ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟ ಉತ್ತಮ ಬೇಡಿಕೆ ಹೊಂದಿರುವ ಟೊಯೊಟಾ ರೀಬ್ಯಾಡ್ಜ್ ಆವೃತ್ತಿಯಾಗಿರುವ ಅರ್ಬನ್ ಕ್ರೂಸರ್ ಮುಂದಿನ ಕೆಲವೇ ದಿನಗಳಲ್ಲಿ ಹೊಸ ವೆರಿಯೆಂಟ್ ಒಂದನ್ನು ಪಡೆದುಕೊಳ್ಳಲಿದ್ದು, ಹೊಸ ವೆರಿಯೆಂಟ್ ಬಿಡುಗಡೆಯ ಮಾಹಿತಿಯು ಕೇಂದ್ರ ಸಾರಿಗೆ ಇಲಾಖೆಗೆ ಸಲ್ಲಿಸಲಾಗಿರುವ ಟ್ರೆಡ್‌ಮಾರ್ಕ್‌ನಲ್ಲಿ ಬಹಿರಂಗವಾಗಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಟೊಯೊಟಾ ಕಂಪನಿಯು ಮಾರುತಿ ಸುಜುಕಿಯೊಂದಿಗೆ ಸಹಭಾಗೀತ್ವ ಯೋಜನೆ ಅಡಿಯಲ್ಲಿ ವಿಟಾರಾ ಬ್ರೆಝಾ ಮಾದರಿಯನ್ನು ಅರ್ಬನ್ ಕ್ರೂಸರ್ ರೀಬ್ಯಾಡ್ಜ್ ಮಾದರಿಯಾಗಿ ಮಾರಾಟಗೊಳಿಸುತ್ತಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆ ಕೆಲವು ಬದಲಾವಣೆಗಳನ್ನು ಪರಿಚಯಿಸಲು ಮುಂದಾಗಿರುವ ಕಂಪನಿಯು ಅರ್ಬನ್ ಕ್ರೂಸರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

2022ರ ವೇಳೆಗೆ ಮೂಲ ಮಾದರಿಯಾದ ವಿಟಾರಾ ಬ್ರೆಝಾ ಕಾರು ಹೊಸ ತಲೆಮಾರಿನ ಆವೃತ್ತಿಯೊಂದಿಗೆ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ನ್ಯೂ ಜನರೇಷನ್ ಮಾದರಿಗೆ ಅನುಗುಣವಾಗಿ ಅರ್ಬನ್ ಕ್ರೂಸರ್ ಕೂಡಾ ಮಹತ್ವದ ಬದಲಾವಣೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಈ ಹಿನ್ನಲೆ ಹೊಸ ವಿಟಾರಾ ಬ್ರೆಝಾ ಕಾರಿಗೆ ಅನುಸಾರವಾಗಿ ಅರ್ಬನ್ ಕ್ರೂಸರ್ ಕೂಡಾ ಅರ್ಬನ್ ಕ್ರೂಸರ್ ಹೈರೈಡರ್ ಎನ್ನುವ ಹೆಸರಿನೊಂದಿಗೆ ಬದಲಾವಣೆ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಹೊಸ ಕಾರು ಮಾದರಿಯಾಗಿ ಟೊಯೊಟಾ ಕಂಪನಿಯು ಕೇಂದ್ರ ಸಾರಿಗೆ ಇಲಾಖೆಯಲ್ಲಿ ಟ್ರೆಡ್‌ಮಾರ್ಕ್ ಸಲ್ಲಿಸಿರುವ ಮಾಹಿತಿ ಲಭ್ಯವಾಗಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಅರ್ಬನ್ ಕ್ರೂಸರ್ ಮಾದರಿಯ ರೀಬ್ಯಾಡ್ಜ್ ಆವೃತ್ತಿಯಾಗಿದ್ದರೂ ವಿಟಾರಾ ಬ್ರೆಝಾ ಮಾದರಿಯೆಂತೆಯೇ ಅತ್ಯುತ್ತಮ ಬೇಡಿಕೆ ಪಡೆದುಕೊಂಡಿದ್ದು, ಬ್ರಾಂಡ್ ಬ್ಯಾಡ್ಜ್ ಹೆಸರು ಹೊರತುಪಡಿಸಿ ಎರಡು ಕಾರು ಮಾದರಿಗಳು ಒಂದೇ ರೀತಿಯ ತಾಂತ್ರಿಕ ಅಂಶಗಳನ್ನು ಹೊಂದಿವೆ. ವಿಟಾರಾ ಬ್ರೆಝಾ ತನ್ನದೆ ಆದ ಜನಪ್ರಿಯತೆಯೊಂದಿಗೆ ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದರೆ ಹೊಸದಾಗಿ ಬಿಡುಗಡೆಯಾದ ಅರ್ಬನ್ ಕ್ರೂಸರ್ ಕಾರು ಕೂಡಾ ಪ್ರೀಮಿಯಂ ಕಾರು ಖರೀದಿದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಮಿಡ್, ಹೈ ಮತ್ತು ಪ್ರೀಮಿಯಂ ಎಂಬ ಮೂರು ರೂಪಾಂತರ ಹೊಂದಿರುವ ಅರ್ಬನ್ ಕ್ರೂಸರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.72 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.11.40 ಲಕ್ಷ ಬೆಲೆ ಹೊಂದಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಮೂಲ ಮಾದರಿಗಿಂತಲೂ ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆ ಹೊಂದಿರುವ ಹೊಸ ಅರ್ಬನ್ ಕ್ರೂಸರ್ ಕಾರು ಮಾದರಿಯು ಎರಡು ಸ್ಲಾಟ್ ಹೊಂದಿರುವ ಫ್ರಂಟ್ ಗ್ರಿಲ್, ಎರಡು ತುದಿಗಳಲ್ಲೂ ಬೋಲ್ಡ್ ಕ್ರೊಮ್ ಮೂಲಕ ಆವೃತ್ತವಾಗಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಹೊಸ ಕಾರಿನ ಹೆಡ್‌ಲ್ಯಾಂಪ್‌ಗಳು ಗ್ರಿಲ್‌ನ ಎರಡೂ ಬದಿಯಲ್ಲಿವೆ ಮತ್ತು ಎಲ್‌ಇಡಿ ಪ್ರೊಜೆಕ್ಟರ್ ಘಟಕಗಳನ್ನು ಹೊಂದಿದ್ದು, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ಹಿಂಬದಿ ವಿನ್ಯಾಸದಲ್ಲೂ ಗಮನಸೆಳೆಯುತ್ತದೆ. ಅರ್ಬನ್ ಕ್ರೂಸರ್ ಕಾರಿನ ಸೈಡ್ ಪ್ರೊಫೈಲ್ ಮತ್ತು ಹಿಂಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ಕನಿಷ್ಠ ಮಟ್ಟದ ವಿನ್ಯಾಸ ಗುಣಲಕ್ಷಣಗಳಿದ್ದರೂ ಅಚ್ಚುಕಟ್ಟಾದ ವಿನ್ಯಾಸ ಹೊಂದಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಹಾಗೆಯೇ ಇಂಟಿಗ್ರೇಟೆಡ್ ಟರ್ನ್ ಸಿಗ್ನಲ್‌ಗಳೊಂದಿಗೆ ಸ್ಟೈಲಿಶ್ ಆಗಿರುವ 16-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಹ್ ಮತ್ತು ಬಾಡಿ ಕಲರ್ ಒಳಗೊಂಡಿರುವ ಒಆರ್‌ವಿಎಂಗಳು ಪ್ರಮುಖ ತಾಂತ್ರಿಕ ಅಂಶಗಳಾಗಿವೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಕಾರಿನ ಹಿಂಭಾಗದಲ್ಲಿ ಎಲ್‌ಇಡಿ ಟೈಲ್ ಲೈಟ್‌ಗಳು, ಅದರ ಮೇಲೆ ಆಕರ್ಷಕವಾಗಿರುವ ‘ಅರ್ಬನ್ ಕ್ರೂಸರ್' ಹೆಸರಿನ ಬೋಲ್ಡ್ ಕ್ರೋಮ್ ಸ್ಟ್ರಿಪ್, ಸ್ಟಾಪ್ ಲ್ಯಾಂಪ್ ಹೊಂದಿರುವ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಹಿಂಭಾಗದ ಬಂಪರ್‌ನಲ್ಲಿ ಪ್ರತಿಫಲಕಗಳೊಂದಿಗೆ ಬರುತ್ತದೆ. ಕೆಳಭಾಗದಲ್ಲಿ ಸಿಲ್ವರ್ ಸ್ಕಿಡ್ ಪ್ಲೇಟ್ ಸಹ ಇದ್ದು, ಇದು ಎಸ್‌ಯುವಿ ಹೊರ ನೋಟದ ಬಲಿಷ್ಠತೆಯನ್ನು ಹೆಚ್ಚಿಸುತ್ತದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಟೊಯೊಟಾ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಂತೆ ಎಂಜಿನ್ ಆಯ್ಕೆ ಹೊಂದಿದೆ. ಬಿಎಸ್-6 ಪ್ರೇರಿತ ಕೆ-ಸೀರಿಸ್ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 104-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಪೆಟ್ರೋಲ್ ಎಂಜಿನ್ ಮಾದರಿಯು ಆರಂಭಿಕ ಆವೃತ್ತಿಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಈ ಕಾರಿನಲ್ಲಿ ಡೀಸೆಲ್ ಮಾದರಿಯನ್ನು ನೀಡದಿರಲು ನಿರ್ಧರಿಸಲಾಗಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಅರ್ಬನ್ ಕ್ರೂಸರ್ 1.5-ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 17.3ಕಿ.ಮೀ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18.76 ಕಿ.ಮೀ ಮೈಲೇಜ್ ನೀಡಲಿದ್ದು, ಮೈಲೇಜ್ ಅಂಕಿ-ಅಂಶಗಳು ಆಟೋಮೋಟಿವ್ ರಿಸರ್ಚ್ ಅಸೋಸಿಯೇಶನ್ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣೀಕರಿಸಲಾಗಿದೆ.

ಅರ್ಬನ್ ಕ್ರೂಸರ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟೊಯೊಟಾ

ಇದರೊಂದಿಗೆ ಅರ್ಬನ್ ಕ್ರೂಸರ್ ಕಾರು ಮಾದರಿಯಲ್ಲಿ ಟೊಯೊಟಾ ಕಂಪನಿಯು ಹಲವಾರು ಬೆಸ್ಟ್ ಇನ್ ಸೆಗ್ಮೆಂಟ್ ಫೀಚರ್ಸ್ ನೀಡಿದ್ದು, ಹೊಸ ಕಾರಿನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಫಾಗ್ ಲ್ಯಾಂಪ್ಸ್, 16-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಹ್, ಎಲ್ಇಡಿ ಟೈಲ್ ಲೈಟ್ಸ್, 7-ಇಂಚಿನ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡ್ಯುಯಲ್-ಟೋನ್ ಇಂಟಿರಿಯರ್ಸ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಸ್ಟ್ರೀರಿಂಗ್ ಮೌಂಟೆಡ್ ಕಂಟ್ರೋಲ್, ಕೀ ಲೆಸ್ ಇಗ್ನಿಷನ್, ಹಿಂಬದಿಯ ಆಸನದಲ್ಲಿ 60:40 ಅನುಪಾತದ ಸ್ಪ್ಲಿಟ್ ಸೀಟ್, ಆಟೋ ರೈನ್ ಸೆನ್ಸಿಂಗ್ ವೈಪರ್, ವಿದ್ಯುಮಾನ ಪ್ರೇರಿತ ರಿಯಲ್ ವ್ಯೂ ಮಿರರ್ ಮತ್ತು ಇಂಟ್ರಾಗ್ರೆಟೆಡ್ ಟರ್ನ್ ಸಿಗ್ನಲ್ಸ್ ಸೌಲಭ್ಯವಿದೆ.

Most Read Articles

Kannada
Read more on ಟೊಯೊಟಾ toyota
English summary
Toyota urban cruiser hyryder name trademarked details
Story first published: Friday, November 19, 2021, 0:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X