ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಟೊಯೊಟಾ ಕಂಪನಿಯ ರೀಬ್ಯಾಡ್ಜ್ ಆವೃತ್ತಿಯಾದ ಅರ್ಬನ್ ಕ್ರೂಸರ್ ಮಾದರಿಯು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಇದುವರೆಗೆ 15 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಮಾರುತಿ ಸುಜುಕಿ ವಿಟಾರಾ ಬ್ರೆಝಾ ಕಾರಿನ ರೀಬ್ಯಾಡ್ಜ್ ಆವೃತ್ತಿಯಾಗಿರುವ ಟೊಯೊಟಾ ಅರ್ಬನ್ ಕ್ರೂಸರ್ ಮಾದರಿಯು ಮೂಲ ಕಾರು ಮಾದರಿಗಿಂತಲೂ ತುಸು ವಿಭಿನ್ನವಾದ ವಿನ್ಯಾಸಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಹೊಸ ಕಾರಿನಲ್ಲಿ ಇತ್ತೀಚೆಗೆ ಗ್ರಾಹಕರೊಬ್ಬರಿಗೆ ತಾಂತ್ರಿಕ ಸಮಸ್ಯೆ ಎದುರಾಗಿರುವ ಬಗ್ಗೆ ವರದಿಯಾಗಿತ್ತು. ವರದಿ ಆಧರಿಸಿ ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಪರಿಶೀಲನೆ ಮಾಡಿರುವ ಕಂಪನಿಯ ತಾಂತ್ರಿಕ ತಂಡವು ಹೊಸ ಕಾರಿನ ಡ್ರೈವರ್ ಸೈಡ್ ಏರ್‌ಬ್ಯಾಗ್‌ನಲ್ಲಿರುವ ಸಮಸ್ಯೆ ಪತ್ತೆಹಚ್ಚಿದೆ.

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಟೊಯೊಟಾ ಕಂಪನಿಯು ಹೊಸ ಕಾರನ್ನು ಹಿಂಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿಖರವಾದ ಮಾಹಿತಿಯನ್ನು ಬಹಿರಂಗಪಡಿಸಿಲ್ಲವಾದರೂ ಏರ್‌ಬ್ಯಾಗ್ ಸಮಸ್ಯೆ ಉಂಟಾಗಿರುವ ಕುರಿತು ಗ್ರಾಹಕರೇ ಮಾಹಿತಿ ಹಂಚಿಕೊಂಡಿದ್ದು, ಕಂಪನಿಯು ಸಮಸ್ಯೆ ಕಂಡುಬಂದ ಕಾರುಗಳನ್ನು ಹಿಂಪಡೆದು ಉಚಿತವಾಗಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುತ್ತಿದೆ.

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಡ್ರೈವರ್ ಸೈಡ್ ಏರ್‌ಬ್ಯಾಗ್‌ನಲ್ಲಿ ತಾಂತ್ರಿಕ ಸಮಸ್ಯೆಯ ಬಗ್ಗೆ ಗ್ರಾಹಕರೊಬ್ಬರ ದೂರಿನ ಅನ್ವಯ ದೋಷದಿಂದ ಕೂಡಿದ್ದ ಎಲ್ಲಾ ಕಾರು ಮಾದರಿಗಳನ್ನು ಹಂತ-ಹಂತವಾಗಿ ಹಿಂಪಡೆದು ಸಮಸ್ಯೆಯನ್ನು ಬಗೆಹರಿಸುತ್ತಿದ್ದು, ಒಟ್ಟು 9,498 ಯುನಿಟ್ ಕಾರುಗಳಲ್ಲಿ ಈ ತಾಂತ್ರಿಕ ಸಮಸ್ಯೆ ಎದುರಾಗಿರುವ ಮಾಹಿತಿ ಲಭ್ಯವಾಗಿದೆ.

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಟೊಯೊಟಾ ಕಂಪನಿಯ ಆದೇಶ ಅನ್ವಯ ಅಧಿಕೃತ ಡೀಲರ್ಸ್‌ಗಳಲ್ಲಿ ಹಂತ-ಹಂತವಾಗಿ ಏರ್‌ಬ್ಯಾಗ್ ಸಮಸ್ಯೆಯನ್ನು ಬಗೆಹರಿಸುತ್ತಿದ್ದು, ದೋಷದಿಂದ ಕೂಡಿದ್ದ ಡ್ರೈವರ್ ಸೈಡ್ ಏರ್‌ಬ್ಯಾಗ್ ಅನ್ನು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಬದಲಾವಣೆ ಮಾಡಿಕೊಡಲಾಗುತ್ತಿದೆ. ತಾಂತ್ರಿಕ ಸಮಸ್ಯೆ ಕುರಿತಂತೆ ಡೀಲರ್ಸ್‌ಗಳೆ ಮಾಲೀಕರಿಗೆ ಮಾಹಿತಿ ನೀಡಿ ಸಮಸ್ಯೆಯನ್ನು ಬಗೆಹರಿಸಲಾಗುತ್ತಿದ್ದು, ಶೀಘ್ರದಲ್ಲೇ ದೋಷದಿಂದ ಕೂಡಿರುವ ಎಲ್ಲಾ ಯುನಿಟ್‌ಗಳಲ್ಲೂ ಹೊಸ ಏರ್‌ಬ್ಯಾಗ್ ಜೋಡಣೆ ಮಾಡುತ್ತಿದೆ.

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಇನ್ನು ಹೊಸ ಅರ್ಬನ್ ಕ್ರೂಸರ್ ಕಾರು ಮಾದರಿಯು ಮಿಡ್, ಹೈ ಮತ್ತು ಪ್ರೀಮಿಯಂ ಎಂಬ ಮೂರು ರೂಪಾಂತರ ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.40 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.11.30 ಲಕ್ಷ ಬೆಲೆ ಪಡೆದುಕೊಂಡಿದೆ.

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆ ಹೊಂದಿರುವ ಹೊಸ ಅರ್ಬನ್ ಕ್ರೂಸರ್ ಕಾರು ಮಾದರಿಯು ಎರಡು ಸ್ಲಾಟ್ ಹೊಂದಿರುವ ಫ್ರಂಟ್ ಗ್ರಿಲ್, ಎರಡು ತುದಿಗಳಲ್ಲೂ ದಪ್ಪದಾದ ಕ್ರೊಮ್ ಮೂಲಕ ಆವೃತ್ತವಾಗಿದೆ. ಹೆಡ್‌ಲ್ಯಾಂಪ್‌ಗಳು ಗ್ರಿಲ್‌ನ ಎರಡೂ ಬದಿಯಲ್ಲಿವೆ ಮತ್ತು ಎಲ್‌ಇಡಿ ಪ್ರೊಜೆಕ್ಟರ್ ಘಟಕಗಳನ್ನು ಹೊಂದಿದೆ.

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಹಾಗೆಯೇ ಇಂಟಿಗ್ರೇಟೆಡ್ ಟರ್ನ್ ಸಿಗ್ನಲ್‌ಗಳೊಂದಿಗೆ ಸ್ಟೈಲಿಶ್ ಆಗಿರುವ 16-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಹ್ ಮತ್ತು ಬಾಡಿ ಕಲರ್ ಒಳಗೊಂಡಿರುವ ಒಆರ್‌ವಿಎಂಗಳು ಪ್ರಮುಖ ತಾಂತ್ರಿಕ ಅಂಶಗಳಾಗಿವೆ.

MOST READ: ದಿನೇ ದಿನೇ ಜನಪ್ರಿಯವಾಗುತ್ತಿರುವ ಆಂಡ್ರಾಯ್ಡ್ ಆಟೋದ ಬಗೆಗಿನ ವಿವರಗಳಿವು

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಅರ್ಬನ್ ಕ್ರೂಸರ್ ಕಾರಿನಲ್ಲಿ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ಡ್ಯಾಶ್‌ಬೋರ್ಡ್ ಮತ್ತು ಕ್ಯಾಬಿನ್ ವಿನ್ಯಾಸವು ಗಮನಸೆಳೆಯುತ್ತದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೋಲ್‌ನಲ್ಲಿರುವ ದೊಡ್ಡ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಇತರ ಹೆಚ್ಚಿನ ತಾಂತ್ರಿಕ ಅಂಶಗಳನ್ನು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಲ್ಲಿರುವಂತೆಯೆ ಮುಂದುವರಿಸಲಾಗಿದೆ.

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಹೊಸ ಕಾರಿನಲ್ಲಿ ಬಿಎಸ್-6 ಪ್ರೇರಿತ ಕೆ-ಸೀರಿಸ್ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 104-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಪೆಟ್ರೋಲ್ ಎಂಜಿನ್ ಮಾದರಿಯು ಆರಂಭಿಕ ಆವೃತ್ತಿಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

MOST READ: ಆನ್‌ಲೈನ್‌ ಮೂಲಕವೇ ದೊರೆಯಲಿವೆ ಆರ್‌ಟಿಒ ಕಚೇರಿಯ ಈ 18 ಸೇವೆಗಳು

ತಾಂತ್ರಿಕ ದೋಷ: ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಹಿಂಪಡೆದ ಟೊಯೊಟಾ

ಅರ್ಬನ್ ಕ್ರೂಸರ್ 1.5-ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 17.3ಕಿ.ಮೀ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18.76 ಕಿ.ಮೀ ಮೈಲೇಜ್ ನೀಡಲಿದ್ದು, ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದಿಂದಾಗಿ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಉತ್ತಮ ಇಂಧನ ಕಾರ್ಯಕ್ಷಮತೆ ಪಡೆದುಕೊಂಡಿದೆ.

Most Read Articles

Kannada
English summary
Toyota Recalled The Urban Cruiser Compact SUV For A Faulty Driver Side Airbag Module. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X