ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ತನ್ನ 2021ರ ಮಾರ್ಚ್ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ಮಾರಾಟ ವರದಿಯ ಪ್ರಕಾರ, ಟೊಯೊಟಾ ಕಳೆದ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾಡಿದ ಟೊಯೊಟಾ

ಟೊಯೊಟಾ ಕಂಪನಿಯು 2021ರ ಮಾರ್ಚ್ ತಿಂಗಳಿನಲ್ಲಿ 15,001 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ 7,023 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಟೊಯೊಟಾ ಶೇ.114 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ. ಟೊಯೊಟಾ ಕಾರುಗಳು ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿವೆ.

ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾಡಿದ ಟೊಯೊಟಾ

2021ರ ಫೆಬ್ರವರಿ ತಿಂಗಳಿನಲ್ಲಿ ಟೊಯೊಟಾದ 14,075 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಮಾರ್ಚ್ ತಿಂಗಳಿಗೆ ಹೋಲಿಸಿದರೆ 926 ಹೆಚ್ಚಿನ ವಾಹನಗಳನ್ನು ಮಾರಾಟ ಮಾಡಿದ್ದರಿಂದ ತಿಂಗಳಿಗೊಮ್ಮೆ ಮಾರಾಟದಲ್ಲಿ ಶೇ.6.58 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾಡಿದ ಟೊಯೊಟಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ನವೀನ್ ಸೋನಿ ಅವರು ಮಾತನಾಡಿ, ನಾವು ದೇಶೀಯ ಮಾರಾಟದಲ್ಲಿ ಶೇಕಡಾ 73 ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದೇವೆ, ಮಾರಾಟದ ನಾವು ಬೆಳವಣಿಗೆಯ ವೇಗವನ್ನು ಉಳಿಸಿಕೊಳ್ಳಲು ಸಾಧ್ಯವಾಯಿತು.

ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾಡಿದ ಟೊಯೊಟಾ

ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ವಾರ್ಷಿಕ ಮಾರಾಟದಲ್ಲಿ ಶೇ.114 ರಷ್ಟು ಬೆಳವಣಿಗೆಯನ್ನು ಸಾಧಿಸಿದ್ದೇವೆ. ಕಳೆದ ವರ್ಶದ ಹಬ್ಬದ ಸೀಸನ್ ನಲ್ಲಿಯು ಉತ್ತಮವಾಗಿ ಟೊಯೊಟಾ ಕಾರುಗಳು ಮಾರಾಟವಾಗಿವೆ ಎಂದು ಹೇಳಿದರು

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾಡಿದ ಟೊಯೊಟಾ

ಟೊಯೊಟಾ ತನ್ನ ಬಹುನಿರೀಕ್ಷಿತ 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಜನವರಿಯಲ್ಲಿ ಬಿಡುಗಡೆಗೊಳಿಸಿತ್ತು. ಹೊಸ ಫಾರ್ಚೂನರ್ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.

ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾಡಿದ ಟೊಯೊಟಾ

ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿವೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದನ್ನು ಐದು-ಸ್ಪೀಡ್ ಮ್ಯಾನುವಲ್ ಮತ್ತು ಆರು-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾಡಿದ ಟೊಯೊಟಾ

ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದಾಗ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾಡಿದ ಟೊಯೊಟಾ

ವಾಹನ ಉತ್ಪಾದನಾ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದೆ. ಟೊಯೊಟಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಹೊಸ ದರಪಟ್ಟಿಯನ್ನು ಏಪ್ರಿಲ್ 1ರಂದೇ ಬಿಡುಗೆಡೆ ಮಾಡಲಿದೆ.

ಮಾರ್ಚ್ ತಿಂಗಳಿನಲ್ಲಿ 15 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾಡಿದ ಟೊಯೊಟಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ 2021ರ ಮಾರ್ಚ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ ಇತ್ತೀಚೆಗೆ ಬಿಡುಗಡೆಗೊಂಡ ಫಾರ್ಚೂನರ್ ಎಸ್‍ಯುವಿಯು ಮಾರಾಟದಲ್ಲಿ ಉತ್ತಮ ಕೊಡುಗೆಯನ್ನು ನೀಡಿದೆ.

Most Read Articles

Kannada
English summary
Toyota Records Over 15,000 Sales In March 2021. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X