ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ಟೊಯೊಟಾ ಕಂಪನಿಯು ಭಾರತದಲ್ಲಿ ಸರಣಿ ಕಾರುಗಳ ಮಾರಾಟವನ್ನು ಹೆಚ್ಚಿಸುವತ್ತ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಯುರೋಪ್ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ರಾವ್4 ಹೈಬ್ರಿಡ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲೂ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ಪ್ರಸ್ತುತ ಕಾರು ಮಾರುಕಟ್ಟೆಯಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳಲ್ಲಿ ಹೈಬ್ರಿಡ್ ಪವರ್‌ಟ್ರೈನ್ ಕಾರುಗಳ ಮಾರಾಟವು ಹೆಚ್ಚುತ್ತಿದ್ದು, ಟೊಯೊಟಾ ಕಂಪನಿಯು ಜಾಗತಿಕ ಮಾರುಕಟ್ಟೆಗಳಲ್ಲಿ ಭಾರೀ ಬೇಡಿಕೆ ಹೊಂದಿರುವ ರಾವ್4 ಎಸ್‌ಯುವಿ ಮಾದರಿಯನ್ನು ಭಾರತದಲ್ಲೂ ಬಿಡುಗಡೆಗಾಗಿ ಮಾರುಕಟ್ಟೆ ಅಧ್ಯಯನ ನಡೆಸಿದೆ. ಮಾರುಕಟ್ಟೆ ಅಧ್ಯಯನದಲ್ಲಿ ಹೈಬ್ರಿಡ್ ಕಾರು ಮಾದರಿಗಳಿಗೆ ಉತ್ತಮ ಪ್ರಕ್ರಿಯೆ ವ್ಯಕ್ತವಾಗಿದ್ದು, ಹೊಸ ಆಮದು ನೀತಿ ಅಡಿಯಲ್ಲಿ ರಾವ್4 ಕಾರು ಮಾದರಿಯನ್ನು ಮಾರಾಟ ಮಾಡಲು ನಿರ್ಧರಿಸಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ಹೊಸ ಕಾರು ಬಿಡುಗಡೆಗಾಗಿ ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಸಹ ಕೈಗೊಂಡಿರುವ ಟೊಯೊಟಾ ಕಂಪನಿಯು ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಆಮದು ನೀತಿ ಅಡಿಯಲ್ಲಿ ರಾವ್4 ಬಿಡುಗಡೆ ಮಾಡುತ್ತಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

2009ರಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದ ಹೊಸ ಆಮದು ನೀತಿಯು ವಿದೇಶಿ ಕಾರು ಉತ್ಪಾದನಾ ಕಂಪನಿಗಳಿಗೆ ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಆಮದು ನೀತಿ ಅಡಿಯಲ್ಲಿ ವಾರ್ಷಿಕವಾಗಿ 2,500 ಕಾರುಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ದೇಶಿಯ ಮಾರುಕಟ್ಟೆಗೆ ಆಮದು ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ಟೊಯೊಟಾ ಕೂಡಾ ಹೊಸ ಆಮದು ನೀತಿ ಅಡಿ ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಕೆಲವು ಐಷಾರಾಮಿ ಕಾರುಗಳನ್ನು ಹೊಸ ಆಮದು ನೀತಿ ಅಡಿಯಲ್ಲಿ ಮಾರಾಟ ಮಾಡುತ್ತಿದ್ದು, ವೆಲ್‌ಫೈರ್ ಎಂಪಿವಿ ನಂತರ ಇದೀಗ ರಾವ್4 ಬಿಡುಗಡೆಯ ಸಿದ್ದತೆಯಲ್ಲಿದೆ. ಜಾಗತಿಕವಾಗಿ ಮಾರಾಟಗೊಳ್ಳುವ ಟಾಪ್10 ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ರಾವ್4 ಹೈಬ್ರಿಡ್ ಎಸ್‌ಯುವಿ ಮಾದರಿಯು ಐಷಾರಾಮಿ ಫೀಚರ್ಸ್‌ನೊಂದಿಗೆ ಭಾರತದ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ಹೊಸ ರಾವ್4 ಕಾರು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಹೊಸ ಸಂಚಲನಕ್ಕೆ ಕಾರಣವಾಗಲಿದ್ದು, ಹೊಸ ಕಾರನ್ನು ಟೊಯೊಟಾ ಕಂಪನಿಯು ಹೊಚ್ಚ ಹೊಸ ಟಿಎನ್‌ಜಿಎ ಪ್ಲ್ಯಾಟ್‌ಫಾರ್ಮ್ ಅಡಿ ನಿರ್ಮಾಣಗೊಳ್ಳುತ್ತಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ರಾವ್4 ಕಾರು ಮಾದರಿಯಲ್ಲಿ ಟೊಯೊಟಾ ಕಂಪನಿಯು 2.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೈಬ್ರಿಡ್ ತಂತ್ರಜ್ಞಾನವನ್ನು ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಇಂಧನ ಕಾರ್ಯಕ್ಷಮತೆಯಲ್ಲೂ ರಾವ್4 ಕಾರು ಗ್ರಾಹಕರ ಗಮನಸೆಳೆಯಲಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ಹೈಬ್ರಿಡ್ ತಂತ್ರಜ್ಞಾನವು ಆಲ್ ವೀಲ್ಹ್ ಡ್ರೈವ್ ಮೋಡ್‌ನೊಂದಿಗೆ ನಾಲ್ಕು ಚಕ್ರಗಳಿಗೂ ಸಮಾನ ಶಕ್ತಿ ಪೂರೈಕೆಯೊಂದಿಗೆ 218-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಕ್ವಿಕ್ ಆಟೋ ಗೇರ್‌ಬಾಕ್ಸ್‌ ಪ್ರೇರಣೆ ಮೂಲಕ ಪರ್ಫಾಮೆನ್ಸ್‌ನಲ್ಲೂ ಸಾಕಷ್ಟು ಬಲಿಷ್ಠತೆ ಹೊಂದಿದೆ.

MOST READ: ದಿನೇ ದಿನೇ ಜನಪ್ರಿಯವಾಗುತ್ತಿರುವ ಆಂಡ್ರಾಯ್ಡ್ ಆಟೋದ ಬಗೆಗಿನ ವಿವರಗಳಿವು

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ಟೊಯೊಟಾ ಕಂಪನಿಯು ಈಗಾಗಲೇ ಸೆಲ್ಫ್ ಚಾರ್ಜಿಂಗ್ ಹೈಬ್ರಿಡ್ ತಂತ್ರಜ್ಞಾನದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಪ್ರಿಯಸ್ ಹೈಬ್ರಿಡ್ ಮಾದರಿಗಿಂತಲೂ ರಾವ್4 ಕಾರು ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ಸದ್ಯ ಜಾಗತಿಕ ಮಾರುಕಟ್ಟೆಯಲ್ಲಿ ಐದನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರಾಟಗೊಳ್ಳುತ್ತಿರುವ ರಾವ್4 ಎಸ್‌ಯುವಿ ಮಾದರಿಯು ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದ್ದು, 4,600-ಎಂಎಂ ಉದ್ದ, 1,855-ಎಂಎಂ ಅಗಲ, 1,685-ಎಂಎಂ ಎತ್ತರ ಮತ್ತು 2,690-ಎಂಎಂ ವೀಲ್ಹ್ ಬೆಸ್ ಹೊಂದಿದೆ.

MOST READ: ಆನ್‌ಲೈನ್‌ ಮೂಲಕವೇ ದೊರೆಯಲಿವೆ ಆರ್‌ಟಿಒ ಕಚೇರಿಯ ಈ 18 ಸೇವೆಗಳು

ಭಾರತದಲ್ಲಿ ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ರಾವ್4 ಎಸ್‌ಯುವಿ

ರಾವ್4 ಎಸ್‌ಯುವಿ ಬೆಲೆ(ಅಂದಾಜು)

ಹೊಸ ರಾವ್4 ಕಾರು ಮಾದರಿಯನ್ನು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳುವುದರಿಂದ ಹೊಸ ಕಾರು ತುಸು ದುಬಾರಿಯಾಗಿರಲಿದ್ದು, ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 49 ಲಕ್ಷದಿಂದ ರೂ. 55 ಲಕ್ಷ ಬೆಲೆ ಹೊಂದಲಿರುವ ಹೊಸ ಕಾರು ಮುಂಬರುವ ಏಪ್ರಿಲ್ ಅಥವಾ ಮೇ ಹೊತ್ತಿಗೆ ಬಿಡುಗಡೆಯಾಗಲಿದೆ.

Article Published On: Wednesday, March 17, 2021, 17:06 [IST]
English summary
Toyota RAV4 Hybrid SUV Spied Testing Again. Read in Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+