ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಭರದಿಂದ ಸಾಗುತ್ತಿದೆ. ಪೆಟ್ರೋಲ್, ಡೀಸೆಲ್ ಎಂಜಿನ್ ಗಳಿಂದ ಚಲಿಸುವ ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಹಾಗೂ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಕ್ರಮವನ್ನು ತೆಗೆದುಕೊಳ್ಳುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ನಿರ್ದಿಷ್ಟವಾಗಿ ಹೇಳುವುದಾದರೆ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಹೆಚ್ಚಿಸಲು ಹಾಗೂ ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರವು ಕೆಲಸ ಮಾಡುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಉತ್ತೇಜಿಸಲು ಸಬ್ಸಿಡಿ, ತೆರಿಗೆ ವಿನಾಯಿತಿಯಂತಹ ಹಲವು ಕೊಡುಗೆಗಳನ್ನು ನೀಡಲಾಗುತ್ತಿದೆ. ಈಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹೊಸ ಯೋಜನೆಯನ್ನು ಜಾರಿಗೊಳಿಸಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಹಾಗೂ ಎಲೆಕ್ಟ್ರಿಕ್ ನಾಲ್ಕು ಚಕ್ರಗಳ ಮೇಲೆ ವಿಧಿಸಲಾಗುತ್ತಿದ್ದ ಬಡ್ಡಿ ದರವನ್ನು ಯೂನಿಯನ್ ಬ್ಯಾಂಕ್ ಕಡಿತಗೊಳಿಸಿದೆ. ಬ್ಯಾಂಕ್ ಈ ವಾಹನಗಳ ಮೇಲೆ ವಿಧಿಸುತ್ತಿದ್ದ ಬಡ್ಡಿ ದರವನ್ನು 6.95% ಗೆ ನಿಗದಿಪಡಿಸಿದೆ. ಯೂನಿಯನ್ ಗ್ರೀನ್ ಮೈಲ್ ಯೋಜನೆಯಡಿ ಈ ಸಾಲ ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆ ಬಡ್ಡಿ ದರವನ್ನು ಕಡಿಮೆ ಮಾಡುವುದಲ್ಲದೆ, ಸಾಲದ ಸಂಸ್ಕರಣಾ ಶುಲ್ಕವನ್ನು ತೆಗೆದು ಹಾಕುತ್ತದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಎಲೆಕ್ಟ್ರಿಕ್ ವಾಹನ ಪ್ರಿಯರನ್ನು ಸೆಳೆಯಲು ಈ ಯೋಜನೆಗೆ ಚಾಲನೆ ನೀಡಲಾಗಿದೆ. ಎಲೆಕ್ಟ್ರಿಕ್ ಕಾರಿನ ಮೇಲೆ ಯಾವುದೇ ಸೀಲಿಂಗ್ ಅನ್ನು ವಿಧಿಸಲಾಗಿಲ್ಲ. ಇದರಿಂದ ಎಲೆಕ್ಟ್ರಿಕ್ ಕಾರು ಎಷ್ಟೇ ದುಬಾರಿಯಾದರೂ ಬ್ಯಾಂಕ್ ಸಾಲ ನೀಡಲಿದೆ. ಆದರೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಕ್ರೆಡಿಟ್ ಮೊತ್ತವನ್ನು ನಿಗದಿಪಡಿಸಲಾಗಿದೆ. ಎಲೆಕ್ಟ್ರಿಕ್ ಬೈಕ್ ಹಾಗೂ ಸ್ಕೂಟರ್‌ಗಳಿಗೆ ಕೇವಲ ರೂ. 10 ಲಕ್ಷಗಳವರೆಗೆ ಮಾತ್ರ ಸಾಲ ನೀಡಲಾಗುತ್ತದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಇವುಗಳ ಬಡ್ಡಿ ದರವನ್ನು 6.95% ಗೆ ನಿಗದಿಪಡಿಸಲಾಗಿದೆ. ಇದು ಸಿಬಿಲ್ ಕ್ರೆಡಿಟ್ ಸ್ಕೋರ್ ಅನ್ನು ಆಧರಿಸಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಸಾಲ ನೀಡುವ ಯೋಜನೆಯ ನಂತರ ಬ್ಯಾಂಕ್ ರೂಫ್ ಸೋಲಾರ್ ಸಿಸ್ಟಂ ಸ್ಥಾಪಿಸಲು ಸಾಲ ಯೋಜನೆಯನ್ನು ಪರಿಚಯಿಸಿದೆ. ಈ ಸಾಲಕ್ಕೆ ವಿಶೇಷ ಬಡ್ಡಿ ರಿಯಾಯಿತಿಯ ಕೊಡುಗೆಯನ್ನೂ ಸಹ ಬ್ಯಾಂಕ್ ಪ್ರಕಟಿಸಿದೆ. ಎಲ್ಲಾ ನಿವಾಸಿಗಳಿಗೆ ಸಾಲ ನೀಡಲಾಗುವುದು ಎಂದು ಬ್ಯಾಂಕ್ ತಿಳಿಸಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಇದರ ಜೊತೆಗೆ ಬ್ಯಾಂಕ್ ಯೂನಿಯನ್ ಗ್ರೀನ್ ಡಿಪಾಸಿಟ್ ಎಂಬ ಯೋಜನೆಯನ್ನು ಆರಂಭಿಸಿದೆ. ಇದು ಟರ್ಮ್ ಡಿಪಾಸಿಟ್ ಯೋಜನೆಯಾಗಿದ್ದು, ಡಿಜಿಟಲ್ ಮೂಲಕ ಮಾತ್ರ ಖಾತೆ ತೆರೆಯಬಹುದು. ಇದರ ಸಂಪೂರ್ಣ ಆದಾಯವನ್ನು ಹಸಿರು ಸಾಲ ಯೋಜನೆಗಳಿಗೆ ಮಾತ್ರ ಬಳಸಲಾಗುವುದು ಎಂದು ಬ್ಯಾಂಕ್ ಹೇಳಿದೆ. ಬ್ಯಾಂಕಿನ 103ನೇ ಕಾರ್ಪೊರೇಟ್ ದಿನದ ಸಂದರ್ಭದಲ್ಲಿ ಈ ಎಲ್ಲಾ ಯೋಜನೆಗಳನ್ನು ಬ್ಯಾಂಕಿನ ಆಡಳಿತ ಮಂಡಳಿಯು ಆರಂಭಿಸಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ನವೆಂಬರ್ 11ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ 103ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಅಂದು ಬ್ಯಾಂಕ್ ಆಡಳಿತವು ಹಸಿರು ವಾಹನಗಳಿಗೆ ಬಡ್ಡಿ ಕಡಿತವನ್ನು ಘೋಷಿಸುವುದು ಮಾತ್ರವಲ್ಲದೆ ಡಿಜಿಟಲ್ ಸ್ವಯಂ ಸೇವಾ ಶಾಖೆಗಳು ಹಾಗೂ WhatsApp ಬ್ಯಾಂಕಿಂಗ್ ಸೇವೆಯನ್ನು ಸಹ ಪರಿಚಯಿಸಿದೆ. ಈ ವಿಶೇಷ ಸೇವೆಯನ್ನು ಭಾರತದ 13 ಭಾಷೆಗಳಲ್ಲಿ ಒದಗಿಸಲು ಬ್ಯಾಂಕ್ ಕ್ರಮ ಕೈಗೊಂಡಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಆಡಳಿತ ಮಂಡಳಿಯು ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲು ಮುಂದಾಗಿರುವುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. 6.95% ಆರಂಭಿಕ ಬಡ್ಡಿ ದರವು ಭಾರತದಲ್ಲಿ ಬೆಳೆಯುತ್ತಿರುವ ಎಲೆಕ್ಟ್ರಿಕ್ ವಾಹನ ವಲಯವನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಗಳಿವೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಇದಕ್ಕೆ ಪ್ರಮುಖವಾಗಿ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರಿರುವುದೇ ಪ್ರಮುಖ ಕಾರಣವಾಗಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ಜೊತೆಗೆ ಹಲವು ರಾಜ್ಯ ಸರ್ಕಾರಗಳೂ ಸಹ ವಿವಿಧ ಕೊಡುಗೆಗಳನ್ನು ನೀಡುತ್ತಿವೆ. ಗುಜರಾತ್ ಸರ್ಕಾರವು ತನ್ನ ರಾಜ್ಯದಲ್ಲಿರುವ ನಿರ್ಮಾಣ ಹಾಗೂ ಕೈಗಾರಿಕಾ ಕಾರ್ಮಿಕರಿಗೆ ಸಬ್ಸಿಡಿ ದರದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಒದಗಿಸುವ ಯೋಜನೆಯನ್ನು ಆರಂಭಿಸಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರವರು ಕೆಲವು ದಿನಗಳ ಹಿಂದಷ್ಟೇ ಎಲೆಕ್ಟ್ರಿಕ್ ವಾಹನಗಳ ಮೂಲಕ ಪರಿಸರವನ್ನು ಬೆಂಬಲಿಸುವ ಗುರಿಯನ್ನು ಹೊಂದಿರುವ ಗೋ ಗ್ರೀನ್ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯಲ್ಲಿ ಇಂಧನದ ಮೇಲೆ ಮಾಡಲಾಗುತ್ತಿರುವ ವೆಚ್ಚವನ್ನು ಕಡಿಮೆ ಮಾಡಿ, ವಾಹನಗಳಿಂದ ಉಂಟಾಗುವ ಹೊರ ಸೂಸುವಿಕೆಯನ್ನು ತಡೆಯುವ ಗುರಿಯನ್ನು ಹೊಂದಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಈ ಯೋಜನೆಯಡಿಯಲ್ಲಿ ಸಂಘಟಿತ ವಲಯದ ಯಾವುದೇ ಕಾರ್ಮಿಕರು ಎಲೆಕ್ಟ್ರಿಕ್ ವಾಹನ ವೆಚ್ಚದ 30% ನಷ್ಟು ಅಥವಾ ರೂ. 30,000 ಯಾವುದು ಕಡಿಮೆಯೋ ಅದನ್ನು ಸಬ್ಸಿಡಿಯಾಗಿ ಪಡೆಯಬಹುದು. ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಖರೀದಿಸುವ ಕಾರ್ಮಿಕರಿಗೆ ಮಾತ್ರ ಈ ಸಬ್ಸಿಡಿ ದೊರೆಯಲಿದೆ. ಇನ್ನು ನಿರ್ಮಾಣ ವಲಯದ ಕಾರ್ಮಿಕರಿಗೆ ಪ್ರತ್ಯೇಕ ಮಾನದಂಡ ನಿಗದಿಪಡಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಇನ್ನು ಹರಿಯಾಣ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸ ಬಯಸುವ ಸರ್ಕಾರಿ ನೌಕರರಿಗೆ ವಿಶೇಷ ಕೊಡುಗೆಗಳನ್ನು ನೀಡಲು ನಿರ್ಧರಿಸಿದೆ. ಈ ಕೊಡುಗೆಯನ್ವಯ ಸರ್ಕಾರಿ ನೌಕರರು ಖರೀದಿಸುವ ಮೊದಲ ಎಲೆಕ್ಟ್ರಿಕ್ ವಾಹನಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಇದರ ಜೊತೆಗೆ ಹರಿಯಾಣ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ತೊಡಗಿರುವ ಯಾವುದೇ ರಾಜ್ಯ, ರಾಷ್ಟ್ರೀಯ ಹಾಗೂ ಅಂತರ್ ರಾಷ್ಟ್ರೀಯ ಸಂಸ್ಥೆಗಳಿಗೆ ರೂ. 5 ಕೋಟಿಗಳವರೆಗೆ ಪ್ರೋತ್ಸಾಹ ಧನ ನೀಡಲಾಗುವುದು.

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಿದೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಹರಿಯಾಣ ಸರ್ಕಾರವು ಹರಿಯಾಣ ಎಲೆಕ್ಟ್ರಿಕ್ ವೆಹಿಕಲ್ ಪಾಲಿಸಿ 2021 ರ ರಚನೆಗೆ ಸಂಬಂಧಿಸಿದಂತೆ ಈಗಾಗಲೇ ತನ್ನ ಅಧಿಕಾರಿಗಳೊಂದಿಗೆ ಮೂರು ಸುತ್ತಿನ ಸಭೆಗಳನ್ನು ನಡೆಸಿದೆ. ದೆಹಲಿ ಸರ್ಕಾರವು ಸಹ ತನ್ನದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೊಳಿಸಿದೆ. ಈ ಎಲೆಕ್ಟ್ರಿಕ್ ವಾಹನ ನೀತಿ 2020ರಲ್ಲಿಯೇ ಜಾರಿಗೆ ಬಂದಿದೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Union bank of india to offer electric vehicle loan at 6 95 percent interest details
Story first published: Sunday, November 14, 2021, 10:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X