ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಹೊಸ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ನಿರಂತರವಾಗಿ ಏರಿಳಿತ ಉಂಟಾಗುತ್ತಿದ್ದು, ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಹೊಸ ತಂತ್ರಜ್ಞಾನ ಪ್ರೇರಿತ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ. ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಿಗೂ ಬಿಸಿ ತಟ್ಟಿದ್ದು, ಪ್ರಮುಖ ವಾಹನಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದು ಆಟೋ ಉತ್ಪಾದನಾ ಕಂಪನಿಗಳ ಆದಾಯಕ್ಕೆ ಹೊಡೆತ ನೀಡುತ್ತದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಪ್ರಮುಖ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಂದ ಎಲೆಕ್ಟ್ರಾನಿಕ್ ಚಿಪ್ ಪ ಆಮದು ಪ್ರಮಾಣವನ್ನು ಕಡಿತಗೊಳಿಸುತ್ತಿರುವುದರಿಂದ ದೇಶಗಳಲ್ಲಿನ ಉತ್ಪಾದನಾ ಲಭ್ಯತೆ ಆಧರಿಸಿ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆಯೂ ಹೆಚ್ಚಳವಾಗುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್‌ಗಳಿಲ್ಲದೆ ಪ್ರಮುಖ ಕಾರು ಕಂಪನಿಗಳು ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಪರಿಸ್ಥಿತಿ ಎದುರಿಸುತ್ತಿವೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಜಪಾನ್ ಆಟೋ ಕಂಪನಿ ಟೊಯೊಟಾ ಸಹ ಸೆಮಿಕ್ಟಂಡ್ ಕೊರತೆಯ ಪರಿಣಾಮ ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿರುವ ಕಾರು ಉತ್ಪಾದನಾ ಘಟಕಗಳಲ್ಲಿ ಉತ್ಪಾದನಾ ಪ್ರಮಾಣವನ್ನು ಶೇ.15ರಷ್ಟು ಕಡಿತಗೊಳಿಸಲು ನಿರ್ಧರಿಸಿದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಎಲೆಕ್ಟ್ರಾನಿಕ್ ಚಿಪ್ ಇಲ್ಲದೆ ಕಾರಿನ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳನ್ನು ಜೋಡಿಸಲು ಸಾಧ್ಯವಿಲ್ಲ ಎನ್ನಬಹುದು. ಹೊಸ ಕಾರಿನಲ್ಲಿರುವ ಡಿಸ್ ಪ್ಲೇ, ಸ್ಪೀಕರ್, ಸ್ಟ್ಯಾಬಿಲಿಟಿ ಕಂಟ್ರೋಲ್, ಲೈಟಿಂಗ್, ಕಾರ್ ಕನೆಕ್ಟ್ ಫೀಚರ್ಸ್ ಸೇರಿ ಪ್ರಮುಖ ತಾಂತ್ರಿಕ ಸಾಧನಗಳು ಕಾರ್ಯನಿರ್ವಹಿಸಲು ಸೆಮಿ ಕಂಡಕ್ಟರ್ ಅವಶ್ಯವಾಗಿವೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಕೋವಿಡ್ ಪರಿಣಾಮ ಬಿಡಿಭಾಗಗಳ ಪೂರೈಕೆಯ ಸರಪಳಿಯಲ್ಲಿ ಆಗಿರುವ ಸಮಸ್ಯೆಯೇ ಎಲೆಕ್ಟ್ರಾನಿಕ್ ಚಿಪ್ ಕೊರತೆಗೆ ಪ್ರಮುಖ ಕಾರಣವಾಗಿದ್ದು, ಆಟೋ ಉತ್ಪಾದನಾ ಕಂಪನಿಗಳಿಗೆ ಪೂರೈಕೆಯಾಗಬೇಕಿದ್ದ ಹೆಚ್ಚಿನ ಪ್ರಮಾಣದ ಎಲೆಕ್ಟ್ರಾನಿಕ್ ಚಿಪ್ ಸ್ಟಾಕ್ ಇದೀಗ ಹೆಚ್ಚಿನ ಪ್ರಮಾಣದಲ್ಲಿ ಲ್ಯಾಪ್‌ಟಾಪ್‌, ಮೊಬೈಲ್‌ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನ ಉತ್ಪಾದನೆಗೆ ಹೆಚ್ಚಿನ ಮಟ್ಟದಲ್ಲಿ ಪೂರೈಕೆಯಾಗುತ್ತಿದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಹೀಗಾಗಿ ಎಲೆಕ್ಟ್ರಾನಿಕ್ ಚಿಪ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವು ವಿಶ್ವಾದ್ಯಂತ ಪ್ರಮುಖ ಕಾರು ಕಂಪನಿಗಳಿಗೆ ಹೊಡೆತ ನೀಡುತ್ತಿದ್ದು, ಭಾರತದಲ್ಲೂ ಟೊಯೊಟಾ ಸೇರಿದಂತೆ ವಿವಿಧ ಕಾರು ಉತ್ಪಾದನಾ ಕಂಪನಿಗಳು ಸಹ ಉತ್ಪಾದನೆ ಪ್ರಮಾಣದಲ್ಲಿ ಕಡಿತಗೊಳಿಸುತ್ತಿವೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಎಲೆಕ್ಟ್ರಾನಿಕ್ ಚಿಪ್ ಅಗತ್ಯ ಪ್ರಮಾಣದ ಸ್ಟಾಕ್ ಇಲ್ಲದಿರುವ ಕಾರಣಕ್ಕೆ ತನ್ನ ಪ್ರಮುಖ ಕಾರು ಉತ್ಪಾದನಾ ಘಟಕಗಳಲ್ಲಿ ಕನಿಷ್ಠ ಪ್ರಮಾಣದ ಉತ್ಪಾದನೆ ಕೈಗೊಳ್ಳುತ್ತಿದ್ದು, ಹೊಸ ಕಾರುಗಳ ಕಾಯುವಿಕೆ ಅವಧಿಯು ಹೆಚ್ಚಳವಾಗಲಿದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಬಿಡಿಬಿಭಾಗಗಳ ಕೊರೆತೆಯು ಹೀಗೆಯೇ ಮುಂದುವರೆದಲ್ಲಿ ಟೊಯೊಟಾ ಕಂಪನಿಯು ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲೂ ಭಾರೀ ಪ್ರಮಾಣದ ಕುಸಿತ ಕಾಣುವ ಸಾಧ್ಯತೆಗಳಿದ್ದು, ಸೆಮಕಂಡಕ್ಟರ್ ಉತ್ಪಾದನಾ ಕಂಪನಿಗಳ ಮೇಲೆ ಆಟೋ ಉತ್ಪಾದನಾ ಮತ್ತು ಎಲೆಕ್ಟ್ರಿಕ್ ಉತ್ಪನ್ನ ಉತ್ಪಾದನಾ ಕಂಪನಿಗಳು ಒತ್ತಡ ಹೇರುತ್ತಿವೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಹೊಸ ವರದಿಗಳ ಪ್ರಕಾರ, ಸೆಮಿ ಕಂಡಕ್ಟರ್ ಉತ್ಪಾದನಾ ಕಂಪನಿಯು ಮುಂದಿನ ಕೆಲ ದಿನಗಳಲ್ಲಿ ಪೂರೈಕೆ ಪ್ರಮಾಣವನ್ನು ಹೆಚ್ಚಿಸುವ ಭರವಸೆ ನೀಡಿದ್ದರೂ ಉತ್ಪಾದನಾ ಪ್ರಮಾಣ ಹೆಚ್ಚಳವಾಗಿ ಸಮಸ್ಯೆ ಬಗೆಹರಿಯಲು ಇನ್ನು ಕೆಲವು ತಿಂಗಳುಗಳೇ ಬೇಕಾಗುತ್ತದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಸೆಮಿ ಕಂಡಕ್ಟರ್ ಕೊರತೆಯಿಂದಾಗಿ ಕಾರು ಉತ್ಪಾದನಾ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವುದರಿಂದ ಮುಂಬರುವ ದೀಪಾವಳಿ ಹಬ್ಬದ ಋತುವಿನಲ್ಲಿ ವಿತರಣೆಯಾಗಬೇಕಿರುವ ಹೊಸ ಕಾರುಗಳಿಗೆ ಇನ್ನು ಕೆಲವು ತಿಂಗಳುಗಳ ಕಾಲ ಕಾಯಬೇಕಾದ ಅನಿವಾರ್ಯತೆಗಳಿದ್ದು, ವರದಿಗಳ ಪ್ರಕಾರ, ಭಾರತದಲ್ಲಿ ಸುಮಾರು 4 ಲಕ್ಷದಿಂದ 5 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್ ಮಾಡಲಾದ ಕಾರುಗಳ ವಿತರಣೆಯು ವಿಳಂಬವಾಗಬಹುದಾಗಿದೆ ಎನ್ನಲಾಗಿದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಇದರೊಂದಿಗೆ ಆಟೋ ಬಿಡಿಭಾಗಗಳ ವೆಚ್ಚವು ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟೊಯೊಟಾ ಕಂಪನಿಯು ಕೂಡಾ ಉತ್ಪಾದನಾ ವೆಚ್ಚ ನಿರ್ವಹಣೆಗಾಗಿ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಹೊಸ ವಾಹನಗಳ ಉತ್ಪಾದನಾ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ತಮ್ಮ ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಇದೀಗ ಟೊಯೊಟಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಯ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಟೊಯೊಟಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಇನೋವಾ ಕ್ರಿಸ್ಟಾ, ಫಾರ್ಚೂನರ್ ಸೇರಿದಂತೆ ಎಲ್ಲಾ ಕಾರುಗಳ ಬೆಲೆ ಹೆಚ್ಚಳ ಮಾಡಿದ್ದು, ಹೊಸ ದರ ಪಟ್ಟಿಯಲ್ಲಿ ವಿವಿಧ ಮಾದರಿಗಳಿಗೆ ಅನುಗುಣವಾಗಿ ಶೇ.1.50ರಿಂದ ಶೇ.2 ರಷ್ಟು ಹೆಚ್ಚಳ ಮಾಡಲಾಗಿದೆ.

ಸೆಮಿಕಂಡಕ್ಟರ್ ಕೊರತೆ-ಕುಸಿತ ಕಾಣಲಿದೆ Toyota ಕಾರುಗಳ ಉತ್ಪಾದನೆ..

ಹೊಸ ದರಪಟ್ಟಿಯಲ್ಲಿ ಕಂಪನಿಯ ಎಂಟ್ರಿ ಲೆವಲ್ ಕಾರು ಮಾದರಿಯಾದ ಗ್ಲಾಂಝಾ ಕಾರಿನ ಬೆಲೆಯಲ್ಲಿ ರೂ. 15 ಸಾವಿರದಷ್ಟು ದುಬಾರಿಯಾದಲ್ಲಿ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಯಾದ ಅರ್ಬನ್ ಕ್ರೂಸರ್ ಮಾದರಿಯ ಬೆಲೆಯಲ್ಲಿ ಗರಿಷ್ಠ ರೂ. 10 ಸಾವಿರದಷ್ಟು ಹೆಚ್ಚಳವಾಗಿದೆ.

Article Published On: Saturday, October 16, 2021, 18:11 [IST]
English summary
Toyota to cut production due to semiconductor shortage crisis
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+