ಅಗಸ್ಟ್ 1ರಿಂದ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆಯಲ್ಲಿ ಶೇ.2 ರಷ್ಟು ಹೆಚ್ಚಳ

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿ ಕಾಯ್ದುಕೊಂಡಿರುವ ಟೊಯೊಟಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಲು ನಿರ್ಧರಿಸಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನ ಬೆಲೆಯಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಇದೀಗ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರು ಮಾದರಿಯ ಬೆಲೆಯಲ್ಲೂ ಕೂಡಾ ಹೆಚ್ಚಳ ಮಾಡಲಾಗುತ್ತಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

ಟೊಯೊಟಾ ಕಂಪನಿಯು ಕಳೆದ ಮಾರ್ಚ್‌ನಲ್ಲಿ ಪ್ರಮುಖ ಕಾರುಗಳ ಹೆಚ್ಚಳ ಮಾಡಿದ ನಂತರ ಇದೀಗ ಮತ್ತೆ ಬೆಲೆ ಹೆಚ್ಚಳಕ್ಕೆ ಸಿದ್ದವಾಗಿದ್ದು, ಮಾಹಿತಿಗಳ ಪ್ರಕಾರ ಇನೋವಾ ಕ್ರಿಸ್ಟಾ ಬೆಲೆಯಲ್ಲಿ ಶೇ.2 ರಷ್ಟು ಹೆಚ್ಚಳ ಮಾಡಬಹುದು ಎನ್ನಲಾಗಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

ಹೊಸ ದರವು ಅಗಸ್ಟ್ 1ರಿಂದಲೇ ಅನ್ವಯವಾಗಲಿದೆ ಎನ್ನಲಾಗಿದ್ದು, ಹೊಸ ದರ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಿದೆ. ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ.2 ರಷ್ಟು ಬೆಲೆ ಹೆಚ್ಚಳವಾದಲ್ಲಿ ರೂ. 35 ಸಾವಿರದಿಂದ ರೂ. 50 ಸಾವಿರದಷ್ಟು ದುಬಾರಿಯಾಗಲಿದ್ದು, ಇತರೆ ಮಾದರಿಗಳ ಬೆಲೆ ಕೂಡಾ ಹೆಚ್ಚಳವಾಗುವ ನೀರಿಕ್ಷೆಯಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

ಸದ್ಯ ಮಾರುಕಟ್ಟೆಯಲ್ಲಿ ಇನೋವಾ ಕ್ರಿಸ್ಟಾ 2021ರ ಮಾದರಿಯು ಹಲವಾಲು ಹೊಸ ಬದಲಾವಣೆಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.11 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.59 ಲಕ್ಷ ಬೆಲೆ ಪಡೆದುಕೊಂಡಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

ಹೊಸ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮಾದರಿಯು ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಾಗಿ ಕ್ರೊಮ್ ಸೌಲಭ್ಯ ಹೊಂದಿರುವ ಪಿಯಾನೊ ಬ್ಲ್ಯಾಕ್ ಬಣ್ಣದ ಟ್ರಾಪೆಜೊಡಿಯಲ್ ಫ್ರಂಟ್ ಗ್ರಿಲ್ ಮತ್ತು ಹೊಸ ವಿನ್ಯಾಸ ಫ್ರಂಟ್ ಬಂಪರ್ ಪ್ರಮುಖ ಆಕರ್ಷಣೆಯಾಗಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

ಹೊಸ ಫೇಸ್‌ಲಿಫ್ಟ್ ಕಾರಿನಲ್ಲಿ ಈ ಬಾರಿ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಸರ್ಪೋಟ್ ಮಾಡುವ ಸ್ಮಾರ್ಟ್ ಪ್ಲೇಕಾಸ್ಟ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿದ್ದು, ಟಾಪ್ ಎಂಡ್ ಮಾದರಿಯಾದ ಜೆಡ್ಎಕ್ಸ್ ಆವೃತ್ತಿಯಲ್ಲಿ ಹೆಚ್ಚುವರಿಯಾಗಿ ಕ್ಯಾಮೆಲ್ ಟಾನ್ ಕಲರ್ ಲೆದರ್ ಸೀಟುಗಳನ್ನು ನೀಡಿರುವುದು ಪ್ರೀಮಿಯಂ ಲುಕ್ ಹೆಚ್ಚಿಸಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

ಬಿಎಸ್-6 ಎಮಿಷನ್ ಜಾರಿ ನಂತರ ಪರಿಚಯಿಸಲಾದ ಎಂಜಿನ್ ಮಾದರಿಯೇ ಇದೀಗ ಫೇಸ್‌ಲಿಫ್ಟ್ ಮಾದರಿಯಲ್ಲಿ ಜೋಡಿಸಲಾಗಿದ್ದು, ಇನೋವಾ ಕ್ರಿಸ್ಟಾ ಕಾರಿನಲ್ಲಿ ಗ್ರಾಹಕರು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

ಹೊಸ ಎಮಿಷನ್ ನಂತರ 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸಿರುವ ಟೊಯೊಟಾ ಕಂಪನಿಯು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಮಾತ್ರ ಮಾರಾಟ ಮಾಡುತ್ತಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಬೆಲೆ ಹೆಚ್ಚಳ

2.7-ಲೀಟರ್ ಪೆಟ್ರೋಲ್ ಮಾದರಿಯು 164-ಬಿಎಚ್‌ಪಿ, 245-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ 2.4-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 160-ಬಿಎಚ್‌ಪಿ, 360-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಸುಧಾರಣೆ ಕಂಡಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Innova Crysta Price Increase Announced. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X