ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್4 ಎಸ್‌ಯುವಿ

ಟೊಯೊಟಾ(Toyota) ಕಂಪನಿಯು ಭಾರತದಲ್ಲಿ ತನ್ನ ಸರಣಿ ಕಾರುಗಳ ಮಾರಾಟವನ್ನು ಹೆಚ್ಚಿಸುವತ್ತ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಯುರೋಪ್ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ರಾವ್4(RAV4) ಹೈಬ್ರಿಡ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲೂ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಪ್ರಸ್ತುತ ಕಾರು ಮಾರುಕಟ್ಟೆಯಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳಲ್ಲಿ ಹೈಬ್ರಿಡ್ ಪವರ್‌ಟ್ರೈನ್ ಕಾರುಗಳ ಮಾರಾಟವು ಹೆಚ್ಚುತ್ತಿದ್ದು, ಟೊಯೊಟಾ ಕಂಪನಿಯು ಜಾಗತಿಕ ಮಾರುಕಟ್ಟೆಗಳಲ್ಲಿ ಭಾರೀ ಬೇಡಿಕೆಯನ್ನು ಹೊಂದಿರುವ ರಾವ್4 ಎಸ್‌ಯುವಿ ಮಾದರಿಯನ್ನು ಭಾರತದಲ್ಲೂ ಬಿಡುಗಡೆಗಾಗಿ ಸಿದ್ದತೆ ನಡೆಸಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಹೊಸ ಹೈಬ್ರಿಡ್ ಕಾರು ಮಾದರಿಗಳಿಗಾಗಿ ಟೊಯೊಟಾ ಕಂಪನಿಯು ವಿವಿಧ ಹಂತದ ಮಾರುಕಟ್ಟೆ ಅಧ್ಯಯನ ನಡೆಸಿದ್ದು, ಹೈಬ್ರಿಡ್ ಕಾರು ಮಾದರಿಗಳಿಗೆ ಉತ್ತಮ ಪ್ರಕ್ರಿಯೆ ವ್ಯಕ್ತವಾಗಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಹೀಗಾಗಿ ಟೊಯೊಟಾ ಕಂಪನಿಯು ರಾವ್4 ಇನ್ನು ಕೆಲವು ಕಾರು ಮಾದರಿಗಳನ್ನು ಹೊಸ ಆಮದು ನೀತಿ ಅಡಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಭಾರತೀಯ ರಸ್ತೆಗಳಲ್ಲಿ ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

2009ರಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಆಮದು ನೀತಿಯು ವಿದೇಶಿ ಕಾರು ಉತ್ಪಾದನಾ ಕಂಪನಿಗಳಿಗೆ ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಆಮದು ನೀತಿ ಅಡಿಯಲ್ಲಿ ವಾರ್ಷಿಕವಾಗಿ 2,500 ಕಾರು ಮಾದರಿಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ದೇಶಿಯ ಮಾರುಕಟ್ಟೆಗೆ ಆಮದು ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಇದರಿಂದ ಜಪಾನ್ ಕಾರು ಉತ್ಪಾದನಾ ಕಂಪನಿಯಾಗಿರುವ ಟೊಯೊಟಾ ಕೂಡಾ ಹೊಸ ಆಮದು ನೀತಿ ಅಡಿ ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಕೆಲವು ಐಷಾರಾಮಿ ಕಾರುಗಳನ್ನು ಹೊಸ ಆಮದು ನೀತಿ ಅಡಿಯಲ್ಲಿ ಮಾರಾಟ ಮಾಡುತ್ತಿದ್ದು, ಹೊಸ ಆಮದು ನೀತಿ ಅಡಿ ಈಗಾಗಲೇ ವೆಲ್‌ಫೈರ್ ಎಂಪಿವ ಬಿಡುಗಡೆ ಮಾಡಿದ್ದು, ಇದೀಗ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ರಾವ್4 ಬಿಡುಗಡೆಯ ಸಿದ್ದತೆಯಲ್ಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಜಾಗತಿಕವಾಗಿ ಮಾರಾಟಗೊಳ್ಳುವ ಟಾಪ್ 10 ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ರಾವ್4 ಹೈಬ್ರಿಡ್ ಎಸ್‌ಯುವಿ ಮಾದರಿಯು ಐಷಾರಾಮಿ ಫೀಚರ್ಸ್‌ನೊಂದಿಗೆ ಭಾರತದದ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಹೊಸ ರಾವ್4 ಕಾರು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಹೊಸ ಸಂಚಲನಕ್ಕೆ ಕಾರಣವಾಗಲಿದ್ದು, ಹೊಸ ಕಾರನ್ನು ಟೊಯೊಟಾ ಕಂಪನಿಯು ತನ್ನ ಸುಧಾರಿತ ಟಿಎನ್‌ಜಿಎ ಪ್ಲ್ಯಾಟ್‌ಫಾರ್ಮ್ ಅಡಿ ನಿರ್ಮಾಣಗೊಳಿಸುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ರಾವ್4 ಕಾರು ಮಾದರಿಯಲ್ಲಿ ಟೊಯೊಟಾ ಕಂಪನಿಯು 2.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೈಬ್ರಿಡ್ ತಂತ್ರಜ್ಞಾನವನ್ನು ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಇಂಧನ ಕಾರ್ಯಕ್ಷಮತೆಯಲ್ಲೂ ರಾವ್4 ಕಾರು ಗ್ರಾಹಕರ ಗಮನಸೆಳೆಯಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಹೈಬ್ರಿಡ್ ತಂತ್ರಜ್ಞಾನವು ಆಲ್ ವೀಲ್ಹ್ ಡ್ರೈವ್ ಮೋಡ್‌ನೊಂದಿಗೆ ನಾಲ್ಕು ಚಕ್ರಗಳಿಗೂ ಸಮಾನ ಶಕ್ತಿ ಪೂರೈಕೆಯೊಂದಿಗೆ 218-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಕ್ವಿಕ್ ಆಟೋ ಗೇರ್‌ಬಾಕ್ಸ್‌ ಪ್ರೇರಣೆ ಮೂಲಕ ಪರ್ಫಾಮೆನ್ಸ್‌ನಲ್ಲೂ ಸಾಕಷ್ಟು ಬಲಿಷ್ಠತೆ ಹೊಂದಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಟೊಯೊಟಾ ಕಂಪನಿಯು ಈಗಾಗಲೇ ಸೆಲ್ಫ್ ಚಾರ್ಜಿಂಗ್ ಹೈಬ್ರಿಡ್ ತಂತ್ರಜ್ಞಾನದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಪ್ರಿಯಸ್ ಹೈಬ್ರಿಡ್ ಮಾದರಿಗಿಂತಲೂ ರಾವ್4 ಕಾರು ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಸದ್ಯ ಜಾಗತಿಕ ಮಾರುಕಟ್ಟೆಯಲ್ಲಿ ಐದನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರಾಟಗೊಳ್ಳುತ್ತಿರುವ ರಾವ್4 ಎಸ್‌ಯುವಿ ಮಾದರಿಯು ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದ್ದು, 4,600-ಎಂಎಂ ಉದ್ದ, 1,855-ಎಂಎಂ ಅಗಲ, 1,685-ಎಂಎಂ ಎತ್ತರ ಮತ್ತು 2,690-ಎಂಎಂ ವೀಲ್ಹ್ ಬೆಸ್ ಹೊಂದಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಹೊಸ ರಾವ್4 ಕಾರು ಮಾದರಿಯು ವಿದೇಶಿ ಮಾರುಕಟ್ಟೆಗಳಲ್ಲಿ ವಿವಿಧ ಎಂಜಿನ್ ಆಯ್ಕೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಭಾರತದಲ್ಲಿ ಹೊಸ ಕಾರು ಕೇವಲ ಒಂದೇ ಪೆಟ್ರೋಲ್ ಹೈಬ್ರಿಡ್ ಮಾದರಿಯಲ್ಲಿ ಮಾತ್ರವೇ ಬಿಡುಗಡೆಯಾಗಬಹುದಾಗಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಭಾರತಕ್ಕೆ ರಾವ್4 ಕಾರು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದ ಆಮದುಗೊಳ್ಳುವುದರಿಂದ ಹೊಸ ಕಾರು ತುಸು ದುಬಾರಿಯಾಗಿರಲಿದ್ದು, ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಸುಮಾರು ರೂ. 55 ಲಕ್ಷದಿಂದ ರೂ. 60 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಟೊಯೊಟಾ ಬಹುನೀರಿಕ್ಷಿತ ರಾವ್ 4 ಎಸ್‌ಯುವಿ

ಹೊಸ ಕಾರು ಮುಂಬರುವ ಏಪ್ರಿಲ್ ಅಥವಾ ಮೇ ಹೊತ್ತಿಗೆ ಬಿಡುಗಡೆಯಾಗಬಹುದಾಗಿದ್ದು, ರಾವ್4 ಜೊತೆಗೆ ಟೊಯೊಟಾ ಕಂಪನಿಯು ಮಧ್ಯಮ ಕ್ರಮಾಂಕದ ಲೈಫ್ ಸ್ಟೈಲ್ ಪಿಕ್ ಅಪ್ ಮಾದರಿಯೊಂದನ್ನು ಸಹ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

Most Read Articles

Kannada
Read more on ಟೊಯೊಟಾ toyota
English summary
Toyota rav4 suv spied testing in bangalore
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X