ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಸಬ್-ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗವು ಭಾರತೀಯ ಆಟೋಮೊಬೈಲ್ ಉದ್ಯಮದಲ್ಲಿ ಅತ್ಯಂತ ಹೆಚ್ಚು ಜನಪ್ರಿಯ ವಿಭಾಗಗಳಲ್ಲಿ ಒಂದಾಗಿದೆ. ಟೊಯೊಟಾ ಕಂಪನಿಯು ಈ ವಿಭಾಗದಲ್ಲಿ ಅರ್ಬನ್ ಕ್ರೂಸರ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿ ಮಾದರಿಯನ್ನು ಪರಿಚಯಿಸಿತು.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಟೊಯೊಟಾ ಅರ್ಬನ್ ಕ್ರೂಸರ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿಯು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯ ರಿಬ್ಯಾಡ್ಜ್ ಮಾದರಿಯಾಗಿದೆ. ಈ ಟೊಯೊಟಾ ಅರ್ಬನ್ ಕ್ರೂಸರ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿಯು ತನ್ನದೇ ಆದ ಖ್ಯಾತಿಯನ್ನು ಯಶಸ್ವಿಯಾಗಿ ನಿರ್ಮಿಸಿದೆ ಈ ಟೊಯೊಟಾ ಎಸ್‍ಯುವಿಯು ತಿ ತಿಂಗಳು ಯೋಗ್ಯವಾದ ಮಾರಾಟವನ್ನು ದಾಖಲಿಸುವಲ್ಲಿ ಯಶಸ್ವಿಯಾಗುತ್ತಿದೆ. 2021ರ ಅಕ್ಟೋಬರ್ ತಿಂಗಳಿನಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು ದೇಶದಲ್ಲಿ 2,100 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಟೊಯೊಟಾ ಅರ್ಬನ್ ಕ್ರೂಸರ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿಯು ಟೊಯೊಟಾದ ಮೂರನೇ ಅತಿ ಹೆಚ್ಚು ಮಾರಾಟವಾದ ಮಾದರಿಯಾಗಿದೆ, ಟೊಯೊಟಾ ಗ್ಲಾಂಝಾ ಮತ್ತು ಇನೋವಾ ಕ್ರಿಸ್ಟಾ ಮಾದರಿಗಳ ನಂತರದ ಸ್ಥಾನವನ್ನು ಅರ್ಬನ್ ಕ್ರೂಸರ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿಯು ಪಡೆದುಕೊಂಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಈ ಟೊಯೊಟಾ ಅರ್ಬನ್ ಕ್ರೂಸರ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯ ರಿಬ್ಯಾಡ್ಜ್ ಆವೃತ್ತಿಯಾಗಿದ್ದು, ಮಾರುತಿ ಸುಜುಕಿ ಬ್ರೆಝಾಗಿಂತ ಭಿನ್ನವಾಗಿ ಕಾಣುತ್ತದೆ. ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಟ್ವಿನ್ ಸ್ಲ್ಯಾಟ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದಲ್ಲಿ ಬಂಪರ್ ಕಟ್ಸ್ ಮತ್ತು ಕ್ರೀಸ್‌ಗಳನ್ನು ಆಕರ್ಷಕ ಲುಕ್ ಅನ್ನು ನೀಡಿದೆ,

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಇನ್ನು ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಟ್ವೀಕ್‌ಗಳು ಬ್ರೆಝಾಗಿಂತ ಭಿನ್ನವಾಗಿ ಕಾಣಲು ಸಹಾಯ ಮಾಡುತ್ತದೆ. ಈ ಟೊಯೊಟಾ ಅರ್ಬನ್ ಕ್ರೂಸರ್ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್ ಲ್ಯಾಂಪ್ ಗಳನ್ನು ಹೊಂದಿದೆ. ಇನ್ನು ಈ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಎಲ್ಇಡಿ ಟೈಲ್ ಲ್ಯಾಂಪ್‌ಗಳು, ರೂಫ್ ರೈಲ್, ಎರಡೂ ತುದಿಗಳಲ್ಲಿ ಫಾಕ್ಸ್ ಸ್ಕಿಡ್ ಪ್ಲೇಟ್‌ಗಳು ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಟೊಯೊಟಾ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯ ಇಂಟಿರಿಯರ್ ಆಕರ್ಷಕವಾಗಿದೆ. ಇದರ ಇಂಟಿರಿಯರ್ 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್ಸ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಡ್ಯುಯಲ್ ಟೋನ್ ಇಂಟಿರಿಯರ್ ಮತ್ತು ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಫೀಚರ್ ಗಳನ್ನು ಒಳಗೊಂಡಿದೆ. ಇದರೊಂದಿಗೆ ರೈನ್ ಸೆನ್ಸಿಂಗ್ ವೈಪರ್, ಕೀ ಲೆಸ್ ಎಂಟ್ರಿ ಫೀಚರ್ಸ್ ಅನ್ನು ಹೊಂದಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಈ ಸಬ್-ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಪ್ರಯಾಣಿಕ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಿ, ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಲೋಡ್ ಲಿಮಿಟ್ ಅಲರ್ಟ್, ಓವರ್ ಸ್ಪೀಡ್ ವಾರ್ನಿಂಗ್ ಸಿಸ್ಟಂ ನೀಡಿದೆ.ಈ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯು ಒಟ್ಟು ಒಂಬತ್ತು ಬಣ್ಣಗಳ ಆಯ್ಕೆ(6 ಸಿಂಗಲ್ ಟೋನ್ ಮತ್ತು 3 ಡ್ಯುಯಲ್ ಟೋನ್) ಲಭ್ಯವಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಹೊಸ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್-ಎಸ್‌ಯುವಿಯಲ್ಲಿ ವಿಟಾರಾ ಬ್ರೆಝಾದಲ್ಲಿ ನೀಡಿರುವ ಅದೇ 1.5-ಲೀಟರ್ ಕೆ-ಸೀರೀಸ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮೈಲ್ಡ್-ಹೈಬ್ರಿಡ್ ತಂತ್ರಜ್ಞಾನವನ್ನು ಹೊಂದಿದೆ. ಇದು 104 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ 5-ಮ್ಯಾನುವಲ್ ಜೊತೆಗೆ ನಾಲ್ಕು-ಸ್ಪೀಡ್ ಟಾರ್ಕ್-ಕರ್ನವಾಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೆನ್ನು ನೀಡಲಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಟೊಯೊಟಾ ಅರ್ಬನ್ ಕ್ರೂಸರ್ ಬ್ರ್ಯಾಂಡ್‌ನ ಹೊಸ ಸಣ್ಣ ಗಾತ್ರದ ಎಸ್‍ಯುವಿಯಾಗಿದೆ. ಈ ಹೊಸ ಟೊಯೋಟಾ ಅರ್ಬನ್ ಕ್ರೂಸರ್ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರುವುದರಿಂದ ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಈ ಟೊಯೊಟಾ ಅರ್ಬನ್ ಕ್ರೂಸರ್ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮತ್ತು ಹೊಸ ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಇನ್ನು ಇತ್ತೀಚೆಗೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) 2021ರ ಅಕ್ಟೋಬರ್ ತಿಂಗಳಿನ ಮಾರಾಟದ ವರದಿಯನ್ನು ಬಹಿರಂಗಪಡಿಸಿತ್ತು. ವರದಿಗಳ ಪ್ರಕಾರ, ಕಳೆದ ತಿಂಗಳು ಟೊಯೊಟಾ ಕಂಪನಿಯು 12,440 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಟೊಯೊಟಾ ಕಂಪನಿಯು 12,373 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.1 ರಷ್ಟು ಹೆಚ್ಚಳವಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾದ Toyota Urban Cruiser

ಇನ್ನು ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಒಟ್ಟು 9,284 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.34 ರಷ್ಟು ಮಾಸಿಕ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ. ಮಾಸಿಕ ಕಾರು ಮಾರಾಟದಲ್ಲಿ ಟೊಯೊಟಾ ಕಂಪನಿಯು ಭರ್ಜರಿ ಯಶಸ್ವಿಯನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. 2021ರ ಕ್ಯಾಲೆಂಡರ್ ವರ್ಷದಲ್ಲಿ, ಟೊಯೊಟಾ ಒಟ್ಟು 1,06,993 ಯುನಿಟ್‌ಗಳನ್ನು ಜನವರಿಯಿಂದ ಅಕ್ಟೋಬರ್ 2021 ರ ಅವಧಿಯಲ್ಲಿ ಮಾರಾಟ ಗಳಿಸುವಲ್ಲಿ ಯಶಸ್ವಿಯಾಗಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ 60,116 ಯುನಿಟ್‌ಗಗಳಿಗೆ ಹೋಲಿಸಿದರೆ ಟೊಯೊಟಾ ಕಂಪನಿಯು ಶೇಕಡಾ 78 ರಷ್ಟು ಬೆಳವಣಿಗೆಯನ್ನು ಗಳಿಸಿದೆ.

Most Read Articles

Kannada
Read more on ಟೊಯೊಟಾ toyota
English summary
Toyota sells 2100 units of urban cruiser in october 2021 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X