡಿಲ್ಲ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಬಿಎಸ್-6 ಎಮಿಷನ್ ಜಾರಿ ನಂತರ ಪರಿಚಯಿಸಲಾದ ಎಂಜಿನ್ ಮಾದರಿಯೇ ಇದೀಗ ಫೇಸ್‌ಲಿಫ್ಟ್ ಮಾದರಿಯಲ್ಲಿ ಜೋಡಿಸಲಾಗಿದ್ದು, ಇನೋವಾ ಕ್ರಿಸ್ಟಾ ಕಾರಿನಲ್ಲಿ ಗ್ರಾಹಕರು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

ಹೊಸ ಎಮಿಷನ್ ನಂತರ 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸಿರುವ ಟೊಯೊಟಾ ಕಂಪನಿಯು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಮಾತ್ರ ಮಾರಾಟ ಮಾಡುತ್ತಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ Toyota Innova Crysta ಲಿಮಿಟೆಡ್ ಎಡಿಷನ್ ಬಿಡುಗಡೆ

2.7-ಲೀಟರ್ ಪೆಟ್ರೋಲ್ ಮಾದರಿಯು 164-ಬಿಎಚ್‌ಪಿ, 245-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ 2.4-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 160-ಬಿಎಚ್‌ಪಿ, 360-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಸುಧಾರಣೆ ಕಂಡಿದೆ.

Article Published On: Tuesday, October 19, 2021, 19:26 [IST]
English summary
Toyota innova crysta limited edition launched in india details
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+