Just In
- 17 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 2 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ವರ್ಷಕ್ಕೆ 850 ಮಿಲಿಯನ್ ಸ್ಪುಟ್ನಿಕ್ V ಲಸಿಕೆ ತಯಾರಿಸಲಿದೆ ಭಾರತ
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತಕ್ಕೆ ಕಾಲಿಡಲು ಸಜ್ಜಾದ ಮತ್ತೊಂದು ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿ
ವಿಶ್ವಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ದಿನೇ ದಿನೇ ಬೇಡಿಕೆ ಹೆಚ್ಚಾಗುತ್ತಿದೆ. ಈ ಕಾರಣಕ್ಕೆ ದೊಡ್ಡ ದೊಡ್ಡ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸಿ ಬಿಡುಗಡೆಗೊಳಿಸುತ್ತಿವೆ.

ಭಾರತವು ಎಲೆಕ್ಟ್ರಿಕ್ ವಾಹನಗಳಿಗೆ ದೊಡ್ಡ ಮಾರುಕಟ್ಟೆಯಾಗಿ ಹೊರಹೊಮ್ಮುತ್ತಿದೆ. ಟೆಸ್ಲಾ ಸೇರಿದಂತೆ ಹಲವು ಪ್ರಮುಖ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಭಾರತಕ್ಕೆ ಕಾಲಿಟ್ಟಿವೆ. ಈಗ ಅಮೆರಿಕಾದ ಟ್ರೈಟಾನ್ ಎಲೆಕ್ಟ್ರಿಕ್ ಸಹ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸಲು ಸಜ್ಜಾಗಿದೆ.

ಟ್ರೈಟಾನ್ ಕಂಪನಿಯು ತನ್ನ ಅಂಗಸಂಸ್ಥೆಗಳಲ್ಲಿ ಒಂದನ್ನು ಭಾರತದಲ್ಲಿ ನೋಂದಾಯಿಸಿದೆ. ಈ ಕಂಪನಿಯನ್ನು ಟ್ರೈಟಾನ್ ಎಲೆಕ್ಟ್ರಿಕ್ ವೆಹಿಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ನೋಂದಾಯಿಸಲಾಗಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕಂಪನಿಯ ಪ್ರಧಾನ ಕಚೇರಿ ಅಮೆರಿಕಾದ ನ್ಯೂಜೆರ್ಸಿಯಲ್ಲಿದೆ. ಈ ಕಂಪನಿಯನ್ನು ಟ್ರೈಟಾನ್ ಎಲೆಕ್ಟ್ರಿಕ್ ವೆಹಿಕಲ್ ಎಲ್ಎಲ್‌ಸಿ ಎಂದು ಕರೆಯಲಾಗುತ್ತದೆ. ಅಮೆರಿಕಾದ ನಂತರ ಭಾರತವನ್ನು ಅತಿದೊಡ್ಡ ಮಾರುಕಟ್ಟೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಕಂಪನಿಯು ಕಾರ್ಯ ನಿರ್ವಹಿಸುತ್ತಿದೆ.

ಕಂಪನಿಯು ಹೂಡಿಕೆ ಅಥವಾ ಉತ್ಪಾದನಾ ಸ್ಥಳದ ಬಗೆಗಿನ ಮಾಹಿತಿಯನ್ನು ಹಂಚಿಕೊಂಡಿಲ್ಲವಾದರೂ, ಈ ಘಟಕದಲ್ಲಿ ಉತ್ಪಾದಿಸುವ ವಾಹನಗಳನ್ನು ಭಾರತ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಮಧ್ಯಪ್ರಾಚ್ಯ, ಆಫ್ರಿಕಾದಂತಹ ಇತರ ದೇಶಗಳಿಗೆ ರಫ್ತು ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಅಮೆರಿಕಾದ ಹೊರಗೆ ಕಂಪನಿಗೆ ಇದು ಪ್ರಮುಖ ಹೆಜ್ಜೆಯಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ತನ್ನ ಉತ್ಪಾದನಾ ಘಟಕವು 21,000 ಜನರಿಗೆ ಉದ್ಯೋಗ ನೀಡಲಿದೆ ಎಂದು ಟ್ರೈಟಾನ್ ಎಲೆಕ್ಟ್ರಿಕ್ ಕಂಪನಿ ಹೇಳಿದೆ.

ಟ್ರೈಟಾನ್ ಎಲೆಕ್ಟ್ರಿಕ್, ನ್ಯೂಜೆರ್ಸಿಯ ಚೆರ್ರಿ ಹಿಲ್'ನಲ್ಲಿರುವ ಟ್ರೈಟಾನ್ ಸೋಲಾರ್‌ನ ಅಂಗಸಂಸ್ಥೆಯಾಗಿದೆ. ಈ ಕಂಪನಿಯು ಸೋಲಾರ್ ಪ್ಯಾನೆಲ್ ಹಾಗೂ ಬ್ಯಾಟರಿಗಳನ್ನು ಉತ್ಪಾದಿಸುತ್ತದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಟ್ರೈಟಾನ್ ಇವಿ ಸಂಸ್ಥಾಪಕ ಹಾಗೂ ಸಿಇಒ ಹಿಮಾಂಶು ಪಟೇಲ್ ಮಾತನಾಡಿ, ನಾವು ಭಾರತವನ್ನು ಪ್ರವೇಶಿಸುವುದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದೇವೆ. ಇದು ಕಂಪನಿಗೆ ಹಾಗೂ ಉದ್ಯಮಕ್ಕೆ ಪ್ರಮುಖವಾಗಿದೆ. ಎಲೆಕ್ಟ್ರಿಕ್ ವಾಹನಗಳು ಭಾರತವೂ ಸೇರಿದಂತೆ ವಿಶ್ವದಾದ್ಯಂತ ಜನಪ್ರಿಯವಾಗುತ್ತಿವೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸರ್ಕಾರಿ ಅಧಿಕಾರಿಗಳು ಸಹ ಉತ್ತೇಜಿಸುತ್ತಿದ್ದಾರೆ. ಭಾರತಕ್ಕಾಗಿ ಗುಣಮಟ್ಟದ ಎಲೆಕ್ಟ್ರಿಕ್ ವಾಹನವನ್ನು ಉತ್ಪಾದಿಸಲು ಕಂಪನಿಯು ಬದ್ಧವಾಗಿದೆ ಎಂದು ಹೇಳಿದರು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಈ ಉತ್ಪಾದನಾ ಘಟಕದಿಂದ ನಾವು ದೊಡ್ಡ ಪ್ರಮಾಣದ ರಫ್ತು ಆದಾಯವನ್ನು ನಿರೀಕ್ಷಿಸುತ್ತಿದ್ದೇವೆ. ನಾವು ಭಾರತದ ಉತ್ಪಾದನಾ ಘಟಕದಿಂದ ಹಲವು ದೇಶಗಳಿಗೆಎಲೆಕ್ಟ್ರಿಕ್ ವಾಹನಗಳನ್ನು ಪೂರೈಸಲಿದ್ದೇವೆ ಎಂದು ಹೇಳಿದರು.

ಕಂಪನಿಯ ಉತ್ಪಾದನಾ ಘಟಕವು ಕಾರುಗಳನ್ನು ಅಸೆಂಬಲ್ ಮಾಡುವುದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಉಪಕರಣಗಳನ್ನು ಸಹ ಅಸೆಂಬಲ್ ಮಾಡಲಿದೆ. ಟೆಸ್ಲಾ ಕಂಪನಿಯು ಸಹ ಭಾರತದಲ್ಲಿ ನೋಂದಣಿ ಮಾಡಿಸಿಕೊಂಡಿದೆ. ಟೆಸ್ಲಾ ಕಂಪನಿಯು ಕೆಲವೇ ದಿನಗಳಲ್ಲಿ ಭಾರತದಲ್ಲಿ ತನ್ನ ಮೊದಲ ಕಾರನ್ನು ಬಿಡುಗಡೆಗೊಳಿಸಲಿದೆ.