ಆಗಸ್ಟ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta
ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿಯು ಸುಮಾರು ಐದು ವರ್ಷಗಳಿಂದ ದೇಶದಲ್ಲಿ ಮಾರಾಟವಾಗುತ್ತಿದೆ, ಎಂಪಿವಿಯ ವಿಭಾಗದಲ್ಲಿ ಸ್ಪರ್ಧೆಯು ಏರಿಕೆಯಾಗಿದ್ದರೂ ಟೊಯೊಟಾ ಇನೋವಾ ಕ್ರಿಸ್ಟಾ ಮಾದರಿಯ ಜನಪ್ರಿಯತೆಯಲ್ಲಿ ಯಾವುದೇ ಕುಸಿತವನ್ನು ಕಂಡಿಲ್ಲ.

ಕಳೆದ ತಿಂಗಳು ಟೊಯೊಟಾ ಕಂಪನಿಯು ನೋವಾ ಕ್ರಿಸ್ಟಾ ಎಂಪಿವಿಯ 5,755 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಜಪಾನಿನ ಕಾರು ತಯಾರಕರು ಕಳೆದ ವರ್ಷ ಇದೇ ತಿಂಗಳಲ್ಲಿ 2,943 ಎಂಪಿವಿಯನ್ನು ಮಾರಾಟ ಮಾಡಿದ್ದರು, ಅಂದರೆ ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.96 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಇನ್ನು ಟೊಯೊಟಾ ಕಂಪನಿಯು ಕಳೆದ ವರ್ಷಾಂತ್ಯದಲ್ಲಿ ದೇಶದಲ್ಲಿ ನೋವಾ ಕ್ರಿಸ್ಟಾ ಎಂಪಿವಿಗಾಗಿ ಮಿಡ್-ಲೈಫ್ ಫೇಸ್‌ಲಿಫ್ಟ್ ಅನ್ನು ಪರಿಚಯಿಸಿತ್ತು.

ಇನೋವಾ ಕ್ರಿಸ್ಟಾ ಬಗ್ಗೆ ಹೇಳುವುದಾದರೆ, ಇದು ವಾಹನವು ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ಈ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕ್ರೊಮ್ ಸೌಲಭ್ಯ ಹೊಂದಿರುವ ಪಿಯಾನೊ ಬ್ಲ್ಯಾಕ್ ಬಣ್ಣದ ಟ್ರಾಪೆಜೊಡಿಯಲ್ ಫ್ರಂಟ್ ಗ್ರಿಲ್ ಮತ್ತು ಹೊಸ ವಿನ್ಯಾಸ ಫ್ರಂಟ್ ಬಂಪರ್ ಪ್ರಮುಖ ಆಕರ್ಷಣೆಯಾಗಿದೆ.

ಇನ್ನು ಈ ಎಂಪಿವಿಯಲ್ಲಿ ಅಂಡ್ರಾಯ್ಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಕನೆಕ್ಟಿವಿಟಿ ಹೊಂದಿರುವ ಸ್ಮಾರ್ಟ್ ಪ್ಲೇಕಾಸ್ಟ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿದೆ. ಟಾಪ್ ಎಂಡ್ ಮಾದರಿಯಾದ ಜೆಡ್ಎಕ್ಸ್ ಆವೃತ್ತಿಯಲ್ಲಿ ಹೆಚ್ಚುವರಿಯಾಗಿ ಕ್ಯಾಮೆಲ್ ಟಾನ್ ಕಲರ್ ಲೆದರ್ ಸೀಟುಗಳನ್ನು ನೀಡಿರುವುದು ಪ್ರೀಮಿಯಂ ಲುಕ್ ಹೆಚ್ಚಿಸಿದೆ.

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನಲ್ಲಿ ಟೊಯೊಟಾ ಕಂಪನಿಯು ಹಲವು ಹೊಸ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಾಗಿ ಕ್ರೊಮ್ ಸೌಲಭ್ಯ ಹೊಂದಿರುವ ಪಿಯಾನೊ ಬ್ಲ್ಯಾಕ್ ಬಣ್ಣದ ಟ್ರಾಪೆಜೊಡಿಯಲ್ ಫ್ರಂಟ್ ಗ್ರಿಲ್ ಮತ್ತು ಹೊಸ ವಿನ್ಯಾಸ ಫ್ರಂಟ್ ಬಂಪರ್ ಪ್ರಮುಖ ಆಕರ್ಷಣೆಯಾಗಿದೆ.

ಇನ್ನು ಈ ಹೊಸ ಎಂಪಿವಿಯಲ್ಲಿ ಬ್ಯಾನೆಟ್ ಹೊಂದಿಕೊಂಡಂತೆ ಫ್ರಂಟ್ ಗ್ರಿಲ್‌ನೊಳಗೆ ಸೇರ್ಪಡೆಯಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್ ಸೆಟಪ್, ಡೈಮಂಡ್ ಕಟ್ ಅಲಾಯ್ ವೀಲ್ಹ್ ಮತ್ತು ಹೊಸದಾದ ಬಣ್ಣದ ಆಯ್ಕೆ ಪಡೆದುಕೊಂಡಿದ್ದು, ಹೊಸ ಬಣ್ಣದ ಆಯ್ಕೆಯನ್ನು ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್ ಎಂದು ಹೆಸರಿಸಿದೆ. ಇನ್ನು ಕಾರಿನ ಪ್ರೀಮಿಯಂ ಸೌಲಭ್ಯಗಳಿಗೆ ಪೂರಕವಾದ ಹೊಸ ಬಣ್ಣ ಆಯ್ಕೆಯಾಗಿದ್ದು, ಹೊರಭಾಗದಂತೆ ಒಳಭಾಗದಲ್ಲೂ ಪ್ರಮುಖ ಬದಲಾವಣೆಗಳಾಗಿವೆ.

ಇನ್ನು ಈ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ. ಹೊಸ ಎಮಿಷನ್ ನಂತರ 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸಿರುವ ಟೊಯೊಟಾ ಕಂಪನಿಯು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಮಾತ್ರ ಮಾರಾಟ ಮಾಡುತ್ತಿದೆ.

ಪ್ರತಿ ವೆರಿಯೆಂಟ್‌ನಲ್ಲೂ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿದೆ.2.7-ಲೀಟರ್ ಪೆಟ್ರೋಲ್ ಮಾದರಿಯು 164-ಬಿಎಚ್‌ಪಿ, 245-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ 2.4-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 160-ಬಿಎಚ್‌ಪಿ, 360-ಎನ್ಎಂ ಟಾರ್ಕ್ ಉತ್ಪಾಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಲೇಜ್ ದಕ್ಷತೆಯಲ್ಲೂ ಸುಧಾರಣೆ ಕಂಡಿದೆ.

ಇನ್ನು ಭಾರತದಲ್ಲಿ ಹಲವು ವಾಹನ ತಯಾರಕ ಕಂಪನಿಗಳು ವರ್ಚುವಲ್ ಶೋರೂಂಗಳು ಪ್ರಾರಂಭಿಸಿದೆ. ಇದು ಗ್ರಾಹಕರಿಗೆ ನೇರವಾಗಿ ಶೋರೂಂ ಭೇಟಿಯಾದ ಅನುಭವವನ್ನೇ ನೀಡಲಿದ್ದು, ಹೊಸ ಮಾರಾಟ ಸೌಲಭ್ಯಕ್ಕೆ ಟೊಯೊಟಾ ಇಂಡಿಯಾ ಕಂಪನಿಯು ಕೂಡಾ ಇತ್ತೀಚೆಗೆ ಚಾಲನೆ ನೀಡಿದೆ. ಹೊಸ ವಾಹನಗಳಿಗಾಗಿ ಟೊಯೊಟಾ ಕಂಪನಿಯು ಪ್ರತ್ಯೇಕ ವೆಬ್‌ತಾಣವನ್ನು ತೆರೆದಿದ.

ಇದು ಕಾರು ಖರೀದಿದಾರರು ತಮ್ಮ ಇಷ್ಟದ ವಾಹನಗಳ ಬಗೆಗೆ ತಿಳಿದುಕೊಳ್ಳಲು ಶೋರೂಂಗೆ ನೇರ ಭೇಟಿ ನೀಡದೆ ಮನೆಯಲ್ಲೇ ಕುಳಿತು ಶೋರೂಂ ಮಾದರಿಯಲ್ಲೇ ವರ್ಚುವಲ್ ಶೋರೂಂ ಅನ್ನು ವೀಕ್ಷಿಸಿಬಹುದಾಗಿದೆ. 3ಡಿ ತಂತ್ರಜ್ಞಾನದ ಮೂಲಕ ನೀವು ಆಯ್ದಕೊಳ್ಳುವ ಕಾರಿನ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತಪಡಿಸುತ್ತದೆ. ಇದು 360 ಡಿಗ್ರಿ ಮಾದರಿಯಲ್ಲಿ ಹೊಸ ಕಾರನ್ನು ಕೂಲಂಕುಶವಾಗಿ ಪರಿಶೀಲನೆ ಮಾಡಬಹುದು,

ಇನ್ನು ವರ್ಚುವಲ್ ಶೋರೂಂನಲ್ಲಿ ಟೊಯೊಟಾ ನಿರ್ಮಾಣದ ಎಲ್ಲಾ ಕಾರು ಮಾದರಿಗಳು ವೀಕ್ಷಣೆಗೆ ಲಭ್ಯವಿದ್ದು, ಹೊಸ ವರ್ಚುವಲ್ ಪ್ಲ್ಯಾಟ್‌ಫಾರ್ಮ್ ಸದ್ಯ ಕೋವಿಡ್ ವೈರಸ್ ಪರಿಣಾಮ ಗ್ರಾಹಕರಿಗೂ ಮತ್ತು ಶೋರೂಂ ಸಿಬ್ಬಂದಿಯ ಆರೋಗ್ಯ ದೃಷ್ಠಿಯಿಂದಲೂ ಉತ್ತಮ ಕ್ರಮವಾಗಿದೆ.ಹೊಸ ಸುರಕ್ಷಾ ಕ್ರಮಗಳೊಂದಿಗೆ ವಾಹನ ಮಾರಾಟವನ್ನು ಕೈಗೊಳ್ಳುತ್ತಿರುವ ಆಟೋ ಕಂಪನಿಗಳು ಸೋಂಕು ಹರಡದಂತೆ ಸಾಕಷ್ಟು ಎಚ್ಚರಿಕೆ ವಹಿಸುತ್ತಿದ್ದು, ಇದರಿಂದ ವಾಹನ ಖರೀದಿಗೆ ಸುಲಭವಾಗುವಂತೆ ಆನ್‌ಲೈನ್ ವಾಹನ ಮಾರಾಟ ಮಳಿಗೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಿವೆ.

ಟೊಯೊಟಾ ಇನೋವಾ ಕ್ರಿಸ್ಟಾ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಪಿವಿಗಳಲ್ಲಿ ಒಂದಾಗಿದೆ. ಈ ಎಂಪಿವಿಯು ಕಡಿಮೆ ನಿರ್ವಹಣ ವೆಚ್ಚ, ಉತ್ತಮ ಎಂಜಿನ್, ಇದರಲ್ಲಿರುವ ಕಂಫರ್ಟ್ ಮತ್ತು ಉತ್ತಮ ಸ್ಪೇಸ್ ನಿಂದ ಹೆಚ್ಚು ಜನಪ್ರಿಯವಾಗಿದೆ. ಒಟ್ಟಿನಲ್ಲಿ ಕೊರೋನಾ ಸಂಕಷ್ಟದ ನಡುವೆ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿಯ ಮಾರಾಟದಲ್ಲಿ ಭಾರೀ ಬೆಳವಣಿಗೆಯನ್ನು ಸಾಧಿಸಿದೆ. ಮುಂದಿ ಹಬ್ಬದ ಸೀಸನ್ ನಲ್ಲಿ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಬಹುದು ಎಂದು ನಿರೀಕ್ಷಿಸುತ್ತೇವೆ,


Click it and Unblock the Notifications








