ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಭಾರತದ ರಸ್ತೆಗಳಲ್ಲಿ ಇನ್ನು ಮುಂದೆ ಹೈಡ್ರೋಜನ್ ಫ್ಯೂಯಲ್ ಕಾರುಗಳನ್ನು ಕಾಣ ಬಹುದು. ಕೇಂದ್ರ ಸರ್ಕಾರವು ಇತ್ತೀಚೆಗೆ ಆಟೋ ಮೊಬೈಲ್ ಉದ್ಯಮಕ್ಕಾಗಿ ತನ್ನ ಉದ್ದೇಶಿತ 8 ಬಿಲಿಯನ್ ಡಾಲರ್ ಯೋಜನೆಯನ್ನು ಪರಿಷ್ಕರಿಸಿದೆ. ಈ ಯೋಜನೆಯು ಈಗ ಎಲೆಕ್ಟ್ರಿಕ್ ಹಾಗೂ ಹೈಡ್ರೋಜನ್ ಫ್ಯೂಯಲ್ ವಾಹನಗಳನ್ನು ಉತ್ಪಾದಿಸಲು ಕಂಪನಿಗಳಿಗೆ ಪ್ರೋತ್ಸಾಹ ನೀಡಲಿದೆ.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಇದುವರೆಗೂ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಹಾಗೂ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯನ್ನು ಉತ್ತೇಜಿಸಲು ಮಾತ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿತ್ತು. ಆದರೆ ಈಗ ಕೇಂದ್ರ ಸರ್ಕಾರವು ಹೈಡ್ರೋಜನ್ ಇಂಧನದಲ್ಲಿ ಚಲಿಸುವ ಕಾರುಗಳನ್ನು ಪ್ರೋತ್ಸಾಹಿಸಲು ಮುಂದಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವು ಆಟೋ ಮೊಬೈಲ್ ಹಾಗೂ ಆಟೋ ಬಿಡಿಭಾಗ ತಯಾರಕ ಕಂಪನಿಗಳನ್ನು ಉತ್ತೇಜಿಸಲಿದೆ.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಹೈಡ್ರೋಜನ್ ಇಂಧನವು ಸಾವಯವ ಇಂಧನವಾಗಿ ಮಾತ್ರವಲ್ಲದೆ ಎಲೆಕ್ಟ್ರಿಕ್ ಪವರ್‌ಟ್ರೇನ್‌ಗಳಿಗೆ ಪರ್ಯಾಯವಾಗಿಯೂ ಹೆಚ್ಚು ಜನಪ್ರಿಯವಾಗುತ್ತಿದೆ. ಇತ್ತೀಚೆಗಷ್ಟೇ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಜಿತೇಂದ್ರ ಸಿಂಗ್, ಭವಿಷ್ಯದಲ್ಲಿ ಭಾರತವು ಜಾಗತಿಕ ಹಸಿರು ಹೈಡ್ರೋಜನ್ ಹಬ್ ಆಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದರು.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ವಾಯು ಮಾಲಿನ್ಯ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶವನ್ನು ಸಾಧಿಸಲು ಅವಿಭಜಿತ ಶಕ್ತಿಯ ಮೇಲೆ ಹೂಡಿಕೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ಹೈಡ್ರೋಜನ್ ಕೇವಲ ವಾಯು ಮಾಲಿನ್ಯ ಪ್ರಮಾಣವನ್ನು ಕಡಿಮೆ ಮಾಡಲು ನೆರವಾಗುವುದಿಲ್ಲ. ಇದರ ಜೊತೆಗೆ ನಮ್ಮ ದೇಶವು ಸ್ವಾವಲಂಬಿಯಾಗುವ ಪ್ರಧಾನಿ ಮೋದಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಅನೇಕ ಪ್ರದೇಶಗಳಲ್ಲಿ ಭಾರತಕ್ಕೆ ನೆರವಾಗುತ್ತದೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಮೂಲಗಳ ಪ್ರಕಾರ ಈ ಹೊಸ ಪ್ರಸ್ತಾಪದ ಅಡಿಯಲ್ಲಿ ಕೇಂದ್ರ ಸರ್ಕಾರವು ವಾಹನ ತಯಾರಕ ಕಂಪನಿಗಳಿಗೆ ಕೇವಲ ಎಲೆಕ್ಟ್ರಿಕ್ ವಾಹನ ಹಾಗೂ ಹೈಡ್ರೋಜನ್ ಇಂಧನ ಕೋಶದ ಕಾರುಗಳನ್ನು ಉತ್ಪಾದಿಸಲು ಪ್ರೋತ್ಸಾಹ ನೀಡಲಿದೆ. ಕೇಂದ್ರ ಸರ್ಕಾರವು ಹೊಸ ತಂತ್ರಜ್ಞಾನಗಳತ್ತ ಗಮನ ಹರಿಸುತ್ತಿದೆ ಹಾಗೂ ಹಳೆಯ ತಂತ್ರಜ್ಞಾನಗಳನ್ನು ಉತ್ತೇಜಿಸಲು ಹಣವನ್ನು ಖರ್ಚು ಮಾಡಲು ಬಯಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಆಟೋ ಭಾಗಗಳ ತಯಾರಕ ಕಂಪನಿಗಳು ಎಲೆಕ್ಟ್ರಿಕ್, ಸಿಎನ್‌ಜಿ ಹಾಗೂ ಎಥೆನಾಲ್‌ನಲ್ಲಿ ಕಾರ್ಯನಿರ್ವಹಿಸುವ ಕಾರುಗಳಿಗಾಗಿ ಘಟಕಗಳನ್ನು ತೆರೆಯಬೇಕಾಗುತ್ತದೆ, ಜೊತೆಗೆ ಸುರಕ್ಷತೆ ಸಂಬಂಧಿತ ಉಪಕರಣ, ಕನೆಕ್ಟೆಡ್ ಟೆಕ್ನಾಲಜಿಗಳಾದ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್, ಕ್ರೂಸ್ ಕಂಟ್ರೋಲ್ ಹಾಗೂ ಇತರ ಎಲೆಕ್ಟ್ರಾನಿಕ್ಸ್‌ಗಳಲ್ಲಿ ಬಳಸುವ ಸೆನ್ಸಾರ್‌, ರೇಡಾರ್‌ಗಳ ಸೇರಿದಂತೆ ಸುಧಾರಿತ ತಂತ್ರಜ್ಞಾನಗಳಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಕವಾಗಿರ ಬೇಕಾಗುತ್ತದೆ.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ತನ್ನ ಹೈಡ್ರೋಜನ್ ನೀತಿಯ ಅಡಿಯಲ್ಲಿ ಸಾವಯವ ಇಂಧನಗಳ ಬಳಕೆಯನ್ನು ಶೇಕಡಾ 40 ರಷ್ಟು ಕಡಿಮೆ ಮಾಡಲು ಬಯಸಿದೆ. 2030 ರ ವೇಳೆಗೆ ಇದನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಈ ಗುರಿಯನ್ನು ಪೂರೈಸಲು ಹೈಡ್ರೋಜನ್ ಫ್ಯೂಯಲ್ ಸೆಲ್ ಚಾಲಿತ ವಾಹನಗಳ ಬಗ್ಗೆ ಹಾಗೂ ತಂತ್ರಜ್ಞಾನಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಲಾಗುತ್ತದೆ.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಈ ಯೋಜನೆಯು ಭಾರತದ ಸದ್ಯದ ಪರಿಸ್ಥಿತಿಯನ್ನು ಸುಧಾರಿಸಲು ಹಾಗೂ ಹಸಿರು ಹೈಡ್ರೋಜನ್ ಪರಿಸರ ವ್ಯವಸ್ಥೆಯ ಸೃಷ್ಟಿಗೆ ಗಮನಾರ್ಹ ಕೊಡುಗೆ ನೀಡಲಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಇನ್ನೂ ಶೈಶವಾವಸ್ಥೆಯಲ್ಲಿದೆ. ಆದರೆ ಇವುಗಳ ಬಳಕೆ ನಿಧಾನಗತಿಯಲ್ಲಿ ಹೆಚ್ಚುತ್ತಿದೆ.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಹೈಡ್ರೋಜನ್ ಇಂಧನ ವಾಹನಗಳ ತಂತ್ರಜ್ಞಾನವನ್ನು ದೇಶದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದು ಸಹ ಇನ್ನೂ ಆರಂಭಿಕ ಹಂತದಲ್ಲಿದೆ. ಭಾರತದಲ್ಲಿ, ವಾಹನ ತಯಾರಕ ಕಂಪನಿಗಳು ಹೈಡ್ರೋಜನ್ ಫ್ಯೂಯಲ್ ಸೆಲ್ ವಾಹನಗಳನ್ನು ಸಂಪೂರ್ಣವಾಗಿ ಪರಿಚಯಿಸಿಲ್ಲ. ಇದಕ್ಕೆ ಪ್ರಮುಖ ಕಾರಣ ದುಬಾರಿ ಅಭಿವೃದ್ಧಿ ವೆಚ್ಚ. ಇದು ವಾಹನಗಳ ಖರೀದಿ ಬೆಲೆಯನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ ಹೈಡ್ರೋಜನ್ ಪವರ್ ಉತ್ಪಾದನೆಯೂ ದುಬಾರಿಯಾಗಿದೆ.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಭಾರತದಲ್ಲಿ ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರ ಸರ್ಕಾರವು ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ಹೈಡ್ರೊಜನ್, ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಕೇಂದ್ರ ಸರ್ಕಾರವು ಬಯೋ ಫ್ಯೂಯಲ್ ವಾಹನಗಳ ಬಳಕೆಗೂ ಹೆಚ್ಚು ಆದ್ಯತೆ ನೀಡುತ್ತಿದೆ. ಇನ್ನು ಎರಡು ಮೂರು ವರ್ಷಗಳಲ್ಲಿ ಡೀಸೆಲ್ ಜೊತೆಗೆ ಎಥೆನಾಲ್ ಬಳಕೆ ಪ್ರಮಾಣವನ್ನು ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರವು ಇತ್ತೀಚಿಗಷ್ಟೇ ತಿಳಿಸಿತ್ತು.

ಹೈಡ್ರೋಜನ್ ಫ್ಯೂಯಲ್ ವಾಹನಗಳ ಬಳಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ತನ್ನ ಫೇಮ್ 2 ಯೋಜನೆಯಡಿಯಲ್ಲಿ ಸಬ್ಸಿಡಿ ನೀಡುತ್ತದೆ. ಕೇಂದ್ರ ಸರ್ಕಾರದ ಜೊತೆಗೆ ಹಲವು ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡುತ್ತಿವೆ. ಗುಜರಾತ್, ದೆಹಲಿಯಂತಹ ಹಲವು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗಾಗಿ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಗಳನ್ನು ಜಾರಿಗೊಳಿಸಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಹೈರಾಣಾಗಿರುವ ವಾಹನ ಸವಾರರು ಅನಿವಾರ್ಯವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುತ್ತಿದ್ದಾರೆ. ಇದರಿಂದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣವು ನಿಧಾನವಾಗಿ ಹೆಚ್ಚಾಗುತ್ತಿದೆ. ಡೀಸೆಲ್, ಪೆಟ್ರೋಲ್ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳ ಚಾಲನಾ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಕಡಿಮೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Union government plans to improve use of hydrogen fuel cell vehicles details
Story first published: Tuesday, September 7, 2021, 14:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X