ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ (ಟಿಕೆಎಂ) ಕಂಪನಿಯು 2021ರ ಜುಲೈ ತಿಂಗಳ ಕಾರು ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ 13,105 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಟೊಯೊಟಾ ಕಂಪನಿಯು ಈ ವರ್ಷದ ಜೂನ್ ತಿಂಗಳಿನಲ್ಲಿ 8801 ಯುನಿಟ್ ಗಳನ್ನು ಮಾರಾಟಗೊಳಿಸಿತ್ತು. ಇದು ಜುಲೈನಿಂದ ಮಾರಾಟ ಸಂಖ್ಯೆಗೆ ಹೋಲಿಸಿದರೆ 4,304 ಯುನಿಟ್‌ಗಳು ಕಡಿಮೆಯಾಗಿದೆ. ಇದು ಮಾಸಿಕ ಮಾರಾಟದಲ್ಲಿ ಶೇ.49 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತದೆ. ಇನ್ನು ಕಳೆದ ವರ್ಷದ ಜುಲೈ ತಿಂಗಳಿನಲ್ಲಿ 5,386 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು 2021ರ ಜುಲೈ ತಿಂಗಳ ಮಾರಾಟದ ಅಂಕಿಅಂಶಗಳಿಗಿಂತ 7719 ಯುನಿಟ್‌ಗಳಷ್ಟು ಕಡಿಮೆಯಾಗಿದೆ. ಇದು ವರ್ಷದಿಂದ ವರ್ಷಕ್ಕೆ ಶೇ.143 ಬೆಳವಣಿಗೆಯನ್ನು ಸಾಧಿಸಿದೆ.

ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ (ಟಿಕೆಎಂ) ಕಂಪನಿಯ ಸೇಲ್ಸ್ ಅಂಡ್ ಸ್ಟ್ರಾಟೆಜಿಕ್ ಮಾರ್ಕೆಟಿಂಗ್ ಅಸೋಸಿಯೇಟ್ ಜನರಲ್ ಮ್ಯಾನೇಜರ್ ವಿ. ವಿಸಲೈನ್ ಸಿಗಾಮಣಿ ಅವರು ಮಾತನಾಡಿ, ಕಾರು ಮಾರಾಟದಲ್ಲಿ ಗಮನಾರ್ಹ ಏರಿಕೆಯನ್ನು ಕಂಡಿದ್ದರಿಂದ ಜುಲೈ ನಮಗೆ ಒಳ್ಳೆಯ ತಿಂಗಳಾಗಿದೆ.

ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಸತತ ಎರಡನೇ ತಿಂಗಳು ಜೂನ್ ಮತ್ತು ಜುಲೈನಲ್ಲಿ ನಮ್ಮ ಬಾಕಿ ಇರುವ ಬುಕ್ಕಿಂಗಗಳು ಈಗಾಗಲೇ ತುಂಬಾ ಉತ್ತೇಜನಕಾರಿಯಾಗಿದೆ, ನಮ್ಮ ಚಿಲ್ಲರೆ ಮಾರಾಟವು ಆ ಮೂಲಕ ಭರವಸೆಯನ್ನು ನೀಡುತ್ತಿದೆ, ಇದರಿಂದಾಗಿ ಸಗಟು ಮತ್ತು ಚಿಲ್ಲರೆ ಅಂಕಿಗಳ ನಡುವಿನ ಅಂತರವನ್ನು ತೀವ್ರವಾಗಿ ತಗ್ಗಿಸುತ್ತದೆ.

ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಇನ್ನು ಇನೋವಾ ಕ್ರಿಸ್ಟಾ ಮತ್ತು ಫಾರ್ಚುನರ್ ಇಲ್ಲಿ ವಿಶೇಷ ಉಲ್ಲೇಖಕ್ಕೆ ಅರ್ಹವಾಗಿವೆ ಏಕೆಂದರೆ ಈ ಎರಡೂ ಮಾದರಿಗಳು ನಮ್ಮ ಒಟ್ಟು ಮಾರಾಟಕ್ಕೆ ಗಣನೀಯ ಕೊಡುಗೆ ನೀಡಿವೆ, ಮೂಲಕ ತಮ್ಮ ವಿಭಾಗದ ನಾಯಕತ್ವ ಸ್ಥಾನವನ್ನು ತಮ್ಮ ವಿಭಾಗಗಳಲ್ಲಿ ಪುನರುಚ್ಚರಿಸುತ್ತವೆ ಎಂದು ಹೇಳಿದರು.

ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನ ಬೆಲೆಯಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಇದೀಗ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರು ಮಾದರಿಯ ಬೆಲೆಯಲ್ಲೂ ಕೂಡಾ ಹೆಚ್ಚಳ ಮಾಡಲಾಗುತ್ತಿದೆ.

ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಟೊಯೊಟಾ ಕಂಪನಿಯು ಕಳೆದ ಮಾರ್ಚ್‌ನಲ್ಲಿ ಪ್ರಮುಖ ಕಾರುಗಳ ಹೆಚ್ಚಳ ಮಾಡಿದ ನಂತರ ಇದೀಗ ಮತ್ತೆ ಬೆಲೆ ಹೆಚ್ಚಳಕ್ಕೆ ಸಿದ್ದವಾಗಿದ್ದು, ಮಾಹಿತಿಗಳ ಪ್ರಕಾರ ಇನೋವಾ ಕ್ರಿಸ್ಟಾ ಬೆಲೆಯಲ್ಲಿ ಶೇ.2 ರಷ್ಟು ಹೆಚ್ಚಳ ಮಾಡಬಹುದು ಎನ್ನಲಾಗಿದೆ.

ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಹೊಸ ದರವು ಅಗಸ್ಟ್ 1ರಿಂದಲೇ ಅನ್ವಯವಾಗಲಿದೆ ಎನ್ನಲಾಗಿದ್ದು, ಹೊಸ ದರ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಿದೆ. ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ.2 ರಷ್ಟು ಬೆಲೆ ಹೆಚ್ಚಳವಾದಲ್ಲಿ ರೂ. 35 ಸಾವಿರದಿಂದ ರೂ. 50 ಸಾವಿರದಷ್ಟು ದುಬಾರಿಯಾಗಲಿದ್ದು, ಇತರೆ ಮಾದರಿಗಳ ಬೆಲೆ ಕೂಡಾ ಹೆಚ್ಚಳವಾಗುವ ನೀರಿಕ್ಷೆಯಿದೆ.

ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಟೊಯೊಟಾ ತನ್ನ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಇತ್ತೀಚೆಗೆ ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸಿತ್ತು. ಈ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹಲವಾರು ಬದಲಾವಣೆಗಳೊಂದಿಗೆ ಜಾಗತಿಕವಾಗಿ ಬಿಡುಗಡೆಯಾಗಲಿದೆ. ಈ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ.

ಜುಲೈ ತಿಂಗಳಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಕಳೆದ ತಿಂಗಳಿನ ಟೊಯೊಟಾ ಕಂಪನಿಯು ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಕರೋನಾ ಆರ್ಭಟ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಟೊಯೊಟಾ ಕಾರುಗಳ ಮಾರಾಟದಲ್ಲಿ ಮತ್ತಷ್ಟು ಹೆಚ್ಚಾಗಬಹುದು. ಇನ್ನು ಟೊಯೊಟಾ ಇನೋವಾ ಮತ್ತು ಫಾರ್ಚೂನರ್ ಟೊಯೊಟಾ ಕಂಪನಿಗೆ ಮಾರಾಟದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Registers Over 13,000 Units In Domestic Sales. Read In Kannada.
Story first published: Saturday, July 31, 2021, 19:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X