ಕೋವಿಡ್‌ನಿಂದ ಜೀವ ಕಳೆದುಕೊಂಡ ಉದ್ಯೋಗಿಗಳ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಟೊಯೊಟಾ

ಕೋವಿಡ್ 2ನೇ ಅಲೆ ಹೊಡೆತಕ್ಕೆ ದೇಶಾದ್ಯಂತ ದಿನಂಪ್ರತಿ ಸಾವಿರಾರು ಜನ ಪ್ರಾಣಕಳೆದುಕೊಳ್ಳುತ್ತಿದ್ದು, ದುಡಿಯುವ ಮನೆ ಯಜಮಾನನ್ನು ಕಳೆದಕೊಂಡಿರುವ ಅದೆಷ್ಟೊ ಕುಟುಂಬಗಳು ಅಕ್ಷರಶಃ ಅನಾಥವಾಗಿವೆ. ಹೀಗಿರುವಾಗ ಟೊಯೊಟಾ ಕಿರ್ಲೊಸ್ಕರ್ ಕಂಪನಿಯು ತನ್ನ ಉದ್ಯೋಗಿಗಳ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದೆ.

ಕೋವಿಡ್‌ನಿಂದ ಜೀವ ಕಳೆದುಕೊಂಡ ಉದ್ಯೋಗಿಗಳ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಟೊಯೊಟಾ

ಜೀವ ಮತ್ತು ಜೀವನ ಭದ್ರತೆ ಪ್ರತಿಯೊಬ್ಬರಿಗೂ ಮುಖ್ಯವಾಗಿರುವಾಗ ದುಡಿವ ಸ್ಥಳಗಳಲ್ಲಿ ವೈರಸ್ ಹರಡುವಿಕೆಯಿಂದ ಅದೆಷ್ಟೋ ಜೀವಗಳು ಬಲಿಯಾಗಿದ್ದು, ಟೊಯೊಟಾ ಕಾರು ಕಂಪನಿಯಲ್ಲಿ ದುಡಿಯುತ್ತಿರುವ ಸಾವಿರಾರು ಉದ್ಯೋಗಿಗಳಿಗೂ ಕೋವಿಡ್ ಹರಡಿಕೊಳ್ಳುತ್ತಿದೆ. ಸಮಯಕ್ಕೆ ಸರಿಯಾದ ಚಿಕಿತ್ಸೆ ಪರಿಣಾಮ ಕೋವಿಡ್‌ನಿಂದಾಗಿ ಬಹುತೇಕ ಉದ್ಯೋಗಿಗಳು ಗುಣಮುಖರಾದರೂ ಇನ್ನು ಕೆಲವು ಉದ್ಯೋಗಿಗಳು ಪ್ರಾಣಕಳೆದುಕೊಂಡಿದ್ದು, ಮನೆ ಯಜಮಾನನ್ನು ಕಳೆದುಕೊಂಡಿರುವ ಕುಟುಂಬಗಳು ಇದೀಗ ಕಣ್ಣೀರಿನಲ್ಲಿ ಕೈತೊಳೆಯುತ್ತಿವೆ.

ಕೋವಿಡ್‌ನಿಂದ ಜೀವ ಕಳೆದುಕೊಂಡ ಉದ್ಯೋಗಿಗಳ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಟೊಯೊಟಾ

ಇದರಿಂದ ಪ್ರಾಣಕಳೆದುಕೊಂಡಿರುವ ಉದ್ಯೋಗಿಗಳ ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿರುವ ಟೊಯೊಟಾ ಕಂಪನಿಯು ಆರ್ಥಿಕ ಸಂಕಷ್ಟದ ನಡುವೆಯೂ ಮೃತ ಉದ್ಯೋಗಿಗಳ ಸಂಬಳವನ್ನು ನಿಲ್ಲಿಸದೆ ಮುಂದಿನ ಮೂರುವರೆ ವರ್ಷಗಳ ಕಾಲ ಅವರ ಕುಟುಂಬಗಳಿಗೆ ನೆರವು ನೀಡಲು ನಿರ್ಧರಿಸಿದೆ.

ಕೋವಿಡ್‌ನಿಂದ ಜೀವ ಕಳೆದುಕೊಂಡ ಉದ್ಯೋಗಿಗಳ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಟೊಯೊಟಾ

ಜೊತೆಗೆ ಸೋಂಕು ತಗುಲಿದ ಉದ್ಯೋಗಿಗಳಿಗೆ 24x7 ವೈದ್ಯಕೀಯ ಸೇವೆಗಳನ್ನು ಘೋಷಣೆ ಮಾಡಿರುವ ಟೊಯೊಟಾ ಕಂಪನಿಯು ಹಾಟ್‌ಲೈನ್‌ ತೆರೆದಿದ್ದು, ಆಂಬ್ಯುಲೆನ್ಸ್ ಸೇವೆಗಳಿಗಾಗಿ ಮತ್ತು ಟರ್ಮ್ ಇನ್ಶುರೆನ್ಸ್ ಸೇವೆಗಳಿಗೆ ನೆರವಾಗುತ್ತಿದೆ.

ಕೋವಿಡ್‌ನಿಂದ ಜೀವ ಕಳೆದುಕೊಂಡ ಉದ್ಯೋಗಿಗಳ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಟೊಯೊಟಾ

ಹಾಗೆಯೇ ಕೋವಿಡ್ -19 ಸೋಂಕು ತಗುಲಿರುವ ನೌಕರರಿಗೆ ಹೋಂ ಕೇರ್ ಕಿಟ್ ಒದಗಿಸಲಾಗಿದ್ದು, ಇದರಲ್ಲಿ ಅಗತ್ಯ ಔಷಧಿಗಳು, ಆಕ್ಸಿಮೀಟರ್, ಥರ್ಮಾಮೀಟರ್, ಮಾಸ್ಕ್ ಮತ್ತು ಸ್ಯಾನಿಟೈಜರ್ ಇರಲಿದ್ದು, ಟೊಯೋಟಾ ಕಿರ್ಲೋಸ್ಕರ್ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆಗಾಗಿ ಲಭ್ಯವಿರುವ ಹಾಸಿಗೆಗಳನ್ನು ಗುರುತಿಸಲು ಮತ್ತು ಅಗತ್ಯವಿರುವ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ಒದಗಿಸಲು ಶ್ರಮಿಸುತ್ತಿದೆ.

ಕೋವಿಡ್‌ನಿಂದ ಜೀವ ಕಳೆದುಕೊಂಡ ಉದ್ಯೋಗಿಗಳ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಟೊಯೊಟಾ

ಇನ್ನು ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕೋವಿಡ್‌ನಿಂದ ಜೀವ ಕಳೆದುಕೊಂಡ ಉದ್ಯೋಗಿಗಳ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಟೊಯೊಟಾ

ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ಕೋವಿಡ್‌ನಿಂದ ಜೀವ ಕಳೆದುಕೊಂಡ ಉದ್ಯೋಗಿಗಳ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಟೊಯೊಟಾ

ವೈರಸ್ ಹರಡುವಿಕೆಯನ್ನು ತಡೆಯಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜ್ ಮತ್ತು ಫೇಸ್-ಶೀಲ್ಡ್‌ಗಳ ಬಳಕೆಯು ಹೆಚ್ಚಿಸಲಾಗುತ್ತಿದ್ದರೂ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿದೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಕೋವಿಡ್‌ನಿಂದ ಜೀವ ಕಳೆದುಕೊಂಡ ಉದ್ಯೋಗಿಗಳ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಟೊಯೊಟಾ

ಹೀಗಾಗಿ ಸರ್ಕಾರದ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಯು ಸಾಧ್ಯವಿರುವ ಕಡೆಗಳಲ್ಲಿ ಸರ್ಕಾರದೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ದೇಶದ ಅತಿ ದೊಡ್ದ ವಾಹನ ಉತ್ಪಾದನಾ ಕಂಪನಿಯಾಗಿರುವ ಟೊಯೊಟಾ ಕಂಪನಿಯು ಕೂಡಾ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಣಾಕಾಸು ನೆರವು ನೀಡಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Kirloskar Introduced Corona Relief Measures For Its Employees. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X