ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿಯು ಹಲವು ವರ್ಷಗಳಿಂದ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ, ಎಂಪಿವಿಯ ವಿಭಾಗದಲ್ಲಿ ಪೈಪೋಟಿ ಏರಿಕೆಯಾಗಿದ್ದರೂ ಟೊಯೊಟಾ ಇನೋವಾ ಕ್ರಿಸ್ಟಾ ಮಾದರಿಯ ಜನಪ್ರಿಯತೆಯಲ್ಲಿ ಯಾವುದೇ ಕುಸಿತವನ್ನು ಕಂಡಿಲ್ಲ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

2021ರ ನವೆಂಬರ್ ತಿಂಗಳಿನಲ್ಲಿ ಟೊಯೊಟಾ ಕಂಪನಿಯು ಇನೋವಾ ಕ್ರಿಸ್ಟಾ ಎಂಪಿವಿಯ 6,300 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಜಪಾನಿನ ಕಾರು ತಯಾರಕರು ಕಳೆದ ವರ್ಷ ಇದೇ ತಿಂಗಳಲ್ಲಿ 2,192 ಎಂಪಿವಿಯನ್ನು ಮಾರಾಟ ಮಾಡಿದ್ದರು, ಅಂದರೆ ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.187.41 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಈ ವರ್ಷದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಇನೋವಾ ಕ್ರಿಸ್ಟಾ ಮಾದರಿಯ 6,096 ಯುನಿಟ್ ಗಳನ್ನು ಮಾರಾಟ ಮಾಡಿದೆ, ಇದನ್ನು ತಿಂಗಳಿನಿಂದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.3.35 ರಷ್ಟು ಬೆಳವಣಿಗೆ ಸಾಧಿಸಿದೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

2005ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಇನೋವಾ ಕಾರು ಮಾದರಿಯು ಈ ತನಕವು ಎಂಪಿವಿ ಮಾರಾಟದಲ್ಲಿ ಮುಂಚೂಣಿಯಲ್ಲಿದೆ. ಹೊಸ ಕಾರಿನಲ್ಲಿ ಟೊಯೊಟಾ ಕಂಪನಿಯು ಕಾಲ ಕಾಲಕ್ಕೆ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.ಹೊಸ ತಲೆಮಾರಿನೊಂದಿಗೆ ಮಾರಾಟವಾಗುತ್ತಿರುವ ಇನೋವಾ ಕ್ರಿಸ್ಟಾ ಎಂಪಿವಿ 2016ರಲ್ಲಿ ನ್ಯೂ ಜನರೇಷನ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡಿತ್ತು.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

2021ರ ಮಾದರಿಯಾಗಿ ಫೇಸ್‌ಲಿಫ್ಟ್ ಮಾದರಿಯನ್ನು ಬಿಡಗಡೆ ಮಾಡಲಾಗಿದ್ದು, ಹಳೆಯ ಆವೃತ್ತಿಗಿಂತಲೂ ಫೇಸ್‌ಲಿಫ್ಟ್ ಮಾದರಿಯು ಸಾಕಷ್ಟು ಬದಲಾವಣೆಗಳೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಇನ್ನು ಒಟ್ಟಾರೆಯಾಗಿ ಟೊಯೊಟಾ ಕಾರುಗಳು ಮಾರಾಟದಲ್ಲಿ ಕಂಪನಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿದೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

ಇನೋವಾ ಕ್ರಿಸ್ಟಾ ಬಗ್ಗೆ ಹೇಳುವುದಾದರೆ, ಇದು ವಾಹನವು ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ಈ ಎಂಪಿವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕ್ರೊಮ್ ಸೌಲಭ್ಯ ಹೊಂದಿರುವ ಪಿಯಾನೊ ಬ್ಲ್ಯಾಕ್ ಬಣ್ಣದ ಟ್ರಾಪೆಜೊಡಿಯಲ್ ಫ್ರಂಟ್ ಗ್ರಿಲ್ ಮತ್ತು ಹೊಸ ವಿನ್ಯಾಸ ಫ್ರಂಟ್ ಬಂಪರ್ ಪ್ರಮುಖ ಆಕರ್ಷಣೆಯಾಗಿದೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

ಈ ಎಂಪಿವಿಯಲ್ಲಿ ಅಂಡ್ರಾಯ್ಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಕನೆಕ್ಟಿವಿಟಿ ಹೊಂದಿರುವ ಸ್ಮಾರ್ಟ್ ಪ್ಲೇಕಾಸ್ಟ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿದೆ. ಟಾಪ್ ಎಂಡ್ ಮಾದರಿಯಾದ ಜೆಡ್ಎಕ್ಸ್ ಆವೃತ್ತಿಯಲ್ಲಿ ಹೆಚ್ಚುವರಿಯಾಗಿ ಕ್ಯಾಮೆಲ್ ಟಾನ್ ಕಲರ್ ಲೆದರ್ ಸೀಟುಗಳನ್ನು ನೀಡಿರುವುದು ಪ್ರೀಮಿಯಂ ಲುಕ್ ಹೆಚ್ಚಿಸಿದೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನಲ್ಲಿ ಟೊಯೊಟಾ ಕಂಪನಿಯು ಹಲವು ಹೊಸ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಾಗಿ ಕ್ರೊಮ್ ಸೌಲಭ್ಯ ಹೊಂದಿರುವ ಪಿಯಾನೊ ಬ್ಲ್ಯಾಕ್ ಬಣ್ಣದ ಟ್ರಾಪೆಜೊಡಿಯಲ್ ಫ್ರಂಟ್ ಗ್ರಿಲ್ ಮತ್ತು ಹೊಸ ವಿನ್ಯಾಸ ಫ್ರಂಟ್ ಬಂಪರ್ ಪ್ರಮುಖ ಆಕರ್ಷಣೆಯಾಗಿದೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

ಇನ್ನು ಈ ಹೊಸ ಎಂಪಿವಿಯಲ್ಲಿ ಬ್ಯಾನೆಟ್ ಹೊಂದಿಕೊಂಡಂತೆ ಫ್ರಂಟ್ ಗ್ರಿಲ್‌ನೊಳಗೆ ಸೇರ್ಪಡೆಯಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್ ಸೆಟಪ್, ಡೈಮಂಡ್ ಕಟ್ ಅಲಾಯ್ ವೀಲ್ಹ್ ಮತ್ತು ಹೊಸದಾದ ಬಣ್ಣದ ಆಯ್ಕೆ ಪಡೆದುಕೊಂಡಿದ್ದು, ಹೊಸ ಬಣ್ಣದ ಆಯ್ಕೆಯನ್ನು ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್ ಎಂದು ಹೆಸರಿಸಿದೆ. ಇನ್ನು ಕಾರಿನ ಪ್ರೀಮಿಯಂ ಸೌಲಭ್ಯಗಳಿಗೆ ಪೂರಕವಾದ ಹೊಸ ಬಣ್ಣ ಆಯ್ಕೆಯಾಗಿದ್ದು, ಹೊರಭಾಗದಂತೆ ಒಳಭಾಗದಲ್ಲೂ ಪ್ರಮುಖ ಬದಲಾವಣೆಗಳಾಗಿವೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ. ಹೊಸ ಎಮಿಷನ್ ನಂತರ 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸಿರುವ ಟೊಯೊಟಾ ಕಂಪನಿಯು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಮಾತ್ರ ಮಾರಾಟ ಮಾಡುತ್ತಿದೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

ಪ್ರತಿ ವೆರಿಯೆಂಟ್‌ನಲ್ಲೂ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿದೆ.2.7-ಲೀಟರ್ ಪೆಟ್ರೋಲ್ ಮಾದರಿಯು 164-ಬಿಎಚ್‌ಪಿ, 245-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ 2.4-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 160-ಬಿಎಚ್‌ಪಿ, 360-ಎನ್ಎಂ ಟಾರ್ಕ್ ಉತ್ಪಾಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಲೇಜ್ ಸುಧಾರಣೆಯನ್ನು ಕಂಡಿದೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

ಇನ್ನು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಭಾರತೀಯ ಕಾರು ಮಾರುಕಟ್ಟೆಯಲ್ಲಿ ಕಳೆದ ತಿಂಗಳ ಮಾರಾಟ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳಿನಲ್ಲಿ ಟೊಯೊಟಾ ಕಂಪನಿಯು 13,003 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದಾರೆ. ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 8,508 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದರು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.52.83 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

2021ರ ಅಕ್ಟೋಬರ್ ತಿಂಗಳಿನಲ್ಲಿ 12,440 ಯುನಿಟ್‌ಗಳನ್ನು ಮಾರಾಟಗೊಳಿಸಿದೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಮಾಸಿಕ ಮಾರಾಟದಲ್ಲಿ ಶೇ.4.53 ರಷ್ಟು ಹೆಚ್ಚಾಗಿದೆ. ಟೊಯೊಟಾ ಕಂಪನಿಯು ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹಲವು ವಾಹನ ತಯಾರಕರು ಮಾರಾಟದಲ್ಲಿ ಕುಸಿತವನ್ನು ಕಂಡಿರುವಾಗ ಟೊಯೊಟಾ ಕಂಪನಿಯು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ Toyota Innova Crysta

ಕಳೆದ ತಿಂಗಳ ಮಾರಾಟದಲ್ಲಿ ಟೊಯೊಟಾ ಕಂಪನಿಯ ಅರ್ಬನ್ ಕ್ರೂಸರ್, ಗ್ಲಾಂಝಾ, ಇನೋವಾ ಕ್ರಿಸ್ಟಾ ಮತ್ತು ಫಾರ್ಚುನರ್ (ಫಾರ್ಚುನರ್ ಲೆಜೆಂಡರ್ ಸೇರಿದಂತೆ) ಮಾದರಿಗಳು ಹೆಚ್ಚಿನ ಕೊಡುಗೆಯನ್ನು ನೀಡಿದೆ. ವಿಟಾರಾ ಬ್ರೆಝಾ ಮತ್ತು ಬಲೆನೊ ಮಾರುತಿ ಸುಜುಕಿ ಅರ್ಬನ್ ಕ್ರೂಸರ್ ಮತ್ತು ಬಲೆನೊ ಕಾರುಗಳ ರಿಬ್ಯಾಡ್ಜ್ ಆವೃತ್ತಿಗಳಾಗಿವೆ. ಟೊಯೊಟಾ ತನ್ನ ಲೈನ್‌ಅಪ್‌ಗೆ ಇನ್ನಷ್ಟು ರೀಬ್ಯಾಡ್ಜ್ ಮಾಡಲಾದ ಮಾರುತಿ ಕಾರುಗಳನ್ನು ಸೇರಿಸುವ ನಿರೀಕ್ಷೆಯಿದೆ.

Most Read Articles

Kannada
Read more on ಟೊಯೊಟಾ toyota
English summary
Toyota innova crysta mpv registers over 187 percent sales growth in november 2021 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X