ಮಾರುತಿ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಟೊಯೊಟಾ

ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ಭಾರತೀಯ ಮಾರುಕಟ್ಟೆಯಲ್ಲಿ ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಎಂಬ ಎರಡು ರಿಬ್ಯಾಡ್ಜ್ ಮಾದರಿಗಳನ್ನು ಬಿಡುಗಡೆಗೊಳಿಸಿದೆ. ಈ ಎರಡು ಮಾದರಿಗಳು ಕೂಡ ಮಾರುತಿ ಸುಜುಕಿ ಕಾರುಗಳ ರಿಬ್ಯಾಡ್ಜ್ ಮಾದರಿಗಳಾಗಿವೆ.

ಮಾರುತಿ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಟೊಯೊಟಾ

ಟೊಯೊಟಾ ಕಿರ್ಲೊಸ್ಕರ್ ಮೋಟರ್ ಹಾಗೂ ಮಾರುತಿ ಸುಜುಕಿ ಕಂಪನಿಗಳು 2017ರಲ್ಲಿ ಜಂಟಿ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದದ ಪ್ರಕಾರ ಟೊಯೊಟಾ ಕಂಪನಿ ಹಾಗೂ ಮಾರುತಿ ಸುಜುಕಿ ಕಂಪನಿಗಳು ತಮ್ಮ ಕಾರುಗಳನ್ನು ಒಬ್ಬರಿಗೊಬ್ಬರು ತಮ್ಮ ಕಂಪನಿಗಳ ಬ್ಯಾಡ್ಜ್ ಅಡಿ ತಯಾರಿಸಿ ಬಿಡುಗಡೆಗೊಳಿಸಿ, ಮಾರಾಟ ಮಾಡಬಹುದು. ಅದರಂತೆ ಟೊಯೊಟಾ ಮೂರನೇ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಮಾರುತಿ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಟೊಯೊಟಾ

ಭಾರತೀಯ ಮಾರುಕಟ್ಟೆಯಲ್ಲಿ ಎಂಪಿವಿಗಳಿಗೆ ಬೇಡಿಕೆ ಹೆಚ್ಚಳವಾಗುವುದಕ್ಕೆ ಎರ್ಟಿಗಾ ಎಂಪಿವಿಯ ರಿಬ್ಯಾಡ್ ಮಾದರಿಯನ್ನು ಬಿಡುಗಡೆಗೊಳಿಸಲು ಮುಂದಾಗಿದೆ. ಈ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯು ಈ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು. ಹೊಸ ಎರ್ಟಿಗಾ ಎಂಪಿವಿಯ ರಿಬ್ಯಾಡ್ ಮಾದರಿಯ ಪ್ರಮುಖ ವಿಶೇಷತೆಗಳು ಇಲ್ಲಿವೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರುತಿ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಟೊಯೊಟಾ

ಪ್ಲಾಟ್‌ಫಾರ್ಮ್

ಮಾರುತಿ ಸುಜುಕಿಯಿಂದ ಈ ಕಾರನ್ನು ಟೊಯೊಟಾ ಕಿರ್ಲೋಸ್ಕರ್ ಮೋಟರ್‌ಗೆ ಸರಬರಾಜು ಮಾಡಲಾಗುವುದರಿಂದ, ಇದು ಮಾರುತಿ ಎರ್ಟಿಗಾ ಕಾರಿನಂತೆಯೇ ಅದೇ ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸರುತ್ತದೆ ಎಂದು ನಿರೀಕ್ಷಿಸುತ್ತೇವೆ.

ಮಾರುತಿ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಟೊಯೊಟಾ

ವಿನ್ಯಾಸ

ಹೊಸ ರಿಬ್ಯಾಡ್ಜ್ ಕಾರಿನ ಒಟ್ಟಾರೆ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ. ಆದರೆ ಟೊಯೊಟಾ ಆವೃತ್ತಿಯು ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್ ಮತ್ತು ಸೀಟುಗಳಾಗಾಗಿ ಹೊಸ ಫ್ಯಾಬ್ರಿಕ್ ವಿನ್ಯಾಸವನ್ನು ಒಳಗೊಂಡಿರಬಹುದು, ಜೊತೆಗೆ ಟೊಯೊಟಾ ಬ್ಯಾಡ್ಜ್ ಅನ್ನು ಒಳಗೊಂಡಿರುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರುತಿ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಟೊಯೊಟಾ

ಎಂಜಿನ್

ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯಲ್ಲಿರುವ ಅದೇ ಎಂಜಿನ್ ಅನ್ನು ಹೊಂದಿರುತ್ತದೆ. ಇದು 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಆಗಿದೆ, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಮಾರುತಿ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಟೊಯೊಟಾ

ಫೀಚರ್ಸ್

ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿರುವ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, 15 ಇಂಚಿನ ವ್ಹೀಲ್ ಗಳು, ಆಂಡ್ರಾಯ್ಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ, ಪುಶ್-ಬಟನ್ ಸ್ಟಾರ್ಟ್-ಸ್ಟಾಪ್, ಹಿಂಭಾಗದ ಎಸಿಯೊಂದಿಗೆ ಆಟೋ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಕಪ್ ಹೋಲ್ಡರ್ಸ್ ಮತ್ತು ಸ್ಪೀಕರ್ ಆಡಿಯೊ ಸಿಸ್ಟಂ ಅನ್ನು ಒಳಗೊಂಡಿರುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮಾರುತಿ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಟೊಯೊಟಾ

ಸುರಕ್ಷತಾ ಫೀಚರ್ಸ್

ಇನ್ನು ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯಲ್ಲಿರುವ ಎಂಪಿವಿ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ಇಎಸ್‌ಪಿ, ಹಿಲ್ ಹೋಲ್ಡ್ ಕಂಟ್ರೋಲ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಡ್ಯುಯಲ್ ಫ್ರಂಟಲ್ ಏರ್‌ಬ್ಯಾಗ್ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳೊಂದಿಗೆ ಎಬಿಎಸ್ ಅನ್ನು ಕೂಡ ರಿಬ್ಯಾಡ್ಜ್ ಮಾದರಿಯಲ್ಲಿ ಇರುತ್ತದೆ,

ಮಾರುತಿ ಎರ್ಟಿಗಾ ಎಂಪಿವಿಯ ರಿಬ್ಯಾಡ್ಜ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಟೊಯೊಟಾ

ಬೆಲೆ

ಪ್ರಸ್ತುತ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.7.59 ಲಕ್ಷಗಳಾಗಿರುತ್ತದೆ. ಇದರ ರಿಬ್ಯಾಡ್ಜ್ ಟೊಯೊಟಾ ಮಾದರಿಯ ಬೆಲೆಯು ಸರಿಸುಮಾರು ಇದೇ ರೀತಿಯಲ್ಲಿರಬಹುದು.

Article Published On: Thursday, May 27, 2021, 21:42 [IST]
English summary
Toyota-badged Ertiga To Be Launched This Year. Read In Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+