Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- News
ಅಭಿವೃದ್ಧಿ ಯೋಜನೆಗಳು; ಪರಿಸರವಾದಿಗಳ ವಿರುದ್ಧ ಜನಾಕ್ರೋಶ
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆಯ ನಂತರ ಟೊಯೊಟಾ ಕಾರು ಮಾರಾಟದಲ್ಲಿ ಭಾರೀ ಹೆಚ್ಚಳ
ಟೊಯೊಟಾ ಕಂಪನಿಯು ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮತ್ತು ಫಾರ್ಚೂನರ್ ಮೂಲಕ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಕಳೆದ ವರ್ಷದ ಜನವರಿಯಲ್ಲಿನ ಕಾರು ಮಾರಾಟಕ್ಕಿಂತ ಈ ವರ್ಷದ ಜನವರಿ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ. 92 ರಷ್ಟು ಬೆಳವಣಿಗೆ ಸಾಧಿಸಿದೆ.

2021ರ ಜನವರಿ ಅವಧಿಯಲ್ಲಿ ಟೊಯೊಟಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟು 11,126 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದು, 2020ರ ಜನವರಿ ತಿಂಗಳಿನಲ್ಲಿ ಕೇವಲ 5,804 ಯುನಿಟ್‌ಗಳನ್ನು ಮಾತ್ರ ಮಾರಾಟಗೊಳಿಸಿತ್ತು. ವರ್ಷದ ಆರಂಂಭದಲ್ಲೇ ಟೊಯೊಟಾ ಕಂಪನಿಯ ವಿವಿಧ ಕಾರು ಮಾದರಿಗಳಿಗೆ ಉತ್ತಮ ಬೇಡಿಕೆ ಸಲ್ಲಿಕೆಯಾಗಿದ್ದು, ಕಳೆದ ವರ್ಷದ ಜನವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತ ಈ ವರ್ಷದ ಜನವರಿ ಅವಧಿಯಲ್ಲಿ ಶೇ. 92 ರಷ್ಟು ಬೆಳವಣಿಗೆ ಸಾಧಿಸಿದೆ.

ಟೊಯೊಟಾ ಕಂಪನಿಯು ವಿವಿಧ ಹೊಸ ಕಾರು ಮಾದರಿಗಳೊಂದಿಗೆ ಪ್ರಯಾಣಿಕ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮಾರುತಿ ಸುಜುಕಿಯೊಂದಿಗೆ ಸಹಭಾಗಿತ್ವ ಯೋಜನೆ ಅಡಿಯಲ್ಲಿ ಮಾರಾಟ ಮಾಡಲಾಗುತ್ತಿರುವ ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಕೂಡಾ ಟೊಯೊಟಾ ಕಂಪನಿಯ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿವೆ.

ದಸರಾ ಮತ್ತು ದೀಪಾವಳಿ ನಂತರ ಹೊಸ ವಾಹನಗಳ ಮಾರಾಟವು ಸಾಮಾನ್ಯವಾಗಿ ತಗ್ಗಿದ್ದರೂ ಕೂಡಾ ವರ್ಷದ ಆರಂಭದಲ್ಲೇ ಟೊಯೊಟಾ ಕಾರು ಮಾರಾಟದಲ್ಲಿ ಸಾಕಷ್ಟು ಹೆಚ್ಚಳ ಕಂಡುಬಂದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಹರಿದುಬರುವ ನೀರಿಕ್ಷೆಯಿದೆ.

ಟೊಯೊಟಾ ಕಂಪನಿಯು ಮಾರುತಿ ಸುಜುಕಿ ಜೊತೆಗಿನ ಸಹಭಾಗಿತ್ವ ಯೋಜನೆ ಅಡಿಯಲ್ಲಿ ಇದುವರೆಗೆ ಸುಮಾರು 50,000 ಯುನಿಟ್ ಮಾರಾಟವನ್ನು ಮಾರಾಟ ಮಾಡಿದ್ದು, ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಗ್ಲಾಂಝಾ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಅರ್ಬನ್ ಕ್ರೂಸರ್ ಕಾರು ಮಾದರಿಯು ಅತ್ಯುತ್ತಮ ಬೇಡಿಕೆಯೊಂದಿಗೆ ಟೊಯೊಟಾ ಕಾರು ಮಾರಾಟದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.

ಇನ್ನುಳಿದಂತೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್, 2021ರ ಫಾರ್ಚೂನರ್, ಯಾರಿಸ್, ಕ್ಯಾಮ್ರಿ ಕಾರುಗಳ ಮಾರಾಟವು ಸಹ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಟೊಯೊಟಾ ಕಾರುಗಳ ಮಾರಾಟದಲ್ಲಿ ದುಬಾರಿ ಬೆಲೆ ನಡುವೆಯೂ ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ಕಾರು ಸಾಕಷ್ಟು ಮುಂಚೂಣಿ ಸಾಧಿಸುತ್ತಿವೆ.
ಕಾರು ಮಾದರಿಗಳು | ಜನವರಿ 2021 | ಜನವರಿ 2020 | ಮಾರಾಟದಲ್ಲಿನ ಬೆಳವಣಿಗೆ | |
1 | ಇನೋವಾ ಕ್ರಿಸ್ಟಾ | 3,939 | 2,575 | 53 |
2 | ಅರ್ಬನ್ ಕ್ರೂಸರ್ | 3,005 | - | - |
3 | ಗ್ಲಾಂಝಾ | 2,556 | 2,191 | 17 |
4 | ಫಾರ್ಚೂನರ್ | 1,169 | 228 | 413 |
5 | ಯಾರಿಸ್ | 412 | 725 | -43 |
6 | ಕ್ಯಾಮ್ರಿ | 45 | 85 | -47 |
7 | ವೆಲ್‌ಫೈರ್ | 0 | 0 | - |

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಹಲವಾರು ಹೊಸ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.26 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.33 ಲಕ್ಷ ಬೆಲೆ ಪಡೆದುಕೊಂಡಿದೆ.

ಬಿಎಸ್-6 ಎಮಿಷನ್ ಜಾರಿ ನಂತರ ಪರಿಚಯಿಸಲಾದ ಎಂಜಿನ್ ಮಾದರಿಯೇ ಇದೀಗ ಫೇಸ್‌ಲಿಫ್ಟ್ ಮಾದರಿಯಲ್ಲಿ ಜೋಡಿಸಲಾಗಿದ್ದು, ಇನೋವಾ ಕ್ರಿಸ್ಟಾ ಕಾರಿನಲ್ಲಿ ಗ್ರಾಹಕರು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಹಾಗೆಯೇ ಟೊಯೊಟಾ ಕಂಪನಿಯು ಕಳೆದ ಕೆಲ ದಿನಗಳ ಹಿಂದಷ್ಟೇ ತನ್ನ ಜನಪ್ರಿಯ ಎಸ್‌ಯುವಿ ಕಾರು ಮಾದರಿಯಾದ ಫಾರ್ಚೂನರ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಸಹ ಬಿಡುಗಡೆಗೊಳಿಸಿದ್ದು, ಹೊಸ ಕಾರು ಬಿಡುಗಡೆಯಾದ ಮೊದಲ ತಿಂಗಳ ಅವಧಿಯಲ್ಲೇ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.

ಫಾರ್ಚೂನರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸ್ಟ್ಯಾಂಡರ್ಡ್ ಮತ್ತು ಲೆಜೆಂಡರ್ ಎನ್ನುವ ಎರಡು ಆವೃತ್ತಿಗಳೊಂದಿಗೆ ಬಿಡುಗಡೆಗಡೆಗೊಂಡಿದ್ದು, ಹೊಸ ಕಾರು ದುಬಾರಿ ಬೆಲೆ ನಡುವೆಯೂ ಇದುವರೆಗೆ ಬರೋಬ್ಬರಿ 5 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಬೆಲೆಯು ದೆಹಲಿಯ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.29.98 ಲಕ್ಷಗಳಿಂದ ಟಾಪ್ ಎಂಡ್ ಮಾದರಿಯು ರೂ.37.48 ಲಕ್ಷಗಳಾಗಿದ್ದು, ಲೆಜೆಂಡರ್ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ವಿನೂತನ ಫೀಚರ್ಸ್‌ಗಳೊಂದಿಗೆ ಹೈ ಎಂಡ್ ಮಾದರಿಯಾಗಿ ಮಾರಾಟವಾಗುತ್ತಿದೆ.