Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಟೊಯೊಟಾ ಹಿಲಕ್ಸ್ ಪಿಕ್ಅಪ್ ಟ್ರಕ್ ಬಿಡುಗಡೆ ಮಾಹಿತಿ ಬಹಿರಂಗ
ಟೊಯೊಟಾ ಇಂಡಿಯಾ ಕಂಪನಿಯು ತನ್ನ ಐಷಾರಾಮಿ ಫೀಚರ್ಸ್‌ವುಳ್ಳ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್ ಟ್ರಕ್ ಮಾದರಿಯನ್ನು ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದ್ದು, ಹೊಸ ವಾಹನ ಮಾದರಿಯನ್ನು ಮೊದಲ ಬಾರಿಗೆ ಭಾರತದಲ್ಲೂ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ನಡುವಿನ ಸ್ಥಾನ ಪಡೆದಿರುವ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯು ಆಫ್-ರೋಡ್ ಕೌಶಲ್ಯ ಪ್ರದರ್ಶನದಲ್ಲಿ ಮುಂಚೂಣಿಯಲ್ಲಿದ್ದು, ಭಾರತದಲ್ಲೂ ಕೂಡಾ ಇದೀಗ ವಿವಿಧ ಮಾದರಿಯ ಲೈಫ್‌ಸ್ಪೈಲ್ ವಾಹನಗಳ ಬೇಡಿಕೆ ಹೆಚ್ಚುತ್ತಿರುವುದರಿಂದ ಟೊಯೊಟಾ ಕಂಪನಿಯು ಹೊಸ ಪಿಕ್ಅಪ್ ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ಇದಕ್ಕೆ ಪೂರಕವಾಗಿ ಹೊಸ ಪಿಕ್‌ಅಪ್ ಮಾದರಿಗಳ ಕೆಲವು ಯುನಿಟ್‌ಗಳನ್ನು ಆಮದು ಮಾಡಿಕೊಂಡಿರುವ ಟೊಯೊಟಾ ಕಂಪನಿಯು ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಸಿದ್ದತೆ ನಡೆಸುತ್ತಿದ್ದು, ಹೊಸ ವಾಹನವು ಭಾರತದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಟೊಯೊಟಾ ಕಂಪನಿಯು ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್ ಮಾದರಿಗೆ ಪೈಪೋಟಿಯಾಗಿ ಈ ಹೊಸ ವಾಹನವನ್ನು ಬಿಡುಗಡೆ ಮಾಡುತ್ತಿದ್ದು, ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ಕಾರುಗಳ ಮಧ್ಯದ ಸ್ಥಾನದಲ್ಲಿರುವ ಹಿಲಕ್ಸ್ ಪಿಕ್ಅಪ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹಿಲಕ್ಸ್ ವಾಹನ ಮಾದರಿಯು ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಪ್ರಮುಖ ಎರಡು ಡೀಸೆಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿವೆ.

ಮಾಹಿತಿಗಳ ಪ್ರಕಾರ, ಹೊಸ ಪಿಕ್ಅಪ್ ವಾಹನದಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 2.4-ಲೀಟರ್ ಡೀಸೆಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದ್ದು, ಕಡಿಮೆ ಎಂಜಿನ್ ವೇಗದಲ್ಲೂ ಅತಿಹೆಚ್ಚು ಟಾರ್ಕ್ ಉತ್ಪಾದನಾ ಗುಣಹೊಂದಿದೆ.

2.8-ಲೀಟರ್ ಡೀಸೆಲ್ ಮಾದರಿಯು 500-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಇದು ಲೋಡಿಂಗ್ ವೇಳೆಯೂ ಅತಿ ಸುಲಭವಾಗಿ ಮುನ್ನುಗ್ಗುವ ಶಕ್ತಿ ಹೊಂದುವ ಮೂಲಕ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಬಲಶಾಲಿ ವಾಹನ ಮಾದರಿಯಾಗಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಜೊತೆಗೆ ಹೊಸ ಹಿಲಕ್ಸ್ ಪಿಕ್‌ಅಪ್ ವಾಹನ ಉತ್ತಮವಾದ ಒಳಾಂಗಣದೊಂದಿಗೆ ಒಟ್ಟು 5,285-ಎಂಎಂ ಉದ್ದ ಹೊಂದಿದ್ದು, 3,085-ಎಂಎಂ ವೀಲ್ಹ್ ಬೆಸ್‌ನೊಂದಿಗೆ 4x4 ಆಲ್‌ವೀಲ್ಹ್ ಡ್ರೈವ್ ಟೆಕ್ನಾಲಜಿಯೊಂದಿಗೆ ಲೋಡಿಂಗ್ ಸಾಮಾರ್ಥ್ಯವು ಕೂಡಾ ಆಕರ್ಷಕವಾಗಿದೆ.

ಬಿಡುಗಡೆ ಮತ್ತು ಬೆಲೆ(ಅಂದಾಜು)
ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ವೆರಿಯೆಂಟ್‌ಗಳೊಂದಿಗೆ ಹಿಲುಕ್ಸ್ ಮಾದರಿಯು ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಆರಂಭಿಕವಾಗಿ ರೂ. 18 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 40 ಲಕ್ಷ ಬೆಲೆಯೊಂದಿಗೆ ಮಾರಾಟವಾಗುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಆದರೆ ಭಾರತದಲ್ಲಿ ಬಿಡುಗಡೆಯಾಗಲಿರುವ ಹಿಲುಕ್ಸ್ ಮಾದರಿಯು ಎಂಜಿನ್ ಆಯ್ಕೆಗೆ ಅನುಗುಣವಾಗಿ ರೂ. 18 ಲಕ್ಷದಿಂದ ರೂ. 25 ಲಕ್ಷ ಬೆಲೆ ಅಂತರದಲ್ಲಿನ ಕೆಲವೇ ವೆರಿಯೆಂಟ್‌ಗಳೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.