ಹೊಸ ಅಪ್‌ಡೇಟ್ ಪಡೆದುಕೊಂಡ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್
ಜಪಾನ್ ಮೂಲದ ಟೊಯೊಟಾ ಕಂಪನಿಯು ತನ್ನ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು ಜಾಗತಿಕವಾಗಿ ಅನಾವರಣಗೊಳಿಸಲಾಗಿದೆ. ಈ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಅನೇಕ ವರ್ಷಗಳಲ್ಲಿ ಇದು ಅತಿದೊಡ್ಡ ನವೀಕರಣವಾಗಿದೆ. ಇದರೊಂದಿಗೆ ಟೊಯೊಟಾ ಕಂಪನಿಯು ಮೊಡೆಲಿಸ್ಟಾ ಬ್ಯಾಂಡ್‌ವ್ಯಾಗನ್ ನವೀಕರಣಗಳನ್ನು ಪರಿಚಯಿಸುತ್ತಿದೆ. 2022ರ ಲ್ಯಾಂಡ್ ಕ್ರೂಸರ್ ಹಲವಾರು ನವೀಕರಣಗಳೊಂದಿಗೆ ಮೊಡೆಲಿಸ್ಟಾ ಅಪ್ಡೇಟ್ ಪಡೆಯುವುದರಿಂದ ಇದು ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ಹೊಂದಿರುತ್ತದೆ. ಈ ಲ್ಯಾಂಡ್ ಕ್ರೂಸರ್ ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಜನಪ್ರಿಯ ಮತ್ತು ಐಕಾನಿಕ್ ಎಸ್‍ಯುವಿಗಳಲ್ಲಿ ಒಂದಾಗಿದೆ. ಲ್ಯಾಂಡ್ ಕ್ರೂಸರ್ ಈ ಹಿಂದೆ ಭಾರತದಲ್ಲಿ ಮಾರಾಟದಲ್ಲಿತ್ತು.

ಟೊಯೊಟಾ ಕಂಪನಿಯು ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951 ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿತು. ಇದುವರೆಗೂ 170 ದೇಶಗಳಲ್ಲಿ ಲ್ಯಾಂಡ್ ಕ್ರೂಸರ್ ಮಾದರಿಯ 1.04 ಕೋಟಿ ಯೂನಿಟ್‌ಗಳನ್ನು ಟೊಯೊಟಾ ಕಪನಿಯು ಮಾರಾಟಗೊಳಿಸಿದೆ.

2022ರ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯು ಹೊಸ ಟಿಎನ್‌ಜಿಎ (ಟೊಯೋಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್) ಪ್ಲಾಟ್‌ಫಾರ್ಮ್ ಅನ್ನು ಆಧರಿಸಿರುವ ಬ್ರ್ಯಾಂಡ್‌ನ ಮೊದಲ ಬಾಡಿ-ಆನ್-ಫ್ರೇಮ್ ಮಾದರಿ ಇದಾಗಿದೆ.

2022ರ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ. ಇದು 3.5 ಎಲ್ ವಿ6 ಟ್ವಿನ್-ಟರ್ಬೊ ಪೆಟ್ರೋಲ್ ಮತ್ತು 3.3 ಎಲ್ ವಿ6 ಟ್ವಿನ್-ಟರ್ಬೊ ಡೀಸೆಲ್ ಎಂಜಿನ್ ಗಳ ಆಯ್ಕೆಗಳಾಗಿವೆ.

ಇದರಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 3.3-ಲೀಟರ್ ಟ್ವಿನ್-ಟರ್ಬೊ ವಿ6 ಂಜಿನ್ 304 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಗಳೊಂದಿಗೆ 10-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಇನ್ನು ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯಲ್ಲಿ ಕೆಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ ಈ ಎಸ್‍ಯುವಿಯಲ್ಲಿ ಗ್ರಿಲ್, ಹೊಸ ಲೈಟಿಂಗ್ ಸೆಟಪ್, ಪರಿಷ್ಕೃತ ಟೈಲ್‌ಗೇಟ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್‌ಗಳನ್ನು ಕೂಡ ಹೊಂದಿದೆ.

ಹೊಸ ಟೊಯೊಟಾ ಎಸ್‍ಯುವಿಯ ಇಂಟಿರಿಯರ್ ನಲ್ಲಿ ದೊಡ್ಡ ಟ್ಯಾಬ್ಲೆಟ್ ಶೈಲಿಯ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಹೊಸ ಡ್ಯಾಶ್‌ಬೋರ್ಡ್ ವಿನ್ಯಾಸವನ್ನು ಪಡೆದುಕೊಂಡಿದೆ. ಪ್ರಸ್ತುತ ಮಾದರಿಯಂತಲ್ಲದೆ 4ಹೈ ಮತ್ತು 4ಲೋ ಮೋಡ್‌ಗಳನ್ನು ಹೊಂದಿರುವ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಕೂಡ ಹೊಂದಿದೆ.

ಇನ್ನು ಫಿಸಿಕಲ್ ಡಯಲ್‌ಗಳನ್ನು ಹೊಂದಿರುವ ಗೇಜ್ ಕ್ಲಸ್ಟರ್ ಮತ್ತು ಇನ್ಫೋ ಡಿಸ್ ಪ್ಲೇ, ಹೀಟಡ್ ಸೀಟುಗಳು, ಜೆಬಿಎಲ್ ಆಡಿಯೋ, ಟೊಯೊಟಾ ಸೇಫ್ಟಿ ಸೆನ್ಸ್ ಪ್ಯಾಕೇಜ್ ಮತ್ತು ಇತರ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಕೂಡ ಒಳಗೊಂಡಿವೆ.

ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ವಿಶ್ವದ ಮೊದಲ ಎಲೆಕ್ಟ್ರಾನಿಕ್ ಕೈನೆಟಿಕ್ ಡೈನಾಮಿಕ್ ಸಸ್ಪೆಂಕ್ಷನ್ ಸಿಸ್ಟಂ (ಇ-ಕೆಡಿಎಸ್ಎಸ್) ಅನ್ನು ಒಳಗೊಂಡಿದೆ. ಮಲ್ಟಿ-ಟೆರೈನ್ ಮಾನಿಟರ್ ಅನ್ನು ಒಳಗೊಂಡಿರುವ ಬ್ರ್ಯಾಂಡ್‌ನ ಮೊದಲ ಮಾದರಿಯಾಗಿದೆ.


Click it and Unblock the Notifications